ದಿನದ ಸುದ್ದಿ
ವಿವಿಧ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನ
ಸುದ್ದಿದಿನ,ಬಳ್ಳಾರಿ: 2020-21ನೇ ಸಾಲಿನ ಹೂವಿನ ಹಡಗಲಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಹನಿ ನೀರಾವರಿ) ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಯಾಂತ್ರೀಕರಣ ಯೋಜನೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೂವಿನಹಡಗಲಿ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ರೈತರು ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ/ಬೆಳೆಯಲು ಆಸಕ್ತಿ ಹೊಂದಿರುವ ರೈತರು ಅಗತ್ಯ ದಾಖಲಾತಿಗಳೊಂದಿಗೆ ಸೆ.26ರೊಳಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243