Connect with us

ದಿನದ ಸುದ್ದಿ

ಎಲ್ಲ ರೀತಿಯಿಂದ ದೊಡ್ಡವರು ‘ಜಿ.ಎಸ್.ಆಮೂರ’

Published

on

ಜಿ ಎಸ್ ಆಮೂರ ಎಲ್ಲ ರೀತಿಯಿಂದಲೂ ದೊಡ್ಡವರು. ಕಳೆದ ಮೇ ತಿಂಗಳಲ್ಲಿ 95 ಮುಗಿಸಿ ನೂರರೆಡೆಗೆ ಹೆಜ್ಜೆ ಹಾಕುತ್ತಿದ್ದರು. ಕನ್ನಡಕ್ಕೆ ಇಂಗ್ಲಿಷ್ ಮೇಷ್ಟ್ರುಗಳ ಲಿಂಕ್ (ಸಂಬಂಧ, ಕೊಡುಗೆ, ಬಾಂಧವ್ಯ ಈ ಪದಗಳಿಗಿಂತ ಉತ್ತಮ) ದೊಡ್ಡದು. ಮೇಷ್ಟ್ರುಗಳಷ್ಟೇ ಅಲ್ಲ ಬೇರೆ ಬೇರೆ ನೌಕರಿಗಳಲ್ಲಿದ್ದವರೂ ಇದ್ದರು. ಇರಲಿ. ನವೋದಯ, ನವೋದಯಪೂರ್ವ ಕಾಲದಿಂದಲೂ ಈ ಇತಿಹಾಸವಿದೆ. ಆ ಪರಂಪರೆಯ ಕೊಂಡಿಯಾಗಿದ್ದ ಅಮೂರ ಕಳಚಿಕೊಂಡು ಕನ್ನಡ ಸಾಹಿತ್ಯ ಚರಿತ್ರೆಯ ಭಾಗವಾದರು.

ಕನ್ನಡಕ್ಕೆ ಗಂಟುಬೀಳುವ ಇಂಗ್ಲಿಷ್ ಮೇಷ್ಟ್ರುಗಳ ಲಿಂಕೂ ಇದೆ ! ಅವರಲ್ಲಿ ಬಹುತೇಕರಿಗೆ ಅತ್ತ ಇಂಗ್ಲಷ್ಷೂ ಐಬು ಇತ್ತ ಅವರ ತಾಯ್ನುಡಿಯೂ ಐಬು. ಅವರು ಇಂಗ್ಲಿಷ್ ಡಿಗ್ರಿ ಸರ್ಟಿಫಿಕೇಟ್ ಇಟ್ಟುಕೊಂಡು ಕನ್ನಡದೊಳಗೆ ಓಡಾಡ್ತಾ ಇರ್ತಾರೆ. ಸ್ವಲ್ಪ ಬೆದರಿಕೆ, ಸ್ವಲ್ಪ ಬೂಟಾಟಿಕೆ ತೋರ್ತಾರೆ ! ಕೆಲವು ಕನ್ನಡದವು ಬೆದರೋದೂ ಉಂಟು !

ಆದರೆ ಕನ್ನಡಕ್ಕೆ ಕಾಮಧೇನುವಿನಂತೆ ಬರುವ ಇಂಗ್ಲಿಷ್ ಮೇಷ್ಟ್ರುಗಳ ಲಿಂಕ್ ಇದ್ಯಲ್ಲಾ ಅದು ಮಹತ್ವದ್ದು. ‘ ಶ್ರೀ ‘ ಯವರಿಂದಲೇ ಶ್ರೀಕಾರಗೊಂಡ ಆ ಪರಂಪರೆಗೆ ಸೇರಿದವರು ಅಮೂರ. ಮುಂದುವರೆದ ಹೊಸ ತಲೆಮಾರಿನಲ್ಲೂ ಕೆಲವರು ಆ ಪರಂಪರೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ.

ಇಂಥವರು ಕನ್ನಡವನ್ನು ಪ್ರೀತಿ ಗೌರವದಿಂದ ಕಾಣುತ್ತಾರೆ. ಕನ್ನಡವೆಂಬುದು ಇಂಗ್ಲಿಷಿನಂತೆಯೇ ಒಂದು ದೊಡ್ಡ ಭಾಷೆಯೆಂಬ ಅರಿವಿನಲ್ಲಿ ಒಡನಾಡುತ್ತಾರೆ, ಕೆಲಸ ಮಾಡುತ್ತಾರೆ. ಅಂಥವರಿಂದಲೇ ಇವಳ ಒಡವೆ ಅವಳಿಗಿಡುವ ಶಕ್ತಿ ಬರುವುದು. ಆಮೂರ ಇಂಗ್ಲಿಷ್ ಮತ್ತು ಕನ್ನಡ ಎರಡನ್ನೂ ಅರಗಿಸಿಕೂಂಡ ವಿಮರ್ಶಕರು. ಯಾವ ವಿಷಯವೇ ಆಗಲಿ ಅವರು ಬುಡಮಟ್ಟ ಶೋಧಿಸಿ ಬರೆಯುತ್ತಿದ್ದರು.

ಕನ್ನಡ ಕಥನ ಪರಂಪರೆ, ಮಹಿಳೆಯರ ಕಾವ್ಯ, ನವೋದಯ ಸಾಹಿತ್ಯ, ಜನಪ್ರಿಯ ಸಾಹಿತ್ಯ ಎಲ್ಲದರ ಬಗ್ಗೆಯೂ ಸಮಾನ ಆಸಕ್ತಿಯಿಂದ ಅಧ್ಯಯನಶೀಲರಾಗುತ್ತಿದ್ದರು. ಬೇಂದ್ರೆ, ಶ್ರೀರಂಗರ ಬಗ್ಗೆ ಎಂಥ ತಾದಾತ್ಮ್ಯ ಹೊಂದುತ್ತಿದ್ದರೋ ಅಷ್ಟೇ ತಾದಾತ್ಮ್ಯದಲ್ಲಿ ಜನಪ್ರಿಯ ಕಾದಂಬರಿಕಾರ ಅನಕೃ ಬಗ್ಗೆ ಚಿಂತಿಸಿ ಬರೆಯುತ್ತಿದ್ದರು. ಜನಪ್ರಿಯ ಸಾಹಿತ್ಯದ ಬಗ್ಗೆ ಸದಭಿರುಚಿಯ ಅಭಿಪ್ರಾಯ ಮೂಡಿಸುತ್ತಿದ್ದರು.

ಇಂಗ್ಲಿಷ್ ಭಾಷೆಯಲ್ಲಿ ಹಲವಾರು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಮಳಗಾಂವಕರ್, ಮುಲ್ಕ್ ರಾಜ್ ಆನಂದ, ರಾಜಾರಾವ್, ನಾಯ್ಪಾಲ್, ಸಲ್ಮಾನ್ ರುಶ್ದಿ ( ನಾನು ನೈಪಾಲ್, ರಶ್ದಿ ಅಂದಾಗಲೆಲ್ಲ ಅವರು ನಾಯ್ಪಾಲ್, ರುಶ್ದಿ ಅಂತ ಸರಿಮಾಡುತ್ತಿದ್ದರು ! ) ಅವರೆಲ್ಲರ ಕೃತಿಗಳ ವಿಸ್ತೃತ ಓದು ಅವರದಾಗಿತ್ತು. ಕುವೆಂಪು ಅವರ ರಾಮಾಯಣ ದರ್ಶನಂ ಕುರಿತ ಅವರ ಇಂಗ್ಲಿಷ್ ಲೇಖನ ಬಹಳ ಮೌಲಿಕವಾದುದು.

ಪ್ರಾಚೀನ ಸಾಹಿತ್ಯದ ಬಗ್ಗೆ ಇರುವಷ್ಟೇ ಆಸಕ್ತಿಯನ್ನು ಹೊಸದಾಗಿ ಬರೆಯುವವರ ಕತೆ ಕವಿತೆಗಳನ್ನು ಸಂಕಲನಗಳಲ್ಲಿ ಸೇರಿಸುತ್ತಿದ್ದರು. ಬೇರೆ ಬೇರೆ ರೀತಿಯ ಸಂಕಲನಗಳನ್ನು ಸಂಪಾದಿಸುವುದಕ್ಕೆ ಬೇಕಾದ ಅಪಾರ ಓದನ್ನು ಅವರು ಸಂತೋಷದಿಂದ ಮತ್ತು ಪರಿಪೂರ್ಣತೆಯಿಂದ ಮಾಡುತ್ತಿದ್ದರು.

ಬೆಂಗಳೂರಿಗೆ ಬಂದರೆ ಲಂಕೇಶ್ ಅವರಲ್ಲಿಗೆ ಭೇಟಿ ಕೊಟ್ಟು ಅವರೊಡನೆ ಗಂಭೀರ ಸಾಹಿತ್ಯ ಚರ್ಚೆ ಮಾಡುತ್ತಿದ್ದರು. ಹಾಗೆ ಒಮ್ಮೆ ಚರ್ಚಿಸುತ್ತಿದ್ದ ಹೊತ್ತಿನಲ್ಲಿ ಅವರು, ‘ ವರ್ಷಕ್ಕೆ ಒಂದು ಸಾರಿ ತಪ್ಪದೇ War and Peace ಮತ್ತು Anna Karenina ಓದೇ ಓದ್ತೀನಿ ‘ ಅಂತ ಹೇಳಿದ್ದು ನನ್ನ ನೆನಪಿನಲ್ಲಿದೆ. ಅವರ ‘ಭುವನದ ಭಾಗ್ಯ’ ಕುರಿತು ಆಗ ನಾನು ಲಂಕೇಶ್ ಪತ್ರಿಕೆ ಯಲ್ಲಿ ಬರೆದಿದ್ದೆ.

ಅವರು ಬಹುಶೃತ ವಿದ್ವಾಂಸರಾಗಿದ್ದರು. ನಿಷ್ಠುರ ವಿಮರ್ಶಕರಾಗಿದ್ದರು. ಒಮ್ಮೆ ಒಂದು ಪ್ರತಿಷ್ಠಿತ ಪ್ರಶಸ್ತಿ ತೀರ್ಮಾನ ಮಾಡಲು ಒಂದು ಸಭೆ ನಡೆಯಿತು. ಮೂವರು ತೀರ್ಪುಗಾರರಲ್ಲಿ ಅಮೂರ ಒಬ್ಬರು. ಇನ್ನೊಬ್ಬರು ಅವರ ವಯಸ್ಸಿನವರೇ. ಮೂರನೆಯವರು ಇನ್ನೂ ಯುವಕರು. ತೀರ್ಮಾನ ವಿವಾದದಲ್ಲಿ ಆಯಿತು. ಆ ಪ್ರಶಸ್ತಿಗೆ ಯಾವ ರೀತಿಯಿಂದಲೂ ಅರ್ಹವಲ್ಲದ ಕೃತಿಯನ್ನು ಅಮೂರ ಒಪ್ಪಲಿಲ್ಲ.

ಆದರೆ ಉಳಿದಿಬ್ಬರ ಬಹುಮತವಿತ್ತು. ಅದು ಆಯ್ಕೆಯಾಗಬೇಕಾಯ್ತು. ಎಲ್ಲ ಮುಗಿದಮೇಲೆ ಹೊರಡುವಾಗ ಆ ಯುವಕರನ್ನು ಪಕ್ಕಕ್ಕೆ ಕರೆದು ಆಮೂರ ಹೇಳಿದರು, ” ನೀವಿನ್ನೂ ಚಿಕ್ಕ ವಯಸ್ಸಿನವರಿದ್ದೀರಿ, ಇನ್ನು ಮುಂದೆ ಎಂದೂ ಇಂಥ ಲಿಟರರಿ ಪೊಲಿಟಿಕ್ಸ್ ಮಾಡಬೇಡಿ, ” ಅಂದ ಅವರ ಮಾತಿಗೆ ನಾನು ಸಾಕ್ಷಿಯಾಗಿದ್ದೆ. ಆ ಯುವ ಪ್ರಭೃತಿ ತಲೆತಗ್ಗಿಸಿ ನಿಂತಿದ್ದರು.

ಅದು ಸಾಹಿತ್ಯ ಲೋಕದಲ್ಲಿರಬೇಕಾದ ದೊಡ್ಡತನ. ಅಮೂರ ಅಂಥ ಅಪರೂಪದ ದೊಡ್ಡವರು. ನಮಗೆ ಬಹಳಷ್ಟು ಕಲಿಸಿದ್ದಾರೆ. ಅಂಥ ಮೌಲ್ಯಗಳನ್ನು ಕಲಿತು ದೊಡ್ಡವರಾಗಲು ಬದುಕೋಣ. ಅವರ ನೆನಪಿಗೆ ನಮನಗಳು.

-ಅಗ್ರಹಾರ ಕೃಷ್ಣಮೂರ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್‌ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?

Published

on

ಸುದ್ದಿದಿನ ಡೆಸ್ಕ್ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್‌ ಮಾಡಿರೋ ಬಾಲಿವುಡ್‌ ಚೆಲುವೆ ಶಿಲ್ಪಾ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು.

ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್‌ ಶಿಲ್ಪಾ ಶೆಟ್ಟಿ ಪೋರ್ಷನ್‌ ಶೂಟಿಂಗ್‌ ಕಂಪ್ಲೀಟ್‌ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್‌ ಪ್ಯಾಕಪ್‌ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್‌ ಬ್ರೇಕ್‌ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.

ಜೋಗಿ ಪ್ರೇಮ್‌ ಮಿಸ್ಟರ್‌ ಪರ್ಫೆಕ್ಷನಿಸ್ಟ್‌ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್‌ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್‌ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್‌ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್‌ ಸೆಟ್‌ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್‌ ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ

https://www.instagram.com/reel/C7l1UEfNIvA/?igsh=bDQ5NDVhMHpxYWc3

ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.

ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ರೀಎಂಟ್ರಿ ಕೊಟ್ಟಿದ್ದಾರೆ.

19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್‌ ನಂತರ ಅಧೀರ ಸಂಜಯ್‌ ದತ್ತ್‌ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್‌ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್‍ನೆಸ್, ಹೈಯರ್ ಎಜುಕೇಶನ್ ಮತ್ತು ಕೆರಿಯರ್ ಅಪಾರ್ಚುನಿಟಿಸ್‍ಗಾಗಿ ಜೂನ್ 1 ಮತ್ತು 3 ರಂದು ಎರಡು ದಿನಗಳ ಕಾರ್ಯಗಾರವನ್ನು ಆನ್‍ಲೈನ್ ವೆಮಿನಾರ್ ಮೂಲಕ ಆಯೋಜಿಸಲಾಗಿದೆ.

ಜೂನ್.1 ರಂದು ವೆಮಿನಾರ್ ನಂ. 25208106583 ಅಂಡ್ ಪಾಸ್ ವಾರ್ಡ್ qsSKG4Dsh84 ಮತ್ತು ಜೂನ್ 3 ರಂದು ವೆಮಿನಾರ್ ನಂ.25259292738 ಅಂಡ್ ಪಾಸ್ ವಾರ್ಡ್ upW2Vtrxh22 ಇದರೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗಕ್ಕೆ ವಿವರವಾದ ಮಾಹಿತಿಯನ್ನು ಪಡೆಯಬಹುದು.

ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನಾಲ್ಕು ವಿಜ್ಞಾನಿಗಳು ಮೂಲ ವಿಜ್ಞಾನ, ಕೃಷಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉಮೇಶ ಘಾಟಗೆ – 9743084194 & ಚಂದ್ರಶೇಖರಮೂರ್ತಿ – 9686449019 ಅಥವಾ ವೆಬ್ ಸೈಟ್; www.kstacademy.in ವೀಕ್ಷಿಸಬಹುದಾಗಿದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

Published

on

ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

ಪೂರಕ ದಾಖಲಾತಿ

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‍ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್‍ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending