Connect with us

ದಿನದ ಸುದ್ದಿ

ಮೀನುಗಾರರ ಸಾಲಮನ್ನಾಮಾಡುವಂತೆ ಹೆಚ್ ಡಿ ಕೆ ಗೆ ಮನವಿ

Published

on

ಸುದ್ದಿದಿನ, ಬೆಂಗಳೂರು : ಮೈತ್ರಿ ಸರ್ಕಾರ ರಾಜ್ಯದ ರೈತರ ಸಾಲಾವನ್ನು ಮನ್ನಾ ಮಾಡಲು ತಯಾರಾಗಿದೆ. ಜತೆಗೆ ಮೀನುಗಾರರ ಸಾಲವನ್ನು ಮನ್ನಾ ಮಾಡುವಂತೆ ಉಡುಪಿಯ ಜಿಲ್ಲಾ ಮೀನುಗಾರರ ಸಂಘದ ನಿಯೋಗವು ಇಂದು (ಜುಲೈ 3) ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮನವಿ‌ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಮೀನುಗಾರರ ಸಂಘದ ಮುಂದಾಳತ್ವವನ್ನು ಉಡುಪಿಯ ಬಿಜೆಪಿ ಶಾಸಕ ರಘಪತಿ ಭಟ್ ಮೀನುಗಾರರ ಆರ್ಥಿಕ ಸಂಕಷ್ಟಗಳ ಬಗೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಿಳಿಸಿದರು. ಚಿಕ್ಕಮಗಳೂರು, ಮಂಗಳೂರು, ಉಡುಪಿ ಜಿಲ್ಲೆಯ ಶಾಸಕರುಗಳು ಈ ನಿಯೋಗದಲ್ಲಿದ್ದರು.

ಶಾಸಕ ರಘುಪತಿ ಭಟ್ ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಮಾನ್ಯಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೀನುಗಾರರ ಸಾಲಾಮನ್ನಾ ಮನವಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 140 ಜನರಿಗೆ ಕೋವಿಡ್ ಸೋಂಕು ದೃಢ : 66 ಮಂದಿ ಬಿಡುಗಡೆ

Published

on

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,444ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 45, ಚಳ್ಳಕೆರೆ 8, ಹಿರಿಯೂರು 16, ಹೊಳಲ್ಕೆರೆ 19, ಹೊಸದುರ್ಗ 32, ಮೊಳಕಾಲ್ಮುರು ತಾಲ್ಲೂಕಿನಲ್ಲಿ 15 ಹಾಗೂ ಹೊರ ಜಿಲ್ಲೆಯ 05 ಪ್ರಕರಣಗಳು ಸೇರಿದಂತೆ ಒಟ್ಟು 140 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ  66 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಒಟ್ಟು 2299 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 140 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 16,444 ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | ದಾವಣಗೆರೆ | ಮಳೆ ವಿವರ 

ಸೋಂಕಿತರ ಪೈಕಿ ಈಗಾಗಲೆ 15,593 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 781 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,32,206 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 4,00,608 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,82,450 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1007 ಜನರ ವರದಿ ಬರುವುದು ಬಾಕಿ ಇದೆ. 707 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮಳೆ ವಿವರ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ :ಜಿಲ್ಲೆಯಲ್ಲಿ ಏಪ್ರಿಲ್ 22 ರಂದು ಸರಾಸರಿ 12.15 ಮಿ.ಮೀ ಮಳೆಯಾಗಿದ್ದು, ಒಟ್ಟಾರೆ 5.05 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ 14.16 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆಯಲ್ಲಿ 5.58 ಮಿ.ಮೀ, ಹರಿಹರದಲ್ಲಿ 20.82 ಮಿ.ಮೀ, ಹೊನ್ನಾಳಿಯಲ್ಲಿ 17.1 ಮಿ.ಮೀ ಹಾಗೂ ಜಗಳೂರಿನಲ್ಲಿ 3.1 ಮಿ.ಮೀ ವಾಸ್ತವ ಮಳೆಯಾಗಿದ್ದು ಜಿಲ್ಲೆಯಲ್ಲಿ ಸರಾಸರಿ 12.15 ಮಿ.ಮೀ ಮಳೆಯಾಗಿದೆ.

ಮಳೆಯಿಂದಾಗಿ ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 01 ಪಕ್ಕಾ ಮನೆ ಮತ್ತು 01 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ಅಂದಾಜು ರೂ.40 ಸಾವಿರ ನಷ್ಟ ಸಂಭವಿಸಿದೆ. ಹಾಗೂ 50 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು ರೂ.4 ಲಕ್ಷ ಹಾನಿಯಾಗಿದ್ದು ತಾಲ್ಲೂಕಿನಲ್ಲಿ ಒಟ್ಟಾರೆ ರೂ.4.40 ಲಕ್ಷ ಸಂಭವಿಸಿದೆ.

ಇದನ್ನೂ ಓದಿ | ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಕೇರಿ 

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 01 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ.50 ಸಾವಿರ ನಷ್ಟ ಸಂಭವಿಸಿರುತ್ತದೆ. 01 ಜಾನುವಾರು ಜೀವ ಹಾನಿಯಾಗಿದ್ದು ರೂ.15 ಸಾವಿರ ನಷ್ಟ ಸಂಭವಿಸಿದ್ದು ತಾಲ್ಲೂಕಿನಲ್ಲಿ ಒಟ್ಟಾರೆ ರೂ. 65 ಸಾವಿರ ಸಂಭವಿಸಿರುತ್ತದೆ

ಜಿಲ್ಲೆಯಲ್ಲಿ ಒಟ್ಟಾರೆ ರೂ.5.05 ಲಕ್ಷ ಅಂದಾಜು ನಷ್ಟ ಸಂಭವಿಸಿದ್ದು ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಕೇರಿ

Published

on


  • ಅಗತ್ಯ ವಸ್ತುಗಳಿಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ವಾರಾಂತ್ಯ ಕಫ್ರ್ಯೂ: ಸಂಪೂರ್ಣ ಸ್ತಬ್ಧ


ಸುದ್ದಿದಿನ,ಚಿತ್ರದುರ್ಗ : ಕೋವಿಡ್-19 ಸಾಂಕ್ರಾಮಿಕ ರೋಗದ ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ರಾತ್ರಿ ಮತ್ತು ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿದ್ದು, ವಾರಾಂತ್ಯದ ಕಫ್ರ್ಯೂ ವೇಳೆ ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿಯಂತ್ರಣದ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಗತ್ಯವಸ್ತುಗಳಾದ ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು, ತರಕಾರಿ, ಹಾಲಿನ ಬೂತ್, ಮೀನು, ಮಾಂಸ, ಪಶು ಆಹಾರ ಅಂಗಡಿಗಳ ಸೇವೆಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಇದ್ದು, ಮೆಡಿಕಲ್ ಸ್ಟೋರ್‍ಗಳು ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಸೌಕರ್ಯಗಳು ಲಭ್ಯವಿರುತ್ತವೆ ಎಂದರು.

ವಾರಾಂತ್ಯದ ಕಫ್ರ್ಯೂ ವೇಳೆ ಕೋವಿಡ್ ಲಸಿಕೆ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದ್ದು, ಲಸಿಕೆ ಪಡೆದುಕೊಂಡು ಬರಲು ಮಾತ್ರ ಅನುಮತಿ ನೀಡಿದ್ದು, ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಹಾಜರು ಪಡಿಸಬೇಕು. ಮದುವೆಗೆ 50 ಜನ ಹಾಗೂ ಅಂತ್ಯಕ್ರಿಯೆಗೆ 20 ಜನ ಮೀರುವಂತಿಲ್ಲ. ಮದುವೆಗೆ ತೆರಳುವವರು ಆಹ್ವಾನ ಪತ್ರಿಕೆ ಹಾಜರುಪಡಿಸಬೇಕು ಎಂದರು.

ವಾರದ ದಿನಗಳಾದ ಸೋಮವಾರದಿಂದ ಶುಕ್ರವಾರದವೆಗೆ ಪ್ರತಿ ದಿನ ಬೆಳಿಗ್ಗೆ  6 ರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳು  ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ. ಬಟ್ಟೆ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳು ಅಲ್ಲದ ಅಂಗಡಿಗಳು ಇರುವುದಿಲ್ಲ. ಸಲೂನ್‍ಗಳು, ಬ್ಯೂಟಿಪಾರ್ಲರ್‍ಗಳು ಕೋವಿಡ್ ಮಾರ್ಗಸೂಚಿಯನ್ವಯ ವಾರದ ದಿನಗಳಲ್ಲಿ ಮಾತ್ರ ತೆರೆದಿರುತ್ತವೆ ಎಂದು ಹೇಳಿದರು.

ನಿರ್ಮಾಣ ಸಾಮಾಗ್ರಿಗಳಿಗೆ ಸಂಬಂಧಿಸಿದ ಅಂಗಡಿಗಳು, ವಾರದ ದಿನಗಳಲ್ಲಿ ತೆರೆದಿರುತ್ತವೆ ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಸಿದ ಹಾಗೂ ಇದಕ್ಕೆ ಪೂರಕವಾಗಿರುವ ಅಂಗಡಿಗಳು, ದಾಸ್ತಾನು ಮಳಿಗೆ, ಕೃಷಿ ಯಂತ್ರಗಾರಿಕೆಗೆ ವಾರದ ದಿನಗಳಲ್ಲಿ ಅವಕಾಶವಿರುತ್ತದೆ. ಇ-ಕಾಮರ್ಸ್‍ಗೆ ಅವಕಾಶವಿದ್ದು, ದಿನಸಿಗಳ ಮನೆಬಾಗಿಲಿಗೆ ಪಾರ್ಸೆಲ್ ಪಡೆಯಲು ಅವಕಾಶವಿರುತ್ತದೆ.

ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿರುತ್ತದೆ. ಲಾಡ್ಜ್‍ಗಳಲ್ಲಿ ವಾಸ್ತವ್ಯ ಹೂಡುವವರಿಗೆ ಅತಿಥಿ ಸೇವೆಗೆ ಮಾತ್ರ ಅವಕಾಶವಿದೆ ಎಂದರು.
ಧಾರ್ಮಿಕ ಸಮಾರಂಭ, ಜಾತ್ರೆ ನಿಷೇಧಿಸಲಾಗಿದ್ದು, ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ. ಪೂಜಾಸ್ಥಳ, ಪೂಜೆಗೆ ಮಾತ್ರ ಸೀಮಿತಗೊಳಿಸಿ ಸಾರ್ವಜನಿಕರ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘಟನೆ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರು ಅನಾಗತ್ಯವಾಗಿ ಸಂಚಾರ ಮಾಡದೇ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ |ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ 6 ಸಾವಿರ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್..!

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 795, ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ 247 ಕೋವಿಡ್ ಬೆಡ್‍ಗಳನ್ನು ಮೀಸಲಿರಿಸಲಾಗಿದೆ. ಸರ್ಕಾರಿಯಲ್ಲಿ 55 ಆಕ್ಸಿನೇಟೆಡ್ ಬೆಡ್ ಹಾಗೂ ಖಾಸಗಿಯಲ್ಲಿ 50 ಬೆಡ್‍ಗಳಿವೆ. ಸರ್ಕಾರಿ ಐಸಿಯು 41, ಖಾಸಗಿ 50 ಐಸಿಯುಗಳಿವೆ ಮತ್ತು ವೆಂಟಿಲೇಟರ್‍ಗಳು ಖಾಸಗಿ 30, ಸರ್ಕಾರಿ 31 ಇವೆ. ಹಾಗೂ ಇದಕ್ಕೆ ಸಂಬಂಧಿಸಿದ ಔಷಧಿಯು ದಾಸ್ತಾನು ಇರುತ್ತದೆ.

ಒಂದು ವೇಳೆ ಇನ್ನೂ ಹೆಚ್ಚಾದಲ್ಲಿ ಹಾಸ್ಟೆಲ್‍ಗಳಲ್ಲಿ ಕೋವಿಡ್‍ಗೆ ಚಿಕಿತ್ಸೆಗಾಗಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೋವಿಡ್‍ಗೆ ಸಂಬಂಧಿಸಿದಂತೆ ಯಾವುದೇ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‍ಗಳು ಕೋವಿಡ್‍ಗೆ ಚಿಕಿತ್ಸೆ ನೀಡುವಾಗ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಕೆಪಿಎಂ ಕಾಯ್ದೆ ಅನ್ವಯ ಯಾರಾದರೂ ಅನುಮತಿ ಪಡೆಯದೇ ಚಿಕಿತ್ಸೆ ನೀಡುತ್ತಿದ್ದರೆ ಅಂತಹ ಆಸ್ಪತ್ರೆ, ಕ್ಲಿನಿಕ್‍ಗಳ ಮೇಲೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 mins ago

ಚಿತ್ರದುರ್ಗ | ಜಿಲ್ಲೆಯಲ್ಲಿ 140 ಜನರಿಗೆ ಕೋವಿಡ್ ಸೋಂಕು ದೃಢ : 66 ಮಂದಿ ಬಿಡುಗಡೆ

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,444ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ...

ದಿನದ ಸುದ್ದಿ12 mins ago

ದಾವಣಗೆರೆ | ಮಳೆ ವಿವರ

ಸುದ್ದಿದಿನ,ದಾವಣಗೆರೆ :ಜಿಲ್ಲೆಯಲ್ಲಿ ಏಪ್ರಿಲ್ 22 ರಂದು ಸರಾಸರಿ 12.15 ಮಿ.ಮೀ ಮಳೆಯಾಗಿದ್ದು, ಒಟ್ಟಾರೆ 5.05 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 14.16 ಮಿ.ಮೀ ವಾಸ್ತವ...

ದಿನದ ಸುದ್ದಿ17 mins ago

ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಕೇರಿ

ಅಗತ್ಯ ವಸ್ತುಗಳಿಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ವಾರಾಂತ್ಯ ಕಫ್ರ್ಯೂ: ಸಂಪೂರ್ಣ ಸ್ತಬ್ಧ ಸುದ್ದಿದಿನ,ಚಿತ್ರದುರ್ಗ : ಕೋವಿಡ್-19 ಸಾಂಕ್ರಾಮಿಕ ರೋಗದ ಸೋಂಕಿನ ಎರಡನೇ ಅಲೆ...

ಕ್ರೀಡೆ12 hours ago

ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ 6 ಸಾವಿರ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್..!

ಸುದ್ದಿದಿನ ಡೆಸ್ಕ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ 6,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್...

ದಿನದ ಸುದ್ದಿ13 hours ago

ಮಹಾರಾಷ್ಟ್ರ | ಕೋವಿಡ್ ಸೆಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ 13 ಸೋಂಕಿತರು ಸಾವು..!

ಸುದ್ದಿದಿನ ಡೆಸ್ಕ್ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ವಿರಾರ್ನಲ್ಲಿರುವ ಕೋವಿಡ್ -19 ಕೇಂದ್ರದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 13 ರೋಗಿಗಳು ಸಾವನ್ನಪ್ಪಿದ ನಂತರ ಶುಕ್ರವಾರ ಮಹಾರಾಷ್ಟ್ರದ...

ನಿತ್ಯ ಭವಿಷ್ಯ13 hours ago

ನಿಮ್ಮ ಜನ್ಮಕುಂಡಲಿಯ ಕುಜದೋಷದ ಬಗ್ಗೆ ಮಾಹಿತಿ

ಜನ್ಮ ಕುಂಡಲಿಯಲ್ಲಿ ಯಾವ ಯಾವ ಮನೆಯಲ್ಲಿ ಕುಜ( ಮಂಗಳ, ಮಾಂಗಲೀಕ) ಇದ್ದರೆ ಕುಜದೋಷ ಪರಿಣಾಮ ಬೀರುವುದು ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ.. ಮದುವೆಗೂ ಮುನ್ನ ಗಂಡು-ಹೆಣ್ಣಿನ ಜಾತಕವನ್ನು...

ನಿತ್ಯ ಭವಿಷ್ಯ15 hours ago

ಈ ರಾಶಿಯವರಿಗೆ ಬಹುದಿನದ ಬೇಡಿಕೆ ಮತ್ತು ಕನಸು ಈಡೇರಲಿದೆ..! ಶುಕ್ರವಾರ ರಾಶಿ ಭವಿಷ್ಯ-ಏಪ್ರಿಲ್-23,2021

ಸೂರ್ಯೋದಯ: 06:01 AM, ಸೂರ್ಯಸ್ತ: 06:32 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತ ಋತು, ಉತ್ತರಾಯಣ,...

ದಿನದ ಸುದ್ದಿ23 hours ago

ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

ಸುದ್ದಿದಿನ, ಬೆಂಗಳೂರು :400 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಅವರ ಕಚೇರಿ...

ದಿನದ ಸುದ್ದಿ23 hours ago

ಇಲಾಖಾ ಪರೀಕ್ಷೆ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ: 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಏ.22 ರಿಂದ 30 ರವೆರೆಗೆ ನಡೆಸಲು ನಿಗದಿಪಡಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ....

ದಿನದ ಸುದ್ದಿ23 hours ago

ನ್ಯಾಯಾಧಿಕರಣದಲ್ಲಿ ತರಬೇತಿ ನೀಡಲು ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: 2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ 08...

Trending