ದಿನದ ಸುದ್ದಿ
ಚನ್ನಗಿರಿ | ಸರ್ಕಾರಿ ಹುದ್ದೆಗಳ ಅಕ್ರಮ ನೇಮಕಾತಿ ; ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
ಸುದ್ದಿದಿನ, ಚನ್ನಗಿರಿ : ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ (Government job ) ಅಕ್ರಮ ನೇಮಕಾತಿಯನ್ನು (Illegal recruitment )ವಿರೋಧಿಸಿ ( Protest) ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಹಶಿಲ್ದಾರರಿಗೆ (Tahsildar) ಸೋಮವಾರ ಮನವಿ ಸಲ್ಲಿಸಿದರು.
ಸರ್ಕಾರಿ ಹುದ್ದೆಗಳು 30-40 ಲಕ್ಷಕ್ಕೆ ಮಾರಾಟವಾಗುತ್ತಿವೆ. ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಅಕ್ರಮಗಳ ಬಗ್ಗೆ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಮನನೊಂದು ಹೋರಾಟಕ್ಕಿಳಿದಿದ್ದಾರೆ.
ಬಡ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಶಿಕ್ಷಣ ಪಡೆದು ನಿರುದ್ಯೋಗಿಗಳಾಗಿ ಆತಂಕದಲ್ಲಿ ಜೀವನವನ್ನು ಮಾಡಬೇಕಾ ಅಥವಾ ನಾವು 30 ಲಕ್ಷವನ್ನ ಸಂಪಾದಿಸುವುದಕ್ಕೆ ಯಾವ ಕೆಲಸವನ್ನು ಮಾಡಬೇಕು ಎಂಬ ದ್ವಂದ್ವಕ್ಕೆ ವಿದ್ಯಾರ್ಥಿಗಳು ಸಿಲುಕಿದ್ದಾರೆ.
ಪಿ ಎಸ್ ಐ, ಸಹಾಯಕ ಪ್ರಾಧ್ಯಾಪಕ ಹಾಗೂ ಇತರೆ ಸರ್ಕಾರಿ ಹುದ್ದೆಗಳಲ್ಲಿ ರಾಜಕಾರಣಿಗಳ ಕೈವಾಡ ಕುರಿತು ವಿದ್ಯಾರ್ಥಿಗಳು ಬೇಸರ ವ್ಯಕ್ಯಪಡಿಸಿದ್ದು, ಭಾರತದ ಭವಿಷ್ಯದ ಯುವಕರಿಗೆ ಭ್ರಷ್ಟಾಚಾರ ರಹಿತ ಸರ್ಕಾರಿ ಹುದ್ದೆಗಳನ್ನು ಪ್ರತಿಭಾನ್ವಿತರಿಗೆ ಸಿಗುವಂತೆ ಮಾಡಿ ಬಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243