ದಿನದ ಸುದ್ದಿ

ದಾವಣಗೆರೆ | ನಾಳೆ ‘ಸಂವಿಧಾನ ಓದು’ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ, ಸಹಯಾನ ಮತ್ತು ಸಮುದಾಯ ಕರ್ನಾಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜು. 19 ರ ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ‘ಸಂವಿಧಾನ ಓದು ಕಾರ್ಯಗಾರ’ ವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ನೆರವೇರಸಲಿದ್ದಾರೆ. ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಕುಲಕರ್ಣಿ ಅಂಬಾದಾಸ್ ಜಿ. ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಂವಿಧಾನ ಓದು ಅಭಿಯಾನ

ಶ್ರೀ ಬಕ್ಕೇಶ್ವರ ಪ್ರೌಢಶಾಲೆ, ಎಸ್.ಜೆ.ಎಂ ಪಬ್ಲಿಕ್ ಸ್ಕೂಲ್ ದಾವಣಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಹಯಾನ ಮತ್ತು ಸಮುದಾಯ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ಜು.19 ರ ಮಧ್ಯಾಹ್ನ 3.15 ಕ್ಕೆ ಶ್ರೀ ಬಕ್ಕೇಶ್ವರ ಪ್ರೌಢಶಾಲೆ, ಎಂ.ಸಿ.ಸಿ ಬಿ ಬ್ಲಾಕ್ ಇಲ್ಲಿ ‘ಸಂವಿಧಾನ ಓದು ಅಭಿಯಾನ ಹಾಗೂ ಪ್ರತಿಭಾ ವಿಕಾಸ ಸಂಘದ’ ಉದ್ಘಾಟನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಿರಕ್ತ ಮಠದ ಬಸವಪ್ರಭು ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಕೆ.ಈಶಾನಾಯ್ಕ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡೀಗೇರ್, ಸಂವಿಧಾನ ಓದು ಅಭಿಯಾನ ಆಚರಣಾ ಸಮಿತಿ ಸಂಚಾಲಕ ಡಾ.ವಿಠ್ಠಲ ಭಂಡಾರಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣಕುಮಾರ್ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version