ರಾಜಕೀಯ

ನಾನು ಮಾನವ ಧರ್ಮದ ಸೇವಕ : ಎಚ್.ಡಿ.ಕೆ

Published

on

ಸುದ್ದಿದಿನ, ಮೈಸೂರು : ನಾನು ಮಾನವ ಧರ್ಮದ ಸೇವಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ತಿರುಮಕೂಡಲು ನರಸೀಪುರದಲ್ಲಿ ನಡೆಯುತ್ತಿರುವ 11ನೇ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಮಂಡ್ಯ ಸಂಸದ ಎಲ್.ಆರ್.ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ, ಮಾಜಿ ಸಚಿವ ಜಿ.ಮಾದೇಗೌಡ , ಶಾಸಕರಾದ ಅಶ್ವಿನ್ ಕುಮಾರ್, ಕೆ.ಮಹದೇವ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಶ್ರೀ ಶಿವಾನಂದಪುರಿ ಸ್ವಾಮಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮಿ ಹಾಗೂ ಇನ್ನಿತರ ಸ್ವಾಮೀಜಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version