/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಮದ್ಯಪಾನ ನಿಷೇಧ | ಪರಿಶೀಲನೆಗೆ ಸಮಯ ಅಗತ್ಯ‌: ಎಚ್.ಡಿ.ಕೆ

Published

on

ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣ ನಿಷೇಧ ಮಾಡುವ ಕುರಿತು ಪರಿಶೀಲಿಸಲು ಸಮಯಾವಕಾಶದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಹಿರಿಯ ರಂಗಕರ್ಮಿ, ಪ್ರಸನ್ನ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಮದ್ಯಪಾನ ನಿಷೇಧ ಹೋರಾಟಗಾರರಿಗೆ ತಿಳಿಸಿದರು.

ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಮತ್ತು ಲಾಟರಿ ನಿಷೇಧಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಪ್ರಸ್ತುತ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಜಿ ಎಸ್ ಟಿ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಕ್ರೋಢೀಕರಣದ ಅವಕಾಶಗಳು ಸೀಮಿತವಾಗಿವೆ.

ಈ ವಿಷಯದ ಕುರಿತು ಉನ್ನತ ಮಟ್ಟದ ಚರ್ಚೆ ನಡೆಸುವುದು ಸಹ ಅಗತ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮದ್ಯಪಾನ ಸಂಪೂರ್ಣ ನಿಷೇಧವನ್ನು ಏಕಾಏಕಿ ಘೋಷಿಸಲಾಗದು. ಇದರ ಸಾಧಕ ಬಾಧಕಗಳನ್ನು ಪರಿಶೀಲಿಸಲು ಸಮಯಾವಕಾಶದ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version