Connect with us

ದಿನದ ಸುದ್ದಿ

ಜ.20 ಹಾಗೂ 21 ರಂದು ಗ್ರೂಪ್ ಸಿ ಹುದ್ದೆಗಳಿಗೆ ಪರೀಕ್ಷೆ ; ಸಕಲ ಸಿದ್ದತೆ : ಎಡಿಸಿ ಪಿ.ಎನ್ ಲೋಕೇಶ್

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಪರಿವೀಕ್ಷಕರ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಜ.20, 21 ರಂದು ನಗರದ ಹದಿನಾಲ್ಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಸಿದ್ದತಾ ಸಭೆಯಲ್ಲಿ ಪರೀಕ್ಷಾ ವೀಕ್ಷಕರು, ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು ಪರೀಕ್ಷೆ ಸಂಧರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಜ.20 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ. ಜ.21 ರಂದು ಬೆಳಿಗ್ಗೆ 10 ರಿಂದ 11.30 ರವರಗೆ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳಲ್ಲಿ ಎಷ್ಟೇ ಎಚ್ಚರವಹಿಸಿದರೂ ಕೆಲವು ತಪ್ಪುಗಳಾಗುತ್ತವೆ, ಹಾಗಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಪರೀಕ್ಷಾ ಮಾರ್ಗಸೂಚಿಗಳನ್ನು ಸರಿಯಾಗಿ ಓದಿಕೊಂಡು ಕರ್ತವ್ಯ ನಿರ್ವಹಿಸಬೇಕು. ತಾಂತ್ರಿಕತೆ ಬಹಳ ಮುಂದುವರೆದಿದ್ದು ಪರೀಕ್ಷೆಗಳಲ್ಲಿ ತಾಂತ್ರಿಕಕತೆ ಬಳಸುವ ಅಪಾಯವಿರುಚುದರಿಂದ ಹೆಚ್ಚು ಜಾಗರೂಕರಾಗಿರಬೇಕೆಂದರು.

ಪರೀಕ್ಷಾ ಕೇಂದ್ರಗಳಲ್ಲಿ ಎಲೆಕ್ಟ್ರಾನಿಕ್ಸ್ ಸಾಧನಗಳಾದ ಮೊಬೈಲ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲೂ ಟೂತ್ ಡಿವೈಸ್, ಪೇಜರ್, ವೈರ್‍ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿರ್ಬಂಧವಿರುತ್ತದೆ, ಆದಾಗ್ಯೂ ಯಾವುದೇ ವ್ಯಕ್ತಿಗಳು ಇವುಗಳನ್ನು ಕೇಂದ್ರದೊಳಗೆ ತಂದರೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸಿ ಆಯೋಗ ನಡೆಸುವ ಎಲ್ಲಾ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುವುದೆಂದರು.

ಪರೀಕ್ಷಾ ಉಪ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು, ಪರೀಕ್ಷಾ ಉಪ ಕೇಂದ್ರಗಳ ವೀಕ್ಷಕರಿಗಳಿಗೆ ಬಾಡಿ ಕ್ಯಾಮರಾ ಒದಗಿಸಬೇಕು. ಪ್ರವೇಶ ಪತ್ರ ಮತ್ತು ಮೂಲ ಗುರುತಿನ ಚೀಟಿ ಹೊಂದಿರುವ ಅಭ್ಯರ್ಥಿಗಳಿಗೆ ಸ್ಯಾನಿಟೈಜೇಷನ್ ಮಾಡಿಸಿದ ನಂತರವೇ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅನುಮತಿ ನೀಡಿ, ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿದ ಆಸನದಲ್ಲಿ ಕುಳಿತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ನಾಮಿನಲ್ ರೋಲ್‍ನಲ್ಲಿರುವ ಫೋಟೋ ಮತ್ತು ಸಹಿಯನ್ನು ಪರಾಮರ್ಶಿಸಿ ಅಭ್ಯರ್ಥಿಯ ಗುರುತನ್ನು ಖಚಿತಪಡಿಸಿಕೊಳ್ಳಬೇಕು. ಆಸೀನರಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಅವರದೇ ನೋಂದಣಿ ಸಂಖ್ಯೆಯುಳ್ಳ ಒ.ಎಂ.ಆರ್. ಹಾಳೆಗಳನ್ನು ನೀಡಿ ಅದರಲ್ಲಿರುವ ಅಂಕಣಗಳನ್ನು ಸೂಕ್ತವಾಗಿ ಭರ್ತಿ ಮಾಡುವಂತೆ ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಸೂಚಿಸಬೇಕು.

ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಅದರಲ್ಲಿರುವ ಸೂಚನೆಗಳನ್ನು ಓದಿಕೊಂಡ ನಂತರ ಉತ್ತರಿಸಲು ತಿಳಿಸಬೇಕು.

ಹೆಚ್ಚುವರಿ ಪೊಲೀಸ್ ಅಧಿಕಾರಿ ಮಂಜುನಾಥ, ಡಿಡಿಪಿಐ ಕೊಟ್ರೇಶ್, ಡಯಟ್ ಅಧಿಕಾರಿ ಗೀತಾ ಸೇರಿದಂತೆ ಪರೀಕ್ಷೆ ನಿಯೋಜಿತ ಅಧಿಕಾರಿಗಳಿದ್ದರು.

ಪರೀಕ್ಷಾ ಕೆಂದ್ರಗಳ ಸುತ್ತ 200 ಮೀ ನಿಷೇಧಿತ ಪ್ರದೇಶ : ಡಿ.ಸಿ
ದಾವಣಗೆರೆ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಜ.20 ಮತ್ತು 21 ರಂದು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು ಈ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಜಿಲ್ಲಾಧಿಕಾರಿ ಡಾ.ವೆಂಕಟೇಶ.ಎಂ.ವಿ. ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಕನ್ನಡ ಪುಸ್ತಕ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022 ರ ಜನವರಿ 1 ರಿಂದ 2022 ರ ಡಿಸೆಂಬರ್ 31 ರೊಳಗೆ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2022 ಮುದ್ರಿತವಾಗಿರಬೇಕು.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ನೊಂದಣಿ ಅಂಚೆ ಅಥವಾ ಕೊರಿಯರ್ ಮೂಲಕ ಇಲ್ಲವೇ ಖುದ್ದಾಗಿ ಫೆ.20 ರೊಳಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ.ಎನ್.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending