ದಿನದ ಸುದ್ದಿ
ದಾವಣಗೆರೆ | ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2018-19 ನೇ ಸಾಲಿನಲ್ಲಿ ಪ್ರಾರಂಭವಾಗಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 6,7 ಮತ್ತು 8ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ವಿಷಯ ವಿಜ್ಞಾನ, ವಿದ್ಯಾರ್ಹತೆ ಬಿ.ಎಸ್ಸಿ ಮತ್ತು ಬಿ.ಇಡಿ (ಸಿ.ಬಿ.ಜೆಡ್) 01 ಹಾಗೂ ಸಮಾಜ ವಿಜ್ಞಾನ, ವಿದ್ಯಾರ್ಹತೆ ಬಿ.ಎ ಮತ್ತು ಬಿ.ಇಡಿ(ಇತಿಹಾಸ) 01 ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಈ ವಿಷಯಗಳಲ್ಲಿ ಬೋಧಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅಕ್ಟೋಬರ್ 05 ರೊಳಗೆ ಪ್ರಭಾರ ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಸರ್ಕಾರಿ ಉರ್ದು ಶಾಲಾ ಆವರಣ, ಸಂತೇಬೆನ್ನೂರು ಗ್ರಾಮ, ಚನ್ನಗಿರಿ ತಾಲ್ಲೂಕಿ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243