ದಿನದ ಸುದ್ದಿ

ಕಾಂ. ಹೆಚ್.ಕೆ.ರಾಮಚಂದ್ರಪ್ಪ ನಿಧನ : ಗಣ್ಯರ ಸಂತಾಪ

Published

on

ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂ॥ ಹೆಚ್.ಕೆ.ರಾಮಚಂದ್ರಪ್ಪ ದಾವಣಗೆರೆಯಲ್ಲಿ ಕಮ್ಯೂನಿಸ್ಟ್ ಪಕ್ಷ ಸಂಘಟನೆಯಲ್ಲಿ ಕಾಂ. ಪಂಪಾಪತಿಯವರೊಂದಿಗೆ ಸಂಘಟನೆಯಲ್ಲಿ ತೊಡಗಿ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರೂ ಸಹ ಸದಾ ಬಡವರ ಹೋರಾಟದಲ್ಲಿ ಭಾಗವಹಿಸುತ್ತಿದ್ದರು ಎಂದು ನೆನಪಿಸಿಕೊಂಡರು.

ಅಂಗನವಾಡಿ ಕಾರ್ಯಕರ್ತೆಯರ ಬಂಧು, ಅಂಗನವಾಡಿ ಫೆಡರೇಶನ್ ರಾಜ್ಯಾಧ್ಯಕ್ಷರಾಗಿದ್ದ ಎಚ್.ಕೆ.ರಾಮಚಂದ್ರಪ್ಪ ನಿಧನಕ್ಕೆ ಕಾಂಗ್ರೆಸ್ ಮುಖಂಡ ಡಿ.ಬಸವರಾಜ್, ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ಮಲ್ಲಮ್ಮ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version