ದಿನದ ಸುದ್ದಿ
ದಾವಣಗೆರೆಯಲ್ಲಿ ನಾಳೆ ರೈತ ಫಲಾನುಭವಿಗಳ ಸಮಾವೇಶ
ಸುದ್ದಿದಿನ, ದಾವಣಗೆರೆ : ಆತ್ಮ ನಿರ್ಭರ ಅಭಿಯಾನದಡಿ ಸಿರಿಧಾನ್ಯಗಳ ವರ್ಷಾಚರಣೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ ಕುರಿತ ರೈತ ಫಲಾನುಭವಿಗಳ ಸಮಾವೇಶ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ.
ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಸಾವಿರಾರು ರೈತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243