ಅಂತರಂಗ
ಪರೀಕ್ಷೆಗೆ ಪರಿಣಾಮಕಾರಿ ಓದು
ವಿದ್ಯಾ ನಾಮನರಸ್ಯ ರೂಪಮಧಿಕಂ ಪ್ರಚ್ಛನ್ನ ಗುಪ್ತ ಧನಂ
ವಿದ್ಯಾಭೋಗಕರೀ ಯಶಃ ಸುಖಕರೀ ವಿದ್ಯಾ ಗುರುಣಾಂ ಗುರುಃ ||
ವಿದ್ಯಾಬಂಧು ಜನೋ ವಿದೇಶಗಮತೀ ವಿದ್ಯಾಪರಂ ದೈವತಂ |
ವಿದ್ಯಾ ರಾಜಸು ಪೂಜ್ಯತೀ ನಹಿ ಧನಂ ವಿದ್ಯಾವಿಹೀನಃ ಪಶುಃ ||
ವಿದ್ಯೆಯು ಮನುಷ್ಯನಿಗೆ, ಸ್ತ್ರೀಗೆ ಸೌಂದರ್ಯವಾಗಿದೆ. ಅದೊಂದು ದೊಡ್ಡ ಸಂಪತ್ತು, ಆದರೆ ಅದು ಹೊರಗೆ ಕಾಣಿಸದು. ವಿದ್ಯೆಯ ಬಲದಿಂದ ನಾವು ನಾನಾ ಬಗೆಯ ಸುಖ ಅನುಭವಿಸಬಹುದು. ಅದು ಯಶಸ್ವಿಗೆ ಮೂಲ ಕಾರಣವು. ಗುರುಗಳಲ್ಲಿ ಅದು ಶ್ರೇಷ್ಠ ಗುರು ಎನಿಸಿರುವುದು. ಪರ ನಾಡಿನಲ್ಲಿ ವಿದ್ಯೆಯೇ ಶ್ರೇಷ್ಠ ಗೆಳೆಯ. ವಿದ್ಯೆಯು ಶ್ರೇಷ್ಠ ದೇವತೆ. ರಾಜ ಮಹಾರಾಜರ ಸನ್ನಿಧಾನದಲ್ಲಿ ಸಂಪತ್ತಿಗೆ ಬೆಲೆಯಿಲ್ಲ. ಆದರೆ ಅದೇ ವಿದ್ಯೆ ದೊಡ್ಡ ಗುಣವಾಗಿ ಪರಿಣಮಿಸುವುದು.
ಹೀಗೆ ಪರಿಣಾಮಕಾರಿಯಾಗಿ ರೂಪಿಸಿಕೊಳ್ಳಬೇಕು.ಅತೀ ಹೆಚ್ಚು ಅಂಕ ಪಡೆಯುವ ದಿಸೆಯಲ್ಲಿ ಪರಿಣಾಮಕಾರಿ ಓದುವುದು ಬಹಳ ಮುಖ್ಯವಾದುದು. ಓದು ಶಿಕ್ಷಣದ ಹಾಗೂ ವ್ಯಕ್ತಿತ್ವ ರೂಪಿಸುವ ಅವಿಭಾಜ್ಯ ಅಂಗ. ವಿದ್ಯಾರ್ಥಿಯಾದವನು/ಆದವಳು ಸದಾ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಂಡಿರಬೇಕು. ಬಲವಂತ, ಕಷ್ಟಪಟ್ಟು ಹಾಗೂ ಒತ್ತಾಯಕ್ಕೆ ಓದುವುದು ಸಮಂಜಸವಲ್ಲ. ಇಷ್ಟಪಟ್ಟು ಓದಿದಾಗ ವಿಷಯವನ್ನು ಬೇಗ ಅರ್ಥಮಾಡಿಕೊಳ್ಳಬಹುದು.ಓದಿನಲ್ಲೂ ಸಂಪೂರ್ಣ ಮನಸ್ಸಿಟ್ಟು ಹೆಚ್ಚಿನ ಏಕಾಗ್ರತೆಯಿಂದ ಓದುವ ಅಭ್ಯಾಸವನ್ನು ಚಿಕ್ಕ ವಯೋಮಾನದಿಂದಲೇ ಬೆಳೆಸಿಕೊಳ್ಳಬೇಕು.
ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
- ನೀವು ಓದುವ ಕೊಠಡಿ ಸಾಕಷ್ಟು ಗಾಳಿ, ಬೆಳಕಿನಿಂದ ಕೂಡಿರಲಿ. ಬಿಳಿಯ ಬೆಳಕು ಅವಶ್ಯಕ.
- ಮನಸ್ಸನ್ನು ಉದ್ರೇಕಿಸುವ ಭಾವಚಿತ್ರಗಳು ಬೇಡ.
- ವಿವಿಧ ವಿಷಯಕ್ಕೆ ಸಂಬಂಧಿಸಿದ ಚಾರ್ಟ್‍ಗಳಿರಲಿ. ಮನೆಯಲ್ಲಿ ಹಾಗೂ ಶಾಲೆಯಲ್ಲಿ ಅನುಸರಿಸಬೇಕಾದ ನಿರ್ವಹಣೆ ಪಟ್ಟಿ, ವೇಳಾ ಪಟ್ಟಿ ಇರಲಿ.
- ಪುಸ್ತಕಗಳನ್ನು ಕ್ರಮಬದ್ಧವಾಗಿ ಜೋಡಿಸಿಡಬೇಕು. ಎಲ್ಲಾ ಪುಸ್ತಕಗಳನ್ನು ಹರಡಿಕೊಂಡು ಓದುವುದು ಸೂಕ್ತವಲ್ಲ.
- ಓದಲು ಕುಳಿತುಕೊಳ್ಳುವ ಜಾಗ ಸ್ಥಿರವಾಗಿರಲಿ, ಪದೇ ಪದೇ ಬದಲಾಯಿಸುವುದು ಬೇಡ.
- ಓದುವ ಕೊಠಡಿಯಲ್ಲಿ ಟಿ.ವಿ., ರೇಡಿಯೋ, ಮೊಬೈಲ್, ಟೇಪ್‍ರೆಕಾರ್ಡರ್, ಫೋನ್ ಇವುಗಳಿಂದ ದೂರವಿರಿ.
- ನೀವು ಓದುವಾಗ ಬೇರೆ ಕೊಠಡಿಯಲ್ಲಿರುವ ಟಿ.ವಿ. ಅಥವಾ ರೇಡಿಯೋ, ಮೊಬೈಲ್ ಶಬ್ದ ಕೇಳದಂತೆ ಎಚ್ಚರವಹಿಸಿರಿ.
- ಕುಳಿತುಕೊಂಡು ಓದುವುದು ಸೂಕ್ತ. ಮಲಗಿ ಓದುವುದರಿಂದ ಬಹುಬೇಗ ನಿದ್ರೆಗೆ ಜಾರುತ್ತೀರಿ.
- ಬೆಳಗಿನ ಜಾವದ ಸಮಯದಲ್ಲಿ ಹೆಚ್ಚು ಓದುವುದು ಒಳ್ಳೆಯ ಅಭ್ಯಾಸ ಹಾಗೂ ವಿಷಯವನ್ನು ಬಹುಬೇಗ ಗ್ರಹಿಸಬಹುದು.
- ಒಮ್ಮೆ ಓದುವುದಕ್ಕೆ ಕುಳಿತರೆ ಕನಿಷ್ಠ ಅರ್ಧ ಗಂಟೆ/ ಒಂದು ಗಂಟೆ ಏಳದಂತೆ ಓದುವ ಅಭ್ಯಾಸ ಬೆಳೆಸಿಕೊಳ್ಳುವುದು ಸೂಕ್ತ.
- ತರಗತಿಯಲ್ಲಿ ಆದ ಪಾಠಗಳನ್ನು ಅಂದಿನ ದಿನದಂದೆ ಓದಿ ಬರೆಯಿರಿ.
- ಅರ್ಥವಾಗದೇ ಇರುವ ವಿಷಯಗಳನ್ನು ನಿಮ್ಮ ಗೆಳೆಯರ ಅಥವಾ ಶಿಕ್ಷಕರ ಜೊತೆ ಚರ್ಚಿಸಿ ತಿಳಿದುಕೊಳ್ಳಿ.
- ಯಾವ ವಿಷಯವೂ ಕಠಿಣವಲ್ಲ ಎಂಬುದಕ್ಕೆ ಮನವರಿಕೆ ಮಾಡಿಕೊಳ್ಳಿ.
- ಕಡಿಮೆ ಅಂಕ ಬಂದಿರುವ ವಿಷಯಗಳ ಮೇಲೆ ಹೆಚ್ಚು ಹೆಚ್ಚು ಏಕಾಗ್ರತೆಯಿಂದ ಓದಿ ಬರೆದು ಅಭ್ಯಾಸ ಮಾಡಿ.
- ಓದುವಾಗ ಆ ವಿಷಯಕ್ಕೆ ಸಂಬಂಧಿಸಿದಂತೆ ಸಣ್ಣ ಸಣ್ಣ ಟಿಪ್ಪಣಿ ಮಾಡಿಕೊಳ್ಳಿ.
- ಓದಬೇಕಾದ ದಿನಚರಿ, ಕಾಲ ನಿರ್ವಹಣಾ ಪಟ್ಟಿ ಹಬ್ಬ, ರಜಾ ದಿನವೂ ಅನುಸರಿಸಲ್ಪಡುವಂತೆ ಎಚ್ಚರಿಕೆ ವಹಿಸಿ. ಆ ದಿನ ಹಿಂದಿನ ವಾರದಲ್ಲಿ ಕಲಿಯುವಿಕೆಯಲ್ಲಿ ಆಗಿರಬಹುದಾದ ಕೊರತೆಯನ್ನು ಭರಿಸುವ ದಿನ ಎಂಬುದಾಗಿ ಭಾವಿಸುತ್ತ ಓದಿ ಬರೆಯುವ ಪರಿಪಾಠ ಬೆಳೆಸಿಕೊಳ್ಳಿ.
- ಕೀಳು ಅಭಿರುಚಿ, ಕಾಡು ಹರಟೆಯಲ್ಲಿ ತೊಡಗಬೇಡಿ
- ಪದ್ಯ, ಸೂತ್ರ, ಸಮೀಕರಣ ಇತ್ಯಾದಿಗಳನ್ನು ಬಾಯಿಪಾಠ ಅಥವಾ ಕಂಠಪಾಠ ಮಾಡಿ.
ಪರೀಕ್ಷೆ
ಪರೀಕ್ಷೆಗಳು ವಿದ್ಯಾಭ್ಯಾಸದ ಒಂದು ಭಾಗವೇ ಆಗಿದೆ. ಟೆಸ್ಟುಗಳು, ಚಿಕ್ಕ ಪರೀಕ್ಷೆಗಳು, ಅರ್ಧವಾರ್ಷಿಕ ಪರೀಕ್ಷೆಗಳು ಅಣಕು ಪರೀಕ್ಷೆಗಳು,ಫೈನಲ್ ಪರೀಕ್ಷೆಗಳು ಹೀಗೆ.. ವಿದ್ಯಾರ್ಥಿ ಅನೇಕ ಪರೀಕ್ಷೆಗಳನ್ನು ಎದುರಿಸಬೇಕು.
ಪಬ್ಲಿಕ್ ಪರೀಕ್ಷೆಯಿರುವ 10ನೇ ತರಗತಿ, ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀ ಹೆಚ್ಚು ಕಾಳಜಿ ವಹಿಸುವ ಪ್ರಯತ್ನದಲ್ಲಿರುತ್ತಾರೆ. ಏಕೆಂದರೆ ಇದು ವಿದ್ಯಾರ್ಥಿಯ ದೆಶೆಯಲ್ಲಿ
ನೂರಕ್ಕೊಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಒಂದೆರಡು ತಿಂಗಳು ಅಧ್ಯಯನ ಮಾಡಿ ಒಳ್ಳೆಯ ಅಂಕಗಳನ್ನು ಗಳಿಸಬಲ್ಲರು. ಆದರೆ ಉಳಿದ 98 ಸ್ಲೋ ಅಂಡ್ ಸ್ಟಡಿ, ವಿನ್ ದಿ ರೇಸ್ ನಿಧಾನವಾಗಿ ಅವಸರ ಮಾಡಿಕೊಳ್ಳದೆ, ಕ್ರಮಬದ್ಧವಾಗಿ ಅಧ್ಯಯನ ಮಾಡಿ, ಯಶಸ್ಸನ್ನು ಸಾಧಿಸಬಹುದು ಪ್ರಾರಂಭದಿಂದಲೇ ಓದಿದರೆ ಸಿದ್ಧತೆ ಮಾಡಿದರೆ, ಸಾಕಷ್ಟು ಸಮಯ ಸಿಗುತ್ತದೆ. ರಿಕಾಲ್ ಮತ್ತು ರಿಹರ್ಸಲ್ ಮಾಡಲು ಕಾಲಾವಕಾಶವಿರುತ್ತದೆ. ಮಾನಸಿಕ ಒತ್ತಡ ಕಂಡುಬರುವುದಿಲ್ಲ. ಮಧ್ಯೆ ಮಧ್ಯೆ ವಿಶ್ರಾಂತಿ ಮಾಡಲು ಸಮಯ ಸಿಗುತ್ತದೆ. ತಮ್ಮ ನಿರೀಕ್ಷಿತ ಗುರಿ ತಲುಪಲು ಸಹಾಯಕವಾಗುತ್ತದೆ. ಇಂತಹ ವಿಚಾರಗಳನ್ನು ಶಿಕ್ಷಕರು ಪಾಲಕರಿಗೆ ಪೋಷಕರು ವರ್ಗದವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ತಿಳಿಸಬೇಕು. ಪ್ರತಿ ತಿಂಗಳಿಗೊಮ್ಮೆ ಶಿಕ್ಷಕರು ಪೋಷಕರ ಸಭೆ ಕರೆದು ತಮ್ಮ ಯೋಜನೆ, ಗುರಿ ಉದ್ದೇಶವನ್ನು ತಿಳಿಸುವುದು ಸೂಕ್ತ.
ಆಸಕ್ತಿಯಿಂದ ಪಾಠ ಕೇಳುವುದು
ವಿದ್ಯಾರ್ಥಿಗಳು ಒತ್ತಾಯಕ್ಕೆ ತರಗತಿಗಳಿಗೆ ಹೋಗಬಾರದು. ಶಿಕ್ಷಕರು ಹೇಳುವಂತಹ ಪಾಠವನ್ನು ಶ್ರದ್ಧೆಯಿಂದ ಆಲಿಸಿಕೊಳ್ಳಬೇಕು. ಅಲ್ಲದೆ ಅನುಮಾನದ ಅರ್ಥವಾಗದಂತಹ ವಿಷಯಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳಬೇಕು.ನುರಿತ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಭಿನ್ನ ಆಯಾಮಗಳಿಂದ, ಸರಳವಾಗಿ, ಆಕರ್ಷಕವಾಗಿ ಭೋದನೆ ಮಾಡಿ ಆಸಕ್ತಿಯನ್ನು ಕೆರಳಿಸುವಂತಿದ್ದರೆ. ಆದ್ದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗುವುದರಿಂದ ಧನಾತ್ಮಕವಾದ ಅಂಶಗಳು ಹೆಚ್ಚುತ್ತವೆ.
ತರಗತಿಯಲ್ಲಿರುವಾಗ ನಮ್ಮ ಮನಸ್ಸು ಹಿಡಿದು ಏಕಾಗ್ರತೆಯಿಂದ ಪಾಠ, ಪ್ರವಚನದ ಕಡೆ ಸಾಗಬೇಕು. ಹಸಿವಿನಿಂದ ಪಾಠ ಕೇಳುವುದು ಕಲಿಕೆಗೆ ಭಂಗ ತರುತ್ತವೆ. ಅಲ್ಲದೆ ಅತೀ ಹೆಚ್ಚು ಊಟ ಮಾಡಿದರೆ ನಿದ್ರೆಗೆ ಜಾರುತ್ತಾರೆ. ಊಟ, ತಿಂಡಿ ಸಮ ಪ್ರಮಾಣದಲ್ಲಿ ಸೇವಿಸಿದಾಗ ಮನಸ್ಸು ಹತೋಟಿಯಲ್ಲಿದ್ದು ಕಲಿಕೆಗೆ ಪೂರಕವಾದ ಅಂಶಗಳನ್ನು ಒದಗಿಸುತ್ತದೆ. ಶಾಲಾ ಅಥವಾ ಕಾಲೇಜಿನಿಂದ ಮನೆಗೆ ಬಂದ ಮೇಲೆ ಮುಖ ತೊಳಿದು ದೈಹಿಕ ಶ್ರಮವಾಗುವಂತಹ ಆಟಗಳನ್ನು ಆಟವಾಡಿದಾಗ ಮನಸ್ಸು ಹಗುರವಾಗುತ್ತದೆ.
ನಂತರ ದೈನಂದಿನ ಪಾಠ ಪ್ರವಚನಗಳನ್ನು ನೆನಪು ಮಾಡಿಕೊಳ್ಳಿ. ಇಲ್ಲಿ ನೆನಪಾಗುವ ವಿಷಯವನ್ನು ಒಂದು ಕಡೆ ಬರೆಯಿರಿ. ಅಲ್ಲದೆ ನೆನಪಾಗದ ವಿಷಯವನ್ನು ಪಟ್ಟಿ ಮಾಡಿಕೊಂಡು ಅದಕ್ಕೆ ಸಂಬಂಧಿಸಿದ ನೋಟ್ಸ್ ಮತ್ತು ಪುಸ್ತಕಗಳಿಂದ ನೋಡಿ, ಪುನಃ ನೆನಪು ಮಾಡಿಕೊಳ್ಳಿ. ಅರ್ಥವಾಗದ ವಿಷಯವನ್ನು ಗುರುತು ಮಾಡಿಕೊಂಡು ನಿಮ್ಮ ಮಿತ್ರರು ಅಥವಾ ಶಿಕ್ಷಕರಿಂದ ಪರಿಹಾರ ಕಂಡುಕೊಂಡರೆ ಶಾಶ್ವತವಾಗಿ ಸ್ಮೃತಿಪಟಲದಲ್ಲಿ ಉಳಿಯುತ್ತದೆ. ಇದನ್ನು ದಿನನಿತ್ಯವೂ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ಮನೆಯ ಅಭ್ಯಾಸ
ಗೇಮ್ಸ್, ರೇಡಿಯೋ, ಟಿ.ವಿ.,ಮೊಬೈಲ್, ವೀಡಿಯೋ ಇವುಗಳಲ್ಲಿ ಹೆಚ್ಚು ಸಮಯವನ್ನು ವ್ಯರ್ಥ ಮಾಡದೆ ಇವುಗಳಿಂದ ದೂರವಿರುವುದು ಸೂಕ್ತ.
ಮನೆಯಲ್ಲಿ ಸೂಕ್ತವಾದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಓದಿಗೆ ಭಂಗತರದಂತಹ ಸ್ಥಳದಲ್ಲ್ಲಿ ಕುಳಿತುಕೊಳ್ಳುವುದು ಸಹಾಯವಾಗುತ್ತದೆ. ಪದೇ ಪದೇ ಓದುವ ಸ್ಥಳವನ್ನು ಬದಲಾವಣೆ ಮಾಡಬಾರದು. ಆದರೆ ಓದುವ ಸಮಯ ಯಾವುದು ಪರಿಣಾಮಕಾರಿ, ಯಾವುದು ಅತ್ಯುತ್ತಮವೆಂದು ತುಂಬಾ ಪೋಷಕರು ಶಿಕ್ಷಕರನ್ನು ಕೇಳುವ ಪ್ರಶ್ನೆಯಾಗಿದೆ. ಆದರೆ ಯಾವುದು ಪರಿಣಾಮಕಾರಿ ಎಂದು ಯಾವಾಗ ಏಕಾಗ್ರತೆಯಿಂದ ಓದುತ್ತಾರೆಯೋ ಅದೇ ಸೂಕ್ತ ಸಮಯ. ನೀವು ಕುಳಿತುಕೊಳ್ಳುವ ಸಮಯ. ನಿತ್ಯ ಕುಳಿತುಕೊಳ್ಳುವ ಜಾಗ, ಪ್ರಶಾಂತವಾದ ಸ್ಥಳ, ಆಕರ್ಷಣೆಗೊಳ್ಳುವ ಮುಕ್ತವಾದ ಪ್ರದೇಶ, ಸಾಕಷ್ಟು ಗಾಳಿ, ಬೆಳಕು ಇರುವ ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಅಭ್ಯಾಸ ಮಾಡಿ.
ಓದಿನ ವಿಧಾನ
ಏಕಾಗ್ರತೆಯಿಂದ ಓದಿ ಅರ್ಥವಾಗುವಂತೆ ಓದಿ, ಮನನ ಮಾಡಿಕೊಳ್ಳಿ. ಗಟ್ಟಿಯಾಗಿ ಅಥವಾ ಮನಸ್ಸಿನಲ್ಲಿಯೋ ಓದುತ್ತೀರೋ ಅದು ಓದುಗರಿಗೆ ಬಿಟ್ಟ ವಿಚಾರ. ಆದರೆ ಗಟ್ಟಿಯಾಗಿ ಓದಿದರೆ ಬಹು ಬೇಗ ಆಯಾಸವಾಗುವುದು ಸಹಜ. ಆದರೆ ಬಾಯಿಪಾಠ ಕಲಿಯುವುದರಿಂದ ಅಲ್ಪಾವಧಿ ನೆನಪಿನಲ್ಲಿ ಅದು ಉಳಿದು ಒಂದೆರಡು ದಿನಗಳಲ್ಲಿ ಮರೆಯುವುದು ಸಾಧ್ಯವಾಗುತ್ತದೆ. ಅರ್ಥ ಮಾಡಿಕೊಂಡು ಓದಿದಾಗ ದೀರ್ಘಾವಧಿ ನೆನಪಿನ ಸಂಗ್ರಹಕ್ಕೆ ಸೇರುತ್ತದೆ.
ಗುಂಪು ಅಧ್ಯಯನ
ಕೆಲವು ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅಧ್ಯಯನ ಮಾಡಲು ಇಷ್ಟಪಡುತ್ತಾರೆ. ಇಬ್ಬರು, ಮೂವರು ಅಥವಾ ನಾಲ್ಕೈದು ಜನ ಸೇರಿ ಶಾಲೆ, ಮನೆ,ಟೆರಸ್‍ನಲ್ಲಿ ಅಧ್ಯಯನ ಮಾಡುತ್ತಾರೆ. ಒಬ್ಬರು ಗಟ್ಟಿಯಾಗಿ ಓದುವುದು, ಉಳಿದವರು ಕೇಳಿಸಿಕೊಳ್ಳುವುದು, ಒಬ್ಬರು ಅಧ್ಯಯನ ಮಾಡಿ ಭೋದಿಸುವುದು, ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳುವುದು, ಅರ್ಥವಾಗದ ವಿಷಯ ಚರ್ಚೆ ಮಾಡುವುದು.
ಅನುಕೂಲಗಳು
- ಒಬ್ಬರು ಇನ್ನೊಬ್ಬರಿಗೆ ಪ್ರೇರಣೆಯಾಗುತ್ತಾರೆ.
- ಕ್ರಮಬದ್ಧ ಅಧ್ಯಯನಕ್ಕೆ ಸಹಾಯಕಾರಿ
- ಏಕಾಗ್ರತೆ ಹೆಚ್ಚಿಸುವುದು.
- ಉತ್ಸಾಹದ ವಾತಾವರಣ ನಿರ್ಮಿಸುತ್ತದೆ.
- ಕಲಿಕೆ ಮತ್ತು ನೆನಪು ಉತ್ತಮಗೊಳ್ಳುತ್ತವೆ.
- ಪರಿಣಾಮಕಾರಿ ಕಲಿಕೆಗೆ ಈ ವಿಧಾನ ಅನುಸರಿಸಿ ಅನುಷ್ಠಾನಗೊಳಿಸಿ.
- ಓದಲು ಸೂಕ್ತ ಸಮಯ ಮತ್ತು ಸ್ಥಳ ಆಯ್ಕೆ ಮಾಡಿ
- ಏಕಾಗ್ರತೆಯಿಂದ 30 ನಿಮಿಷ ಓದಿ, ಓದಿದ್ದನ್ನು ಅರ್ಥ ಮಾಡಿಕೊಳ್ಳಿ.
- ಏನನ್ನು ಓದಿದ್ದೇನೆ ಎಂಬುದರ ಸಾರಾಂಶವನ್ನು ಬರೆದುಕೊಳ್ಳಿ.
- ಓದಿದ್ದನ್ನು ಮನಸ್ಸಿನಲ್ಲಿ ಮನನ ಮಾಡಿಕೊಳ್ಳಿ. ಓದಿದ ವಿಷಯವನ್ನು ಪ್ರತಿದಿನ, ಒಂದು ವಾರ ನಂತರ ತಿಂಗಳ ನಂತರ ಯಾವುದು ಮನಸ್ಸಿಗೆ ಬರುತ್ತಿದೆ ಹಾಗೂ ಯಾವುದೂ ಮನಸ್ಸಿನಲ್ಲಿ ಬರುವುದಿಲ್ಲವೆಂದು ಪಟ್ಟಿ ಮಾಡಿಕೊಂಡು ಪುನಃ ಅಧ್ಯಯನ ಮಾಡುವುದು.
- ಪ್ರಶ್ನೆಗೆ ಸಂಬಂಧಿಸಿದಂತೆ ಮನೆಯಲ್ಲಿ ಕಾಲಮಿತಿಯಲ್ಲಿ ಉತ್ತರಿಸುವ ಅಭ್ಯಾಸ ಮಾಡಿ. ಇದರಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸಿಕೊಂಡರೆ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು.
- ಶ್ರದ್ಧೆ, ಶ್ರಮ, ಕ್ರಮಬದ್ಧ ಅಧ್ಯಯನ ನಿರಂತರವಾಗಿರಲಿ.
- ಆರೋಗ್ಯದ ಸುಧಾರಣೆ ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ, ಯೋಗ, ಧ್ಯಾನದ ಅಭ್ಯಾಸವಿಟ್ಟುಕೊಳ್ಳುವುದು.
ಪರೀಕ್ಷಾ ಭಯ
- ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳಲ್ಲಿ ಆತಂಕ, ಭಯ ಪ್ರಾರಂಭವಾಗುತ್ತಿದೆ.
- ನನ್ನ ಪರೀಕ್ಷಾ ಸಿದ್ಧತೆಗಳು ಕಡಿಮೆಯಾದವು ಎಂಬುದರ ಚಿಂತೆ
- ನನ್ನಿಂದ ಬೇಗ ಕಲಿಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಪರೀಕ್ಷಾ ಸಂದರ್ಭದಲ್ಲೂ ಎಲ್ಲಾ ವಿಷಯಗಳನ್ನು ಅಥವಾ ಪಾಠಗಳನ್ನು ಮುಗಿಸಲಿಕ್ಕೆ ಆಗುತ್ತೋ ಇಲ್ಲವೋ ಎಂಬುದರ ಭಯ.
- ನನಗೆ ಪರೀಕ್ಷೆಗೆ ಪ್ರಶ್ನೆಗಳಿಗೆ ಪೂರ್ಣ ಉತ್ತರವನ್ನು ಬರೆಯಲಿಕ್ಕೆ ಆಗುತ್ತೋ ಅಥವಾ ಇಲ್ಲವೋ ಎನ್ನುವ ಆತಂಕ ಅಲ್ಲದೇ ಮೌಲ್ಯಮಾಪಕರು ಪೂರ್ತಿ ಅಂಕ ಕೊಡುತ್ತಾರೋ ಇಲ್ಲವೋ ಎಂಬುದು.
- ನಾನು ಫೇಲಾದರೆ ಎಷ್ಟು ಅವಮಾನ ಅಲ್ಲದೆ ನನಗೆ ಯಾರೂ ಗೌರವ ಕೊಡುವುದಿಲ್ಲವೆಂಬುದು.
- ನನ್ನ ಸ್ನೇಹಿತರು ಒಳ್ಳೆಯ ಕೋರ್ಸಿಗೆ ಸೀಟು ಪಡೆಯುತ್ತಾರೆ. ನನ್ನಿಂದ ಇದು ಸಾಧ್ಯನಾ ನಾನು ಹಿಂದೆ ಬೀಳುತ್ತೇನಾ ಎಂಬುದು.
- ನನಗೆ ಭವಿಷ್ಯವಿಲ್ಲ ನನ್ನ ಪಾಲಕರಿಗೆ ನೋವು- ನಿರಾಶೆ ಇಂತಹ ನಕಾರಾತ್ಮಕ ಚಿಂತನೆಗಳು ಸದಾ ಕಿವಿಯಲ್ಲಿ ಗುನುಗುಡುತ್ತಿರುತ್ತವೆ. ಆಗ ಭಯ ಶುರುವಾಗುತ್ತವೆ.
- ಮನಸ್ಸು ಸ್ಥಿರವಾಗಿರುವುದಿಲ್ಲ. ಹೃದಯದ ಬಡಿತ ಶುರುವಾಗುತ್ತದೆ.
- ಹಸಿವು ಹೆಚ್ಚಾಗುವುದಿಲ್ಲ. ಆಹಾರವು ರುಚಿಕರ ಅನ್ನಿಸುವುದಿಲ್ಲ.
- ನಿದ್ರೆಯಲ್ಲೂ ವ್ಯತ್ಯಾಸ ಕಂಡು ಬರುವುದು ಅಲ್ಲದೇ ಮಂಕು ಆವರಿಸುವುದು.
- ಆತ್ಮವಿಶ್ವಾಸ ಕಡಿಮೆಯಾಗುತ್ತದೆ.
- ಪದೇ ಪದೇ ಬಾತ್‍ರೂಂಗೆ ಹೋಗುವ ಮನಸ್ಸು.
- ಜ್ವರ ಆವರಿಸಬಹುದು.
- ಕೋಪ, ಸಿಟ್ಟು, ಜಗಳ ಪ್ರಾರಂಭವಾಗಬಹುದು.
- ಹತಾಶ ಮನಸ್ಥಿತಿ ತಲುಪಬಹುದು.
- ಒಂಟಿತನ ಇರಲು ಇಷ್ಟಪಡುವುದು.
ಇಂತಹ ಸಂಗತಿಗಳನ್ನು ಪರೀಕ್ಷೆಯ ಹಿಂದಿನ ದಿನದಲ್ಲೂ ಅತಿ ಹೆಚ್ಚು ಕಾಣಬಹುದು.ಆದ್ದರಿಂದ ಪೋಷಕರು, ಶಿಕ್ಷಕರು ಮಾರ್ಗದರ್ಶನ ಹಾಗೂ ಧೈರ್ಯ ತುಂಬಬೇಕಾಗುತ್ತದೆ.
- ಪ್ರೇರೇಪಣೆ ನೀಡುವುದು
ನೀನೊಬ್ಬ ಉತ್ತಮ ವಿದ್ಯಾರ್ಥಿ ಹಾಗೂ ನಿರಂತರ ಓದಿ ಅಭ್ಯಾಸ ಮಾಡಿದ್ದೀಯಾ ವರ್ಷಪೂರ್ತಿ ಓದಿದ್ದೀಯಾ ಅದ್ದರಿಂದ ಓದಿದಂತಹ ಪ್ರಶ್ನೆಗಳೇ ಪರೀಕ್ಷೆಯಲ್ಲಿ ಬರುತ್ತವೆಂಬುದನ್ನು ತಿಳಿಸುವುದು.
- ಪರೀಕ್ಷೆ ಬರೆಯುವ ಮುನ್ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಸಮಾಧಾನ ಚಿತ್ತದಿಂದ ಪರೀಕ್ಷೆ ಎದುರಿಸು. ನಿನಗೆ ಯಶಸ್ಸು ಸಿಗುತ್ತದೆ.
- ಕನಿಷ್ಠ ಆರು ತಾಸು ನಿದ್ರೆ
- ಕರಿದ ಪದಾರ್ಥಗಳಿಂದ ದೂರವಿರುವುದು, ಮಾಂಸಹಾರ ಬೇಡ.
- ಹಸಿ ತರಕಾರಿಗಳನ್ನು ಸೇವಿಸುವುದು.
- ಪಾಯಸ, ಗಂಜಿ,ಖೀರು ಉತ್ತಮ
- ಓದುವಾಗ ಆಗಾಗ್ಗೆ ತಣ್ಣೀರು / ಬಿಸಿನೀರು ಮುಖ ತೊಳೆದುಕೊಳ್ಳಿ.
ಪರೀಕ್ಷಾ ದಿನ
- ಕನಿಷ್ಠ ಆರು ಗಂಟೆ ನಿದ್ರೆಯ ನಂತರ ಎದ್ದುಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸುವುದು. ತಂದೆ-ತಾಯಿಗಳ ಆಶೀರ್ವಾದ ಪಡೆದುಕೊಳ್ಳಿ.
ಪರೀಕ್ಷೆ ಸಲಕರಣೆಗಳನ್ನು ಜೋಡಿಸಿಕೊಳ್ಳಿ.
- ಹಾಲ್‍ಟಿಕೆಟ್, ಒಳ್ಳೆಯ ಗುಣಮಟ್ಟದ ಎರಡು ಹಗುರವಾದ ಉಪಹಾರ ಇತ್ಯಾದಿ ಮಾಡುವುದು
- ಪರೀಕ್ಷಾ ಹಾಲ್‍ನಲ್ಲಿ ಅರ್ಧಗಂಟೆ ಮುಂಚಿತವಾಗಿ ಕುಳಿತುಕೊಳ್ಳುವುದು.
- ಪರೀಕ್ಷಾ ಕೇಂದ್ರಕ್ಕೆ ಹೋಗಿ ಸ್ಥಳವನ್ನು ಗುರುತು ಮಾಡಿಕೊಳ್ಳುವುದು.
- ವಿಷಯದ ಬಗ್ಗೆ ಚರ್ಚೆ ಬೇಡ ಮನಸ್ಸು ಪ್ರಶಾಂತವಾಗಿರಲಿ.
- ಪರೀಕ್ಷಾ ಕೇಂದ್ರದಲ್ಲಿ ಅಭ್ಯಾಸ ಬೇಡ
- ತಮ್ಮ ಜೇಬುಗಳಲ್ಲಿ ಯಾವುದೇ ಚೀಟಿ, ಮೊಬೈಲ್ ಇರಬಾರದು.
- ಪರೀಕ್ಷೆಗೆ ಹೋಗುವ ಮುನ್ನ ಮೂತ್ರ ವಿಸರ್ಜನೆ ಮಾಡುವುದು.
- ನಿಮ್ಮ ಸೀಟಿನಲ್ಲಿ ಕುಳಿತುಕೊಳ್ಳಿ. ಉಸಿರಾಟ ನಿಧಾನಗತಿಯಿರಲಿ.
- ಪ್ರಶ್ನೆ ಪತ್ರಿಕೆ ಬಂದಾಗ ನಿಧಾನವಾಗಿ ಎಲ್ಲಾ ಪ್ರಶ್ನೆಗಳನ್ನು ನಿಧಾನವಾಗಿ ಒಂದೊಂದೇ ಅರ್ಥ ಮಾಡಿಕೊಳ್ಳುತ್ತಾ ಹೋಗಿ.
- ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಪ್ರಯತ್ನಿಸಿ.
- ಪ್ರಶ್ನೆ ಪತ್ರಿಕೆ ಕೊಟ್ಟಾಗ ಕೆಲವು ಪ್ರಶ್ನೆಗಳನ್ನು ನಿರೀಕ್ಷೆಯಿರುವುದಿಲ್ಲ ಅಂತಹ ಸಂದರ್ಭದಲ್ಲಿ ಗಾಬರಿ ಪಡಬೇಡಿ.
- ಮೊದಲು ಸಂಪೂರ್ಣವಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯಿರಿ.
- ಒಂದು ಪ್ರಶ್ನೆಗೆ ಉತ್ತರ ಬರೆದ ನಂತರ ಪೆನ್ಸಿಲ್‍ನಲ್ಲಿ ಒಂದು ಅಡ್ಡಲಾಗಿ ಗೆರೆ ಹಾಕುವುದು.
- ಅಕ್ಷರ ಸ್ಫುಟವಾಗಿರಲಿ, ಯೋಚಿಸಿ ಬರೆಯಿರಿ.
- ಒಂದು ಸಾಲಿಗೂ ಇನ್ನೊಂದು ಸಾಲಿಗೂ ಅಂತರವಿರಲಿ.
- ಅಲ್ಪ ಸ್ವಲ್ಪ ಉತ್ತರ ಗೊತ್ತಿರುವ ಪ್ರಶ್ನೆಗಳನ್ನು ಕೊನೆಗೆ ಪ್ರಯತ್ನಿಸಿ, ಗೊತ್ತಿರುವ ಅಲ್ಪಸ್ವಲ್ಪ ಉತ್ತರ ಬರೆಯಿರಿ.
ಸಮಯ ಪಾಲನೆ ಮಾಡುವುದು
- ಯಾವುದೇ ಪ್ರಶ್ನೆಗೆ ಉತ್ತರ ಬರೆಯಲು ಅವಶ್ಯಕತೆಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳಬಾರದು.
- ಕಡೆಯ ಹತ್ತು ನಿಮಿಷಯದಲ್ಲಿ ಪುನರಾವಲೋಕನ ಮಾಡುವುದು.
- ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ನಮೂದಿಸುವುದು.
- ರಿಜಿಸ್ಟರ್ ನಂಬರ್ ಉತ್ತರ ಪತ್ರಿಕೆಗಳ ಕ್ರಮ ಸಂಖ್ಯೆಯನ್ನು ಹಾಕುವುದು.
- ಇತರರು ಏನು ಮಾಡುತ್ತಿದ್ದಾರೆಂಬುದನ್ನು ಗಮನವಿರಬಾರದು.
- ಪೂರ್ಣ ಬರೆಯುವವರಿಗೂ ಮುಗಿಯುವವರೆಗೂ ಏಕಾಗ್ರತೆಯಿಂದ ಉತ್ತರಿಸಬೇಕು.
- ಹೊರ ಬಂದ ನಂತರ ಚರ್ಚೆ ಬೇಡ
- ಮನೆಗೆ ಹೋಗಿ ವಿರಾಮವನ್ನು ತೆಗೆದುಕೊಳ್ಳುವುದು.

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243



