Connect with us

ದಿನದ ಸುದ್ದಿ

ಹೊಸಕೆರೆಹಳ್ಳಿ ಕೆರೆಗೆ ವಿಷಪಾಷಾಣ : ಕೆರೆ ಉಳಿಸಲು ಬಂದರು ಹಸಿರು ಪಡ್ಡೆಗಳು

Published

on

ನಮ್ಮಹೊಸಕೆರೆಹಳ್ಳಿ ಕೆರೆ ಉಳಿಸಿ ಅಭಿಯಾನ

ಸುದ್ದಿದಿನ ವಿಶೇಷ : ಕೆಂಪೇಗೌಡರ ಆಳ್ವಿಕೆಯಲ್ಲಿ ನಿರ್ಮಾಣವಾದ ಬೆಂಗಳೂರಿನ ಹೊಸಕೆರೆಹಳ್ಳಿ ಗ್ರಾಮದ ಮೂಕಾಂಬಿಕಾ ನಗರದಲ್ಲಿರುವ ಕೆರೆ ಹೊಸಕೆರೆಹಳ್ಳಿ ಕೆರೆ ಎಂದೇ ಹೆಸರು ವಾಸಿ. ಆದರೀಗ ಈ ಕೆರೆ ಒಡಲಿಗೆ ಕೊಳಚೆ, ಕಸದ ವಿಷವಸ್ತುಗಳು ಸೇರುತ್ತಿವೆ.

ಸ್ವಚ್ಛ, ಸುಂದರ ಪರಿಸರದಲ್ಲಿರುವ ಈ ಕೆರೆ ಈಗ ಅಂದಾಜು 44 ಎಕರೆ ಪ್ರದೇಶವಿದೆ. ಪಶ್ಚಿಮದಲ್ಲಿ ನೈಸ್ ರಸ್ತೆ, ಪೂರ್ವದಲ್ಲಿ ವಸತಿ ಪ್ರದೇಶ ಹಾಗೂ ಉತ್ತರದಲ್ಲಿ ಕೆರೆಕೋಡಿ ಮುಖ್ಯರಸ್ತೆ ಮತ್ತು ದಕ್ಷಿಣ ದಿಕ್ಕಿನಲ್ಲಿ ಅರಣ್ಯ ಪ್ರದೇಶ ಜತೆಗೆ ಹನುಮಗಿರಿ ಗುಡ್ಡವಿದೆ. ಆದರೀಗ, ಈ ಸುಂದರ ಪ್ರವಾಸಿ ತಾಣದಂತಿರುವ ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ಉಂಟಾಗುತ್ತಿದೆ.

ಕೆರೆ ಅತಿಕ್ರಮಣ

ಹೊಸಕೆರೆಹಳ್ಳಿ ಕೆರೆ ಮೊದಲಿಗೆ 59.26 ಎಕರೆ ಪ್ರದೇಶ ಹೊಂದಿದ್ದ ಕೆರೆಯಾಗಿತ್ತೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ಮೇ 1, 2017ರಂದು ವರದಿ ಪ್ರಕಟಿಸಿತ್ತು. ಆದರೀಗ ಇದು ಹಲವಾರು ಕಾರಣಗಳಿಗಾಗಿ ಅತಿಜ್ರಮಣಗೊಂಡು 44 ಎಕರೆ ಪ್ರದೇಶ ಮಾತ್ರ ಉಳಿದಿದೆ.

ಈ ಕೆರೆಗೆ ಹೊಂದಿಕೊಂಡು ಕಿರುಅರಣ್ಯ ಪ್ರದೇಶ, ಇದರ ಅಂಗಳದಲ್ಲಿ ಹನುಮಗಿರಿ ಮತ್ತು ಯೇಸುಬೆಟ್ಟ ಎಂಬ ಎರಡು ಗುಡ್ಡಗಳಿದ್ದವು. ಪಕ್ಕದಲ್ಲಿದ್ದ ವಸತಿ ಪ್ರದೇಶದ ಕೊಳಚೆ ನೀರು ಹಾಗೂ ಹೊಸಕೆರೆಹಳ್ಳಿ ಮತ್ತಿತರ ಗ್ರಾಮಗಳ ಜನರು ಕಸದ ತಂದು ಸುರಿಯುತ್ತಿದ್ದಾರೆ. ಪಶ್ಚಿಮ ದಿಕ್ಕಿನಲ್ಲಿ ನೈಸ್ ರಸ್ತೆ ಕೆರೆಯನ್ನು ಇಬ್ಭಾಗಿಸಿದರೆ, ಇದರ ಹತ್ತಿರ ವಸತಿ ಪ್ರದೇಶ ಅಭಿವೃದ್ಧಿಗೊಳ್ಳುತ್ತಿದೆ. ಕೆರೆಯ ಸೌಂದರ್ಯ ಹೆಚ್ಚಿರುವ, ಕಣ್ಣುಗಳಿಗೆ ತಂಪು ನೀಡುವ ಹನುಮಗಿರಿ ಪ್ರದೇಶಕ್ಕೆ ಟಾಟಾ ಕಂಪನಿ ಟಾಟಾ ಹೇಳಿಸಿಬಿಟ್ಟಿದೆ. “ಹಿಲ್ ರೆಸಿಡೆಂಟ್ಸ್” ಎಂದು ಹೆಮ್ಮೆಯಿಂದ ಹೊಗಳಿಕೊಂಡಿದೆ.

ಕೆರೆ ಪರಿಸರ

ಸಾಮಾನ್ಯವಾಗಿ ಬೆಂಗಳೂರಿನ ಕೆರೆಗಳು ಪಾದಚಾರಿ ಪಥ (ವಾಕ್ ವೇ), ಸುತ್ತಲು ತಂತಿಬೇಲಿ ಹಾಗೂ ರಸ್ತೆ ಇರುತ್ತದೆ. ಆದರೆ, ಹೊಸಕೆರೆಹಳ್ಳಿ ಕಿರು ಪರಿಸರ ವ್ಯವಸ್ಥೆಯೇ ಇದೆ. ಇಲ್ಲಿ ಮ್ಯಾಂಗ್ರೋವ್ ಮರಗಳು, ಕಾಡು ನಾಯಿ, ಹಾವು, ಗ್ರೇಟ್ ಕಾರ್ಮೊರೆಂಟ್, ಹೆರನ್, ಶಿಕ್ರಾ, ವಿವಿಧ ಜಾತಿಯ ಚಿಟ್ಟೆಗಳು ಸೇರಿದಂತೆ ವೈವಿಧ್ಯಮಯ ಪ್ರಾಣಿ, ಪಕ್ಷಿ, ಸಸ್ಯ ಪ್ರಭೇದಗಳನ್ನು ಹೊಂದಿದೆ. ಕೆರೆಯ ಪಾತ್ರದಲ್ಲಿ ಔಷಧಿಯ ಸಸ್ಯಗಳು ಬೆಳೆದಿವೆ.

ಇಪ್ಪತ್ತು ವರ್ಷಗಳ ಹಿಂದೆ ಅನೇಕ ಗ್ರಾಮಗಳ ಜನರಿಗೆ ಈ ಕೆರೆಯ ನೀರೇ ಜೀವಜಲವಾಗಿತ್ತು. ಆದರೆ, ಇದೀಗ ಈ ನೀರನ್ನು ನೋಡುತ್ತಿದ್ದಂತೆ ದೂರ ಓಡುವ ದುಃಸ್ಥಿತಿ ಎದುರಾಗಿದೆ. ಶೀಘ್ರ ಕೆರೆ ಮಾಲಿನ್ಯ ಮುಕ್ತವಾದರೆ   ಜನರಿಗೆ ಅನುಕೂಲವಾಗುತ್ತದೆ ಎಂಬುದು ಪರಿಸರ ಪ್ರೇಮಿಗಳ ಆಶಯ.

ಕೆರೆ ಉಳಿಸಲು ಬಂದರು ಹಸಿರು ಪಡ್ಡೆಗಳು

ಬೆಂಗಳೂರಿನ ಕೆರೆಗಳನ್ನು ಹೇಳ ಹೆಸರಿಲ್ಲದಂತೆ ಮಾಡಿದ ಸರಕಾರಗಳು ಈಗ ತಪ್ಪನ್ನು ಒಬ್ಬರ ಮೇಲೊಬ್ಬರು ಹಾಕುತ್ತಿವೆ. ಕೆರೆ ಏಕೆ ಹಾಳಾಗುತ್ತಿದೆ ಎಂದು ಜನರಿಗೆ ಜಾಗೃತಿ ಬರುವಷ್ಟರಲ್ಲಿ ಆ ಕೆರೆ ಒತ್ತುವರೆ ಮಾಡಿ ಅಪಾರ್ಟ್‌ಮೆಂಟ್ ಕಟ್ಟಿರುವ ಉದಾಹರಣೆಗಳೂ ಇವೆ.

ಪರಿಸ್ಥಿತಿ ಕೈ ಮೀರುವ ಮುನ್ನವೇ ಕೆರೆ ಉಳಿಸಿಕೊಳ್ಳುವ ಸಲುವಾಗಿ ಬೆಂಗಳೂರು ಗ್ರೀನ್ ರೋಡೀಸ್ ಎಂಬ ಸಂಘಟನೆ ಹುಟ್ಟಿಕೊಂಡಿದೆ. ವಿಷಯದಲ್ಲಿ ತಪ್ಪು ನಿರ್ಧಾರಗಳ್ಳುವ ಅಧಿಕಾರಿಗಳಿಗೆ, ಕೆರೆಯೊಳಗೆ ಕಸ ಎಸೆಯುವ ಜನರನ್ನು ಧೈರ್ಯವಾಗಿ ಪ್ರಶ್ನಿಸುವವರು ಇವರು.

ಹಸಿರು ಕೈಗಾರಿಕಾ ಒಕ್ಕೂಟಗಳ (ಗ್ರೀನ್ ಇಂಡಸ್ಟ್ರೀಸ್) ನಿರ್ದೇಶಕ ಸುನೀಲ್ ಸೂದ್ ಅವರು ಕಳೆದ ಏಪ್ರಿಲ್ 28ಕ್ಕೆ ವಾಟ್ಸ್‌ಆ್ಯಪ್ ಗ್ರೂಪ್ ಮೂಲಕ ಗ್ರೀನ್ ರೌಡೀಸ್ ಎಂಬ ಸಂಘಟನೆಯನ್ನು ಹುಟ್ಟುಹಾಕಿದರು.

ಕೆರೆ ಸಂರಕ್ಷಣೆ, ಪರಿಸರ ಮಾಲಿನ್ಯ ನಿಯಂತ್ರ ಕುರಿತು ಜಾಗೃತಿ, ಸಸಿ ನೆಡುವುದು, ಕೆರೆಗಳಲ್ಲಿರುವ ಹೂಳು ತೆಗೆಯುವುದು, ಪ್ಲಾಸ್ಟಿಕ್ ಬಳಕೆಯಿಂದಾಗುವ ಪ್ರತಿಕೂಲ ಪರಿಣಾಮಗಳ ಕುರಿತು ಅಭಿಯಾನ ಹಮ್ಮಿಕೊಳ್ಳುವುದು ಮೊದಲಾದವು ಗ್ರೀನ್ ರೋಡೀಸ್ ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಪ್ರಾರಂಭವಾದ ಒಂದೇ ತಿಂಗಳಲ್ಲಿ 200ಕ್ಕೂ ಹೆಚ್ಚು ಸ್ವಯಂ ಸೇವಕರು ಸಂಘಟನೆಯನ್ನು ಸೇರಿದ್ದಾರೆ. ವಿಶೇಷವೆಂದರೆ ಏಳರಿಂದ 70ರ ವಯಸ್ಸಿನ ಸ್ವಯಂ ಸೇವಕರು ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಎಲ್ಲ ವರ್ಗಗಳ ಸ್ವಯಂ ಸೇವಕರು

ಗ್ರೀನ್ ರೋಡೀಸ್ ಸಂಘಟನೆಯಲ್ಲಿ ಎಲ್ಲ ವರ್ಗದವರಿಗೂ ಅವಕಾಶ ನೀಡುವ ಉದ್ದೇಶದಿಂದ ಐಟಿ, ಬಿಟಿ, ಸರಕಾರಿ ಅಧಿಕಾರಿಗಳು, ಪುಟ್ಟ ಮಕ್ಕಳು, ಹಿರಿಯರು, ಗಣ್ಯರು, ರಾಜಕಾರಣಿಗಳು ಮೊದಲಾದವರನ್ನು ಸಂಘಟನೆಯ ಸದಸ್ಯರನ್ನಾಗಿ ಮಾಡಲಾಗಿದೆ.

ಕಾರ‌್ಯಾಗಾರಗಳು

ಗ್ರೀನ್ ರೋಡೀಸ್ ಸಂಘಟನೆಯು ಪರಿಸರಕ್ಕೆ ಸಂಬಂಧಪಟ್ಟ ವಿಷಯಗಳ ಕುರಿತಂತೆ ಕಾರ‌್ಯಗಾರಗಳನ್ನು ಹಮ್ಮಿಕೊಳ್ಳುತ್ತದೆ. ಈ ಮೂಲಕ ಕಾರ‌್ಯಾಗಾರದಲ್ಲಿ ಪಾಲ್ಗೊಳ್ಳುವ ಜನರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಿದೆ.

ಪ್ರತಿ ಭಾನುವಾರ ಸಭೆ

ಬೆಂಗಳೂರು ಗ್ರೀನ್ ರೋಡೀಸ್ ಅಥವಾ ಬಿಜಿಆರ್ ಸಂಘಟನೆಯು ಪ್ರತಿ ಭಾನುವಾರ ಒಂದು ಸಭೆಯನ್ನು ಹಮ್ಮಿಕೊಳ್ಳುತ್ತದೆ. ಭವಿಷ್ಯದಲ್ಲಿ ಹಮ್ಮಿಕೊಳ್ಳಬೇಕಿರುವ ಕಾರ‌್ಯಕ್ರಮಗಳು, ನಿರ್ಧಾರಗಳ ಕುರಿತು ಚರ್ಚಿಸಲಾಗುತ್ತದೆ. ಮೇ. 2ರಂದು ಲಾಲ್‌ಬಾಗ್‌ನಲ್ಲಿ ಬಿಜಿಆರ್‌ನ ಮೊದಲ ಸಭೆ ನಡೆಯಿತು. ಸಂಘದ ಸದಸ್ಯರು ಲಾಲ್‌ಬಾಗ್‌ಅನ್ನು ಸಂಪೂರ್ಣ ಸ್ವಚ್ಛಗೊಳಿಸಿದರು.

ಹೊಸಕೆರೆ ಹಳ್ಳಿ ಕೆರೆಗೆ ಭೇಟಿ 

ಬೆಂಗಳೂರು ಗ್ರೀನ್ ರೋಡೀಸ್ ಸಂಘಟನೆಯು 2018 ಮೇ 2ರಂದು ಮೊದಲಬಾರಿಗೆ ಹೊಸಕೆರೆ ಹಳ್ಳಿ ಕೆರೆಗೆ ಭೇಟಿ ನೀಡಿತು. ಸಂಘದ ಸದಸ್ಯ ಪ್ರಶಾಂತ್ ಸೇಠ್ ಅವರು ಕೆರೆ ಮೇಲ್ಭಾಗದಿಂದ ಆರ್‌ಆರ್ ನಗರ ಸಂಪರ್ಕಿಸುವ ರಸ್ತೆಯ ಮೇಲೆ ಹಾದು ಬಂದಾಗ ಹೊಸಕೆರೆ ಹಳ್ಳಿ ಕೆರೆಯು ಯಾವ ಪರಿಸ್ಥಿತಿಯಲ್ಲಿದೆ ಎಂದು ಒಂದು ಅಂದಾಜು ಸಿಕ್ಕಿತು.

‘‘ಕೆರೆಯನ್ನು ಮೇಲ್ನೋಟದಿಂದಲೇ ಅಧ್ಯಯನ ಮಾಡಿದಾಗ ಕೆರೆ ಸ್ವಚ್ಛತಾ ಕಾರ‌್ಯವು ಅರ್ಧಕ್ಕೆ ನಿಂತಿರುವುದು ಗೊತ್ತಾಯಿತು. ಇಡೀ ಕೆರೆಯಲ್ಲಿ ನೀರಿರುವ ಪ್ರದೇಶ ಹೆಚ್ಚಾಗಿರುವುದೂ ಕೂಡ ಕಂಡುಬಂತು. ಹೊಸಕೆರೆ ಹಳ್ಳಿ ಕೆರೆಯನ್ನು ಉಳಿಸುವುದು ಬೆಂಗಳೂರನ್ನು ಉಳಿಸಲು ಇರುವ ಏಕೈಕ ಮಾರ್ಗ ಎಂದೂ ಅನ್ನಿಸಿತು. ಬೆಂಗಳೂರಿಗರು ಕುಡಿಯುವ ನೀರಿನ ತೊಂದರೆ ಎದುರಿಸಬೇಕಾಗುತ್ತದೆ ಎಂಬ ಭವಿಷ್ಯವಾಣಿ ನಿಜವಾಗುತ್ತದೆಯೇನೋ ಎಂಬ ಭಯವಿದೆ. ಈಗಾಗಲೇ ಕೆರೆಯ ಏರಿ ಜಾಗವನ್ನು ಹಲವು ಲೇಔಟ್‌ಗಳು ಒತ್ತರಿಸಿಕೊಂಡು ಬಂದಿವೆ. ಟಾಟಾ ಪ್ರೊಮೋಂಟ್ ಕಂಪನಿಯೂ ಸಹ ಕೆರೆ ಒತ್ತುವರಿ ಪ್ರದೇಶದಲ್ಲೇ ನೆಲೆ ನಿಂತಿದೆ. ಆದರೆ, ಈಗಾಗಲೇ ಒತ್ತುವರಿಯಾಗಿರುವ ಜಾಗವನ್ನು ಈಗ ಏನೂ ಮಾಡಲು ಸಾಧ್ಯವಿಲ್ಲ. ಆದರೆ, ಸದ್ಯ ಕೆರೆ ಎಂದು ಕಾಣುವ ಜಾಗವನ್ನಾದರೂ ಉಳಿಸಿಕೊಳ್ಳಬೇಕಿದೆ. ಇತ್ತೀಚೆಗೆ ಮತ್ತೊಮ್ಮೆ ಕೆರೆಗೆ ಭೇಟಿ ನೀಡಿದ್ದೆ. ಎಲ್ಲರೂ ಒಟ್ಟಾದರೆ ಕೆರೆಯನ್ನು ಸ್ವಚ್ಛಮಾಡಿ ಅದನ್ನು ಉಳಿಸಿಕೊಳ್ಳಬಹುದು,’’ ಎಂಬುದು ಪ್ರಶಾಂತ್ ಸೇಠ್ ಅವರ ಅಭಿಮತ.

ಕೆರೆ ಭೇಟಿಯ ಉದ್ದೇಶಗಳು ಏನೆಂದರೆ 

1. ಕೆರೆ ಪರಿಸರದ ಮೇಲ್ನೋಟ ಅಧ್ಯಯನ

2. ಕೆರೆ ಶುಚಿಗೊಳಿಸುವುದು

3. ನಮಗೆ ತಿಳಿದಿರುವ ವಿಷಯವನ್ನು ಹಂಚಿಕೊಳ್ಳುವುದು

ಈ ಎಲ್ಲ ಉದ್ದೇಶಗಳನ್ನಿಟ್ಟುಕೊಂಡು ಹೊಸಕೆರೆ ಹಳ್ಳಿ ಕೆರೆ ಅಧ್ಯಯನ ಮಾಡಿದಾಗ ನಮಗೆ ಅಚ್ಚರಿ ಎನಿಸುವ ಹಲವಾರು ವಿಷಯಗಳು ತಿಳಿದುಬಂದವು. ಅಷ್ಟಕ್ಕೂ ಕೆರೆಯು ಅದಾಗಲೇ ಅದೋಗತಿ ತಲುಪಿತ್ತು. ಫೇಸ್‌ಬುಕ್‌ನಲ್ಲಿ  #benglalurugreenrodies ಎಂಬ ಪುಟ ನೋಡಿದ ಪ್ರಶಾಂತ್ ಸೇಠ್ ಅವರು ಬೆಂಗಳೂರು ಗ್ರೀನ್ ರೋಡೀಸ್ ಸಂಸ್ಥೆಗೆ ಹಲವಾರು ವಿಷಯಗಳನ್ನು ತಿಳಿಸಿದರು. ಕೆಲವು ಸ್ಥಳೀಯರಿಂದ ಬಿಜಿಆರ್ ಸಂಘಟನೆಯು ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸಿತು.

ಬಿಜಿಆರ್ ಸಂಗ್ರಹಿಸಿದ ಮಾಹಿತಿಗಳು

1. ಹೊಸಕೆರೆ ಹಳ್ಳಿ ಕೆರೆಯು ಸಂಪೂರ್ಣ ಬತ್ತಿಹೋಗಿರುವುದು ಮೇಲ್ನೋಟದ ಅಧ್ಯಯನದಲ್ಲಿ ಕಂಡುಬಂತು. ಈ ಕೆರೆಯುನ್ನು ಸೀಳಿಕೊಂಡು ಹೋಗುವ ರಸ್ತೆಯ ಬಲ ಭಾಗವು ಸಂಪೂರ್ಣ ಬತ್ತಿಹೋಗಿದ್ದು, ಅಲ್ಲಿ ಪೊದೆಗಳು, ಮುಳ್ಳುಗಂಟಿಗಳು ಬೆಳೆದುಕೊಂಡಿದೆ. ಮತ್ತೊಂದು ಭಾಗದಲ್ಲಿ ಸ್ವಲ್ಪವೇ ನೀರಿದ್ದು, ಅದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು, ಬಾಟೆಲ್‌ಗಳು ಮೊದಲಾದ ತ್ಯಾಜ್ಯಗಳನ್ನು ಎಸೆಯಲಾಗಿದೆ.

2. ಕೆರೆಯಲ್ಲಿ ಅಪಾರ ಪ್ರಮಾಣದ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಅದು ಸುತ್ತಮುತ್ತಲಿನವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಟಾಟಾ ಪ್ರೊಮೊಂಟ್ ಸಂಸ್ಥೆಯು ಕೆರೆ ಸ್ವಚ್ಛಗೊಳಿಸುವ ಕಾರ‌್ಯ ಕೈಗೆತ್ತಿಕೊಂಡು, ಕೆರೆ ಕೋಡಿ ಹಳ್ಳಿಗೆ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಿದೆ. ಹೂಳೆತ್ತುವ ಕಾರ‌್ಯಕ್ಕೆ ಸರಕಾರದಿಂದ ಸಂಸ್ಥೆಯು ಅನುಮತಿ ಪಡೆದಿತ್ತಾದರೂ, ಮಳೆ ಪರಿಣಾಮವಾಗಿ ಅದು ನಿಂತುಹೋಗಿದೆ.

3. ಕೆರೆ ದಡದಿಂದ ಸ್ವಲ್ಪವೇ ದೂರದಲ್ಲಿ ಅರಣ್ಯ ಪ್ರದೇಶವೊಂದಿದೆ. ಅಲ್ಲಿ ಸಾಕಷ್ಟು ಪಕ್ಷಿಗಳು ವಾಸವಿವೆ. ಬಿಜಿಆರ್ ಸಂಘಟನೆಯ ಸದಸ್ಯ ರಾಮ್ ಕುಮಾರ್ ಅವರು ಇತ್ತೀಚೆಗೆ ಯಶುಬೆಟ್ಟಕ್ಕೆ ಭೇಟಿ ನೀಡಿದ್ದರು. ಇದು ವಾಯುವಿಹಾರಕ್ಕೆ ಹೇಳಿಮಾಡಿಸಿದ ಸ್ಥಳವಾಗಿದ್ದು, ಇದನ್ನು ಉಳಿಸಿಕೊಳ್ಳುವುದು ಅತಿ ಮುಖ್ಯ.

4. ಹೊಸಕೆರೆ ಹಳ್ಳಿ ಕೆರೆಯನ್ನು ಯೇಸು ಬೆಟ್ಟ ಹಾಗೂ ಹನುಮಗಿರಿ ಎಂಬ ಎರಡು ಬೆಟ್ಟಗಳು ಹೊಂದಿಕೊಂಡಿವೆ. ಟಾಟಾ ಪ್ರೊಮೊಂಟ್ ಸಂಸ್ಥೆಯು ಹನುಮಗಿರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ಇರುವ ನಾಲ್ಕು ಗಗನ ಚುಂಬಿ ಕಟ್ಟಡಗಳನ್ನು ಕಟ್ಟಿದ್ದು, ಇದಕ್ಕೆ ಹಿಲ್ ರೆಸಿಡೆನ್ಸ್ ಎಂದು ಹೆಸರಿಟ್ಟಿದೆ.

ಬೆಳವಣಿಗೆಗಳು

1. ಹೊಸಕೆರೆಹಳ್ಳಿ ಕುರಿತು ಬಿಜಿಆರ್ ಹಮ್ಮಿಕೊಂಡ ಆಂದೋಲನವು ರಾಜ್ಯವ್ಯಾಪಿ ಹಬ್ಬಿತು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಸಂಘಟನೆಯ ಶ್ರಮವನ್ನು ಹಾಡಿ ಹೊಗಳಿತು.

2. ಡಿಜಿಪಿ ಭಾಸ್ಕರ್ ರಾವ್ ಅವರು ಸುನೀಲ್ ಸೂದ್ ಅವರನ್ನು ಭೇಟಿಯಾಗಿ, ಭಾನುವಾರ ನಡೆಯಲಿರುವ ಕೆರೆ ಸ್ವಚ್ಛತಾ ಕಾರ‌್ಯಕ್ಕೆ 60 ಪೊಲೀಸ್ ಸಿಬ್ಬಂದಿ ನಿಯೋಜಿಸುವುದಾಗಿ ಭರವಸೆ ನೀಡಿದರು.

3. ಬಿಜಿಆರ್ ಸಂಘಟನೆಯ ಹಲವು ಸದಸ್ಯರು ಹೊಸಕೆರೆ ಹಳ್ಳಿ ಕೆರೆಯನ್ನು ಪ್ರತಿದಿನ ಭೇಟಿ ಮಾಡಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

4. ಹೊಸಕೆರೆ ಹಳ್ಳಿಯ ಈ ದುರ್ಗತಿಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದ ರುದ್ರಯ್ಯ ಎಂಬುವರೇ ಕಾರಣ ಎಂಬುದು ಗೊತ್ತಾಗಿದೆ. ಸಂಘದ ಸದಸ್ಯ ರಾಮ್ ಕುಮಾರ್ ಅವರು ಕೆರೆ ಅಭಿವೃದ್ಧಿ ಮಂಡಳಿಗೆ ಭೇಟಿ ನೀಡಿದ ನಂತರ ತಿಳಿದ ವಿಷಯವಿದು.

ಕಾರ‌್ಯಕ್ರಮಗಳೇನು?

ಭಾನುವಾರ ನಡೆಯಲಿರುವ ಹೊಸಕೆರೆ ಹಳ್ಳಿ ಕೆರೆ ಸ್ವಚ್ಛತಾ ಕಾರ‌್ಯಕ್ರಮದಲ್ಲಿ ಮೂರು ಕಾರ‌್ಯಗಳನ್ನು ಹಮ್ಮಿಕೊಳ್ಳಲಾಗಿದೆ.

1. ಕೆರೆ ಸ್ವಚ್ಛತೆ

2. ಸಸಿ ನೆಡುವುದು

3. ಜ್ಞಾನ ಹಂಚಿಕೊಳ್ಳುವುದು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ11 hours ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ1 week ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 week ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 week ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending