ದಿನದ ಸುದ್ದಿ

“ಜನಾನುರಾಗಿ‌ ಸಿ.ಎಸ್. ಶಿವಳ್ಳಿ ನಿಧನ ನನಗೆ ಆಘಾತವುಂಟುಮಾಡಿದೆ” : ಸಿದ್ದರಾಮಯ್ಯ ಟ್ವೀಟ್

Published

on

ಸುದ್ದಿದಿನ ಡೆಸ್ಕ್: ತೀವ್ರ ಹೃದಯಾಘಾತದಿಂದ ಇಂದು ನಿಧನರಾದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ.

ಸಚಿವ ಶಿವಳ್ಳಿ ಅವರ ನಿಧನಕ್ಕೆ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ ಅವರು “ಸುದೀರ್ಘ ಕಾಲದ ನನ್ನ ಸ್ನೇಹಿತರಾದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಶಿವಳ್ಳಿ ಅವರು ಮೆಲುಮಾತಿನ,ಸರಳ ವ್ಯಕ್ತಿತ್ವದ, ಜನಾನುರಾಗಿ ನಾಯಕರಾಗಿದ್ದರು.
ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ‌ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version