Connect with us

ಲೈಫ್ ಸ್ಟೈಲ್

ನೆಲ್ಲಿಕಾಯಿಯ ಮಹಿಮೆ‌ ಬಲ್ಲಿರಾ..!?

Published

on

ನೆಲ್ಲಿಕಾಯಿ (Gooseberry) ಅಂದರೆ ಯಾರಿಗಿಷ್ಟಾ ಇಲ್ಲಾ ಹೇಳಿ ಎಲ್ಲರ ಬಾಯಿಯಲ್ಲಿ ನೀರು ಬರಿಸುತ್ತದೆ. ನೆಲ್ಲಿಕಾಯಿ ನಾಲಿಗೆಗೂ ರುಚಿಕರ ಆರೋಗ್ಯಕ್ಕೂ ಹಿತರಕರವಾಗಿದೆ ಈ ನೆಲ್ಲಿ. ಬೇಯಿಸಿದ ನೆಲ್ಲಿ ಹುಣಿಸೆ ರಸದಲ್ಲಿ ಕೊಳೆ ಹಾಕಿದ ನೆಲ್ಲಿ ಊಪ್ಪಿನಕಾಯಿ ತೊಕ್ಕು, ಮುರಬ್ಬು, ಚಟ್ನಿ, ಗೊಜ್ಜು ,ಕಡಿ,ಮಜ್ಜಿಗೆ ,ನೆಲ್ಲಿ ಸಾಂಬಾರು, ನೆಲ್ಲಿ ಚಿತ್ರಾನ್ನ ಮಾಡಿ ನಾಲಿಗೆಯಲಿ ನೀರೂರಿಸುವ ಒಗರು ಸಿಹಿ ನೆಲ್ಲಿ ವಾವ್! ಅಲ್ವಾ..!?

  • ನೆಲ್ಲಿ ಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಹಾಗೂ ಇದರಲ್ಲಿ ಪ್ರೋಟೀನು ನಾರು ,ಲವಣದ ಅಂಶವೂ ಕೂಡ ಇದೆ. ರಕ್ತದಲ್ಲಿ ಕೊಬ್ಬು ಹೆಚ್ಚಾಗಿದ್ದಲ್ಲಿ ನೆಲ್ಲಿಕಾಯಿ ಒಣಗಿಸಿ ಪುಡಿ ಮಡಿ. ಸ್ವಲ್ಪ ಸಕ್ಕರೆ ಪಾಕದೊಂದಿಗೆ ಬೆರೆಸಿ ಪ್ರತಿ ದಿನ ಒಂದು ಚಮಚದಷ್ಟು ಬರೀ ಹೊಟ್ಟೆಯಲ್ಲಿ ತೆಗೆದುಕೊಂಡರೆ ಕೊಬ್ಬು ಸ್ಥಿಮಿತದಲ್ಲಿ ಇರುತ್ತದೆ.
  • ಅಸಿಡಿಟಿ ತೊಂದರೆ ಇದ್ದರೆ. ಆಮ್ಲರಸ ಒಳ್ಳೆಯದು ಅಜೀರ್ಣತೆಗೆ ಒಂದು ಚಮಚ ಜೇನು ತುಪ್ಪ ಹಾಗೂ ಕೆಲವೂ ನೆಲ್ಲಿ ಎಲೆಯೊಡನೆ ಬಾಯಿಯಲ್ಲಿಟ್ಟು ಜಗಿಯಬೇಕು ಆಗ ಅಸಿಡಿಟಿ ನಿವಾರಣೆಯಾಗುತ್ತದೆ.
  • ಆಯುರ್ವೇದದ ಚ್ಯವನಪ್ರಾಶಕ್ಕೆ ನೆಲ್ಲಿ ಉಪಯುಕ್ತವಾಗಿದೆ ಆಯುರ್ವೇದದ ಪ್ರಕಾರ ಮೂಲವ್ಯಾದಿ ತಲೆನೋವು ಅನೀಮಿಯಾ ಮಲಬದ್ದತೆ ಇದ್ದವರು. ದಿನಕ್ಕೆ ನಾಲ್ಕು ಚಮಚ ನೆಲ್ಲಿರಸ ಕುಡಿದರೆ ಆರೋಗ್ಯಕ್ಕೆ ಒಳ್ಳೆದಂತೆ ನೆಲ್ಲಿಕಾಯಿ ಗಿಡದ, ಎಲೆ, ಬೇರು, ಕಾಯಿ, ತೊಗಟೆ ಹೂವು ಎಲ್ಲವೂ ಉಪಯುಕ್ತ .ಆರೋಗ್ಯಕ್ಕೆ ಆಯಸ್ಸಿಗೆ ಹೃದಯ ಸಂಬಂಧಿ ಖಾಯಿಲೆಗಳಿಗೆ ಮಧುಮೇಹಿಗಳಿಗೆ ನೆಲ್ಲಿಕಾಯಿ ರಸ ಜೀವಾಮೃತವಾಗಿದೆ.
  • ನೆಲ್ಲಿಕಾಯಿ ಹೋಳು ಮಾಡಿ ಉಪ್ಪು ನೀರಲ್ಲಿ ನೆನಸಿ ಬಿಸಿಲಲಿ ಒಣಗಿಸಿ ಇಟ್ಟುಕೊಂಡು ಬೇಕೆನಿಸಿದಾಗ ಬಾಯಾರಿದಾಗ ಬಾಯಿಗೆ ಹಾಕಿಕೊಳ್ಳಿ.
  • 5 ಚಮಚ ನೆಲ್ಲಿರಸ , 1/4ಕಪ್ ಮಜ್ಜಿಗೆಯೊಡನೆ ಬೆರಸಿ ತಲೆಗೆ ಹಚ್ಚಿ ಸ್ನಾನಾ ಮಾಡಿದಲ್ಲಿ ಕೂದಲು ಹೊಳೆಯುತ್ತದೆ ಮತ್ತು ಉದುರುವುದಿಲ್ಲ. ಇಂಕ್ ಡೈ ಹಾಗೂ ಶಾಂಪುಗಳಲ್ಲಿ ಇದರ ಉಪಯೋಗ ಹೆಚ್ಚು ಹಿರಿಯರು ಹೇಳುವ ಉಪದೇಶ ಮೊದಲು ಅಹಿತವಾದರು ನಿಮಗೆ ಸ್ವತಃ ಅನುಭವ ಆದ ಮೇಲೆ ಹಿತ ಎನಿಸುತ್ತದೆ.

ನೆಲ್ಲಿಕಾಯಿ ತಿಂದಾಕ್ಷಣ ಒಗರೆನಿಸಿದರೂ ನಂತರ ನಾಲಿಗೆಗೆ ಅದರ ಸಿಹಿ ಮುದ ನೀಡುತ್ತದೆ. ’ನೆಗೆದ್ ಬಿದ್ದ ನೆಲ್ಲಿಕಾಯಿಯ ಹಾಗೆ ಎಂಬ ಗಾದೆ ಮಾತಿನಲ್ಲೂ ನಮಗೆ ಸಿಹಿ ಒಗರಿ ಸಂಬಂಧ ತೋರಿಸುತ್ತದೆ.

ನೆಲ್ಲಿ ಕಾಯಿಯ ಉಪಯೋಗಗಳು

  1. ಸೆಕೆಯನ್ನು ತಡೆಯಲು ಪ್ರತಿದಿನ ಸ್ವಲ್ಪ ಆಮ್ಲ ಜ್ಯೂಸ್ ಕುಡಿದರೆ ಇದು ದೇಹವನ್ನು ತಂಪಾಗಿಡುತ್ತದೆ.
  2. ಟೀ ಪುಡಿಯೊಂದಿಗೆ ನೆಲ್ಲಿಕಾಯಿ ಪುಡಿ ಬೆರಸಿ ಈ ಪೇಸ್ಟ್ ಅನ್ನು ತಲೆಗೆ ಹಚ್ಚುವುದರಿಂದ ಕೂದಲು ಬಲವರ್ಧಕಗೊಳ್ಳುವುದು.
  3. ದೀರ್ಘಕಾಲದ ಮಲಬದ್ಧತೆ ಗುಣವಾಗುವುದು ಮಲಬದ್ದತೆ ಗುಣವಾಗುವುದು ಮಲಬದ್ದತೆ ಸಮಸ್ಯೆಯಿಂದ ತುಂಬಾ ಕಾಲದವರೆಗೆ ಬಳಲುತ್ತಿರುವವರು ಆಮ್ಲ ಜ್ಯೂಸ್ ಕುಡಿದರೆ ಈ ಸಮಸ್ಸೆ ಗುಣಮುಖವಾಗುವುದು.
  4. ನೆಲ್ಲಿಕಾಯಿಯನ್ನು ಜೇನು ಜೊತೆ ತೆಗೆದುಕೊಳ್ಳುತ್ತಾ ಬಂದರೆ ಅಸ್ತಮಾ ಕಾಯಿಲೆ ಕಡಿಮೆಯಾಗುತ್ತದೆ ಉಸಿರಾಟ ತೊಂದರೆ ಅನುಭವಿಸುತ್ತಿರುವವರೆಗೆ ಇದು ಅತ್ಯತ್ತಮವಾದ ಔಷಧಿಯಾಗಿದೆ.
  5. ನೆಲ್ಲಿಕಾಯಿಚೂರನ್ನು ಕೊಬ್ಬರಿಎಣ್ಣೆಯಲ್ಲಿ ನೆನೆಸಿಟ್ಟು ಪ್ತತಿದಿನ ಈ ಎಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲ ಸಮಸ್ಸೆಗಳು ಬಗೆಹರಿಯುತ್ತದೆ.
  6. ನೆಲ್ಲಿಕಾಯಿಯ ಜ್ಯೂಸ್ ಅನ್ನು ಪ್ರತಿದಿನ ಎರಡು ಬಾರಿ ಕುಡಿದರೆ ಉರಿ ಮೂತ್ರದ ಸಮಸ್ಸೆ ಇರುವುದಿಲ್ಲ.
  7. ನೆಲ್ಲಿಕಾಯಿ ಜ್ಯೂಸ್ ಅನ್ನು ಜೇನಿಗೆ ಮಿಶ್ರಣ ಮಾಡಿ ಪ್ರತಿದಿನ ಬೆಳಗ್ಗೆ ಕುಡಿಯುತ್ತಾ ಬಂದರೆ ಮುಖದಲ್ಲಿ ಬಿಳಿ ಮಚ್ಚೆ, ಮೊಡವೆ, ಬ್ಯಾಕ್ ಹೆಡ್ಸ್ ಈ ರೀತಿಯ ಯಾವುದೇ ಸಮಸ್ಸೆ ಕಂಡು ಬರುವುದಿಲ್ಲ ಮುಖದ ಕಾಂತಿ ಹೆಚ್ಚುವುದು.
  8. ಮುಖದಲ್ಲಿ ಅಕಾಲಿಕ ನೆರಿಗೆಯನ್ನು ತಡೆಗಟ್ಟುತ್ತದೆ, ತ್ವಚೆ ರಕ್ಷಣೆಯನ್ನು ಮಾಡುತ್ತದೆ.
    ಆಮ್ಲ ಜ್ಯೂಸ್ ಅನ್ನು ಅರಿಶಿಣ ಹಾಗೂ ಜೇನು ಜೊತೆ ಕುಡಿದರೆ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

ನಿವೇದಿತಾ ಸುರೇಶ್ ಸೋಲಾಪುರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

Published

on

ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ

  • ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!
  • ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಸುದ್ದಿದಿನ,ಮಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌: ಎ ಫೇರಿ ಟೇಲ್‌ ಫಾರ್ ಗ್ರೋನ್-ಅಪ್ಸ್‌’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್‌ 26ರಂದು ಚಿತ್ರ ತೆರೆಗೆ ಬರಲಿದ್ದು, ಬಿಡುಗಡೆಗೂ ಮುನ್ನ ಯಶ್‌ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!

ನಿನ್ನೆ ಚೆನ್ನೈನಲ್ಲಿ ನಡೆದ ‘ಟಾಕ್ಸಿಕ್‌’ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್‌, ಕಾರ್ಯಕ್ರಮ ಮುಗಿದ ಬಳಿಕ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.

http://Visit : www.suddidina.com

ರಿಲೀಸ್‌ಗೂ ಮುನ್ನ ದೇವರ ದರ್ಶನದ ಸಂಪ್ರದಾಯ

ಸಿನಿಮಾ ಬಿಡುಗಡೆಗೂ ಮುನ್ನ ದೇವಸ್ಥಾನಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯುವುದು ಯಶ್‌ ಅವರಲ್ಲಿ ಹಿಂದಿನಿಂದಲೂ ಕಂಡುಬರುವ ಸಂಪ್ರದಾಯ. ‘ಕೆಜಿಎಫ್‌: ಚಾಪ್ಟರ್‌ 2’ ಬಿಡುಗಡೆಯ ಮುನ್ನವೂ ಯಶ್‌ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದೀಗ ‘ಟಾಕ್ಸಿಕ್‌’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೂಲಕ ತಮ್ಮ ಆ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

ಯಶ್‌ ಸೂರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಹರಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನ ಯಶ್‌ ಅವರ ದೇವಸ್ಥಾನ ಭೇಟಿ ಅಭಿಮಾನಿಗಳ ಗಮನ ಸೆಳೆದಿದೆ.

ಟಾಕ್ಸಿಕ್‌ ಮೇಲೆ ಭಾರಿ ನಿರೀಕ್ಷೆ

ಗೀತು ಮೋಹನ್‌ದಾಸ್‌ ನಿರ್ದೇಶನದ ‘ಟಾಕ್ಸಿಕ್‌’ ಪ್ಯಾನ್‌ ಇಂಡಿಯಾ ಆಕ್ಷನ್‌ ಥ್ರಿಲ್ಲರ್‌ ಆಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೂ ಚಿತ್ರ ಡಬ್‌ ಆಗಿದೆ.

ಯಶ್‌ ಪ್ರಮುಖ ಪಾತ್ರದಲ್ಲಿರುವ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್‌, ಹುಮಾ ಖುರೇಷಿ ಹಾಗೂ ನಯನತಾರಾ ಸೇರಿದಂತೆ ಬಹುಭಾಷಾ ತಾರೆಯರ ದೊಡ್ಡ ಬಳಗವೇ ಇದೆ. ಹೀಗಾಗಿ ಕನ್ನಡ ಮಾತ್ರವಲ್ಲದೆ ದಕ್ಷಿಣ ಹಾಗೂ ಉತ್ತರ ಭಾರತದ ಮಾರುಕಟ್ಟೆಗಳಲ್ಲೂ ಚಿತ್ರದ ಮೇಲೆ ಭಾರಿ ನಿರೀಕ್ಷೆ ಮೂಡಿದೆ.

ಬೆಂಗಳೂರಿನಲ್ಲಿ ಟಿಕೆಟ್‌ ದರಕ್ಕೆ ಶಾಕ್‌!

‘ಟಾಕ್ಸಿಕ್‌’ ಅಡ್ವಾನ್ಸ್‌ ಬುಕ್ಕಿಂಗ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಕೆಲವು ಪ್ರೀಮಿಯಂ ಥಿಯೇಟರ್‌ಗಳಲ್ಲಿ ಟಿಕೆಟ್‌ ದರ ₹3,600ರ ಗಡಿ ತಲುಪಿರುವುದು ಗಮನ ಸೆಳೆದಿದೆ. ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ರೆಕ್ಲೈನರ್‌ ಟಿಕೆಟ್‌ಗಳು ₹700ರಿಂದ ₹1,600ರವರೆಗೆ ಲಭ್ಯವಿದ್ದರೆ, ಕೆಲವು ಪ್ರೀಮಿಯಂ ಸ್ಕ್ರೀನ್‌ಗಳಲ್ಲಿ ದರ ಇನ್ನಷ್ಟು ಹೆಚ್ಚಾಗಿದೆ.

ಸಾಕ್ನಿಲ್ಕ್‌ ವರದಿಯ ಪ್ರಕಾರ, ಅಡ್ವಾನ್ಸ್‌ ಬುಕ್ಕಿಂಗ್‌ ಆರಂಭವಾದ ಎರಡು ದಿನಗಳಲ್ಲಿ ‘ಟಾಕ್ಸಿಕ್‌’ ಸುಮಾರು ₹18.73 ಕೋಟಿ ಮುಂಗಡ ಬುಕ್ಕಿಂಗ್‌ ದಾಖಲಿಸಿದೆ ಎನ್ನಲಾಗಿದೆ. ಟಿಕೆಟ್‌ ದರ ಏರಿಕೆಯ ನಡುವೆಯೂ ಬುಕ್ಕಿಂಗ್‌ ವೇಗ ಕುಂದಿಲ್ಲ.

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ನಾಳೆ ತೆರೆಗೆ ‘ಟಾಕ್ಸಿಕ್‌’

ಯಶ್‌ ಮತ್ತು ಗೀತು ಮೋಹನ್‌ದಾಸ್‌ ಕಥೆ ಬರೆದಿರುವ ಈ ಚಿತ್ರವು ಭಿನ್ನ ಕಥಾಹಂದರ ಹಾಗೂ ಭರ್ಜರಿ ಆಕ್ಷನ್‌ ಮೂಲಕ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಮೂಡಿಸಿದೆ. ಈಗ ಧರ್ಮಸ್ಥಳದ ಸನ್ನಿಧಿಯಲ್ಲಿ ಯಶ್‌ ಪಡೆದ ಆಶೀರ್ವಾದದ ಬೆನ್ನಲ್ಲೇ, ನಾಳೆ ‘ಟಾಕ್ಸಿಕ್‌’ ಬಾಕ್ಸ್‌ ಆಫೀಸ್‌ನಲ್ಲಿ ಹೇಗೆ ಸದ್ದು ಮಾಡಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

Continue Reading

ದಿನದ ಸುದ್ದಿ

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

Published

on

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ‘ಬುಲ್ಡೋಜರ್’ ಆ್ಯಕ್ಷನ್: ₹25 ಕೋಟಿ ಮೌಲ್ಯದ ಆಸ್ತಿ ವಶ!

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ

  • 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
    ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

http://Visit : www.suddidina.com

ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:

ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.

https://x.com/BDAOfficialGok/status/2092121239175512436?s=20

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:

ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ

ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.

ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

Continue Reading

ದಿನದ ಸುದ್ದಿ

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

Published

on

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

  • ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ 100% ಶುಲ್ಕ?
  • ಶೇ.2ಕ್ಕೆ ಇಳಿದ ಶುಲ್ಕದ ಬಳಿಕ ಅರ್ಜಿ ಹೆಚ್ಚಾದರೂ, ತಾಂತ್ರಿಕ ಸಮಸ್ಯೆಯಿಂದ ಜನರಿಗೆ ಸಂಕಷ್ಟ
  • 7.50 ಲಕ್ಷ ಬಿ-ಖಾತೆ ಆಸ್ತಿಗಳ ಪೈಕಿ ಕೇವಲ 90 ಸಾವಿರ ಅರ್ಜಿಗಳು, 20 ಸಾವಿರಕ್ಕಷ್ಟೇ ಎ-ಖಾತೆ ಭಾಗ್ಯ

ಸುದ್ದಿದಿನ,ಬೆಂಗಳೂರು: ‘ಮನೆ ನಮ್ಮದು, ಖಾತೆಯೂ ನಮ್ಮ ಹಕ್ಕು’ ಎಂಬ ನಿರೀಕ್ಷೆಯೊಂದಿಗೆ ಎ-ಖಾತೆ ಪಡೆಯಲು ಮುಂದಾದ ಬೆಂಗಳೂರಿನ ಸಾವಿರಾರು ಆಸ್ತಿ ಮಾಲೀಕರಿಗೆ ಇದೀಗ ನಿರಾಸೆ ಎದುರಾಗಿದೆ. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯ ಭಾಗವಾಗಿ ಆರಂಭಿಸಿದ್ದ ‘ನನ್ನ ಖಾತಾ ನನ್ನ ಹಕ್ಕು’ ಕಾರ್ಯಕ್ರಮದ ಗಡುವು ಮುಕ್ತಾಯಗೊಂಡಿದ್ದು, ಯೋಜನೆಯ ಅನುಷ್ಠಾನದಲ್ಲಿ ಎದುರಾದ ತಾಂತ್ರಿಕ ಸಮಸ್ಯೆ ಹಾಗೂ ಅಧಿಕಾರಿಗಳ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು ನಗರದಲ್ಲಿ ಸುಮಾರು 7.50 ಲಕ್ಷ ಬಿ-ಖಾತೆ ಆಸ್ತಿಗಳಿವೆ ಎನ್ನಲಾಗಿದ್ದು, ಈ ಪೈಕಿ ಕೇವಲ 90 ಸಾವಿರ ಆಸ್ತಿ ಮಾಲೀಕರು ಮಾತ್ರ ಎ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಸಿದವರಿಗೂ ತಕ್ಷಣ ಪರಿಹಾರ ಸಿಗಲಿಲ್ಲ. ಅಧಿಕಾರಿಗಳ ಪ್ರಕ್ರಿಯೆ ವಿಳಂಬದಿಂದಾಗಿ ಇದುವರೆಗೆ ಕೇವಲ 20 ಸಾವಿರ ಆಸ್ತಿಗಳಿಗೆ ಮಾತ್ರ ಎ-ಖಾತೆ ಮಂಜೂರಾಗಿದೆ. ಇನ್ನೂ 60 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ.

ಶುಲ್ಕ ಕಡಿತದ ಬಳಿಕ ಹೆಚ್ಚಿದ ನಿರೀಕ್ಷೆ

ಆರಂಭದಲ್ಲಿ ಎ-ಖಾತೆ ಪಡೆಯಲು ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ಶುಲ್ಕ ವಿಧಿಸಲು ಸರ್ಕಾರ ನಿರ್ಧರಿಸಿತ್ತು. ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶುಲ್ಕವನ್ನು ಶೇ.2ಕ್ಕೆ ಇಳಿಸಲಾಯಿತು. ಶುಲ್ಕ ಕಡಿಮೆಯಾದ ಬಳಿಕ ಎ-ಖಾತೆ ಪಡೆಯುವ ಆಸಕ್ತಿಯೂ ಹೆಚ್ಚಾಯಿತು. ಆದರೆ, ಇದೇ ಸಂದರ್ಭದಲ್ಲಿ ಮತ್ತೊಂದು ಸಮಸ್ಯೆ ಎದುರಾಯಿತು. ಅರ್ಜಿ ಸಲ್ಲಿಸಲು ಬಳಸುತ್ತಿದ್ದ ಜಿಬಿಎ ವೆಬ್‌ಸೈಟ್‌ನಲ್ಲಿ ಸರ್ವರ್ ಡೌನ್, ತಾಂತ್ರಿಕ ದೋಷ ಮತ್ತು ಮೂಲಸೌಕರ್ಯ ಕೊರತೆ ಕಾಣಿಸಿಕೊಂಡಿದ್ದರಿಂದ ಅನೇಕ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಪರದಾಡಿದರು. ಅರ್ಜಿ ಸಲ್ಲಿಸಿದವರಲ್ಲೂ ಹಲವರ ಅರ್ಜಿಗಳು ಅಧಿಕಾರಿಗಳ ಪರಿಶೀಲನೆಗಾಗಿ ಬಾಕಿ ಉಳಿದಿವೆ.

ಗಡುವು ಮುಗಿದ ಬಳಿಕ ಶುಲ್ಕದ ಹೊರೆ?

ಈಗ ‘ನನ್ನ ಖಾತಾ ನನ್ನ ಹಕ್ಕು’ ಯೋಜನೆಯ ಗಡುವು ಮುಕ್ತಾಯಗೊಂಡಿರುವುದರಿಂದ, ಮುಂದಿನ ದಿನಗಳಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರು ಪೂರ್ಣ ಪ್ರಮಾಣದ ಶೇ.100 ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಈಗಾಗಲೇ ಅರ್ಜಿ ಸಲ್ಲಿಸಿ ಅಧಿಕಾರಿಗಳ ಅನುಮೋದನೆಗಾಗಿ ಕಾಯುತ್ತಿರುವ 60 ಸಾವಿರಕ್ಕೂ ಹೆಚ್ಚು ಆಸ್ತಿ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. “ಶುಲ್ಕ ವಸೂಲಿಗೆ ಸರ್ಕಾರ ತೋರಿದ ವೇಗವನ್ನು, ಜನರಿಗೆ ತಾಂತ್ರಿಕ ನೆರವು ನೀಡುವಲ್ಲಿ ತೋರಲಿಲ್ಲ” ಎಂಬ ಆಕ್ರೋಶವೂ ಕೇಳಿಬರುತ್ತಿದೆ.

ಈಗ ಎಲ್ಲರ ಕಣ್ಣು ಸರ್ಕಾರದತ್ತ ನೆಟ್ಟಿದೆ. ಗಡುವು ವಿಸ್ತರಣೆಯಾಗುತ್ತದೆಯೇ? ಬಾಕಿ ಅರ್ಜಿಗಳಿಗೆ ವಿಶೇಷ ಅವಕಾಶ ಸಿಗುತ್ತದೆಯೇ? ಅಥವಾ ಸಾವಿರಾರು ಜನರು ಶೇ.100 ಶುಲ್ಕದ ಹೊರೆ ಹೊರುವಂತಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ ಸರ್ಕಾರದ ಮುಂದಿನ ನಿರ್ಧಾರವೇ ಉತ್ತರ ನೀಡಬೇಕಿದೆ.

 

Continue Reading

Trending