ದಿನದ ಸುದ್ದಿ
ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ
ಸುದ್ದಿದಿನ,ದಾವಣಗೆರೆ: ಮುಂಗಾರು ಹಂಗಾಮು ಆರಂಭವಾಗಿದ್ದು ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು.
ಅವರು ಜೂನ್ 7 ರಂದು ನಗರದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಗ್ರಾಣದಲ್ಲಿ ದಾಸ್ತಾನು ಮಾಡಲಾದ ಬಿತ್ತನೆ ಬೀಜದ ಉಗ್ರಾಣ ಪರಿಶೀಲನೆ ನಡೆಸಿ ರೈತರಿಗೆ ಬೀಜ ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತನಾಗಿರುವ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಸ್ಥಳದಲ್ಲಿದ್ದ ರೈತರೊಂದಿಗೆ ಕೃಷಿಯ ಬಗ್ಗೆ ಹಾಗೂ ಕುಂದು ಕೊರತೆ ವಿಚಾರಿಸಿ ನಂತರ ದಾವಣಗೆರೆ ನಗರದಲ್ಲಿರುವ ಕೇಂದ್ರ ಉಗ್ರಾಣ ನಿಗಮದ ವೇರ್ ಹೌಸ್‍ಗೆ ಭೇಟಿ ನೀಡಿ ಗೊಬ್ಬರದ ದಾಸ್ತಾನನ್ನು ಪರಿಶೀಲಿಸಿ ಕೃಷಿ ಅಧಿಕಾರಗಳೊಂದಿಗೆ ಚರ್ಚೆ ನಡೆಸಿ ರೈತರಿಗೆ ಸಮರ್ಪಕವಾಗಿ ಬೀಜ ಮತ್ತು ಗೊಬ್ಬರವನ್ನು ವಿತರಿಸುವಂತೆ ಹಾಗೂ ರೈತರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಜನಪರವಾಗಿ ಹಾಗೂ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


