Connect with us

ದಿನದ ಸುದ್ದಿ

ಅತಿಥಿ ಉಪನ್ಯಾಸಕರ ನೆರವಿಗೆ ಮಹತ್ವದ ನಿರ್ಣಯ ; ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ ಎಂ ಎಲ್ ಸಿ ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ನಮ್ಮ‌ ಸರ್ಕಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದ್ದಾರೆ.

ನಾವು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದ್ದೇವೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ ಎಂದಿದ್ದಾರೆ.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.

ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಕನ್ನಡ ಪುಸ್ತಕ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022 ರ ಜನವರಿ 1 ರಿಂದ 2022 ರ ಡಿಸೆಂಬರ್ 31 ರೊಳಗೆ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2022 ಮುದ್ರಿತವಾಗಿರಬೇಕು.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ನೊಂದಣಿ ಅಂಚೆ ಅಥವಾ ಕೊರಿಯರ್ ಮೂಲಕ ಇಲ್ಲವೇ ಖುದ್ದಾಗಿ ಫೆ.20 ರೊಳಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ.ಎನ್.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending