Connect with us

ಲೈಫ್ ಸ್ಟೈಲ್

ಬಹುಪಯೋಗಿ ಶುಂಠಿ..!

Published

on

ಶುಂಠಿಯನ್ನು ನಾವು ಪ್ರತಿ ದಿನ ಆಹಾರದಲ್ಲಿ ಬಳಸುತ್ತಿದ್ದೀವಿ. ಕೆಲವೊಮ್ಮೆ ಅದನ್ನು ಸ್ವಾದಕ್ಕಾಗಿ ಬಳಸಿದರೆ ಇನ್ನೂ ಕೆಲವೊಮ್ಮೆ ಜೀರ್ಣಾಕ್ಕೆ ಒಳ್ಳೆಯದು ಅಂತ ಬಳಸಲಾಗುತ್ತದೆ. ನಮ್ಮಗೆ ಅದರ ಇನ್ನೂ ಕೆಲವು ಉಪಯೋಗ ಗೊತ್ತಾದರೆ ಒಳ್ಳೆಯದು ಅಲ್ಲವೇ.

ಇಲ್ಲಿವೆ ನೋಡಿ ಕೆಲವು ಉಪಯೋಗಳು

  1. ಊಟದ ಮಂಚೆ ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣ ತೊಂದರೆ ದೂರವಾಗುತ್ತದೆ.
  2. ಅರ್ಧ ಬೆರಳಿನಷ್ಟು ಉದ್ದದ ಹಸಿಶುಂಠಿಯನ್ನು ಚೆನ್ನಾಗಿ ಅರೆದು ನೀರಿಗೆ ಕದಡಿ ನಂತರ ಶೋಧಿಸಿ. ಜೇನು ತುಪ್ಪ ಮತ್ತು ನಿಂಬೆರಸವನ್ನು ಅದಕ್ಕೆ ಬೆರೆಸಿ ಸೇವಿಸುವುದರಿಂದ ಅಜೀರ್ಣ ಮತ್ತು ಹೊಟ್ಟೆ ಉಬ್ಬರದ ನಿವಾರಣೆಯಾಗುತ್ತದೆ.
  3. ತಲೆನೋವಿಗೆ ಹಸಿಶುಂಠಿಯನ್ನು ನೀರಿನಲ್ಲಿ ತೇದು ಆ ಗಂಧವನ್ನು ಹಣೆಗೆ ಹಚ್ಚಿ ಬೆಚ್ಚಗೆ ಹೊದ್ದು ಮಲಗಿಕೊಂಡರೆ ಸ್ವಲ್ಪ ಸಮಯದ ನಂತರ ಬೆವರು ಸುರಿದು ಹೋಗಿ ನೋವು ಮಾಯವಾಗಿ ಹೋಗುತ್ತದೆ.
  4. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸುವುದರಿಂದ ಅಜೀರ್ಣ ಮತ್ತು ಹೊಟ್ಟೆ ಉಬ್ಬರ ನಿವಾರಣೆಯಾಗುತ್ತದೆ.
  5. ಪ್ರತಿ ಊಟದ ನಂತರ ಒಂದು ಶುಂಠಿ ಅಗಿದು ಚಪ್ಪರಿಸುವ ಅಭ್ಯಾಸ ಮಾಡಿಕೊಂಡರೆ ಹೊಟ್ಟೆ ಮತ್ತು ಅಜೀರ್ಣ ಹಾಗೂ ಪಿತ್ತದ ನಿವಾರಣೆಯಾಗುತ್ತದೆ.
  6. ಮಕ್ಕಳಿಗೆ ಹಸಿಶುಂಠಿಯ ರಸವನ್ನು ಜೇನು ತುಪ್ಪದಲ್ಲಿ ಬೆರೆಸಿ ಕೊಡುವುದರಿಂದ ಕರುಳು ಮತ್ತು ಜಠರಕ್ಕೆ ಸಂಬಂಧಿಸಿದ ತೊಂದರೆಗಳು ದೂರವಾಗುವುವು.
  7. ಅನೇಕ ಕಾಯಿಪಲ್ಯೆಯನ್ನು ನಾವು ಉಪಯೋಗಿಸಿದಾಗ ಅನಿಲೋತ್ಪತ್ತಿಯಾಗುತ್ತದೆ. ಇಂತಹ ಗ್ಯಾಸ್ ಕರುಳಿನಲ್ಲಿ ಒಟ್ಟುಗೂಡಿದರೆ ಅನಾರೋಗ್ಯವಗುತ್ತದೆ. ಆಗ ಹಸಿಶುಂಠಿಯನ್ನು ಅರೆದು ಅದರ ರಸವನ್ನು ಜೇನುತುಪ್ಪದಲ್ಲಾಗಲೀ, ಹಾಲುನಲ್ಲಿಯಾಗಲೀ ಸೇವಿಸಿದರೆ ಈ ದೋಷ ದೂರವಾಗುವುದು.
  8. ಒಂದು ಬಟ್ಟಲು ಆಗ ತಾನೆ ಹಿಂಡಿದ ಹಸುವಿನ ಹಾಲಿಗೆ ಒಂದು ಚಮಚ ಒಣಶುಂಠಿಯ ಚೂರ್ಣವನ್ನು ಕದಡಿ ವಾರದವರೆಗೆ ಕ್ರಮವಾಗಿ ಸೇವಿಸಿದರೆ ಅರಿಸಿನ ಕಾಮಾಲೆಯ ರೋಗ ನಿವಾರಣೆಯಾಗುತ್ತದೆ.
  9. ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲುನೋವು ಉಪಶಮನವಾಗುವುದು.
  10. ನಾಲಿಗೆಗೆ ರುಚಿ ಇಲ್ಲದಂತಾಗಿರುವಾಗ ಒಂದು ಚೂರು ಹಸಿಶುಂಠಿ ಸ್ವಲ್ಪ ಕಾಳು ಜೀರಿಗೆ ಮತ್ತು ಕಲ್ಲುಸಕ್ಕರೆಯನ್ನು ಚೆನ್ನಾಗಿ ಅಗಿದು ಚಪ್ಪರಿಸುವುದರಿಂದ ರುಚಿ ಗ್ರಹಣ ಶಕ್ತಿ ಅಧಿಕಗೊಳ್ಳವುದು.
  11. ಒಂದು ಟೀ ಚಮಚ ಹಸಿಶುಂಠಿ ರಸ,ಎರಡು ಟೀ ಚಮಚ ನಿಂಬೆ ಹಣ್ಣಿನ ರಸ, ಎರಡು ಟೀ ಚಮಚ ಪುದೀನಾ ಸೊಪ್ಪಿನ ರಸ ಹಾಗೂ ಎಂಟು ಟೀ ಚಮಚ ಜೇನುತುಪ್ಪವನ್ನು ಸೇರಿಸಿ ಮಿಶ್ರಣ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸುವುದರಿಂದ ಮೂಲವ್ಯಾಧಿ, ಮಲಬದ್ಧತೆ, ಹೊಟ್ಟೆ ಉಬ್ಬರದ ನಿವಾರಣೆಯಾಗುವುದು.
  12. ಗಂಟಲು ಒಡೆದು ಮಾತನಾಡಲು ಕಷ್ಟವಾದಾಗ ಸ್ವಲ್ಪ ಶುಂಠಿ, ಒಂದೆರಡು ಲವಂಗ ಮತ್ತು ನಾಲ್ಕು ಉಪ್ಪಿನ ಹರಳುಗಳನ್ನು ಅಗಿದು ಚಪ್ಪರಿಸಿದರೆ ಗುಣವಾಗುತ್ತದೆ.
  13. ಮಳೆಯಲ್ಲಿ ನೆನೆದು ದೇಹಾಲಸ್ಯ ಉಂಟಾಗಿದ್ದರೆ ಹಸಿ ಶುಂಠಿಯ ಕಷಾಯ ತಯಾರಿಸಿ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸುವುದರಿಂದ ದೇಹಾಲಸ್ಯ ದೂರವಾಗುವುದು.
  14. ಶುಂಠಿಯಲ್ಲಿರುವ ಪೋಷಕಾಂಶಗಳು ರಕ್ತದ ಪರಿಚಲನೆಯನ್ನು ಚುರುಕುಗೊಳಿಸಿ ಅಂಗಾಂಗಳ ಕ್ಷಮತೆಯನ್ನು ಹೆಚ್ಚಿಸಲು ನೆರವಾಗುತ್ತದೆ. ಶುಂಠಿಯ ಸೇವನೆಯ ಪ್ರಯೋಜನಗಳಲ್ಲಿ ಇದು ಅತ್ಯುತ್ತಮವಾದುದು.

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.

ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.

ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.

ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ1 week ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ3 weeks ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ3 weeks ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ3 weeks ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

Trending