ದಿನದ ಸುದ್ದಿ
ಜೂ. 21ರಿಂದ ಎಚ್ ಡಿ ಕೆ ಗ್ರಾಮ ವಾಸ್ತವ್ಯ
ಸುದ್ದಿದಿನ,ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆಸಲಿದ್ದಾರೆ.
ಅಂತೆಯೇ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ತಾವು ಪ್ರಾರಂಭಿಸಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಕುರಿತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಈ ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243