ದಿನದ ಸುದ್ದಿ
ಪ್ರವೀಣ್ ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ
ಸುದ್ದಿದಿನ,ಮಂಗಳೂರು: ಪ್ರವೀಣ್ ಕುಮಾರ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಫಾಜೀಲ್ ಮೃತ ದುರ್ದೈವಿ. ಫಾಜೀಲ್ ಮೇಲೆ ಅಪರಿಚಿತ ತಂಡದವರು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಸುರತ್ಕಲ್ ಸಮೀಪದ ಮಂಗಳಪಾದೆ ನಿವಾಸಿ ಫಾಜೀಲ್ ಗಂಭೀರ ಗಾಯಗೊಂಡ ಫಾಜೀಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮುನ್ನೆಚ್ಚರಿಕೆಯ ಕ್ರಮವಾಗಿ ಸುರತ್ಕಲ್ ಅಂಗಡಿ ಮುಂಗಟ್ಟುಗಳು ಮುಚ್ಚಿಸಲಾಗಿದ್ದು, ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243