ದಿನದ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆಯುಕ್ತರ ಭೇಟಿ

Published

on

  • ವರದಿ : ರಮ್ಯ, ಪತ್ರಿಕೋದ್ಯಮ ವಿದ್ಯಾರ್ಥಿ

ಸುದ್ದಿದಿನ,ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಪಿ. ಪ್ರದೀಪ್ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಜೂರಾದ ನಿವೇಶನವಿರುವ ಡಿ ಆರ್ ಆರ್ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಸ್ಥಳ ಪರಿಶೀಲಿಸಿದರು.

ಸ್ಥಳ ಪರಿಶೀಲನೆ ನಡೆಸಿದ ಮಾನ್ಯ ಆಯುಕ್ತರು ಡಿ ಆರ್ ಆರ್ ಕಾಲೇಜಿನ ಕಾಲೇಜಿನ ಪ್ರಾಂಶುಪಾಲರಿಂದ ಹಾಗೂ ಅಧ್ಯಾಪಕರಿಂದ ಮಾಹಿತಿ ಪಡೆದು ಕಾಲೇಜಿನ ಪೂರ್ವ ಭಾಗಕ್ಕೆ ಲಗತ್ತಾಗಿರುವ ನಿವೇಶನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೀಡುವಂತೆ ಡಿ ಆರ್ ಆರ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಎರಡೂ ಕಾಲೇಜಿನ ಪ್ರಾಂಶುಪಾಲರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು. ನಿವೇಶನದ ಸಮಸ್ಯೆಯನ್ನು ಬಗೆಹರಿಸಿದ ಮಾನ್ಯ ಆಯುಕ್ತರಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version