ದಿನದ ಸುದ್ದಿ
ಬಂಡೀಪುರ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ಪ್ರಾಣಿಗಳ ಫೋಟೋಗಳಲ್ಲ ಇವು ; ಸತ್ಯ ಮಾಹಿತಿ ಒಳಗಿದೆ ತಪ್ಪದೆ ಓದಿ..!

ಸುದ್ದಿದಿನ ಡೆಸ್ಕ್ : ಕಳೆದ ಮೂರು ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಗೋಪಾಲ ಸ್ವಾಮಿ ಬೆಟ್ಟದ ವಲಯದ ಸುಮಾರು 2ಸಾವಿರ ಹೆಕ್ಟೇರ್ ಅರಣ್ಯ ಸಂಪತ್ತು ಅಕ್ಷರಶಃ ಸುಟ್ಟು ಭಸ್ಮವಾಗಿದೆ.
ಈ ಕಾಡ್ಗಿಚ್ಚಿನ ಸುದ್ದಿ ಕೂಡ ಇಡೀ ಕರ್ನಾಟಕವನ್ನೆ ಬೆಚ್ಚಿ ಬೀಳಿಸಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಅರಣ್ಯ ಸಂಪತ್ತು, ಪ್ರಾಣಿಗಳು ಸುಟ್ಟು ಕರುಕಲಾಗಿರುವ ಮನಕರಗುವ ಫೋಟೋಗಳೂ ಕೂಡ ಕಾಡ್ಗಿಚ್ಚಿನಂತೆ ಹಬ್ಬಿಕೊಂಡಿದೆ. ಆದರೆ ಈ ಫೋಟೋಗಳ್ಯಾವುವೂ ಬಂಡೀಪುರ ಅರಣ್ಯದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋದ ಪ್ರಾಣಿಗಳಲ್ಲ.
ಹೌದು ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ರುದ್ರನರ್ತನ ಮಾಡುತ್ತಾ ಕರುಣೆಯೇ ಇಲ್ಲದೆ ತನ್ನ ಕೆನ್ನಾಲಿಗೆ ಚಾಚಿದೆ. ಮುಗಿಲೆತ್ತರಕ್ಕೆ ಬೆಳೆದ ಅಚ್ಚಹಸಿರು ಮರಗಳೆಲ್ಲ ಸುಟ್ಟು ಬೂದಿಯಾಗಿವೆ. ಆದರೆ ಅರಣ್ಯದ ವನ್ಯಜೀವಿಗಳಿಗೆಲ್ಲ ಯಾವುದೇ ಪ್ರಾಣಾಪವಾಗಿಲ್ಲ ಎಂಬ ಮಾಹಿತಿಯನ್ನು ಖಾಸಗಿ ಮಾದ್ಯಮವೊಂದಕ್ಕೆ ಅರಣ್ಯ ವನ್ಯಜೀವಿ ಸಂರಕ್ಷಣಾ ಅಧಿಕಾರಿ ಪುನ್ನತಿ ಶ್ರೀಧರ್ ಅವರು ನೀಡಿದ್ದಾರೆ.
ಕಾಡ್ಗಿಚ್ಚಿನಿಂದ ಅರಣ್ಯ ನಾಶವಾಗಿದ್ದು, ಯಾವುದೇ ಪ್ರಾಣಿಗಳು ಬೆಂಕಿ ಅನಾಹುತಕ್ಕೆ ತುತ್ತಾಗಿರುವ ಬಗ್ಗೆ ಮಾಹಿತಿ ಇಲ್ಲ. ವನ್ಯ ಜೀವಿಗಳು ಬೆಂಕಿಯ ಶಾಖ ಮುಟ್ಟುತ್ತಿದ್ದಂತೆ ಓಡಿ ಹೋಗುತ್ಗವೆ ಎಂದಿದ್ದಾರೆ.
No wild animal death is reported so far in forest fire at BNP. News and photographs of charred animals circulated in the social media and other media are far from truth. No dead animals are seen so far during fire fighting operations.#karnataka #forest #wildlife #bandipur
— Karnataka Forest Department (@aranya_kfd) February 25, 2019
ಬೆಂಕಿಗೆ ಹಾವೊಂದು ಸುಟ್ಟು ಕರುಕಲಾಗಿರು ಹಾವಿನ ಫೋಟೋವು 2015 ಏಪ್ರಿಲ್ 24 ರಂದು ವಾಯುವ್ಯ ಕೊಲಂಬಿಯಾದಲ್ಲಿ ಆ್ಯಂಡಿಕ್ಯೂ ನದ್ದಾಗಿದೆ.
ಕಾಡ್ಗಿಚ್ವಿಗೆ ಸುಟ್ಟು ಕರಕಲಾಗಿರುವ ಮೊಲದ ಫೋಟೋವು 2018 ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದ ಮಲಿಬುನದ್ದಾಗಿದೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ
ಗೊರಿಲ್ಲಾ ರೀತಿ ಕಾಣುವ ಒರಾಕುಟನ್ ಜಾತಿಗೆ ಸೇರಿದ ಈ ಪ್ರಾಣಿಯ ಚಿತ್ರವನ್ನು ಒರಾಗುಟನ್ ಸಂರಕ್ಷಣಾ ಕೇಂದ್ರ 2016ರಲ್ಲಿ ಬಿಡುಗಡೆ ಮಾಡಿತ್ತು. ಅಲ್ಲದೇ ಈ ಪ್ರಭೇದದ ಒರಾಕುಟನ್ ಬಂಡಿಪುರದಲ್ಲಿ ಕಂಡು ಬರುವುದಿಲ್ಲ ಇದು ಕೇವಲ ಬೋರೆನಾ ಸುಮಾತ್ರದಲ್ಲಿ ಕಂಡು ಬರುವ ಪ್ರಾಣಿ ಪ್ರಬೇಧ.
ಲಿಂಕ್ ಮೇಲೆ ಕ್ಲಿಕ್ ಮಾಡಿ
https://en.m.wikipedia.org/wiki/Orangutan
ಕ್ಯಾಲಿಫೋರ್ನಿಯಾದ ಕಾಡ್ಗಿಚ್ವಿಗೆ ಸುಟ್ಟು ಬೆಂದಿರುವ ಜಿಂಕೆ, ಮತ್ತು ಇತರೆ ಪ್ರಾಣಿಗಳ ಫೊಟೋ ವಿಡಿಯೋ 2017 ರದ್ದಾಗಿದೆ.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ4 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ