Connect with us

ಅಸಾಮಾನ್ಯಳು

ಅಪರೂಪದ ಗುರುಮಾತೆ ರಾಜಯೋಗಿನಿ ನಾಗರತ್ನಮ್ಮ

Published

on

ದಾವಣಗೆರೆ ನಗರ ವ್ಯಾಪಾರ, ವಿದ್ಯಾ ಕೇಂದ್ರವಷ್ಟೇ ಅಲ್ಲ ಆಧ್ಯಾತ್ಮಿಕ ಕೇಂದ್ರವೂ ಹೌದು. ಇಲ್ಲಿ ಅದೆಷ್ಟೋ ಸಿದ್ಧಿ ಸಾಧಕರಿದ್ದಾರೆ. ಎಲೆ ಮರೆಯ ಕಾಯಿಯಂತೆ ತಪಗೈಯುತ್ತ ತಮ್ಮ ಬಳಿ ಸಾರಿದವರ ಆತ್ಮೋದ್ಧಾರ ಕಾರ್ಯದಲ್ಲಿ ತೊಡಗಿದ್ದಾರೆ. ಯಾವ ಪ್ರಚಾರದ ಹಂಗು ಇಲ್ಲದೆ ಆತ್ಮಗಳ ಶ್ರೇಯಸ್ಸಿಗಾಗಿ ಶ್ರಮಿಸುತ್ತಿದ್ದಾರೆ. ಇಂತಹ ವಿಶಿಷ್ಠ ಸಾಧಕರ ಸಾಲಿನಲ್ಲಿ ಕಂಡುಬರುತ್ತಾರೆ ದಾವಣಗೆರೆ ವಿನೋಬ ನಗರದ ನಿವಾಸಿ, ಅಪರೂಪದ ಗುರುಮಾತೆ ಶ್ರೀಮತಿ ನಾಗರತ್ನಮ್ಮನವರು.

ಒಂದಷ್ಟು, ನಮಗೆ ತಿಳಿದಷ್ಟು

ದಾವಣಗೆರೆ ಗುರುಸಿದ್ದಪ್ಪ – ಪಾರ್ವತಮ್ಮ ದಂಪತಿಗಳ ದೈವಿ ಸಂಜಾತೆಯಾಗಿ 1945ರಲ್ಲಿ ಜನಿಸಿದ ನಾಗರತ್ನಮ್ಮ ಅವರಿಗೆ ಬಾಲ್ಯದಿಂದಲೂ ಶ್ರದ್ಧಾ ಭಕ್ತಿಯ ಭಾವನೆ ಅಂತರಂಗದಲ್ಲಿ ಅವಿರ್ಭವಿಸಿತ್ತು. ಪೂಜೆ, ಪಾಠ, ಪ್ರವಚನ, ಧ್ಯಾನಾದಿಗಳಲ್ಲಿ ವಿಶೇಷ ಆಸಕ್ತಿ ಮೇಳೈಸಿತ್ತು. ದಾವಣಗೆರೆ ನಿವಾಸಿ, ಕೆಇಬಿ ಸೀನಿಯರ್ ಅಸಿಸ್ಟೆಂಟ್ ಬಿ.ಬಸಪ್ಪ ಅವರೊಡನೆ ದಾಂಪತ್ಯ ಜೀವನಕ್ಕೆ ಅಡಿ ಇಟ್ಟ ಮೇಲೆ ರಾಜ್ಯದ ನಾನಾ ಕಡೆ ವರ್ಗಾವಣೆ ನಿಮಿತ್ಯ ಪತಿಯೊಡನೆ ಸಂಚರಿಸಿದರು. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ 10 ವರ್ಷ ತಂಗಿದ್ದರು. ಆ ವೇಳೆ ಶಾರದಮ್ಮ ಎಂಬ ಸದ್ಭಕ್ತೆಯೊಬ್ಬರಿಂದ ಹಂಪಿ ಸಮೀಪದ ಕಾಳಘಟ್ಟ ಗ್ರಾಮದ ರುದ್ರಾವಧೂತರ ಮಠದ ಚಿದಾನಂದವಧೂತರ ಆಶ್ರಮದ ಬಗ್ಗೆ ಪರಿಚಯವಾಯಿತು.ಅಲ್ಲಿನ ಅಖಂಡ ತಪಸ್ವಿ, ರಾಜಯೋಗಿ, ಸಿದ್ಧಿ ಪುರುಷರಾದ ಶ್ರೀ ಕೆ.ಎನ್ ಸ್ವಾಮಿಗಳ ಮಾರ್ಗದರ್ಶನದಿಂದ ಪ್ರಭಾವಿತರಾಗಿ ಗುರುದೀಕ್ಷೆ ಪಡೆದರು. ಅವರಿಂದ ಬ್ರಹ್ಮ ಜ್ಞಾನ, ಕಾಲ ನಿರ್ಣಯ, ಮೋಕ್ಷ ಮಾರ್ಗದ ಬೋಧೆ ಪಡೆದು ಸಾಧನೆಯಲ್ಲಿ ತೊಡಗಿದರು. ಸಮರ್ಪಕ ಕುಟುಂಬ ನಿರ್ವಹಣೆಯ ಜೊತೆಗೆ ಆಧ್ಯಾತ್ಮಿಕ ಸಾಧನೆಯಲ್ಲೂ ಎತ್ತರಕ್ಕೇರುತ್ತಾ ಬಂದರು. ಕೇವಲ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದರೂ ಪುರಾಣ, ಪುಣ್ಯ ಕಥೆ, ಪ್ರವಚನಗಳನ್ನು ನಿರರ್ಗಳವಾಗಿ ಓದುವುದರ ಜೊತೆ ಅದರ ನಿಜ ಸಾರವನ್ನು ಭೇದಿಸಿ ಅರ್ಥೈಸಿಕೊಳ್ಳಬಲ್ಲ ಚಾಣಕ್ಷ್ಯತನ ಅವರಿಗೆ ಒಲಿದಿತ್ತು.
ಹೃದಯಾಘಾತದಿಂದ ಪತಿ ಮರಣ ಹೊಂದಿದ ನಂತರ ದಾವಣಗೆರೆಗೆ ಮರಳಿದ ಅವರು ಈ ವರೆಗೆ ಇಲ್ಲಿಯೇ ನೆಲೆಸಿದ್ದಾರೆ. ಇದೀಗ ಕಾಳಘಟ್ಟ ಆಶ್ರಮದ ಆಧ್ಯಾತ್ಮಿಕ ಕಾರ್ಯ ಕಲಾಪಗಳು ಮತ್ತು ಸೇವಾ ಕಾರ್ಯಗಳು ಇವರ ಮಾರ್ಗದರ್ಶನದಲ್ಲಿಯೇ ನಡೆಯುತ್ತಿವೆ.

ಸರಳ ಬೋಧನೆ – ಉದಾತ್ತ ಚಿಂತನೆ

ನಾಗರತ್ನಮ್ಮಾಜಿಯವರ ತತ್ವ ಬೋಧೆಗಳು ಅತ್ಯಂತ ಸರಳ ಮತ್ತು ಸಾತ್ವಿಕ. ಸಂಸ್ಕಾರ ದೋಷ ನಿಮಿತ್ಯ ಜೀವನ್ಮರಣದ ಚಕ್ರದಲ್ಲಿ ಸಿಲುಕುವ ಜೀವಾತ್ಮರಿಗೆ ಮುಕ್ತಿ ಮಾರ್ಗ ತೋರುವುದು ಹಾಗೂ ಜೀವಾತ್ಮರು ಮೂಲ ಪರಮಾತ್ಮನ ಕಣ ಸ್ವರೂಪರು ಎಂಬ ಸತ್ಯ ದರ್ಶನ ಮಾಡಿಸುವುದು ಇವರ ಮೂಲ ಗುರಿ. ಎಲ್ಲ ಕರ್ಮಕ್ಕೂ ಮನಸ್ಸೇ ಕಾರಣ. ಎಲ್ಲ ಸಂಸ್ಕಾರಗಳ ಮೂಲ ಬೀಜ ಮನಸ್ಸೇ. ಬಂಧನ ಮತ್ತು ಮುಕ್ತಿ ಕೂಡ ಈ ಮನಸ್ಸಿನಿಂದಲೇ. ಲೌಕಿಕ ಜೀವನಕ್ಕೆ ಮರಳಿ ಬರುವುದು ಅಥವಾ ಮುಕ್ತಿ ಪಡೆಯುವುದು ಸಹ ಈ ಮನಸ್ಸಿನ ಆಲೋಚನೆ ಮತ್ತು ಸಂಸ್ಕಾರಗಳ ಪ್ರಭಾವದಿಂದಲೇ. ಮನಸ್ಸು ಹೇಳಿದಂತೆ ಜೀವಾತ್ಮ ಕೇಳಿದರೆ ಚಂಚಲತೆಗೆ ಒಳಗಾಗಿ ಕಲ್ಮಷ, ಅಶುದ್ಧತೆ, ಪಾಪ, ಕರ್ಮ ಇತ್ಯಾದಿಗಳ ಸುಳಿಗೆ ಸಿಕ್ಕು ನಲುಗಬೇಕಾಗುತ್ತದೆ. ಆದರೆ ಅದೇ ಮನಸ್ಸಿನ ಮೇಲೆ ಅಧಿಕಾರ ಸಾಧಿಸಿದರೆ ಈ ಲೋಕದ ಎಲ್ಲಾ ಸುಖ ಸಿರಿ ಸಂಪತ್ತು, ಇಹ ಪರ ಆನಂದಗಳನ್ನು ಸಾತ್ವಿಕ ಮಾರ್ಗದಲ್ಲಿ ಅನುಭವಿಸಿ ತೃಪ್ತಿ ಹೊಂದಿ ನಂತರ ಜೀವನ್ಮುಕ್ತಿ ಸಹ ಹೊಂದಬಹುದು, ಶಿವನಲ್ಲಿ ಐಕ್ಯವಾಗಬಹುದು ಎಂಬ ಮಾರ್ಮಿಕ ಸತ್ಯವನ್ನು ಸರಳವಾಗಿ ಬೋಧಿಸುತ್ತಾರೆ. ಆಧ್ಯಾತ್ಮಿಕ ಜೀವನ ಎಂದರೆ ಎಲ್ಲಾ ಆಸೆ ಆಕಾಂಕ್ಷೆ ಬಿಟ್ಟು ಬಿಡುವುದು, ಗುಡ್ಡ ಬೆಟ್ಟಕ್ಕೆ ಹೋಗಿ ತಪಗೈಯುವುದು, ಮಠ ಮಂದಿರ ಸೇರುವುದು ಎಂಬ ಹತ್ತು ಹಲವು ಗೊಂದಲ ನಮ್ಮ ಜನರಲ್ಲಿದೆ. ಆದರೆ, ಬೇಕು ಎನಿಸುವ ಎಲ್ಲ ಸುಖ, ಸಿರಿ, ಸಂಪತ್ತು, ಶಾಂತಿ, ನೆಮ್ಮದಿಗಳನ್ನು ಸಾತ್ವಿಕವಾದ ಹಾದಿಯಲ್ಲಿ ತನಗೂ ಪರರಿಗೂ ಹಿತವಾಗುವ ರೀತಿಯಲ್ಲಿ ಪಡೆದುಕೊಳ್ಳಲು ಸಾಧ್ಯವಿದೆ. ಆದರೆಭೌತಿಕವಾಗಿ ಕಣ್ಣಿಗೆ ಕಾಣುವುದನ್ನು ಬಯಸಿ ಪಡೆದ ಮಾತ್ರಕ್ಕೆ ಜೀವನ ಅಂತ್ಯವಾಗಿ ಬಿಡುವುದಿಲ್ಲ. ಇದರ ಆಚೆ ನಮ್ಮ ಗುರಿ ಇನ್ನೂ ಬೇರೇನೋ ಇದೆ. ಆ ಅಗೋಚರವಾದ ಸತ್ಯವೂ ಕೂಡ ಏನೆಂದು ಅರಿತು,ಅದನ್ನು ಸಹ ಸಾಧಿಸಿ ಪಡೆದುಕೊಂಡು ಅಂತಿಮವಾಗಿ ಪರಮ ತೃಪ್ತಿ, ಪರಮಾನಂದ ಹೊಂದಬೇಕಿದೆ. ತಿಳಿಯಲು, ಹೊಂದಲು, ಅನುಭವಿಸಲು ಇನ್ನೇನೂ ಉಳಿದಿಲ್ಲ ಎಂಬ ಅಂತಿಮ ಘಟ್ಟ ತಲುಪಿದಾಗ ಮತ್ತೇ ಮನಸ್ಸು ಮರಳಿ ಲೋಕದ ಗೊಡವೆಗೆ, ಜನನ ಮರಣಗಳ ಸುಳಿಗೆ ಸಿಲುಕಲು ಸಾಧ್ಯವೇ ? ಅದನ್ನೇ ಸುಲಭ ಮಾರ್ಗದಲ್ಲಿ ತಿಳಿಸಿಕೊಡುವುದು ನಮ್ಮ ಧರ್ಮ ಎನ್ನುತ್ತಾರೆ ಗುರುಮಾತೆ.ಸ್ಥೂಲ, ಸೂಕ್ಮ, ಕಾರಣ, ಮಹಾ ಕಾರಣ ಹಾಗೂ ತುರಿಯಾತೀತ ಎಂಬ ವಿವಿಧ ಘಟ್ಟಗಳ ಪರಿಚಯದ ಮೂಲಕ ಜೀವನ್ಮುಕ್ತಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ .ಈ ವಿದ್ಯೆಗೆ ಬ್ರಹ್ಮ ವಿದ್ಯೆ, ಕಾಲ ಜ್ಞಾನ, ಮೋಕ್ಷ ಸಾಧನೆ ಎಂಬಿತ್ಯಾದಿ ಹೆಸರುಗಳುಂಟು. ಈ ವಿದ್ಯೆಯನ್ನು ತಾನು ಅರಿತು ಪರರಿಗೂ ಧಾರೆ ಎರೆಯುವುದೆಂದರೆ ಸುಲಭದ ಮಾತಲ್ಲ. ನರ ಗುರು, ಪಶು ಗುರು, ದೇವಗುರು ಎಂಬ ಹಲವಾರು ಗುರು ಪರಂಪರೆಗಳಿವೆ. ಇದರಲ್ಲಿ ದೇವಗುರು ಪರಂಪರೆಯೇ ಸರ್ವ ಶ್ರೇಷ್ಠ.
ತನ್ನ ಅಮೃತ ಹಸ್ತದಿಂದ ಇತರರನ್ನು ಮುಟ್ಟಿದ ಕೂಡಲೇ ಸಕಲ ಕರ್ಮದೋಷಗಳು ನಿವಾರಣೆಗೊಂಡು ಆ ಕ್ಷಣದಿಂದಲೇ ಮೋಕ್ಷ ಮಾರ್ಗ ತೆರೆದುಕೊಳ್ಳುವಂತೆ ಮಾಡುವ ದಿವ್ಯ ಶಕ್ತಿ ಯಾವ ಗುರುವಿಗೆ ಇದೆಯೋ, ಯಾರಿಗೆ ಪರರ ಕಷ್ಟ ನಿವಾರಿಸಿ ಅವರ ಸಕಲ ಇಷ್ಟಾರ್ಥ ಈಡೇರಿಸಿ ಜೀವನ್ಮುಕ್ತಿಗೆ ಹರಸುವ ಔದಾರ್ಯವಿದೆಯೋ ಆತನೇ ನಿಜವಾದ ಸದ್ಗುರು ಎಂಬ ಮಾತಿದೆ. ಈ ಸಾಲಿಗೆ ಸೇರಿದ್ದಾರೆ ನಾಗರತ್ನಮ್ಮ ಗುರುಮಾತೆ.

ಸಿದ್ದಗಂಗಾ ಸ್ವಾಮಿಯವರೊಂದಿಗೆ ಗುರುಮಾತೆ

ಲವಲವಿಕೆ ಮತ್ತು ಸದಾ ಕ್ರಿಯಾಶೀಲತೆ

76ಕ್ಕೂ ಅಧಿಕ ವರ್ಷದ ವಯೋವೃದ್ಧರಾಗಿರುವ ನಾಗರತ್ನಮ್ಮನವರು ಯುವಕರನ್ನು ಕೂಡ ನಾಚಿಸುವಂತಹ ಲವಲವಿಕೆ ಮತ್ತು ಕ್ರಿಯಾಶೀಲತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಸದಾ ಪರರ ಏಳ್ಗೆ ಬಯಸುತ್ತಾ ಉಪಕಾರ – ಸಹಕಾರದಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಾಗರತ್ನಮ್ಮನವರದು ಬತ್ತದ ಉತ್ಸಾಹ. ಮಕ್ಕಳು, ಮನೆ, ಮಠದ ಜವಬ್ದಾರಿಗಳನ್ನು ನಿರ್ವಹಿಸುವ ಜೊತೆ ಸಾಮಾಜಿಕ ಮತ್ತು ಅಧ್ಯಾತ್ಮಿಕ ಸೇವೆಯನ್ನು ನಿರಂತರ ಮುಂದುವರೆಸಿಕೊಂಡು ಬಂದಿದ್ದಾರೆ. ಹಾವು – ಚೇಳಿನಂತಹ ವಿಷ ಜಂತು ಕಡಿದವರಿಗೆ ಆಯುರ್ವೇದ ಔಷಧ ನೀಡುವ ಕಾರ್ಯ, ಧ್ಯಾನ, ಪೂಜೆ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸುವ ಜೊತೆ ಕಾಳಘಟ್ಟ ಶ್ರೀಮಠದ ಅವಧೂತ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರಷ್ಟೇ ಅಲ್ಲದೆ ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ರಾಜಯೋಗಿನಿ ನಾಗರತ್ನಮ್ಮ ಅವರ ಪ್ರಯತ್ನ ಮತ್ತು ಅಪಾರ ಕಳಕಳಿಯ ಫಲವಾಗಿ 2018ರ ಏಪ್ರಿಲ್ ತಿಂಗಳಲ್ಲಿ ಟಿವಿ 9 ವಾಹಿನಿಯಲ್ಲೂ ಕೂಡ ಶ್ರೀಮಠದ ಕುರಿತು ಕಾರ್ಯಕ್ರಮ ಪ್ರಸಾರವಾಯಿತು. ಆ ಮೂಲಕ ಆ ಮಠದ ಇತಿಹಾಸ, ಪರಂಪರೆ, ಸೇವೆ ಹಾಗೂ ಕೊಡುಗೆಗಳ ಕುರಿತು ನಾಡಿನಾದ್ಯಂತ ಪ್ರಚಾರ – ಪ್ರಸಾರವಾಗಲು ಅನುವಾಯಿತು. ಅಂತೆಯೇ ಅನೇಕರು ತಮ್ಮ ಜೀವನದ ದುಃಖ – ದುಮ್ಮಾನಗಳಿಗೆ ಪರಿಹಾರ ಪಡೆದುಕೊಂಡು ಸುಖ – ಶಾಂತಿ, ಸಮಾಧಾನದ ಬದುಕಿನೆಡೆಗೆ ಸಾಗಲು ಸಹಕಾರಿಯಾಯಿತು.

ಮುಗಿಸುವ ಮುನ್ನ

ತಾನು ತಿಳಿದಿದ್ದೇ ಸತ್ಯ ಎಂಬ ಭ್ರಮೆಯೊಳಗೆ ಮುಳುಗಿ ತನ್ನ ಬಳಿ ಬಂದವರ ಅದಃ ಪತನಕ್ಕೆ ಕಾರಣವಾಗುವ ಹಾಗೂ ಕಲಿತ ವಿದ್ಯೆಯನ್ನು ಹಣ ಕೀಳುವ ದಂಧೆಯನ್ನಾಗಿ ಮಾಡಿಕೊಳ್ಳುವವರೇ ಹೆಚ್ಚು ತುಂಬಿರುವ ಈ ಕಾಲಘಟ್ಟದಲ್ಲಿ ನಾಗರತ್ನಮ್ಮನವರು ವಿಶೇಷಿಗರಾಗಿ ನಿಲ್ಲುತ್ತಾರೆ. ಅವರ ಸಾತ್ವಿಕತೆ, ರಾಜಯೋಗದ ಪ್ರಭಾವ, ಆತ್ಮಗಳ ಉನ್ನತಿಗೆ ಹಂಬಲಿಸುವ ಮಾತೃ ಹೃದಯದ ವಾತ್ಸಲ್ಯ ಅವರನ್ನು ಹತ್ತಿರದಿಂದ ಕಂಡವರಿಗೆ ಮಾತ್ರ ಅರಿವಿಗೆ ಬರುತ್ತದೆ.
ಜೀವನದಲ್ಲಿ ಕಷ್ಟ ನಷ್ಟ ಸಹಜ. ಆದರೆ ಕಷ್ಟಗಳನ್ನು ಕಂಡು ಕುಗ್ಗಿದ ಮನಸ್ಸುಗಳಿಗೆ, ಬಸವಳಿದು ಬೆಂದ ಹೃದಯಗಳಿಗೆ ಆ ಕಾಠಿಣ್ಯ ಎದುರಿಸುವ ಮಾರ್ಗ, ತಿಳಿವಳಿಕೆ, ಅರಿವು, ಮೆಟ್ಟಿ ನಿಲ್ಲುವ ಧೈರ್ಯ, ಸ್ಥೈರ್ಯ ಸಾಂತ್ವಾನ ನೀಡಿ ಕೈ ಹಿಡಿದು ನಡೆಸುವವರು ಬೇಕಾಗುತ್ತದೆ. ಆ ಕೆಲಸವನ್ನು ಅತ್ಯಂತ ಸುಗಮವಾಗಿ ಮಾಡಬಲ್ಲ ಶಕ್ತಿ ಗುರುವಿಗೆ ಮಾತ್ರ ಇದೆ. ಸರಿಯಾದ ಮಾರ್ಗದರ್ಶನ ತೋರುವ ತಪ ಶಕ್ತಿ ಕೆಲವೇ ಕೆಲವರಿಗೆ ಮಾತ್ರ ಒಲಿದಿರುತ್ತದೆ. ಆ ತಪೋ ಬಲ, ಮನೋ ಬಲ, ದೈವ ಬಲ, ವಾಕ್ ಸಿದ್ಧಿಯ ಬಲ ಗುರುಮಾತೆ ನಾಗರತ್ನಮ್ಮ ಅವರಿಗೆ ಭಗವಂತನ ವರದಾನವಾಗಿ ಲಭಿಸಿದೆ. ಈ ವಿದ್ಯೆ ಕಲಿಯಲು ಬರುವವರ ಸಂಖ್ಯೆ ಅತಿ ವಿರಳ. ಆ ಭಾಗ್ಯ ದೊರೆಯುವುದು ಕೂಡ ಕೆಲವರಿಗೆ ಮಾತ್ರ. ಇದು ಗುರು ಕೃಪೆಯಿಂದ ಮಾತ್ರ ಸಾಧ್ಯ ಎನ್ನುವ ಅವರು ಇಂತಹ ಅಪರೂಪದ ವಿದ್ಯೆಯನ್ನು ಅತ್ಯಂತ ಉತ್ಸಾಹ ಮತ್ತು ಪ್ರೀತಿಯಿಂದ ತಮ್ಮ ಮನೆಯಲ್ಲೇ ಕಲಿಸುತಿದ್ದಾರೆ. ಆಸಕ್ತರು ಅವರ ಮಾರ್ಗದರ್ಶನ ಪಡೆಯಲು ಮೊ.ಸಂ| 9741458905 ಗೆ ಸಂಪರ್ಕಿಸಬಹುದು.

ಗಂಗಾಧರ ಬಿ.ಎಲ್ ನಿಟ್ಟೂರ್ ಅವರು, ಮೂಲತಃ ದಾವಣಗೆರೆ ಜಿಲ್ಲೆಯ,ಹರಿಹರ ತಾಲ್ಲೂಕಿನ, ನಿಟ್ಟೂರು ಗ್ರಾಮದವರು. ಹಲವು ಶಾಲಾ-ಕಾಲೇಜುಗಳಲ್ಲಿ ಸುಮಾರು 20 ವರ್ಷದಿಂದ ಶಿಕ್ಷಕ ವೃತ್ತಿ ನಿರ್ವಹಿಸುತ್ತಿದ್ದಾರೆ. ದಾವಣಗೆರೆ ಕೇಬಲ್ ಫಸ್ಟ್ ನೆಟ್ ನ 'ಕಾವ್ಯಧಾರೆ' ಪ್ರೋಗ್ರಾಂ ಆರ್ಗನೈಸರ್ ಮತ್ತು ನಿರೂಪಕರಾಗಿ 5 ವರ್ಷ ಹಾಗೂ ಜನಮಿಡಿತ, ಜನತಾ ಬಳಗ, ಕನ್ನಡ ಭಾರತಿ ಪತ್ರಿಕೆಗಳಲ್ಲಿ ಸಹ ಸಂಪಾದಕರಾಗಿ ಸೇವೆ ಮತ್ತು ವಿವಿಧ ವಿಷಯಗಳ ಉಪನ್ಯಾಸಕರಾಗಿ, ನಿರೂಪಕರಾಗಿ, ನಾಟಕ-ನೃತ್ಯ ನಿರ್ದೇಶಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. E- Mail : blgnittur123@gmail.com Mobile : 8867702396

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಭಾರತದ ಕಿರಿಯ ಲೇಖಕಿ ‘ಮಾನ್ಯ ಹರ್ಷ’..!

Published

on

ಮಾನ್ಯ ಹರ್ಷ

ಹತ್ತು ವರ್ಷದ ಈ ಪುಟ್ಟ ಲೇಖಕಿ ಮಾನ್ಯ ಹರ್ಷ ಗೆ ಓದುವುದು ಬರೆಯುವುದು ಎಂದರೆ ತುಂಬಾ ಇಷ್ಟವಂತೆ. ಬೆಂಗಳೂರಿನ ಚಿತ್ರ ಮತ್ತು ಹರ್ಷ ದಂಪತಿಗಳ ಮಗಳಾದ ಮಾನ್ಯ ಹತ್ತು ವರ್ಷಕ್ಕೆ ಕನ್ನಡದಲ್ಲಿ ಪುಸ್ತಕ ಬರೆದು ಕನ್ನಡದ ಕಿರಿಯ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಈಕೆ ಬರೆದಿರುವ “ ನೀರಿನ ಪುಟಾಣಿ ಸಂರಕ್ಷಕರು ” ಮಕ್ಕಳ ಕಾದಂಬರಿಗೆ , ಇಂಡಿಯಾ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಕನ್ನಡದಲ್ಲಿ ಪುಸ್ತಕ ಬರೆದಿರುವ ಕಿರಿಯ ಲೇಖಕಿ “ ಎಂಬ ಬಿರುದಿಗೆ ಪಾತ್ರಳಾಗಿದ್ದಾಳೆ ಮಾನ್ಯ.

ಬೆಂಗಳೂರಿನ ಬಿ.ಟಿ.ಎಮ್ ಬಡಾವಣೆ ಯ ವಿಬ್ಗಯಾರ್ ಶಾಲೆಯ ಐದನೇ ತರಗತಿಯಲ್ಲಿ ಓದುತ್ತಿರುವುದು ಮಾನ್ಯ ತಾನು ಅಪ್ಪಟ ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ಚಿಕ್ಕ ವಯಸ್ಸಿನಲ್ಲೇ ಸಾಹಿತ್ಯ ಆಸಕ್ತಿ ಯನ್ನು ಬೆಳಸಿಕೊಂಡಿರುವ ಮಾನ್ಯ, ತನ್ನ ಅಜ್ಜಿಯ ಬಾಯಿಂದ ಕನ್ನಡ ಕಥೆ-ಕವನಗಳನ್ನು ಕೇಳಿ ಬೆಳೆದ ಹುಡುಗಿ. ಕನ್ನಡದಲ್ಲಿ ಪುಸ್ತಕ ಬರೆಯಲು ನನ್ನ ಅಜ್ಜಿಯೇ ನನಗೆ ಸ್ಫೂರ್ತಿ ಎನ್ನುತ್ತಾಳೆ ಮಾನ್ಯ.

ಈಗಾಗಲೇ ” ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಐದು ರೆಕಾರ್ಡ್ ಬುಕ್ಗಳಲ್ಲಿ ಹೆಸರು ಮಾಡಿರುವ ಈ ಪುಟ್ಟ ಲೇಖಕಿ, ವಜ್ರ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಭಾರತದ ಕಿರಿಯ ಕವಿಯಿತ್ರಿ” ಎಂಬ ಬಿರುದನ್ನೂ ಮುಡಿಗೇರಿಸಿಕೊಂಡಿದ್ದಾಳೆ.

” ನೀರಿನ ಪುಟಾಣಿ ಸಂರಕ್ಷಕರು” ಈಕೆಯ ಎರಡನೆಯ ಪುಸ್ತಕವಾಗಿದ್ದು , ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಬರೆದಿದ್ದಾಳೆ.
ಆಂಗ್ಲ ಅವತರಣಿಕೆ ” ದಿ ವಾಟರ್ ಹೀರೋಸ್” ಮತ್ತು ಕನ್ನಡದಲ್ಲಿ ” ನೀರಿನ ಪುಟಾಣಿ ಸಂರಕ್ಷಕರು ” ಹೆಸರಲ್ಲಿ ರಚಿತವಾಗಿರುವ ಈ ಪುಸ್ತಕ ಸದ್ಯ ಕಾಡುತ್ತಿರುವ ನೀರಿನ ಕೊರತೆ ಮತ್ತು ಇದರ ಸಂರಕ್ಷಣೆಯ ತೀವ್ರತೆಯ ಮೇಲೆ ಬೆಳಕು ಚೆಲ್ಲುತ್ತದೆ.

ಈ ಪುಸ್ತಕ ಮಾರ್ಚ್ 22 ಕ್ಕೆ , ವಿಶ್ವ ಜಲ ದಿನದಂದು ಬಿಡುಗಡೆ ಆಗಬೇಕಿತ್ತು. ಆದ್ರೆ ವಿಶ್ವವನ್ನು ಕಾಡುತ್ತಿರುವ ಕರೋನ ಕಾಟದಿಂದಾಗಿ ಪುಸ್ತಕ ಬಿಡುಗಡೆ ತುಂಬಾ ಕಷ್ಟ ಆಯ್ತು. ಲಾಕ್ಡೌನ್ ನಡುವೆಯೂ ಪುಸ್ತಕವನ್ನು ಆನ್ಲೈನ್ ನಲ್ಲೇ ಬಿಡುಗಡೆ ಮಾಡಿದೆವು ಎಂದು ತಮ್ಮ ಅಳಲು ವ್ಯಕ್ತ ಪಡಿಸಿದರು.

ಪುಟ್ಟ ಲೇಖಕಿಯು, ದೈನಂದಿನ ಜೀವನದ ಸರಳ ನಿದರ್ಶನಗಳ ಮೂಲಕ ನೀರಿನ ಸಮಸ್ಯೆ ಯನ್ನು ಸ್ವಾರಸ್ಯಕರವಾಗಿ ನಿರೂಪಿಸಲು ಪ್ರಯತ್ನಿಸಿದ್ದಾರೆ.

ನೀರನ್ನು ಉಳಿಸಲು ಪ್ರತಿಯೊಬ್ಬರೂ ಅನುಸರಿಸಬೇಕಾದ ಅತ್ಯಂತ ಸರಳ ಮತ್ತು ಸುಲಭ ನಿಯಮಗಳನ್ನು ಈ ಪುಸ್ತಕ ಒಳಗೊಂಡಿದೆ.

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಚಿಕ್ಕ ವಯಸ್ಸಿನಲ್ಲೇ ಪ್ರಕೃತಿಯ ಬಗೆಗಿನ ಜವಾಬ್ದಾರಿ ಅರಿತ ಮಕ್ಕಳು ಹೇಗೆ ತಮ್ಮ ಪುಟ್ಟ ಕೈಗಳಿಂದ ದೊಡ್ಡ ಕೆಲಸ ಮಾಡಿ ತೋರಿಸುತ್ತಾರೆ ಎಂಬುದರ ಕಥಾಸಂಗಮವೇ ” ” ಪುಟಾಣಿ ಸಂರಕ್ಷಕರು ” .

ನೀರು ಪ್ರಕೃತಿಯ ಅಮೂಲ್ಯ ದ್ರವವಾಗಿದೆ. ನೀರು ಇಲ್ಲದೆ ಜೀವನವು ಅಸ್ತಿತ್ವದಲ್ಲಿಲ್ಲ. 3/4 ನೇ ಭಾಗದಷ್ಟು ಭೂಮಿಯ ಮೇಲ್ಮೈ ಜಲಮೂಲಗಳಿಂದ ಆವರಿಸಿದ್ದರೂ, ಈ ನೀರಿನ 97 ಪ್ರತಿಶತ ಉಪ್ಪು ನೀರಿನ ರೂಪದಲ್ಲಿ ಸಾಗರಗಳಲ್ಲಿದೆ, ಮತ್ತು ಮಾನವ ಬಳಕೆಗೆ ಅನರ್ಹವಾಗಿದೆ.

ಕೇವಲ 2.7% ಮಾತ್ರ ಶುದ್ದ ನೀರು ಇದ್ದು ಭ ಇದರಲ್ಲಿ ಸುಮಾರು 70% ರಷ್ಟು ನೀರು
ಹಿಮನದಿಗಳಾಗಿವೆ. ಅದರಲ್ಲಿ ಕೇವಲ 1% ಶುದ್ಧ ನೀರು ಲಭ್ಯವಿದ್ದು ಮಾನವ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಅಮೂಲ್ಯವಾದ ಸಂಪನ್ಮೂಲವನ್ನು ಸಂರಕ್ಷಿಸುವುದು ಬಹಳ ಮುಖ್ಯ ಎಂದು ಸಾರಿ ಹೇಳುತ್ತಿದ್ದಾರೆ ಈ ಪುಟ್ಟ ಲೇಖಕಿ. ಈ ಪುಸ್ತಕವು ಪ್ರಕೃತಿ ತಾಯಿಗೆ ಅರ್ಪಿತವಾಗಿವೆ.

ವಿಶ್ವ ಜಲ ದಿನಾಚರಣೆ, ಮಾರ್ಚ್ 22, 2018 ರಂದು, ಮಾನ್ಯ , 38 ಮಕ್ಕಳು ಮತ್ತು 36 ಪೋಷಕರೊಂದಿಗೆ ನೀರು ಉಳಿಸಿ ಮೆರವಣಿಗೆ ಜಾತಾ ಹಮ್ಮಿಕೊಂಡಿದ್ದಳು. ದೊರೆಸಾನಿ ಅರಣ್ಯ ಪ್ರದೇಶ ದಿಂದ ಪ್ರಾರಂಭವಾದ ಜಾತಾ ಪುಟ್ಟನ್‌ಹಳ್ಳಿ ಕೆರೆ ಯಲ್ಲಿ ಸಸಿಗಳನ್ನು ನೆಡುವ ಮೂಲಕ ಕೊನೆಗೊಂಡಿತು. ಮಕ್ಕಳು ನೀರನ್ನು ಉಳಿಸುವ ವಾಗ್ದಾನ ಮಾಡಿದರು ಮತ್ತು ನೀರು ಸಂರಕ್ಷಣೆ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

ಮನ್ಯಾ ಕನ್ನಡದಲ್ಲಿ ರಾಪ್ ಹಾಡನ್ನು ಬರೆದು ಹಾಡಿದ್ದಾರೆ. ಪ್ರಕೃತಿಯ ಸಂರಕ್ಷಣೆ ಬಗೆಗಿನ ಈ ರಾಪ್ ಸಂಗ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಬ್ಗಿಯರ್ ಬಿಟಿಎಂ ಶಾಲೆಯ ವಿದ್ಯಾರ್ಥಿಗಳು ಹಾಡಿದ ಸ್ಟ್ರೈಕ್ ಆಫ್ ಪ್ಲಾಸ್ಟಿಕ್ ಗೀತೆಯ ಸಾಹಿತ್ಯವನ್ನೂ ಮಾನ್ಯಾ ಬರೆದಿದ್ದಾರೆ. ಇದೇ ಶಾಲೆಯ ಮ್ಯೂಸಿಕ್ ಸರ್ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು , ದೊಡ್ಡ ಹಿಟ್ ಆಗಿದೆ.

ಭಾರತ ಕೇಂದ್ರ ಸರಕಾರ ಹಮ್ಮಿಕೊಂಡಿದ್ದ #WaterHeroes ಸ್ಪರ್ಧೆ ಯಲ್ಲಿ ಕೂಡ ಮಾನ್ಯಳ ನೀರಿನ ಹೋರಾಟ ಮತ್ತು ಕಳಕಳಿ ಗೆ ಪ್ರಶಸ್ತಿ ಬಂದಿದೆ.

UN -Water ನ ಫೇಸ್ ಬುಕ್ ಖಾತೆಯಲ್ಲಿ ಈ ಪುಟ್ಟ ಬಾಲೆಯ ನೀರಿನ ಹೋರಾಟ ಹಾಗೂ ನೀರಿನ ಸಂರಕ್ಷಣೆ ಕಳಕಳಿ ಬಗ್ಗೆ ಹಂಚಿಕೊಳ್ಳಲಾಗಿದೆ.

ಈ ಕಿರಿಯ ಕವಿಯಿತ್ರಿಯ ಕಿವಿಮಾತು

“ನೀವು ಉಪದೇಶ ಮಾಡುವ ಮೊದಲು ಸ್ವಯಂ
ಅಭ್ಯಾಸ ಮಾಡಿ”.

ಅಪ್ರತಿಮ ಪ್ರತಿಭೆಯ ಈ ಪುಟ್ಟ ಬಾಲೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಲಿ. ಮತ್ತಷ್ಟು
ಯಶಸ್ಸ ಈಕೆಯದಾಗಲಿ ಎಂದು ಹಾರೈಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಗ್ರಾಂಡ್ ಮಾಸ್ಟರ್ ಮಾನ್ಯ ಹರ್ಷ ; ಈಕೆ ಭಾರತದ ಅತ್ಯಂತ ಕಿರಿಯ ಕವನಗಾರ್ತಿ..!

Published

on

  • ಸುದ್ದಿದಿನ ಡೆಸ್ಕ್

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾನ್ನುಡಿಯಂತೆ, ಒಂಭತ್ತನೇ ವಯಸ್ಸಿಗೇ ಪುಸ್ತಕ ಬರೆದು, ಭಾರತದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದಿಗೆ ಪಾತ್ರರಾಗಿದ್ದಾಳೆ ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮುದ್ದಿನ ಮಗಳು ಮಾನ್ಯ ಹರ್ಷ. ಬೆಂಗಳೂರಿನ ವಿಬ್ಗಯಾರ್ ಹೈ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಈಕೆ , ಮೂರು ದಾಖಲೆಗಳ‌ ಒಡತಿ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವಜ್ರ ವರ್ಲ್ಡ್ ರೆಕಾರ್ಡ್, ವತಿಯಿಂದ ಮೂರು ಬಿರುದುಗಳು ಈ ಪುಟ್ಟ ಪೋರಿಗೆ ಪ್ರಾಪ್ತ ವಾಗಿದೆ.

ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ಹರೆಯದ ಮಾನ್ಯ ಹರ್ಷ,ಈ ಸಣ್ಣ ವಯಸ್ಸಿನಲ್ಲೇ “ ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು “ಭಾರತದ ಕಿರಿಯ ಕವನಗಾರ್ತಿ ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ಜುಲೈ 5, 2019ರಂದು ಮುದ್ರಣಗೊಂಡ “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿನ್ನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶ ಪ್ರೇಮ,ಸೈನಿಕರ‌ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ‌, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.

  1. ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ “ಭಾರತದ  ಅತ್ಯಂತ ಕಿರಿಯ ಕವನಗಾರ್ತಿ” ಎಂಬ ಬಿರುದು ನೀಡಿ ಸನ್ಮಾನಿಸಲಾಗಿದೆ.
  2. ಏಷಿಯಾ ಬುಕ್ ಆಫ್ ರೆಕಾರ್ಡ್ಸ್  ವತಿಯಿಂದ, “ಗ್ರಾಂಡ್ ಮಾಸ್ಟರ್” ಬಿರುದು , ಪಾರಿತೋಷಕ ನೀಡಿ ಗೌರವಿಸಲಾಗಿದೆ.
  3. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ” ಪರಿಸರ ಕುರಿತ ಕವನಗಳು ರಚಿಸಿದ  ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದು, ಪಾರಿತೋಷಕ, ಮೆಡಲ್ ನೀಡಿ ಗೌರವಿಸಲಾಗಿದೆ.

ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವನಗಾರ್ತೀಯ ಬರೆಯುವ ಹವ್ಯಾಸವನ್ನು ಮತ್ತಷ್ಟು ಪ್ರೋತ್ಸಾಹಿಸಿದರು.

2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ,” ಥಾಂಕ್ಸ್ ಗಿವಿಂಗ್” ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ.

ಮೂರು ವರ್ಷಗಳ,  ಪುಸ್ತಕ ಮುದ್ರಿಸುವ,  ಈಕೆಯ ಕನಸು ಈಗ ನನಸಾಗಿದೆ. “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿ ಗೆ ಕನ್ನಡಿ ಹಿಡಿದಂತಿದೆ.ಮಾರ್ಚ್ 22,2018 ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ , ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ”ನೀರು ಉಳಿಸಿ” ಆಂದೋಲನ  ನಡೆಸಿದ್ದಳು.

ಅಂತೆಯೇ,ಜೆ.ಪಿ.ನಗರದ ಪುಟ್ಟೇನಹಳ್ಳಿ ಕೆರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಮೂಡಿಸದಳು ಮಾನ್ಯ ಹರ್ಷ. ಕಲೆ, ಕ್ರೀಡೆ ಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯ,ಹಾಡು, ಕುಣಿತ,ಈಜುಗಾರಿಕೆಯಲ್ಲಿ ಹಲವಾರು ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾಳೆ. ಕರಾಟೆ ಹಾಗೂ ಟೆಕ್ವಾಂಡೋ ವಿದ್ಯೆ ರೂಢಿಸಿಕೊಂಡಿರುವ ಮಾನ್ಯ ಕಲೆ-ಸಾಹಿತ್ಯ-ಕ್ರೀಡೆಗಳಲ್ಲಿ ಮುಂಚೂಣಿಯಲ್ಲಿದ್ದಾಳೆ.
‌
ಇಷ್ಪಕ್ಕೇ ನಿಲ್ಲದೆ ಮಾನ್ಯಾಳ ಪುಸ್ತಕ ಪ್ರೀತಿ, ಈಗ ಈಕೆ ಕನ್ನಡದಲ್ಲಿ ರಚಿಸಿರುವ ಕವನ ಹಾಗೂ ಕಥೆಗಳ ಗುಚ್ಛವನ್ನು ಮುದ್ರಿಸುವ ತವಕದಲ್ಲಿದ್ದಾಳೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ1 week ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ2 weeks ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ2 weeks ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ2 weeks ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ2 weeks ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ2 weeks ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ2 weeks ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ2 weeks ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ2 weeks ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

Trending