ದಿನದ ಸುದ್ದಿ

ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಾನೂನು ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Published

on

ಸುದ್ದಿದಿನ ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ಹಾವಳಿ ಮಿತಿ ಮೀರಿದೆ. ಈ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ.2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಸಮೀಪ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ, ಅವುಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version