ಬಹಿರಂಗ
ಸಂವಿಧಾನ ಸೃಷ್ಟಿಯ ಕತೆ
- ರಘೋತ್ತಮ ಹೊ.ಬ
Constituent Assembly ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ; 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು. ಆ ಸಮಿತಿಯ ಹೆಸರು ‘ಕ್ಯಾಬಿನೆಟ್ ಮಿಷನ್ ಆಯೋಗ’. ಸದರಿ ಆಯೋಗವು 1946 ಮಾರ್ಚ್ 16 ರಂದು ‘ಭವಿಷ್ಯದ ಭಾರತದ ಸರ್ಕಾರಕ್ಕಾಗಿ ಒಂದು ಸಂವಿಧಾನ ರಚಿಸಲು ಸಂವಿಧಾನ ಸಭೆಯೊಂದನ್ನು ರಚಿಸುವ ಅಗತ್ಯವಿದೆ’ ಎಂದು ಘೋಷಿಸಿತು. ಅಂತೆಯೇ ಆ ಸಭೆ ಪ್ರಜಾಸತ್ತಾತ್ಮಕವಾಗಿರಬೇಕೆಂಬ ನಿಟ್ಟಿನಲ್ಲಿ ವಿವಿಧ ಪ್ರಾಂತ್ಯಗಳ ಅಸೆಂಬ್ಲಿಗಳ ಮೂಲಕ ಸದಸ್ಯರನ್ನು ಆರಿಸಲಾಯಿತು. ಅಂದಹಾಗೆ ಆ ಸಭೆಗೆ ಭಾರತದ ಪಶ್ಚಿಮದ ತುದಿ ಬಾಂಬೆ ಪ್ರಾಂತ್ಯದಿಂದ ಸ್ಪರ್ಧಿಸಿದ್ದ ಅಂಬೇಡ್ಕರರು ಕಾಂಗ್ರೆಸ್ಸಿನ ಅವಿಚ್ಛಿನ್ನ ವಿರೋಧದಿಂದ ಸೋಲಬೇಕಾಯಿತು. ಆದರೂ, ಎದೆಗುಂದದೆ ಪೂರ್ವದ ದೂರದ ಬಂಗಾಳದಿಂದ ಅಲ್ಲಿಯ ಪರಿಶಿಷ್ಟ ಜಾತಿಯ ನಾಯಕ ಜೋಗೇಂದ್ರನಾಥ ಮಂಡಲ್‍ರ ಬೆಂಬಲದ ಮೂಲಕ ಅವರು ಸಂವಿಧಾನ ಸಭೆಗೆ ಆರಿಸಿಬರುವಲ್ಲಿ ಸಫಲರಾರದು. ಒಟ್ಟಾರೆ 296 ಸದಸ್ಯ ಬಲದ ಮೂಲಕ ಸಂವಿಧಾನ ಸಭೆ ತನ್ನ ಪ್ರಥಮ ಸಭೆಯನ್ನು 1946 ಡಿಸೆಂಬರ್ 6ರ ಬೆಳಿಗ್ಗೆ 11ಗಂಟೆಗೆ ನವದೆಹಲಿಯ ಕಾನ್‍ಸ್ಟಿಟ್ಯೂಶನ್ ಹಾಲ್‍ನಲ್ಲಿ ಆರಂಭಿಸಿತು.
ಸಭೆ ಆರಂಭವಾದಾಗ ಒಟ್ಟು 296 ಸದಸ್ಯರಲ್ಲಿ ಭಾಗವಹಿಸಿದ್ದು 207 ಮಂದಿಯಷ್ಟೆ. ಇನ್ನುಳಿದ ಮಂದಿ ಅಂದಿನ ಮುಸ್ಲಿಂಲೀಗ್‍ಗೆ ಸೇರಿದವರಾಗಿದ್ದು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿ ಅವರೆಲ್ಲ ಗೈರುಹಾಜರಾಗಿದ್ದರು. ಹೀಗಿದ್ದರೂ ಪಂಡಿತ್ ಜವಹರಲಾಲ್ ನೆಹರೂ “ಭಾರತ ಸಾರ್ವಭೌಮ ಸ್ವತಂತ್ರ ಗಣರಾಜ್ಯವಾಗಲು ತನ್ನ ಭವಿಷ್ಯದ ಸರ್ಕಾರಕ್ಕಾಗಿ ಅದು ತನ್ನದೇ ಆದಂತಹ ಸಂವಿಧಾನವೊಂದನ್ನು ಹೊಂದುವುದನ್ನು ಬಯಸುತ್ತದೆ” ಎಂದು ಗೊತ್ತುವಳಿಯೊಂದನ್ನು ಮಂಡಿಸಿದರು. ಆದರೆ ಸದಸ್ಯರಾದ ಎಂ.ಆರ್.ಜಯಕರ್ “ಸಭೆಗೆ ಮುಸ್ಲಿಂ ಲೀಗ್ ಮತ್ತು ಇತರೆ ರಾಜ ಸಂಸ್ಥಾನಗಳ ಸದಸ್ಯರು ಗೈರುಹಾಜರಾಗಿರುವುದರಿಂದ ಅವರೆಲ್ಲ ಭಾಗವಹಿಸುವಂತಾಗಲು ಈ ಸಭೆಯನ್ನು ಮುಂದೂಡಬೇಕು” ಎಂದು ತಮ್ಮ ಆಕ್ಷೇಪವ್ಯಕ್ತಪಡಿಸಿದರು ಮತ್ತು ನೆಹರೂರವರು ಮಂಡಿಸಿದ್ದ ಆ ಗೊತ್ತುವಳಿಯ ಚರ್ಚೆಯನ್ನು ಮುಂದೂಡಲು ಸಭೆಯ ಕಲಾಪಕ್ಕೆ ತಿದ್ದುಪಡಿಯೊಂದನ್ನು ಮಂಡಿಸಿದರು. ಅಂದಹಾಗೆ ಗೌರವಾನ್ವಿತ ಸದಸ್ಯರ ಇಂತಹ ಆಕ್ಷೇಪ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಆಶ್ಚರ್ಯವೆಂದರೆ ಈ ಸಮಯದಲ್ಲಿ ಇಂತಹ ಅನಿರೀಕ್ಷಿತ ಕೋಲಾಹಲದ ನಡುವೆ ಮುಂದುವರಿದ ಸಭೆಯಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದ್‍ರವರು ಡಿಸೆಂಬರ್ 17ರಂದು ಡಾ.ಅಂಬೇಡ್ಕರರನ್ನು ಸಭೆಯನ್ನುದೇಶಿಸಿ ಮಾತನಾಡಲು ಆಹ್ವಾನಿಸಿದರು.
ಸತ್ಯ ಹೇಳಬೇಕೆಂದರೆ ಯಾವ ಸಂವಿಧಾನ ಸಭೆ ನಿಂತುಹೋಗಬೇಕಿತ್ತೋ, ಅನಿರ್ದಿಷ್ಟ ಅವಧಿಗೆ ಮುಂದೂಡಬೇಕಾಗಿತ್ತೋ ಅದು ಮುಂದುವರಿಯಿತು! ಹೋಲಿಕೆ ಮಾಡುವುದಾದರೆ ಭಾರತದ ಸಂವಿಧಾನದ ಚಕ್ರ ಅಂಬೇಡ್ಕರರ ಮೂಲಕ ಉರುಳಲಾರಂಭಿಸಿತು! ಯಾಕೆಂದರೆ ತಮ್ಮ ಭಾಷಣದಲ್ಲಿ ಅಂಬೇಡ್ಕರರು ನೆಹರೂರವರು ಮಂಡಿಸಿದ್ದ ಗೊತ್ತುವಳಿಯ 8 ಅಂಶಗಳನ್ನು ಪದಪದವಾಗಿ, ಪದರು ಪದರಾಗಿ ಬಿಡಿಸಿ ಸಂವಿಧಾನ ಎತ್ತ ಸಾಗಬೇಕು, ಹೇಗಿರಬೇಕು ಎಂದು ವಿವಿಧ ರಾಷ್ಟ್ರಗಳ ಸಂವಿಧಾನಗಳನ್ನು ಉಲ್ಲೇಖಿಸುತ್ತಾ ಮಾರ್ಗ ತೋರಿಸಲಾಂಭಿಸಿ ಸಭೆಯನ್ನು ಗಂಭೀರತೆಯೆಡೆಗೆ ತಂದರು. ಮುಸ್ಲಿಂಲೀಗ್ ಸದಸ್ಯರು ಗೈರಾಗಿದ್ದಕ್ಕೆ ಮುಂದಿನ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಏಕತೆಯ ಆಶಾಭಾವ ವ್ಯಕ್ತಪಡಿಸುತ್ತಾ ಅಂಬೇಡ್ಕರರು “ವಿವಿಧ ಜಾತಿ-ಜನಾಂಗಗಳಾಗಿದ್ದಾಗ್ಯೂ ನಾವೆಲ್ಲಾ ಸದಾ ಒಂದಾಗಿರುವುದರಲ್ಲಿ ನನಗೆ ಯಾವ ಸಂಶಯವೂ ಇಲ್ಲ” ಎಂದರು.
ಹೀಗೆ ತನ್ನ ಆರಂಭಿಕ ದಿನಗಳನ್ನು ಪ್ರಾರಂಭಿಸಿದ ಸಂವಿಧಾನಸಭೆ ಸರ್ದಾರ್ ಪಟೇಲರ ನೇತೃತ್ವದಲ್ಲಿ 1947 ಜನವರಿ 24 ರಂದು ಅಂಬೇಡ್ಕರರನ್ನು ಒಳಗೊಂಡಂತೆ 50ಜನ ಸದಸ್ಯರ ಸಲಹಾ ಸಮಿತಿಯೊಂದನ್ನು ನೇಮಿಸಿತು. ಆ ಸಮಿತಿ ಇತರೆ 4 ಪ್ರಮುಖ ಉಪಸಮಿತಿಗಳನ್ನು ನಿಯುಕ್ತಿಗೊಳಿಸಿತು. ಅವುಗಳಲ್ಲಿ ಬಹುಮುಖ್ಯದ್ದೆಂದರೆ ಮೂಲಭೂತ ಹಕ್ಕುಗಳ ಉಪಸಮಿತಿ ಮತ್ತು ಅಲ್ಪಸಂಖ್ಯಾತರ ಉಪಸಮಿತಿ. ಅಂಬೇಡ್ಕರರು ಈ ಎರಡೂ ಪ್ರಮುಖ ಸಮಿತಿಗಳ ಸದಸ್ಯರಾದರು. ಮುಂದುವರಿದು ಸಭೆ ಇನ್ನೂ 3 ಕಾರ್ಯಾಚರಣಾ ಸಮಿತಿಗಳನ್ನು ರಚಿಸಿತು. ಅವುಗಳೆಂದರೆ
- ಕೇಂದ್ರ ಅಧಿಕಾರ ಸಮಿತಿ
- ಕೇಂದ್ರ ಸಂವಿಧಾನ ಸಮಿತಿ
- ಪ್ರಾಂತ್ಯಗಳ ಸಂವಿಧಾನ ಸಮಿತಿ
ಇಲ್ಲಿಯೂ ಅಷ್ಟೆ ಅಂಬೇಡ್ಕರ್ ಕೇಂದ್ರ ಸಂವಿಧಾನ ಸಮಿತಿಯ ಸದಸ್ಯರಾದರು. ಹೀಗೆ ಅವರು ಪ್ರಮುಖ ಸಮಿತಿಗಳ ಸದಸ್ಯರಾಗುವುದಕ್ಕೆ ಕಾರಣವೂ ಇತ್ತು. ಯಾಕೆಂದರೆ ಮುಂದೆ ಸಂವಿಧಾನ ಅರ್ಪಿಸುವ ಸಮಯದಲ್ಲಿ ಅವರೇ ಹೇಳಿಕೊಂಡಿರುವಂತೆ “ಪರಿಶಿಷ್ಟ ಜಾತಿಗಳ ಹಿತ ಕಾಯುವ ಮಹದಾಸೆ ಹೊತ್ತಷ್ಟೆ ತಾನು ಸಂವಿಧಾನ ಸಭೆಗೆ ಬಂದೆ…”. ಹೌದು, ಡಾ.ಅಂಬೇಡ್ಕರರು ಪರಿಶಿಷ್ಟರ ಹಿತ ಕಾಯುವ ನೆಪ ಮಾತ್ರಕ್ಕೆ ಬಂದರೂ ತಮಗರಿವಿಲ್ಲದಂತೆ ಅವರು ಇಡೀ ದೇಶದ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು! ಯಾವ ಪರಿ ಎಂದರೆ ಇಡೀ ಸಂವಿಧಾನ ರಚನಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗುವಮಟ್ಟಿಗೆ. ಅದೂ ಅದೆಂತಹ ಸಕ್ರಿಯತೆಯೆಂದರೆ ಶತೃಗಳೂ ಮೆಚ್ಚಿ ಅಹುದಹುದು ಎನ್ನುವ ಮಟ್ಟಿಗೆ! ಏಕೆಂದರೆ ಸಂವಿಧಾನ ರಚನೆಯ ಇಂತಹ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡು ಸ್ವಾತಂತ್ರ್ಯದ ಸಮಯದಲ್ಲಿ ದೇಶ ವಿಭಜನೆಯ ಸಂದರ್ಭ ಬಂದಾಗ ಅಂಬೇಡ್ಕರರು ಗೆದ್ದಿದ್ದ ಬಂಗಾಳದ ಕ್ಷೇತ್ರ ಕಾಂಗ್ರೆಸ್ಸಿಗರ ತಂತ್ರದಿಂದಾಗಿ ಪೂರ್ವಪಾಕಿಸ್ತಾನಕ್ಕೆ ಸೇರಲ್ಪಟ್ಟು ಅವರ ಸದಸ್ಯತ್ವ ರದ್ದಾಯಿತು. ಸೋಜಿಗವೆಂದರೆ ಈ ಸಮಯದಲ್ಲಿ ಅಂಬೇಡ್ಕರರ ಸಂವಿಧಾನ ರಚನಾ ಚಾಕಚಕ್ಯತೆ ಕೆಲಸ ಮಾಡಿತು! ಹೇಗೆಂದರೆ ಸ್ವತಃ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದರು 1947 ಜೂನ್ 30 ರಂದು ಬಾಂಬೆ ಪ್ರಾಂತ್ಯದ ಅಂದಿನ ಪ್ರಧಾನಿ ಡಾ.ಬಿ.ಜಿ.ಖೇರ್‍ರವರಿಗೆ ಪತ್ರ ಬರೆದು “ಬೇರೆ ವಿಷಯಗಳೇನೆ ಇರಲಿ, ಸಂವಿಧಾನ ಸಭೆ ಮತ್ತದರ ವಿವಿಧ ಉಪಸಮಿತಿಗಳಲ್ಲಿ ಅಂಬೇಡ್ಕರರ ಕಾರ್ಯ ಎಂತಹ ಮಟ್ಟದ್ದೆಂದರೆ, ಖಂಡಿತ ಅವರ ಸೇವೆಯನ್ನು ನಾವು ಕಳೆದುಕೊಳ್ಳಬಾರದು. ಅದಕ್ಕಾಗಿ ಜುಲೈ 14ರ ಮುಂದಿನ ಸಭೆಯೊಳಗೆ he should be relected”ಎಂದರು! (Dr.Ambedkar: The Principal Architect of The Constitution of India, Published by Government of India. Pp.26)
ಹೌದು, ಬಾಬಾಸಾಹೇಬರು ತಕ್ಷಣ ಮರುಆಯ್ಕೆಯಾದರು. ಹಾಗೇ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ಕೂಡ ಸಿಕ್ಕಿತು ಮತ್ತು ಅವರು ಸ್ವತಂತ್ರ ಭಾರತದಲ್ಲಿ ನೆಹರೂ ಸಂಪುಟದಲ್ಲಿ ಕಾನೂನು ಸಚಿವರಾಗಿ ಕೂಡ ನೇಮಕಗೊಂಡರು. ಆಶ್ಚರ್ಯವೆಂದರೆ ಆಗಸ್ಟ್ 29ರಂದು ಮರುಸಮಾವೇಶಗೊಂಡ ಸಂವಿಧಾನಸಭೆ ಡಾ.ಅಂಬೇಡ್ಕರರನ್ನು “ಸಂವಿಧಾನ ಪ್ರತಿ ರಚಿಸುವ ಸಮಿತಿ (drafting committee)”ಯ ಅಧ್ಯಕ್ಷರನ್ನಾಗಿಯೂ ಆರಿಸಿತು! ಜೊತೆಗೆ ಆರು ಮಂದಿ ಸದಸ್ಯರ ತಂಡ. ಒಟ್ಟಾರೆ ಸಂವಿಧಾನ ಸಭೆಯ ಇಂತಹ ನಡಾವಳಿಗಳ ಮೂಲಕ ಭಾರತದ ಭವಿಷ್ಯ ಬರೆವ ಕೆಲಸ ಬಾಬಾಸಾಹೇಬರ ಮುಡಿಗೇರಿತು.
ಸಂವಿಧಾನ ರಚನೆಯ ಜವಾಬ್ದಾರಿಯೇನೋ ಅಂಬೇಡ್ಕರರ ಮುಡಿಗೇರಿತು. ಆದರೆ ಆ ಜವಾಬ್ದಾರಿಯನ್ನು ಅವರು ನಿರ್ವಹಿಸಿದ ಪರಿ? ಖಂಡಿತ, ಅಂಬೇಡ್ಕರರು ಮತ್ತವರ ಸಂವಿಧಾನ ಕಾರ್ಯಕ್ಷಮತೆಯ ಬಗ್ಗೆ ಸ್ವತಃ ಅವರು ಮತ್ತು ಇತರರು ಸಂವಿಧಾನ ಸಭೆಗಳಲ್ಲಿ ಮಾಡಿದ ಭಾಷಣಗಳಲ್ಲಿ ನಮಗೆ ಉಲ್ಲೇಖ ಸಿಗುತ್ತದೆ. 1948 ನವೆಂಬರ್ 25 ರಂದು ಡಾ.ಅಂಬೇಡ್ಕರರು ಸಂವಿಧಾನ ಸಮರ್ಪಿಸುತ್ತಾ ಮಾಡಿದ ಅಂತಿಮ ಭಾಷಣವನ್ನು ಉಲ್ಲೇಖಿಸುವುದಾದರೆ “ಮಾನ್ಯರೆ, ಸಂವಿಧಾನ ಸಭೆಯ ಕಾರ್ಯಕಲಾಪದ ಬಗ್ಗೆ ಹಿನ್ನೋಟ ನೋಡುವುದಾದರೆ 1946 ಡಿಸೆಂಬರ್ 9ರಿಂದ ಇಲ್ಲಿಯವರೆಗೆ ಸಂವಿಧಾನ ಸಭೆ ಸಮಾವೇಶಗೊಂಡು 2 ವರ್ಷ, 11 ತಿಂಗಳು, 17ದಿನಗಳು ಕಳೆಯುತ್ತಿವೆ. ಇದುವರೆಗೆ ಸಭೆ 11 ಸಮಾವೇಶಗಳನ್ನು ನಡೆಸಿದೆ. ಈ 11 ಸಮಾವೇಶಗಳು 165 ದಿನಗಳನ್ನು ಬಳಸಿಕೊಂಡಿದೆ. ಈ 165 ದಿನಗಳಲ್ಲಿ 114 ದಿನಗಳನ್ನು ಸಭೆ ಕರಡು ಸಂವಿಧಾನವನ್ನು ಪರಿಗಣಿಸಲು ತೆಗೆದುಕೊಂಡಿದೆ. ಇನ್ನು ಕರಡು ಸಮಿತಿ ಅಥವಾ ಸಂವಿಧಾನ ರಚನಾ ಸಮಿತಿಯ ಬಗ್ಗೆ ಹೇಳುವುದಾದರೆ 1947 ಆಗಸ್ಟ್ 29 ರಂದು ಅದನ್ನು ಆಯ್ಕೆಮಾಡಲಾಯಿತು ಮತ್ತು ಅದು ತನ್ನ ಪ್ರಥಮ ಸಭೆಯನ್ನು 30ನೇ ಆಗಸ್ಟ್ ರಂದು ನಡೆಸಿತು.
ಆಗಸ್ಟ್ 30 (1947) ರಿಂದ ಇಲ್ಲಿಯವರೆಗೆ ಸಮಿತಿ 141 ದಿನಗಳು ಸಭೆ ನಡೆಸಿ ಒಟ್ಟು ಈ ಅವಧಿಯನ್ನು ಕರಡು ಸಂವಿಧಾನವನ್ನು ತಯಾರಿಸಲು ಬಳಸಿಕೊಂಡಿದೆ” ಹೀಗೆ ವಿವರಿಸುತ್ತಾ ಹೋಗುತ್ತಾರೆ. ಅಂದಹಾಗೆ ಬಾಬಾಸಾಹೇಬರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಈ ಸಂವಿಧಾನ 1948 ಫೆಬ್ರವರಿ 26ರಂದು ಭಾರತ ಸರ್ಕಾರದ ಗೆಜೆಟ್‍ನಲ್ಲಿ ಪ್ರಕಟಗೊಂಡಿತು ಮತ್ತು ಹಾಗೆ ಗೆಜೆಟ್‍ನಲ್ಲಿ ಪ್ರಕಟಗೊಂಡ ಸಂವಿಧಾನದ ಆ ಪ್ರತಿ ತನ್ನ ಆರಂಭದ ಪುಟದಲ್ಲಿ ರಚನಾ ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರು ಸಭೆಯ ಅಧ್ಯಕ್ಷರಿಗೆ ಬರೆದ ಪತ್ರವೊಂದನ್ನೂ ಕೂಡ ಒಳಗೊಂಡಿತ್ತು. ಆ ಪತ್ರದ ಪ್ರಾರಂಭದ ಒಕ್ಕಣೆಯನ್ನು ಉಲ್ಲೇಖಿಸುವುದಾದರೆ “Dear Sir, On behalf of the Drafting Committee… I submit herewith the Draft of the new Constitution of India… I have been authorized to sign the Draft… Yours truly, B.R.AMBEDKAR.”
ಖಂಡಿತ, ಹೀಗೆ ಪುಟಪುಟವನ್ನೂ ಉಲ್ಲೇಖಿಸುವ ಅಗತ್ಯವಿಲ್ಲ. ಆದರೂ ಕೆಲವು ಕೋಮುವಾದಿ ಕಿತಾಪತಿಗಳಿಸ್ಕೋರ ಇದನ್ನು ಉಲ್ಲೆಖಿಸಬೇಕಿದೆ. ಅಲ್ಲದೆ ಮತ್ತೊಂದು ಅಂಶವನ್ನು ಇಲ್ಲಿ ದಾಖಲಿಸಬೇಕಿದೆ. ಅದೆಂದರೆ ಫೆಬ್ರವರಿ 26, 1948 ರಂದು ಗೆಜೆಟ್‍ನಲ್ಲಿ ಪ್ರಕಟಗೊಂಡ ಭಾರತ ಸಂವಿಧಾನದ ಕರಡು ಪ್ರತಿ ಅಂಬೇಡ್ಕರರು ವಯಕ್ತಿಕವಾಗಿ ಸಂವಿಧಾನ ಸಭೆಯ ಮೂಲಭೂತ ಹಕ್ಕುಗಳ ಸಮಿತಿಗೆ ತಮ್ಮ ಪಕ್ಷ ‘ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಪರವಾಗಿ ಮಾರ್ಚ್ 15, 1947 ರಂದು ಸಲ್ಲಿಸಿದ ಮನವಿಯ ಡಿಟೋ ಕಾಪಿಯಂತೇ ಇದೆ ಎಂಬುದು! ಈ ನಿಟ್ಟಿನಲ್ಲಿ ಆಸಕ್ತರು ಅಂಬೇಡ್ಕರರ ಆ ಮನವಿಯನ್ನು ಅವರ ಬರಹಗಳು ಭಾಷಣಗಳ ಸಂಪುಟ 1ರಲ್ಲಿ ‘ರಾಜ್ಯಗಳು ಮತ್ತು ಅಲ್ಪಸಂಖ್ಯಾತರು’ ಎಂಬ ಶೀರ್ಷಿಕೆಯಲ್ಲಿ ಪ್ರಕಟಗೊಂಡಿರುವುದನ್ನು ಗಮನಿಸಬಹುದು. ಈ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ಹೇಳಬಹುದು ಭಾರತದ ಸಂವಿಧಾನ ಅಂಬೇಡ್ಕರರ ಮೆದುಳಿನ ಕೂಸು ಎಂದು.
ಪ್ರಶ್ನೆಯೇನೆಂದರೆ ಗೆಜೆಟ್‍ನಲ್ಲಿ ಪ್ರಕಟಗೊಂಡ ಸಂವಿಧಾನ ಫೆಬ್ರವರಿ 26, 1948 ರಂದೇ ಜಾರಿಯಾಯಿತೇ? ಖಂಡಿತ ಇಲ್ಲ. ಯಾಕೆಂದರೆ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಈ ದಿಸೆಯಲ್ಲಿ ಪ್ರಜೆಗಳ ಪ್ರತಿನಿಧಿಗಳ ನಡುವೆ ಅದು ಅಂದರೆ ಸಂವಿಧಾನ ಚರ್ಚೆಗೆ ಬರುವುದು ಬೇಡವೆ? ಹೌದು, 15 ನವೆಂಬರ್ 1948ರಲ್ಲಿ ಅನುಚ್ಛೇದ 1ರಿಂದ ಪ್ರಾರಂಭಿಸಿ 17 ಅಕ್ಟೋಬರ್ 1949ರವರೆಗೆ ಕೊನೆಯ ಅನುಚ್ಛೇದ ಅಂದರೆ ಅನುಚ್ಛೇದ 395ರವರೆಗೆ ಸಂವಿಧಾನ ಸಭೆ ಇಡೀ ಕರಡು ಸಂವಿಧಾನದ ಬಗ್ಗೆ ಭರಪೂರ ಚರ್ಚೆ ನಡೆಸಿತು. ಆಶ್ಚರ್ಯ ಬೇಡ, ಈ ಇಷ್ಟೂ ದಿನಗಳಲ್ಲಿ ಪ್ರತಿಯೊಂದೂ ಅನುಚ್ಛೇದದ ಚರ್ಚೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಅಂಬೇಡ್ಕರರು ಗೌರವಾನ್ವಿತ ಸದಸ್ಯರ ಪ್ರತಿಯೊಂದು ಸಲಹೆಗೂ ಕಿವಿಯಾದರು ಮತ್ತು ಸಂಬಂಧಪಟ್ಟ ಅನುಚ್ಛೇದದ ಪದಪದದ ವಿವರಣೆ ನೀಡಿ ಸದಸ್ಯರ ಸಲಹೆಗಳನ್ನು ಗೌರವಯುತವಾಗಿ ಸ್ವೀಕರಿಸಿ ಅಗತ್ಯ ತಿದ್ದುಪಡಿಗಳನ್ನು ಅಂಗೀಕರಿಸಿದರು. ಈ ಸಂಬಂಧ ಅಂಬೇಡ್ಕರರು ನೀಡಿರುವ ಮಾಹಿತಿಯನ್ನೇ ದಾಖಲಿಸುವುದಾದರೆ “ಕರಡು ಸಂವಿಧಾನಕ್ಕೆ ಸೂಚಿಸಲಾದ ಒಟ್ಟು ತಿದ್ದುಪಡಿಗಳು 7635. ಅವುಗಳಲ್ಲಿ ಅಂಗೀಕಾರಗೊಂಡಂತಹವು 2473”. ಒಟ್ಟಾರೆ ಇಂತೆಲ್ಲ ತಿದ್ದುಪಡಿಗಳ ನಂತರ 1949 ನವೆಂಬರ್ 17ರಂದು ಅಂತಿಮವಾಗಿ ಸಮಾವೇಶಗೊಂಡ ಸಂವಿಧಾನ ಸಭೆಯಲ್ಲಿ ಡಾ.ಅಂಬೇಡ್ಕರರು “ಅಧ್ಯಕ್ಷ ಮಹೋದಯರೇ, ಈ ಸಭೆ ಸ್ಥಿರೀಕರಿಸಿರುವ ಈ ಸಂವಿಧಾನವನ್ನು ಅಂಗೀಕರಿಸಬೇಕೆಂಬ ನಿರ್ಣಯವನ್ನು ನಾನು ಮಂಡಿಸುತ್ತೇನೆ” ಎನ್ನುತ್ತಿದ್ದಂತೆ ಇಡೀ ಸಭೆ ಹರ್ಷದ ಹೊನಲು ಹರಿಸಿ ಕರತಾಡನದೊಂದಿಗೆ ತನ್ನ ಒಪ್ಪಿಗೆ ಸೂಚಿಸಿತು. ಹಾಗೆಯೇ ಅಂಬೇಡ್ಕರರಿಗೆ ಅಭಿನಂದನೆಯ ಸುರಿಮಳೆಗಳು.
ಅವುಗಳಲ್ಲಿ ಒಂದಷ್ಟನ್ನು ದಾಖಲಿಸುವುದಾದರೆ ಮದ್ರಾಸಿನ ಮುನಿಸ್ವಾಮಿ ಪಿಳ್ಳೈ ಎಂಬುವವರು “ಪರಿಶಿಷ್ಟ ಜಾತಿಯು ನಂದನಾರ್, ತಿರುಪಳನಾಳ್ವರ್, ತಿರುವಳ್ಳುವರ್ ಹೀಗೆ ಶ್ರೇಷ್ಠ ಸಂತರನ್ನು, ಜ್ಞಾನಿಗಳನ್ನು ನೀಡಿದೆ. ನಿಸ್ಸಂಶಯವಾಗಿ ಡಾ.ಅಂಬೇಡ್ಕರರು ಅಂತಹವರ ಸಾಲಿಗೆ ಸೇರ್ಪಡೆಯಾಗುತ್ತಾರೆ. ಯಾಕೆಂದರೆ ಅವಕಾಶ ಸಿಕ್ಕರೆ ಪರಿಶಿಷ್ಟರು ಎಷ್ಟು ಎತ್ತರಕ್ಕೆ ಏರಬಲ್ಲರು ಎಂಬುದನ್ನು ಅಂಬೇಡ್ಕರರು (ತಮ್ಮ ಈ ಸಾಧನೆಯ ಮೂಲಕ) ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟಿದ್ದಾರೆ”. ಇನ್ನು ಸೇಠ್ ಗೋವಿಂದದಾಸ್ ಎನ್ನುವವರು “ಡಾ.ಅಂಬೇಡ್ಕರರನ್ನು ‘ವರ್ತಮಾನ ಕಾಲದ ಮನು’ ಎನ್ನಬಹುದು” ಎನ್ನುತ್ತಾರೆ! ಎಂ.ಅನಂತಶಯನಂ ಅಯ್ಯಂಗಾರ್ ಎನ್ನುವವರಂತೂ “ಯಾವ ವ್ಯಕ್ತಿ ನಮ್ಮನ್ನು ಟೀಕಿಸುವ ಮತ್ತು ಅನುಮಾನದಿಂದ ನೋಡುವ ಉದ್ದೇಶದಿಂದ ಸಭೆಗೆ ಬಂದರೋ, ಕಡೆಗೆ ಅವರೇ ಸಂವಿಧಾನದ ಹೊಣೆಹೊತ್ತುಕೊಂಡರು ಮತ್ತು ಅದನ್ನು ರಚಿಸಿದರು” ಎಂದರು! ಹಾಗೆ ಪಂಡಿತ್ ಠಾಕೂರ್ ದಾಸ್ ಭಾರ್ಗವ ಎಂಬುವವರು ಮಾತನಾಡುತ್ತಾ “ಡಾ.ಅಂಬೇಡ್ಕರರು ನಮ್ಮ ಹೃದಯಗಳಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿದ್ದಾರೆ” ಎನ್ನುವ ಮೂಲಕ ತಮ್ಮ ಅಭೂತಪೂರ್ವ ಪ್ರೀತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದುವರಿದು ಮತ್ತೋರ್ವ ಸದಸ್ಯರಾದ ಟಿ.ಪ್ರಕಾಶಂ‘”ತಮ್ಮ ಈ ಕಾರ್ಯದ ಮೂಲಕ ಡಾ.ಅಂಬೇಡ್ಕರರು ತಾವು ಗ್ರೇಟ್ ಬ್ರಿಟನ್ನಿನ ರಾಜನ ಸಲಹೆಗಾರನಾಗಿ ಅಲ್ಲಿಯ ಆಸ್ಥಾನ ವೂಲ್‍ಸ್ಯಾಕ್‍ನಲ್ಲಿ ಕುಳಿತುಕೊಳ್ಳುವಷ್ಟು ಸಮರ್ಥರು” ಎಂದು ತೋರಿಸಿಕೊಟ್ಟಿದ್ದಾರೆ ಎನ್ನುತ್ತಾರೆ.
ಕಡೆಯದಾಗಿ ಶ್ರೀ ಹೆಚ್.ಜೆ.ಖಾಂಡೇಕರ್ ಎಂಬುವವರ ಹೇಳಿಕೆಯನ್ನು ದಾಖಲಿಸುವುದಾದರೆ “ಮಾನ್ಯರೆ, ನಾವು ಅಂಬೇಡ್ಕರರಂತಹ ಪ್ರತಿಭಾಶಾಲಿಯಿಂದ ರೂಪಿತಗೊಂಡ ಕಾನೂನನ್ನು ಸ್ವತಂತ್ರ ಭಾರತದಲ್ಲಿ ಇಂದು ಕಾರ್ಯಾಚರಣೆಗಿಳಿಸುತ್ತಿದ್ದೇವೆ. ಹಾಗೆ ಈ ಕಾನೂನನ್ನು ನಾನು ಮಹಾರ್ ಕಾನೂನು ಎನ್ನಲಿಚ್ಚಿಸುತ್ತೇನೆ ಯಾಕೆಂದರೆ ಡಾ.ಅಂಬೇಡ್ಕರರು ಮಹಾರ್ ಸಮುದಾಯದವರು ಮತ್ತು ಮುಂದೆ 1950 ಜನವರಿ 26ರಂದು ಈ ಕಾನೂನು ಉದ್ಘಾಟನೆಗೊಂಡಾಗ ನಾವು ಮನುವಿನ ಕಾನೂನಿನ ಬದಲು ಮಹಾರರ ಕಾನೂನನ್ನು ಹೊಂದುತ್ತೇವೆ. ಮನುವಿನ ಕಾನೂನಿನ ಅಡಿಯಲ್ಲಿ ಈ ದೇಶದಲ್ಲಿ ಸುಖ ನೆಮ್ಮದಿಯೇ ಇರಲಿಲ್ಲ, ಆದರೆ ಮಹಾರರ ಕಾನೂನು, ಖಂಡಿತ ಈ ದೇಶವನ್ನು ಸ್ವರ್ಗವನ್ನಾಗಿ ಮಾಡುತ್ತದೆ… ನನಗೆ ಭರವಸೆ ಆ ಇದೆ”.
ಖಂಡಿತ, ಗಣರಾಜ್ಯದ ಈ ಶುಭ ದಿನದಂದು ಡಾ.ಖಾಂಡೇಕರರ ಭರವಸೆ ಎಲ್ಲರದ್ದಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್‌ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್ ಅಪಾರ್ಟ್‌ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ7 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?


