ಬಹಿರಂಗ
ಸೇನಾಪಡೆಯನ್ನು ರಾಜಕೀಯಕರಣಗೊಳಿಸಬೇಡಿ..!
- ಜನವರಿ 26 ರಂದು ಗಣತಂತ್ರ ಸಂವಿಧಾನವನ್ನು ಅಂಗೀಕರಿಸಿ 70 ವರ್ಷಗಳಾಗುತ್ತಿವೆ. ಭಾರತ ಸಂವಿಧಾನಿಕ ಯೋಜನೆಯ ಪ್ರಕಾರ ಒಂದು ಸಂಸದೀಯ ಪ್ರಜಾಪ್ರಭುತ್ವವಾಗಿದೆ ಮತ್ತು ಸಶಸ್ತ್ರ ಪಡೆಗಳು ನಾಗರಿಕ ಕಾರ್ಯಾಂಗದ ಅಡಿಯಲ್ಲಿ ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ರಕ್ಷಿಸಲು ಬದ್ಧವಾಗಿರುವ ಒಂದು ವೃತ್ತಿಪರ ಪಡೆಯಾಗಿ ಸೇವೆ ಸಲ್ಲಿಸಬೇಕು. ಆದರೆ ಇದಕ್ಕೆ ಚ್ಯುತಿ ತರುವಂತಹ ಹೇಳಿಕೆಗಳು ಕೆಲವು ಸೇನಾಮುಖಂಡರುಗಳಿಂದ ಬರುತ್ತಿದೆ. ಇದಕ್ಕೆ ಮೋದಿ ಸರಕಾರದ ಪ್ರಜ್ಞಾಪೂರ್ವಕ ಪ್ರೋತ್ಸಾಹ ಇರುವಂತೆ ಕಾಣುತ್ತದೆ. ಇದು ಗಣತಂತ್ರಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯದ ಲಕ್ಷಣ. ಸಶಸ್ತ್ರ ಪಡೆಗಳ ಮುಖಂಡರಿಂದ ರಾಜಕೀಯ ವಿಷಯಗಳಲ್ಲಿ ಅಧಿಕಾರಯುಕ್ತ ಹೇಳಿಕೆಗಳು ತಕ್ಷಣವೇ ನಿಲ್ಲಬೇಕು.
-ಪ್ರಕಾಶ ಕಾರಟ್
ಸಶಸ್ತ್ರ ಪಡೆಗಳ ಕೆಲವು ಮುಖಂಡರ ಸಾರ್ವಜನಿಕ ಟಿಪ್ಪಣಿಗಳು ಸಶಸ್ತ್ರ ಪಡೆಗಳ ಕಟ್ಟುನಿಟ್ಟಾದ ವೃತ್ತಿಪರ ಮತ್ತು ರಾಜಕೀಯೇತರ ಪಾತ್ರಕ್ಕೆ ಚ್ಯುತಿ ತರುವಂತವುಗಳು. ಹೀಗಾಗುತ್ತಿರಲು ಕಾರಣ ಮೋದಿ ಸರಕಾರ ರಕ್ಷಣಾ ಮಂತ್ರಾಲಯದ ಉನ್ನತ ಪೀಠಸ್ಥರು ತನ್ನ ಹಿಂದುತ್ವ ರಾಷ್ಟ್ರವಾದಿ ಕಣ್ಣೋಟಕ್ಕೆ ಅನುಗುಣವಾದ ಅಭಿಪ್ರಾಯಗಳನ್ನು ತೇಲಿ ಬಿಡಲು ಪ್ರಜ್ಞಾಪೂರ್ವಕವಾಗಿ ಪ್ರೋತ್ಸಾಹಿಸುತ್ತಿರುವಂತೆ ಕಾಣುತ್ತದೆ.
ಜನರಲ್ ಬಿಪಿನ್ ರಾವತ್ , ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಹುದ್ದೆಯನ್ನು ವಹಿಸಿಕೊಳ್ಳುವ ಕೆಲವು ದಿನಗಳ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳ ಬಗ್ಗೆ ಉದ್ರೇಕಕಾರಿ ಹೇಳಿಕೆಯೊಂದನ್ನು ಕೊಟ್ಟರು. ಮುಖಂಡರು ಎಂದರೆ ಜನಗಳನ್ನು ಸೂಕ್ತವಲ್ಲದ ದಿಕ್ಕುಗಳಲ್ಲಿ ನೇತೃತ್ವ ನಿಡುವವರು ಅಲ್ಲ. ಬಹಳಷ್ಟು ವಿಶ್ವವಿದ್ಯಾಲಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ನೋಡುತ್ತಿದ್ದೇವೆ-ನಗರಗಳಲ್ಲಿ, ಪಟ್ಟಣಗಳಲ್ಲಿ ಅವರು ಜನಗುಂಪುಗಳ ದಾಂಧಲೆ , ಹಿಂಸಾಚಾರಗಳಿಗೆ ನೇತೃತ್ವ ನೀಡುತ್ತಿದ್ದಾರೆ- ಇದು ನಾಯಕತ್ವವಲ್ಲ ಎಂದು ಅವರು ಹೇಳಿದರು.
ಇಂತಹ ಒಂದು ಆಂತರಿಕ ರಾಜಕೀಯ ಪ್ರಶ್ನೆಯ ಮೇಲಿನ ಹೇಳಿಕೆ, ಈ ಮೊದಲು ವಿವಾದಾಸ್ಪದ ಹೇಳಿಕೆಗಳನ್ನು ಕೊಟ್ಟಿದ್ದ ಸೇನಾಮುಖ್ಯಸ್ಥರಿಂದ ಬಂತು. ಜನರಲ್ ರಾವತ್ರಿಗೆ ಅವರಿಗಿಂತ ಹೆಚ್ಚಿನ ಸೇವಾಹಿರಿತನ ಇದ್ದ ಇಬ್ಬರು ಸೇನಾಧಿಕಾರಿಗಳನ್ನು ಬದಿಗೊತ್ತಿ ಸೇನಾಮುಖ್ಯಸ್ಥರನ್ನಾಗಿ ಬಡ್ತಿ ನೀಡಲಾಗಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಸರಕಾರ ಎಂದೂ ಆತನ ರಾಜಕೀಯ ಟಿಪ್ಪಣಿಗಳನ್ನು ಟೀಕಿಸುವ, ಅಥವ ಆತನ ಮೇಲೆ ಕಡಿವಾಣ ಹಾಕುವ ಯಾವುದೇ ಪ್ರಯತ್ನವನ್ನು ಮಾಡಲಿಲ್ಲ.
ಜನರಲ್ ರಾವತ್ ಪ್ರಸಂಗ ಒಂದು ಅಪವಾದವಷ್ಟೇ ಆಗಿಲ್ಲ ಎಂಬುದು ಆತನ ಹೇಳಿಕೆಯ ಕೆಲವು ದಿನಗಳ ಮೊದಲು ಇನ್ನೊಬ್ಬ ಸೇನಾಧಿಕಾರಿ ಸಿಎಎ ವಿವಾದದಲ್ಲಿ ಕೈಯಾಡಿಸಿದ ರೀತಿಯಲ್ಲಿ ಸ್ಪಷ್ಟವಾಗಿತ್ತು. ಪೂರ್ವ ಕಮಾಂಡಿನ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಪ್ರಸಕ್ತ ಸರಕಾರ ದೀರ್ಘ ಕಾಲದಿಂದ ಮಾಡದೇ ಉಳಿದಿರುವ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಉತ್ಸುಕವಾಗಿದೆ ಎಂದು ಡಿಸೆಂಬರ್ 14, 2019ರಂದು ಕೊಲ್ಕತಾದಲ್ಲಿ ಹೇಳಿದರು. ಸಿಎಎ ಯನ್ನು ಒಂದೆರಡು ಈಶಾನ್ಯ ರಾಜ್ಯಗಳ ಸಮ್ಮತಿ ಇಲ್ಲದಿದ್ದರೂ ಪಾಸು ಮಾಡಿದ್ದಾರೆ ಎಂದೂ ಅವರು ಸೇರಿಸಿದರು.
ಸಿಎಎ ಸಂವಿಧಾನದ ಅಡಿಯಲ್ಲಿ ಪೌರತ್ವದ ಮೂಲ ಪರಿಕಲ್ಪನೆಯ ಮೇಲೆಯೇ ಮಾಡಿರುವ ಒಂದು ಪ್ರಹಾರ ಎಂದು ಕಾಣುತ್ತಿರುವಾಗ, ಒಬ್ಬ ಉನ್ನತ ಸೇನಾಧಿಕಾರಿ ಅದನ್ನು ಸಮರ್ಥಿಸಿಕೊಳ್ಳಲು ಬರುವುದು ದುರದೃಷ್ಟಕರ ಸಂಗತಿ.
ಹೊಸದಾಗಿ ನೇಮಿಸಲ್ಪಟ್ಟಿರುವ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಒಂದು ಮಹತ್ವದ ಹೇಳಿಕೆ ನೀಡಿದರು; ಸೇನಾದಿನದ ಮುನ್ನಾದಿನ ಜನವರಿ 11, 2020ರಂದು ತನ್ನ ಪತ್ರಿಕಾಗೋಷ್ಠಿಯಲ್ಲಿ ಸಶಸ್ತ್ರ ಪಡೆಗಳ ವಿಧೇಯತೆ ಯಾವುದರ ಮೇಲೆ ಪ್ರತಿಜ್ಞೆ ಕೈಗೊಳ್ಳಲಾಗಿದೆಯೋ ಅದಕ್ಕೇ ಮಾತ್ರ ಇರುತ್ತದೆ ಎಂದರು. ಇದರರ್ಥ ಸಂವಿಧಾನದ ಪೀಠಿಕೆಯಲ್ಲಿ ಪ್ರತಿಷ್ಠಾಪಿಸಿರುವ ಮೂಲ ಮೌಲ್ಯಗಳಿಗೆ, ಅರ್ಥಾತ್ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವಕ್ಕೆ ಎಂದು.
ಈ ಮಾದರಿ ಸಂದೇಶವನ್ನು ನೀಡಿದ ಕೆಲವು ದಿನಗಳ ನಂತರ, ಸೇನಾ ದಿನದಂದು ಭಾಷಣ ಮಾತಾಡುತ್ತ ತನಗೆ ವಿಧಿಸಿದ ದಾರಿಯಿಂದ ಸರಿದು ಕಲಮು 370ರ ರದ್ಧತಿ ಒಂದು ಚಾರಿತ್ರಿಕ ಹೆಜ್ಜೆ, ಇದು ಜಮ್ಮು ಮತ್ತು ಕಾಶ್ಮೀರವನ್ನು ಮುಖ್ಯಧಾರೆಯೊಂದಿಗೆ ಸಮಗ್ರಗೊಳಿಸಲು ನೆರವಾಗುತ್ತದೆ ಎಂದರು. ಇಲ್ಲಿಯೂ ಮತ್ತೆ ಸೇನಾಧಿಕಾರಿ ರಾಜಕೀಯ ಜಲಧಾರೆಯಲ್ಲಿ ಕಾಲಿಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಒಳಗೆ ಮತ್ತು ಹೊರಗೆ ಜನರು ಕಲಮು 370ರ ರದ್ಧತಿಯನ್ನು ಸಂವಿಧಾನದ ಜಾತ್ಯತೀತ ಮತ್ತು ಒಕ್ಕೂಟ ಸ್ವರೂಪದ ಮೇಲೊಂದು ಪ್ರಹಾರ ಎಂದು ಕಾಣುತ್ತಿದ್ದಾರೆ. ವಿಷಯ ಈಗ ಸುಪ್ರಿಂ ಕೋರ್ಟಿನ ಮುಂದಿದೆ, ಅದು ಇದರ ಸಂವಿಧಾನ ಬದ್ಧತೆ ಮತ್ತು ಕಾನೂನುಬದ್ಧತೆಯನ್ನು ಘೋಷಿಸಬೇಕಾಗಿದೆ. ಅಧಿಕಾರಸ್ಥ ಮುಖಂಡರ ಮೇಲೆ ಎಂತಹ ಒತ್ತಡವಿದೆಯೆಂದರೆ, ಅವರು ಇಂತಹ ಸಾರ್ವಜನಿಕ ಅಧಿಕಾರಯುಕ್ತ ಹೇಳಿಕೆಗಳನ್ನು ಕೊಡಬೇಕಾಗುತ್ತದೆ ಎಂದು ಭಾವಿಸುತ್ತಿರುವುದು ಸ್ವಯಂವೇದ್ಯ.
ಜನವರಿ 26 ರಂದು ಗಣತಂತ್ರ ಸಂವಿಧಾನವನ್ನು ಅಂಗೀಕರಿಸಿ 70 ವರ್ಷಗಳಾಗುತ್ತಿವೆ. ಭಾರತ ಸಂವಿಧಾನಿಕ ಯೋಜನೆಯ ಪ್ರಕಾರ ಒಂದು ಸಂಸದೀಯ ಪ್ರಜಾಪ್ರಭುತ್ವವಾಗಿದೆ ಮತ್ತು ಸಶಸ್ತ್ರ ಪಡೆಗಳು ನಾಗರಿಕ ಕಾರ್ಯಾಂಗದ ಅಡಿಯಲ್ಲಿ ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ರಕ್ಷಿಸಲು ಬದ್ಧವಾಗಿರುವ ಒಂದು ವೃತ್ತಿಪರ ಪಡೆಯಾಗಿ ಸೇವೆ ಸಲ್ಲಿಸಬೇಕು.
ಸಶಸ್ತ್ರ ಪಡೆಗಳಿಗೆ ವಿಧಿಸಿರುವ ಈ ಸಂವಿಧಾನಿಕ ಪಾತ್ರವನ್ನು ಶಿಥಿಲಗೊಳಿಸುವುದು ಮತ್ತು ರಾಜಕೀಯಕರಣಗೊಳಿಸುವುದು ಗಣತಂತ್ರಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯದ ಲಕ್ಷಣ. ಸಶಸ್ತ್ರ ಪಡೆಗಳ ಪಾತ್ರ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಪ್ರಜಾಸತ್ತಾತ್ಮಕ ತಪಾಸಣೆಗೆ ಒಳಗಾಗಬೇಕು. ಸಶಸ್ತ್ರ ಪಡೆಗಳ ಮುಖಂಡರಿಂದ ರಾಜಕೀಯ ವಿಷಯಗಳಲ್ಲಿ ಅಧಿಕಾರಯುಕ್ತ ಹೇಳಿಕೆಗಳು ತಕ್ಷಣವೇ ನಿಲ್ಲಬೇಕು.
ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ7 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ7 days agoಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ
-
ದಿನದ ಸುದ್ದಿ6 days agoಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
-
ದಿನದ ಸುದ್ದಿ6 days agoಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
-
ದಿನದ ಸುದ್ದಿ6 days agoಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
-
ಸಿನಿ ಸುದ್ದಿ6 days agoಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
-
ನಿತ್ಯ ಭವಿಷ್ಯ6 days agoಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?


