Connect with us

ರಾಜಕೀಯ

ನೀತಿ ನಿರೂಪಣೆಯ ಹೆದ್ದಾರಿ

Published

on

ರ್ಕಾರವನ್ನು ಪ್ರತಿನಿಧಿಸುವವರು ನೀತಿ ನಿರೂಪಣೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದರ ಆಧಾರದಲ್ಲಿ ಚುನಾವಣೆಯ ಸಂವಾದಗಳು ನಡೆಯಬೇಕು. ಲೋಕಸಭೆ ಅಥವಾ ವಿಧಾನಸಭೆ ಸೇರಿದಂತೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಚುನಾವಣೆ ನಡೆದಾಗ ಅಧಿಕಾರಾವಧಿಯಲ್ಲಿ ರೂಪಿತವಾದ ನೀತಿಗಳು ಎಂಥವು ಮತ್ತು ಅವುಗಳನ್ನು ಅನುಷ್ಠಾನಗೊಳಿಸಿದಾಗ ಉಂಟಾದ ಪರಿಣಾಮಗಳೇನೇನು ಎಂಬ ಆಯಾಮದಲ್ಲಿ ಚರ್ಚೆಗಳಾಗಬೇಕು. ಆ ತರಹದ ಚರ್ಚೆಗಳಾದಾಗ ಅಧಿಕಾರರೂಢರು ಮತ್ತು ಪ್ರತಿಪಕ್ಷಗಳನ್ನು ಪ್ರತಿನಿಧಿಸುವವರು ಪ್ರಜಾಪ್ರಭುತ್ವ ನಿರೀಕ್ಷಿಸುವ ಗುರಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಅಂಥ ಗುರಿಯನ್ನೇ ಕೇಂದ್ರೀಕರಿಸಿಕೊಂಡು ಮುನ್ನಡೆಯುವ ಅವರ ನಿಲುವುಗಳ ತಾತ್ವಿಕತೆಯು ಸರಿಯಾದ ಮಾರ್ಗದಲ್ಲಿಯೇ ಅವರು ಹೆಜ್ಜೆಯಿರಿಸುವಂತೆ ಪ್ರೇರಣೆ ನೀಡುತ್ತದೆ. ಈ ರೀತಿಯ ಅವಲೋಕನ ಮತ್ತು ವಿಮರ್ಶಾತ್ಮಕ ಮಾದರಿಯ ನೋಟಗಳು ಚುನಾವಣಾಪೂರ್ವ, ಚುನಾವಣಾ ನಂತರ ಮತ್ತು ಸರ್ಕಾರದ ಅಧಿಕಾರಾವಧಿಯ ಅಷ್ಟೂ ದಿನಗಳ ಕಾಲ ವ್ಯಕ್ತವಾಗುತ್ತಲೇ ಇರಬೇಕಾಗುತ್ತದೆ. ಇವುಗಳನ್ನು ನಿರಂತರವಾಗಿರಿಸುವಂಥ ಬದ್ಧತೆಯನ್ನು ಸರ್ಕಾರವನ್ನು ಪ್ರತಿನಿಧಿಸುವವರು ಮತ್ತು ಪ್ರತಿಪಕ್ಷಗಳಲ್ಲಿರುವವರು ತೋರಬೇಕಾಗುತ್ತದೆ.

ಬದ್ಧತೆಗೆ ತದ್ವಿರುದ್ಧದ ವಾತಾವರಣ

ಭಾರತದಲ್ಲಿ ಚುನಾವಣಾ ರಾಜಕಾರಣವು ಅಂಥ ಬದ್ಧತೆಗೆ ತದ್ವಿರುದ್ಧವಾದ ವಾತಾವರಣವನ್ನು ಸೃಷ್ಟಿಸಿದೆ. ಸಂವಾದವನ್ನು ಕಟ್ಟುವುದರ ಬದಲು ಅತಾರ್ಕಿಕ ವಾಗ್ವಾದಗಳನ್ನು ಹುಟ್ಟುಹಾಕುವುದರ ಕಡೆಗೇ ಅದರ ಗಮನವಿದೆ. ಅಧಿಕಾರ ಪಡೆಯಲೇಬೇಕು ಎಂಬ ಹಂಬಲ ಮತ್ತು ಹಠಗಳು ಸಂವಾದದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತವೆ. ಜನಪರ ನೀತಿ ನಿರೂಪಣೆಯ ಜವಾಬ್ದಾರಿಯುತ ಐಡೆಂಟಿಟಿಗಿಂತಲೂ ಕೀಳು ಅಭಿಪ್ರಾಯಗಳೊಂದಿಗಿನ ಮನಸ್ಥಿತಿಯನ್ನು ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತವೆ. ಹಾಗಾಗಿ ಸದ್ಯದ ಅಗತ್ಯಗಳಿಗೆ ಸ್ಪಂದಿಸುವಂಥ ಮತ್ತು ಆ ಮೂಲಕ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ನೆರವಾಗುವ ನೀತಿಗಳು ರೂಪುಗೊಳ್ಳುವುದೇ ಇಲ್ಲ. ಅಂಥ ನೀತಿಗಳು ರೂಪುಗೊಳ್ಳುವುದಕ್ಕೆ ಬೇಕಾದ ಒತ್ತಡವನ್ನು ಹಾಕಬೇಕಾದ ಜನಸಮೂಹವೂ ಅದೇ ನಿರೀಕ್ಷೆಗಳೊಂದಿಗೆ ಯೋಚಿಸುವುದೇ ಇಲ್ಲ. ಒಂದು ವೇಳೆ ಜನಸಮೂಹ ಯೋಚನೆಯ ಹಾದಿ ತುಳಿದರೂ ರಾಜಕಾರಣ ಎಚ್ಚೆತ್ತುಕೊಂಡು ಅದರ ದಿಕ್ಕನ್ನೇ ಬದಲಿಸಿ ನಿರ್ದಿಷ್ಟ ವಿದ್ಯಮಾನಕೇಂದ್ರಿತ ಅಂಶವನ್ನು ಮುನ್ನೆಲೆಗೆ ತಂದು ತನ್ನ ಸಂಕುಚಿತ ಉದ್ದೇಶವನ್ನು ಈಡೇರಿಸಿಕೊಂಡುಬಿಡುತ್ತದೆ.

ನೀತಿಯ ನಿಖರ ವ್ಯಾಖ್ಯಾನ

ಅಧಿಕಾರರೂಢ ರಾಜಕಾರಣ ಮತ್ತು ಪ್ರತಿಪಕ್ಷಗಳ ರಾಜಕಾರಣ ಇಂಥ ಸಂಕುಚಿತ ಉದ್ದೇಶಗಳನ್ನೇಮುಖ್ಯವಾಗಿಸಿಕೊಳ್ಳುವುದರಿಂದ ದೇಶದ ಅಗತ್ಯಗಳನ್ನು ದೃಷ್ಟಿಯಲ್ಲಿರಿಸಿಕೊಂಡ ನೀತಿಯ ಕುರಿತಾದ ಸ್ಪಷ್ಟತೆಯನ್ನು ಹೊಂದಿರುವುದಿಲ್ಲ. ನೀತಿಯ ನಿಖರ ವ್ಯಾಖ್ಯಾನವನ್ನು ನೆಚ್ಚಿಕೊಳ್ಳುವುದಿಲ್ಲ. ಯಾವುದೇ ಆಡಳಿತವು ವರ್ತಮಾನಕ್ಕೆ ಸ್ಪಂದಿಸಿ ಭವಿಷ್ಯವನ್ನೂ ಉಜ್ವಲಗೊಳಿಸುವುದಕ್ಕೆ ತನ್ನದೇ ಆದ ನೀತಿ ಮಾದರಿಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. ನೀತಿ ರೂಪಿಸುವ ಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸುವ ಆಡಳಿತ ಮತ್ತು ಮೌಲಿಕ ರಾಜಕಾರಣ ಅಸ್ತಿತ್ವದಲ್ಲಿರುವ ಸಮಾಜವು ಸ್ಥಗಿತಗೊಳ್ಳುವುದಿಲ್ಲ. ಅದು ಬದಲಾಗುತ್ತಲೇ ಸಕಾಲಿಕ ನೀತಿಗಳಿಗೆ ಅವಕಾಶಯವೀಯುತ್ತದೆ. ಹೊಸ ಪೀಳಿಗೆಯೂ ನೀತಿನಿರೂಪಣೆಯ ಹೆಜ್ಜೆಗಳು ಹೇಗಿರಬೇಕು ಎಂಬುದನ್ನು ಚಿಂತನೆಯ ಒರೆಗಲ್ಲಿಗೆ ಹಚ್ಚಿ ಯೋಚಿಸುತ್ತದೆ. ಅದೇ ಚಿಂತನೆಯು ಆಡಳಿತದ್ದೂ ಆಗಬೇಕು ಎಂಬ ನಿರೀಕ್ಷೆಯಲ್ಲಿ ದೇಶದ ಉಜ್ವಲ ಭವಿಷ್ಯಕ್ಕೆ ಬೇಕಾಗುವ ಸಂವಾದದ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತದೆ. ಹಾಗಾದಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳವರು ಭಿನ್ನವಾಗಿ ಯೋಚಿಸಲಾರಂಭಿಸುತ್ತಾರೆ. ಬದಲಾವಣೆಯ ಕಡೆಗಿನ ಪ್ರಯಾಣ ಅಧಿಕೃತತೆಯನ್ನು ಪಡೆಯುತ್ತದೆ.

ಹೊಸ ಹಾದಿಯ ನೀತಿಯ ಅಗತ್ಯತೆ

ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣೆ ವೇಳೆ ನಡೆಯುವ ವಿದ್ಯಮಾನಗಳು ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡು ಏರ್ಪಡುವ ಜಗಳ, ಸಂಘರ್ಷಗಳು ಪ್ರಜಾಸತ್ತಾತ್ಮಕವಾದ ನೀತಿ ರೂಪುಗೊಳ್ಳಬಹುದಾದ ಸಂಭಾವ್ಯತೆಯನ್ನೇ ಇಲ್ಲವಾಗಿಸಿಬಿಡುತ್ತವೆ. ದೇಶದ ವಿವಿಧ ವಲಯಗಳಲ್ಲಿ ಆಗಬೇಕಾದ ಬದಲಾವಣೆಗಳೇನೇನು? ಆ ಬದಲಾವಣೆಯು ಯಾವ ಸ್ವರೂಪದ್ದಾಗಿರಬೇಕು? ಮುಂದಿನ ಐವತ್ತು ವರ್ಷಗಳಲ್ಲಿ ಸಮಾಜದ ಗತಿಶೀಲತೆಯ ಸಾಧ್ಯತೆಗಳಿಗೆ ತಕ್ಕಂತೆ ಹೊಸ ಕಾಯ್ದೆಗಳು ರೂಪುಗೊಳ್ಳಬೇಕೇ? ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಕಾರ್ಯವ್ಯಾಪ್ತಿ ಮತ್ತು ಅವುಗಳ ಕಾರ್ಯವೈಖರಿ ಯಾವ ರೀತಿಯಲ್ಲಿ ವಿಮರ್ಶೆಗೊಳಪಡಬೇಕು? ಹೇಗೆ ಅವುಗಳನ್ನು ಬದಲಾವಣೆಯ ಪರಸ್ಪರ ಪೂರಕ ಸಾಂಸ್ಥಿಕ ಶಕ್ತಿಗಳನ್ನಾಗಿ ಮಾರ್ಪಡಿಸಬೇಕು ಎಂಬ ಪ್ರಶ್ನೆಗಳು ಆದ್ಯತಾನುಸಾರ ಚರ್ಚಿಸಲ್ಪಡಬೇಕು. ಹಾಗಾಗುವುದಿಲ್ಲ. ಅದರ ಬದಲು ತಾತ್ಪೂರ್ತಿಕವಾದ, ಸವಕಲು ಎನ್ನಿಸಿರುವ, ಅಪ್ರಸ್ತುತ ಅಭಿಪ್ರಾಯಗಳನ್ನು ರೂಪಿಸುವುದಕ್ಕೇ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ದೇಶದ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕ ವಾಸ್ತವಿಕತೆ, ಮಾನವ ಸಂಪನ್ಮೂಲದ ಆರೋಗ್ಯಕರ ಅಸ್ಮಿತೆ, ಭೌಗೋಳಿಕ ನೈಸರ್ಗಿಕ ವೈಶಿಷ್ಟ್ಯತೆ – ಇವೆಲ್ಲವುಗಳನ್ನು ಸಂವಿಧಾನಿಕ ಆಡಳಿತಾತ್ಮಕ ಅಂಗಗಳು ಗಣನೆಗೆ ತೆಗೆದುಕೊಂಡು ಹೊಸ ಹೆಜ್ಜೆಗಳನ್ನು ಕ್ರಮಿಸುವುದಕ್ಕೆ ಪೂರಕವಾಗುವ ನೀತಿಗಳನ್ನು ರೂಪಿಸಿಕೊಳ್ಳಬೇಕು. ಅಂಥ ವಾತಾವರಣದ ನಿರ್ಮಾಣಕ್ಕೆ ಚುನಾವಣಾಪೂರ್ವ, ಚುನಾವಣಾ ನಂತರದ ಆಡಳಿತಾತ್ಮಕ ಅಧಿಕಾರಾವಧಿಯು ವಿನಿಯೋಗಿಸಲ್ಪಡಬೇಕು.

ರಾಜಕಾರಣದ ನಿರ್ದಯಿ ದಾಹ

ನಿರ್ದಿಷ್ಟ ಆಡಳಿತ ನೀತಿಯು ಅಧಿಕಾರ ರಾಜಕಾರಣದ ನಿರ್ದಯಿ ದಾಹಗಳ ಸೋಂಕನ್ನು ಅಂಟಿಸಿಕೊಳ್ಳಬಾರದು. ಸದ್ಯದಲ್ಲಷ್ಟೇ ಅಲ್ಲದೇ ಯಾವತ್ತೂ ತಾವೇ ಅಧಿಕಾರದಲ್ಲಿರಬೇಕು ಎಂಬ ಹಸಿವು ಸಕಾರಾತ್ಮಕ ಆಲೋಚನಾಕ್ರಮಗಳೊಂದಿಗಿದ್ದರೆ ಸರಿ. ಇಲ್ಲದಿದ್ದರೆ ಆ ಹಸಿವಿಗೆ ಪ್ರಜಾಸತ್ತಾತ್ಮಕ ಅಧಿಕೃತತೆ ದೊರಕುವುದಿಲ್ಲ. ಬದಲಾಗಿ ಆ ಹಸಿವು ಕಂಡವರ ಬದುಕನ್ನು ನಲುಗಿಸುವ, ಎದುರಾಳಿಗಳನ್ನು ಸೃಷ್ಟಿಸಿಕೊಳ್ಳುವ, ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ವಿಕಾರದದ ಆಯಾಮವನ್ನು ಪಡೆದುಕೊಂಡುಬಿಡುತ್ತದೆ. ಈ ಹಂತದಲ್ಲಿಯೇ ಆಡಳಿತಾತ್ಮಕವಾದ ಸಕಾರತಾತ್ಮಕ ನೀತಿಯೊಂದು ಹುಟ್ಟಿಕೊಳ್ಳುವುದೇ ಇಲ್ಲ. ಇಂಥ ಸಂದರ್ಭದಲ್ಲಿ ಪ್ರಭುತ್ವವು ಯಾವುದನ್ನು ಆಡಳಿತ ನೀತಿ ಎಂದುಕೊಳ್ಳುತ್ತದೋ ಅದು ವಾಸ್ತವದಲ್ಲಿ ಕವಲು ಹಾದಿಯನ್ನು ಸಂಕೇತಿಸಿರುತ್ತದೆ. ಇದನ್ನು ಪ್ರಭುತ್ವಕ್ಕೆ ಅರ್ಥಮಾಡಿಸುವ ಪ್ರಯತ್ನಗಳು ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪ್ರತಿಪಕ್ಷ ನಾಯಕರು, ತಜ್ಞರು ಮತ್ತು ಮಾಧ್ಯಮ ಪರಿಣಿತರಿಂದ ಆಗಬೇಕು. ಸಕಾರಾತ್ಮಕವಾದ ನೀತಿಯ ವಿಶಾಲ ಆವರಣವನ್ನು ತೋರ್ಪಡಿಸಬೇಕು.

ಉದ್ದೇಶಪೂರ್ವಕ ತಾಟಸ್ಥ್ಯ

ಆಡಳಿತಾತ್ಮಕ ನೀತಿಯನ್ನು ನಿರ್ದೇಶಿಸುವ ಸ್ಪಷ್ಟ ಮಾನದಂಡಗಳನ್ನು ವಿನ್ಯಾಸಗೊಳಿಸಿಕೊಳ್ಳುವುದರ ಕಡೆಗೆ ಬಹುಮತ ಪಡೆದ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುವುದಿಲ್ಲ. ಹಾಗೆ ಆದ್ಯತೆ ನೀಡುವಂಥ ರಚನಾತ್ಮಕ ಸಂವಾದಿ ಆಂದೋಲನವನ್ನು ಪ್ರತಿಪಕ್ಷಗಳೂ ರೂಪಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಅವು ಈ ವಿಷಯದಲ್ಲಿ ತಟಸ್ಥಗೊಳ್ಳುತ್ತವೆ. ಈ ಕಾರಣಕ್ಕಾಗಿಯೇ ದೇಶದ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿನ ಸ್ವರೂಪವನ್ನು ಪಡೆದುಕೊಂಡು ಬಿಡಿಸಲಾರದಷ್ಟು ಸಂಕೀರ್ಣಗೊಳ್ಳುತ್ತವೆ. ಒಂದು ಪಕ್ಷ ಅಥವಾ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದ ತಕ್ಷಣ ಸಮಸ್ಯೆಯೊಂದು ಚಿಗುರೊಡೆಯುವ ಕಾಲಕ್ಕೆ ಅದರ ಮುಂದಿನ ಸ್ವರೂಪವನ್ನು ಊಹಿಸಿ ಪರಿಹಾರೋಪಾಯವನ್ನು ನೆಚ್ಚಿಕೊಂಡ ಸಾಂದರ್ಭಿಕವಾದ ಪರ್ಯಾಯ ಚಿಂತನೆ ರೂಪುಗೊಳ್ಳಬೇಕು. ಅದರ ಆಧಾರದಲ್ಲಿಯೇ ಪರಿಹಾರಸೂತ್ರಗಳನ್ನು ಕಂಡುಕೊಳ್ಳಬೇಕು. ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ಅವು ಸದ್ಯಕ್ಕಷ್ಟೇ ಅಲ್ಲದೇ ಭವಿಷ್ಯದ ದಿನಗಳಲ್ಲಿಯೂ ಅನುಕೂಲಕರ ಎನ್ನಿಸುವ ಹಾಗೆ ಫ್ಲೆಕ್ಸಿಬಲ್ ಆಗಿರಬೇಕು. ಈ ಸಾಧ್ಯತೆಗಳ ದೂರಗಾಮಿ ಪರಿಣಾಮ ಲೆಕ್ಕಿಸಿಯೇ ಆಡಳಿತ ಕೇಂದ್ರಗಳು ಸಾರ್ವಜನಿಕ ನೀತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಈಗ ಇದರ ಗೈರು ಹಾಜರಿ ಎದ್ದುಕಾಣುತ್ತಿದೆ. ಇದರಿಂದಾಗಿ ಭಾರತೀಯ ಸಾಮಾಜಿಕತೆಯು ವಿವಿಧ ಸವಾಲುಗಳನ್ನು ಎದುರಿಸುವುದಕ್ಕಾಗಿಯೇ ತನ್ನ ಶಕ್ತಿಯನ್ನು ವ್ಯಯ ಮಾಡಿಕೊಳ್ಳುತ್ತಿದೆ. ಪ್ರಜೆಗಳ ಸಾಮಾಜಿಕತೆ ಮತ್ತು ಮಾನವ ಸಂಪನ್ಮೂಲದ ಸಶಕ್ತತೆಯು ಸಾರ್ವಜನಿಕ ನೀತಿಯ ವ್ಯಾಪ್ತಿಯ ಒಳಗೆ ಅಧಿಕೃತ ಸ್ಥಾನವನ್ನು ಪಡೆಯುತ್ತಲೇ ಇಲ್ಲ. ಈ ದೃಷ್ಟಿಯಿಂದ ಭಾರತದ ಆಡಳಿತಾತ್ಮಕತೆಯು ರಚನಾತ್ಮಕ ಕಾರ್ಯಸೂಚಿಯ ಕಾಯಕಲ್ಪದಿಂದ ವಂಚಿತವಾಗಿದೆ.

ದಿವ್ಯನಿರ್ಲಕ್ಷ್ಯ ಸೃಷ್ಟಿಸುವ ಬಿಕ್ಕಟ್ಟು

ಈ ಕಾರಣಕ್ಕಾಗಿಯೇ ಕೃಷಿ, ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ, ಕಾಣಿಸಿಕೊಳ್ಳುತ್ತಲೇ ಇರುವ ಸಮಸ್ಯೆಗಳಿಗೆ ಪರಿಹಾರವೇ ಸಾಧ್ಯ ಇಲ್ಲ ಎಂಬ ತಪ್ಪು ಅಭಿಪ್ರಾಯಗಳ ವರ್ತುಲ ಸೃಷ್ಟಿಯಾಗಿದೆ. ಸಮಸ್ಯೆಯೊಂದು ಸೃಷ್ಟಿಯಾದ ತಕ್ಷಣವೇ ಆಡಳಿತವು ಅದರೆಡೆಗಿನ ದಿವ್ಯನಿರ್ಲಕ್ಷ್ಯವನ್ನೇ ತನ್ನ ಅಸ್ತಿತ್ವದ ಮಹತ್ವದ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ತತ್ಪರಿಣಾಮ ನಿರ್ಲಕ್ಷ್ಯಕ್ಕೀಡಾಗುವ ಸಮಸ್ಯೆಯು ಹಲವು ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತದೆ. ಕ್ರಮೇಣ ಜನಸಮುದಾಯವನ್ನು, ತನ್ಮೂಲಕ ಆಡಳಿತದ ವಿವಿಧ ಹಂತಗಳ ಸಹಜ ಕ್ರಿಯೆಯನ್ನು ಮತ್ತಷ್ಟು ಜಡಗೊಳಿಸಿಬಿಡುತ್ತದೆ. ಆಗ ರೈತರ ಆತ್ಮಹತ್ಯೆಯ ಪ್ರಮಾಣ ಹೆಚ್ಚಾದಾಗಲೂ ಆಡಳಿತ ನಿರ್ಲಿಪ್ತತೆಯನ್ನೇ ತನ್ನ ಬಹುದೊಡ್ಡ ಗುಣವಾಗಿಸಿಕೊಳ್ಳುತ್ತದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನ್ಯಾಯಯುತ ಬೆಲೆ ನಿಗದಿಗೊಳಿಸದೇ ಇದ್ದಾಗ ರೈತ ಸಮುದಾಯ ನಲುಗಿದರೂ ಅದು ನಿರ್ಲಕ್ಷ್ಯ ಧೋರಣೆಯೊಂದಿಗಿನ ಮೌನವನ್ನೇ ಅನುಸರಿಸುತ್ತದೆ. ಜಾತಿ-ಧರ್ಮಗಳ ಸಾಂಪ್ರದಾಯಿಕತೆಯ ಜೊತೆಗೆ ಇಡೀ ಸಮಾಜ ತಳಮಳಕ್ಕೀಡಾದಾಗ ಅದರ ಪ್ರಯೋಜನ ಪಡೆಯುವ ಹುನ್ನಾರದ ಪ್ರಬಲರಿಗೆ ದಾರಿ ಮಾಡಿಕೊಡುತ್ತದೆ. ಹೊಸದೇನನ್ನೂ ಕಲಿಸದೇ ಹಳೆಯದ್ದರ ಆಶ್ರಯದಲ್ಲಿಯೇ ಅಸ್ತಿತ್ವ ಕಂಡುಕೊಳ್ಳಲು ಶಿಕ್ಷಣ ರಂಗವು ಹೆಣಗಾಡುತ್ತಿರುವಾಗಲೂ ಅದನ್ನು ಮತ್ತಷ್ಟು ದುರ್ಬಲಗೊಳಿಸುವುದರ ಕಡೆಗೆ ಅತ್ಯುತ್ಸಾಹ ತೋರುತ್ತದೆ. ಆರೋಗ್ಯ ಕಾಯ್ದುಕೊಳ್ಳಲು ಜನಸಮೂಹಕ್ಕೆ ನೆರವಾಗುವ ಜಾಗೃತಿ ಹೆಜ್ಜೆಗಳ ಬದಲು ದೇಹಗಳನ್ನು ಮತ್ತಷ್ಟು ಜಡಗೊಳಿಸಿ ಮೆಡಿಸಿನ್‍ಗಳಿಗೆ ಒಗ್ಗಿಕೊಳ್ಳುವಂಥ ಮನಸ್ಥಿತಿ ರೂಪಿಸುವ ಔದ್ಯಮಿಕ ಒತ್ತಡಗಳಿಗೆ ಈಡಾಗುತ್ತದೆ. ಈ ಹಂತದಲ್ಲಿಯೇ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ತಮ್ಮ ಸಾಂಸ್ಥಿಕ ಶಕ್ತಿಯನ್ನು ವಿಸ್ತರಿಸಿಕೊಳ್ಳುವ ಬದಲು ಯಥಾಸ್ಥಿತಿಗಳನ್ನು ಖಾಯಂ ಆಗಿರಿಸುವ ದೌರ್ಬಲ್ಯದ ಮಿತಿಗಳನ್ನು ತಮ್ಮ ಗುಣಗಳನ್ನಾಗಿಸಿಕೊಳ್ಳುತ್ತವೆ.

ಸಮಗ್ರ ನೀತಿಯ ಅಲೆಯ ಪ್ರಾಧಾನ್ಯತೆ

ಆ ದೌರ್ಬಲ್ಯವು ದೇಶದ ಉಜ್ವಲ ಭವಿಷ್ಯದ ಸಂಭಾವ್ಯತೆಯನ್ನು ತಡೆದುಬಿಡುತ್ತದೆ. ಅಲ್ಲದೇ ಪೀಳಿಗೆಗಳನ್ನು ಶತಮಾನಗಳಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ. ಮುಂದಿನ ಹೆಜ್ಜೆಗಳ ಬದಲು ಹಿಂದಿನ ಜಡತೆಗೇ ಜೋತುಬೀಳುವ ಅವಲಂಬನೆಯ ಸ್ವಭಾವವನ್ನು ಸಾಮಾಜಿಕವಾಗಿ ನೆಲೆಗೊಳಿಸಿಬಿಡುತ್ತದೆ. ಇಂಥ ಅಪಾಯದಿಂದ ಪಾರಾಗಬೇಕಾದರೆ ರಾಜಕೀಯ ಪಕ್ಷಗಳು, ಸಾರ್ವಜನಿಕ ಸಂಸ್ಥೆಗಳು, ವಿವಿಧ ಜನವರ್ಗಗಳು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಪ್ರತಿಸ್ಪಂದಿಸುವ ಆಡಳಿತಾತ್ಮಕ ಸಮಗ್ರ ನೀತಿಗಳ ಅವಶ್ಯಕತೆಯನ್ನು ಮನಗಂಡು ಅವುಗಳ ಪರವಾದ ವ್ಯಾಪಕ ಅಲೆಯನ್ನು ನಿರ್ಮಿಸಬೇಕು. ಹಾಗಾದಾಗ ಮಾತ್ರ ಚುನಾವಣೆ ಇರಲಿ, ಇಲ್ಲದಿರಲಿ ಎಲ್ಲರೂ ರಚನಾತ್ಮಕ ನೀತಿಗಳನ್ನು ಗಮನದಲ್ಲಿರಿಸಿಕೊಂಡು ಮೌಲಿಕ ಸಂವಾದ ಏರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅನಗತ್ಯ ವಿವಾದಗಳ ವೈಭವೀಕರಣ ತಾನಾಗಿಯೇ ನಿಂತು ಸಾರ್ವಜನಿಕ ಆಡಳಿತವು ಸಂವಿಧಾನಾತ್ಮಕ ಮೌಲ್ಯವನ್ನು ತಂದುಕೊಳ್ಳುತ್ತದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.

ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ

Published

on

ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧಪೂಜೆ ನೆರವೇರಿಸಿದರು.

ಅರಮನೆ ಮುಂಭಾಗದಲ್ಲಿ ಪಟ್ಟದ ಹಸು, ಆನೆ, ಕುದುರೆ, ಒಂಟೆಗಳಿಗೆ, ಪಲ್ಲಕ್ಕಿ ಹಾಗೂ ರಾಜರ ಕಾರುಗಳಿಗೆ ಪೂಜೆ ಸಲ್ಲಿಸಿದರು. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಅವುಗಳಿಗೂ ಪೂಜೆ ನೆರವೇರಿಸಲಾಯಿತು. ದಸರಾ ವೈಭವ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಲಕ್ಷಾಂತರ ಪ್ರವಾಸಿಗರು ಆಗಮಿಸಿದ್ದಾರೆ.

ರಾಜ್ಯಾದ್ಯಂತ ನವರಾತ್ರಿಯ 9ನೇ ದಿನವಾದ ಇಂದು ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಆಯುಧಪೂಜೆ ಮತ್ತು ದಸರಾ ಮಹೋತ್ಸವದ ಸಂಭ್ರಮ ಇಮ್ಮಡಿಗೊಂಡಿದೆ. ಆಯುಧ ಪೂಜೆಯ ಭಾಗವಾಗಿ ಬೆಳಿಗ್ಗೆಯಿಂದ ಜನರು ವಾಹನಗಳನ್ನು ತೊಳೆದು ಹೂವು, ಬಾಳೆಕಂದುಗಳನ್ನು ಕಟ್ಟಿ ಪೂಜೆ ಸಲ್ಲಿಸುತ್ತಿರುವುದು ಸಾಮಾನ್ಯವಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಆಯುಧಪೂಜೆಯನ್ನು ಶ್ರಧಾ ಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ತಮ್ಮ ವಾಹನಗಳಿಗೆ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಿದರು. ಕೋಲಾರ ಜಿಲ್ಲಾದ್ಯಂತ ಆಯುಧ ಪೂಜೆ ಹಾಗೂ ದಸರಾ ಹಬ್ಬವನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಯುಧ ಪೂಜೆ ಹಿನ್ನಲೆ ಜಿಲ್ಲೆಯ ಹಲವು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಆಯುಧಪೂಜೆ ಸಂಭ್ರಮ ಇಮ್ಮಡಿಗೊಂಡಿದ್ದು, ಕಾಫಿ ತೋಟಗಳಲ್ಲಿ ಮಾಲೀಕರು ತೋಟದ ಯಂತ್ರೋಪಕರಣಗಳನ್ನು ಶೃಂಗರಿಸಿ ಪೂಜೆ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಹಾವೇರಿ ಜಿಲ್ಲೆಯಾದ್ಯಂತ ಆಯುಧ ಪೂಜೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯಮಿ ರತನ್ ಟಾಟಾ ನಿಧನ; ಗಣ್ಯರಿಂದ ಸಂತಾಪ

Published

on

ಸುದ್ದಿದಿನಡೆಸ್ಕ್:ದೇಶದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮತ್ತು ಉದ್ಯಮಿಗಳು ಸಂತಾಪ ಸೂಚಿಸಿದ್ದಾರೆ.

ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಅವರು, ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಬೆಳಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ, ಅವರನ್ನು ಮುಂಬೈಗೆ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಅವರು ನಿಧನರಾದರು.

ರತನ್ ಟಾಟಾ ಅವರ ನಿಧನದಿಂದ, ಭಾರತವು ಸಾಂಸ್ಥಿಕ ಬೆಳವಣಿಗೆಯನ್ನು ರಾಷ್ಟ್ರ ನಿರ್ಮಾಣದೊಂದಿಗೆ ಮತ್ತು ಶ್ರೇಷ್ಠತೆಯನ್ನು ನೀತಿಯೊಂದಿಗೆ ಸಂಯೋಜಿಸಿದ ವ್ಯಕ್ತಿಯನ್ನು ಕಳೆದುಕೊಂಡಿದೆ. ರತನ್ ಟಾಟಾ ಅವರು ಶ್ರೇಷ್ಠ ಟಾಟಾ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ದರು ಮತ್ತು ಹೆಚ್ಚು ಪ್ರಭಾವಶಾಲಿ ಜಾಗತಿಕ ಉಪಸ್ಥಿತಿಯನ್ನು ನೀಡಿದರು. ಅನುಭವಿ ವೃತ್ತಿಪರರು ಹಾಗೂ ಯುವ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಿದರು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ರತನ್ ಟಾಟಾ ಅವರ ನಿಧನದಿಂದಾಗಿ ತೀವ್ರ ದುಃಖವಾಗಿದೆ. ಅವರು ದೊಡ್ಡ ಕನಸು ಕಾಣುವ ಮತ್ತು ಸಮಾಜಕ್ಕೆ ಮರಳಿ ನೀಡುವ ಉತ್ಸಾಹವನ್ನು ಹೊಂದಿದ್ದರು. ದೇಶದಲ್ಲಿ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ ಮತ್ತು ಪ್ರಾಣಿ ಕಲ್ಯಾಣದಂತಹ ಪ್ರಮುಖ ಕ್ಷೇತ್ರಗಳಲ್ಲಿ ಟಾಟಾ ಸಮೂಹ ಮುಂಚೂಣಿಯಲ್ಲಿದೆ. ರತನ್ ಟಾಟಾ ಅವರು ಅಸಾಧಾರಣ ಮತ್ತು ದೂರದೃಷ್ಟಿಯ ಉದ್ಯಮಿಯಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ದಿನದ ಸುದ್ದಿ7 hours ago

ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ

ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ...

ದಿನದ ಸುದ್ದಿ8 hours ago

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ‌ ಮಳೆ

ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಮುಂದಿನ 7...

ದಿನದ ಸುದ್ದಿ1 day ago

ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ

ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ...

ದಿನದ ಸುದ್ದಿ3 days ago

ಉದ್ಯಮಿ ರತನ್ ಟಾಟಾ ನಿಧನ; ಗಣ್ಯರಿಂದ ಸಂತಾಪ

ಸುದ್ದಿದಿನಡೆಸ್ಕ್:ದೇಶದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್,...

ದಿನದ ಸುದ್ದಿ3 days ago

ದಾವಣಗೆರೆ | ಅ.12ರಂದು ಮದ್ಯ ಮಾರಾಟ ನಿಷೇಧ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ...

ದಿನದ ಸುದ್ದಿ3 days ago

ದಾವಣಗೆರೆ | ವಿವಿಧ ಕಚೇರಿಗಳಿಗೆ ಡಿಸಿ ಅನಿರೀಕ್ಷಿತ ಭೇಟಿ ; ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಧಿಕಾರಿಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿ ಕಂಡು ಬಂದ ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು....

ದಿನದ ಸುದ್ದಿ3 days ago

ದಾವಣಗೆರೆ | ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ಬೆಳ್ಳಿಪದಕ

ಸುದ್ದಿದಿನ,ದಾವಣಗೆರೆ:ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಕ್ಟೋಬರ್ 3 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ...

ದಿನದ ಸುದ್ದಿ3 days ago

ಹೈಸ್ಕೂಲ್ ಮೈದಾನದಲ್ಲಿ ಆಯುಧ ಪೂಜೆ, ವಿಜಯದಶಮಿಯ ಹೂ, ಇತರೆ ವಸ್ತುಗಳ ಮಾರಾಟಕ್ಕೆ ಅವಕಾಶ

ಸುದ್ದಿದಿನ,ದಾವಣಗೆರೆ:ಆಯುಧಪೂಜೆ ಹಾಗೂ ವಿಜಯದಶಮಿ ಸಲುವಾಗಿ ಬಾಳೆಕಂಬ, ಹೂ, ಹಣ್ಣು ಮಾವಿನ ತೋರಣ, ಬೂದು ಗುಂಬಳ ಕಾಯಿ, ಕಾಚಿಕಡ್ಡಿ ಹಾಗೂ ಸಗಣಿ ಗುರ್ಜಿಗಳನ್ನು ಮಾರಾಟ ಮಾಡುವುದರಿಂದ ನಗರಾದ್ಯಂತ ಸಂಚಾರ...

ದಿನದ ಸುದ್ದಿ3 days ago

ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೈದು ದಿವಸಗಳ ಕಾರ್ಯಾಗಾರದಲ್ಲಿ...

Trending