ದಿನದ ಸುದ್ದಿ
ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
ಸುದ್ದಿದಿನ, ಸಂತೇಬೆನ್ನೂರು : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಹಾಗೂ ಸಾಂಸ್ಕೃತಿಕ ವೇದಿಕೆಯ ಸಹಯೋಗದೊಂದಿಗೆ 50ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪುಷ್ಪ ನಮನದ ನೆರವೇರಿಸಲಾಯಿತು. ಪ್ರೊ. ಗಿರಿಸ್ವಾಮಿ. ಹೆಚ್, ಪ್ರಾಂಶುಪಾಲರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.
ಕನ್ನಡ ವಿಭಾಗದ ಅಧ್ಯಾಪಕರಾದ ಮೋಹನ. ಕೆ ಇವರು ಕನ್ನಡ ಭಾಷೆಯ ಪ್ರಾಚೀನತೆ ಮತ್ತು ವೈಶಿಷ್ಟ್ಯವನ್ನು ಕುರಿತು ಮಾತನಾಡಿದರು, ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ರಾಜಶೇಖರ್. ಎಸ್. ಮೂಲೀಮನಿ ಇವರು ಕನ್ನಡ ಭಾಷೆಯ ಮಹತ್ವವನ್ನು ಕುರಿತು ಮಾತನಾಡಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಚಂದ್ರಪ್ಪ. ಎಸ್. ಎಚ್. ಕಾರ್ಯಕ್ರಮವನ್ನು ನಿರೂಪಿಸಿದರು, ಸಮಾಜಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ. ನವೀನ್ ಗಂಗಾಧರ ರೂಗಿ ಸ್ವಾಗತಿಸಿದರು. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ವಿ.ಜಿ. ಪ್ರಸಾದ್ ಅವರು ವಂದನಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಮಲ್ಲಯ್ಯ. ಎನ್. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ನಾಗರತ್ನ ಹೆಚ್.ಎಂ. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪುನೀತ್ ಕುಮಾರ್. ಎಂ.ಆರ್. ಹಾಗೂ ಪ್ರಾಧ್ಯಾಪಕರಾದ ಪ್ರೊ. ಮಮತ. ಎನ್.ಆರ್. ಹಾಗೂ ಕಚೇರಿಯ ಅಧೀಕ್ಷಕರಾದ ಮೃತ್ಯುಂಜಯ. ಎಚ್.ಎಂ. ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರಾದ ಶ್ರೀ ಚೌಡೇಶ್. ಎಸ್. ಸೇರಿದಂತೆ ಬೋಧಕೇತರ ವರ್ಗದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿಯಾದ ಕುಮಾರಿ ನೂರ್ ಇ ಇಲಾಹಿನ್ ಅವರು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ನಾಡು- ನುಡಿ ಕುರಿತ ಗೀತೆಗಳನ್ನು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರೆಲ್ಲರೂ ಒಕ್ಕೊರಲಿನಿಂದ ಹಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243