Connect with us

ದಿನದ ಸುದ್ದಿ

ಚನ್ನಗಿರಿ | ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ನಡೆದ ಶಿವಗಂಗೋತ್ರಿ ಯುವಜನೋತ್ಸವ- 2023 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಚನ್ನಗಿರಿ ಕಾಲೇಜಿನ ವಿದ್ಯಾರ್ಥಿಗಳು 3 ಸ್ಪರ್ಧೆಯಲ್ಲಿ ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ ಮಧುವಂತಿ ವಿ ಹಿರೇಮಠ್ (ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಹಾಗೂ ಹಿಂದುಸ್ತಾನಿ ಭಜನ್ ) ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ಆಗಿದ್ದಾರೆ. ಏಕಾಂಕ ನಾಟಕದ 12 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆಯುವ ಮೂಲಕ ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಹಾಗೂ ಮಾತುಗಾರಿಕೆಯಲ್ಲಿ ಆಲಿಯಾ ಮುಸ್ಕಾನ್ ತೃತೀಯ ಸ್ಥಾನ ಪಡೆದಿದ್ದಾರೆ. ಇದೆ ಜನವರಿಯಲ್ಲಿ ಕಲಬುರ್ಗಿಯಲ್ಲಿ ನಡೆಯುವ ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಶ್ರೀ ಷಣ್ಮುಖಪ್ಪ ಕೆ ಎಚ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ‌ ಭಾಗವಹಿಸಿದ್ದರು. ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಪ್ರೊ ಹಾಲಸಿದ್ದಪ್ಪ ಸಿ ಬಿ ಅವರು ಪ್ರಶಂಸಿಸಿದ್ದು ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾಗುವಂತೆ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರೊ ಅಮೃತೇಶ್ವರ್ , ಅಬ್ದುಲ್ ರೆಹಮಾನ್, ಡಾ.ಹೊನ್ನೇಗೌಡ, ಕಲ್ಲೇಶ್ವಪ್ಪ ದೈಹಿಕ ನಿರ್ದೇಶಕರು, ಶ್ರೀಮತಿ ಗೌರಮ್ಮ, ಶ್ರೀ ಜಯನಾಯ್ಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending