ದಿನದ ಸುದ್ದಿ
ಕೇಂದ್ರದಿಂದ ಕರ್ನಾಟಕಕ್ಕೆ ಜಿ ಎಸ್ ಟಿ ಪರಿಹಾರ ಮಂಜೂರು
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2022ರ ಮೇ 31 ರವರೆಗಿನ ಸರಕು ಮತ್ತು ಸೇವಾ ತೆರಿಗೆ-ಜಿಎಸ್‌ಟಿ ಪರಿಹಾರ ಮಂಜೂರು ಮಾಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಾಗಿದ್ದ 86 ಸಾವಿರದ 912 ಕೋಟಿ ರೂಪಾಯಿ ಜಿಎಸ್‌ಟಿ ಪರಿಹಾರ ನೀಡಿದೆ. ಈ ಪೈಕಿ 8 ಸಾವಿರದ 633ಕೋಟಿ ರೂಪಾಯಿ ಪರಿಹಾರ ಕರ್ನಾಟಕ ರಾಜ್ಯಕ್ಕೆ ಮಂಜೂರಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243