ರಾಜಕೀಯ
ಮಾಜಿ ಸಿಎಂ ಎನ್ನಲು ಮನಸ್ಸಿಲ್ಲ, ಸಿದ್ದು ಮತ್ತೆ ಸಿಎಂ ಆಗಲಿ : ಕಾಂಗ್ರೆಸ್ ನಾಯಕರ ಇಂಗಿತ
ಸುದ್ದಿದಿನ,ಕೋಲಾರ : ಮತ್ತೆ ಸಿದ್ದರಾಮಯ್ಯ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ನ ಅರಣ್ಯ ಸಚಿವ ಶಂಕರ್ ಹಾಗೂ ಮಾಜಿ ವಿಧಾನಪರಿಷತ್ ಅಧ್ಯಕ್ಷ ವಿ.ಆರ್. ಸುದರ್ಶನ್ ಆಶಯವ್ಯಕ್ತ ಪಡಿಸಿದ್ದಾರೆ.
ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಕಾಂಗ್ರೆಸ್ ಕಛೇರಿ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಶಂಕರ್ ವೇದಿಕೆಯಲ್ಲಿ ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಎನ್ನಲು ಮನಸ್ಸಾಗುತ್ತಿಲ್ಲ ಎಂದು ಮಾತು ಆರಂಭಿಸಿ, ಮುಂದಿನ ಮುಖ್ಯಮಂತ್ರಿಯಾಗುವವರು ಎಂದು ಬಾಷಣ ಆರಂಭಿಸಿದರು. ಸಿದ್ದರಾಮಯ್ಯ ರಾಜ್ಯದಲ್ಲಿ ನೀಡಿರುವ ಉತ್ತಮ ಆಡಳಿತ ನೋಡಿ ಅವರನ್ನು ಮಾಜಿ ಎನ್ನುಲು ಆಗುತ್ತಿಲ್ಲ, ಅವರ ಆಡಳಿತ ಮತ್ತೆ ರಾಜ್ಯಕ್ಕೆ ಬೇಕು ಎಂಬ ವಿ.ಆರ್. ಸುದರ್ಶನ್ ಹೇಳಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಮತ್ತೆ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡುವ ಇಂಗಿತ ವ್ಯಕ್ತಪಡಿಸಿದ ಸಚಿವರು ಹಾಗೂ ಸಿದ್ದು ಬೆಂಬಲಿಗರು.
ಸಿದ್ದು ಜೊತೆ ಸೆಲ್ಫಿ
ಮಾಜಿ ಸಿಎಂ ಸಿದ್ದು ಜೊತೆ ಸೆಲ್ಪಿ ತೆಗೆದುಕೊಂಡು ಕಾಲಿಗೆ ನಮಸ್ಕಾರ ಮಾಡಿಕೊಂಡ ಮಹಿಳೆಯರು. ಸಿದ್ದು ಮಾಜಿಯಾದ್ರು ಖದರ್ ಏನು ಕಮ್ಮಿ ಆಗಿಲ್ಲ ನೋಡಿ. ಇದು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರದಲ್ಲಿ ನಡೆದ ಘಟನೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’
-
ದಿನದ ಸುದ್ದಿ3 days ago
ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ
-
ದಿನದ ಸುದ್ದಿ1 day ago
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
-
ದಿನದ ಸುದ್ದಿ1 day ago
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ