Connect with us

ದಿನದ ಸುದ್ದಿ

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ : ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು.

ಬಸವಣ್ಣನವರು 12ನೇ ಶತಮಾನದಲ್ಲಿ ನೂರಾರು ಶರಣರನ್ನು ಒಂದು ಕಡೆ ಸೇರಿಸಿ ಕಾಯಕ ವೃತ್ತಿಯನ್ನು ಪ್ರಾರಂಭಿಸಿದರು. ಯಾರು ಕಾಯಕವನ್ನು ಮಾಡುತ್ತಾರೋ ಅಲ್ಲಿ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ, ಪ್ರತಿಯೊಬ್ಬರೂ ಕೂಡ ಅವರವರ ಕಾಯಕದಲ್ಲಿ ತೊಡಗಿಕೊಂಡರೆ ನಿರುದ್ಯೋಗವನ್ನು ತೊಲಗಿಸಬಹುದು. ನಿಜಶರಣ ಹಡಪದ ಅಪ್ಪಣ್ಣ ಅವರು ರಚಿಸಿದ್ದ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಮಾತನಾಡಿ, ನಮ್ಮ ಬದುಕಿನ ಪ್ರೇರಣೆಗಳಿಗೆ ನಾವು ಸ್ಮರಣೆ ಮಾಡುವುದು ಅನಿವಾರ್ಯವಾಗಿದೆ. ಸಮಾಜದಲ್ಲಿ ಯಾರು ಶ್ರೇಷ್ಠರಲ್ಲ ಕನಿಷ್ಠರು ಅಲ್ಲ ನಾವೆಲ್ಲರೂ ಪರಮಾತ್ಮನ ಮಕ್ಕಳು ಎಲ್ಲರೂ ಸಮಾನವೆಂದು ಪ್ರತಿಬಿಂಬಿಸಿದರು ಬಸವಣ್ಣನವರು, ನಂಬಿಕೆ ಎಂದರೆ ಸತ್ಯ, ಸ್ನೇಹ, ಸಂಸಾರ, ಕುಟುಂಬ ಸಮಾಜದಲ್ಲಿ ನಂಬಿಕೆ ಇರಬೇಕು ಇಲ್ಲವೆಂದರೆ ಬೆಲೆ ಇರುವುವುದಿಲ್ಲ. ಎಲ್ಲರು ನಿಜಶರಣ ಹಡಪದ ಅಪ್ಪಣ್ಣನವರ ವಚನ ಸಾಹಿತ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸಮಾಜದ ಮುಖಂಡ ಶಿವಕುಮಾರ್ ಉಪನ್ಯಾಸ ನೀಡಿ, ಶರಣರಾದ ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಮೋಳಿಗೆಯ ಮಾರಯ್ಯ, ಡೋಹರ ಡಕ್ಕಯ್ಯ, ಮೇಧಾರ ಕೇತಯ್ಯ, ಸಮಗಾರ ಹರಳಯ್ಯ, ಸೊನ್ನಲಗದ ಸಿದ್ದರಾಮ ಸೇರಿದಂತೆ ಜಗತ್ತಿನ ಎಲ್ಲ ಧರ್ಮದ ಶರಣರಿಗೆ ಬಸವಣ್ಣನವರು 12ನೇ ಶತಮಾನದ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದ್ದರು. ಈ ಸಮಾಜದಲ್ಲಿ ಬೆಳಗ್ಗೆ ಎದ್ದ ತಕ್ಷಣವೇ ಹಡಪದ ಅವರ ಮುಖ ನೋಡಬಾರದು ಎಂಬ ತಪ್ಪು ಕಲ್ಪನೆ ದೂರ ಮಾಡಲು ಬಸವಣ್ಣನವರು ಅಪ್ಪಣ್ಣನವರನ್ನು ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿ ಮಾಡಿಕೊಳ್ಳುವ ಮೂಲಕ ತಮ್ಮನ್ನು ನೋಡಲು ಬರುವವರೆಲ್ಲರೂ ಮೊದಲು ಅಪ್ಪಣ್ಣನವರನ್ನು ಭೇಟಿ ಮಾಡಿ ಬರುವಂತೆ ಮಾಡಿದ್ದರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಸಾಪುರ ಕಲಾ ಬಳಗದವರು ವಚನ ಗೀತೆಯನ್ನು ಹಾಡಿದರು.

ಈ ವೇಳೆ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್, ಡಿಯುಡಿಸಿ ಯೋಜನಾಧಿಕಾರಿ ನಜ್ಮಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಮಾಜದ ಅಧ್ಯಕ್ಷ ಶಶಿಧರ್ ಬಸಾಪುರ, ಮುಖಂಡರಾದ ಮರುಳಸಿದ್ದೇಶ್ವರ, ಶಿವಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending