ದಿನದ ಸುದ್ದಿ

ಗ್ರಾಮಪಂಚಾಯಿತಿ ಚುನಾವಣೆಗಳನ್ನು 6 ತಿಂಗಳು ಮುಂದೂಡಲಾಗಿದೆ : ಸಚಿವ ಈಶ್ವರಪ್ಪ

Published

on

ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೇರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆ ಗ್ರಾಮಪಂಚಾಯಿತಿಯ ಚುನಾವಣೆಗಳನ್ನು 6 ತಿಂಗಳು ಮುಂದೂಡಲಾಗಿದೆ ಎಂದರು.

ರಾಜ್ಯದಲ್ಲಿ 6,012 ಗ್ರಾಮಪಂಚಾಯಿತಿಗಳಿದ್ದು, ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿದರೆ ಬಹುತೇಕ ಗ್ರಾಮಪಂಚಾಯತ್ ಗಳ ಅವಧಿ ಜೂನ್-ಜುಲೈರೊಳಗೆ ಅಂತ್ಯಗೊಳ್ಳಲಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆಗಳನ್ನು 6 ತಿಂಗಳು ಮುಂದೂಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version