ದಿನದ ಸುದ್ದಿ
ಹಳಿ ತಪ್ಪಿದ ಗೂಡ್ಸ್ ರೈಲು ; ಸಂಚಾರ ವ್ಯತ್ಯಯ
ಸುದ್ದಿದಿನ,ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದಲ್ಲಿ ತಡರಾತ್ರಿ ಗೂಡ್ಸ್ ರೈಲು ಹಳಿ ತಪ್ಪಿದೆ. ಸೇಡಂ ಪಟ್ಟಣದ ವಾಸವದತ್ತಾ ಸಿಮೆಂಟ್ ಕಾರ್ಖಾನೆಯಿಂದ ಹೊರಟಿದ್ದ ಗೂಡ್ಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ ಪರಿಣಾಮ ರೈಲು ಸಂಚಾರ ವ್ಯತ್ಯಯವಾಗಿದೆ.
ಮುಂಬೈ ಎಕ್ಸ್ಪ್ರೆಸ್ ಕೊಲ್ಹಾಪುರ ಹಾಗೂ ವಿಜಯಪುರಕ್ಕೆ ತೆರಳುವ ರೈಲುಗಳು ವಿಳಂಬವಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಸ್ಥಳಕ್ಕೆ ರೇಲ್ವೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಾಡಿ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401