Connect with us

ರಾಜಕೀಯ

ನೀತಿ ನಿರೂಪಣೆಯ ಹೆದ್ದಾರಿ

Published

on

ರ್ಕಾರವನ್ನು ಪ್ರತಿನಿಧಿಸುವವರು ನೀತಿ ನಿರೂಪಣೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದರ ಆಧಾರದಲ್ಲಿ ಚುನಾವಣೆಯ ಸಂವಾದಗಳು ನಡೆಯಬೇಕು. ಲೋಕಸಭೆ ಅಥವಾ ವಿಧಾನಸಭೆ ಸೇರಿದಂತೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಚುನಾವಣೆ ನಡೆದಾಗ ಅಧಿಕಾರಾವಧಿಯಲ್ಲಿ ರೂಪಿತವಾದ ನೀತಿಗಳು ಎಂಥವು ಮತ್ತು ಅವುಗಳನ್ನು ಅನುಷ್ಠಾನಗೊಳಿಸಿದಾಗ ಉಂಟಾದ ಪರಿಣಾಮಗಳೇನೇನು ಎಂಬ ಆಯಾಮದಲ್ಲಿ ಚರ್ಚೆಗಳಾಗಬೇಕು. ಆ ತರಹದ ಚರ್ಚೆಗಳಾದಾಗ ಅಧಿಕಾರರೂಢರು ಮತ್ತು ಪ್ರತಿಪಕ್ಷಗಳನ್ನು ಪ್ರತಿನಿಧಿಸುವವರು ಪ್ರಜಾಪ್ರಭುತ್ವ ನಿರೀಕ್ಷಿಸುವ ಗುರಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಅಂಥ ಗುರಿಯನ್ನೇ ಕೇಂದ್ರೀಕರಿಸಿಕೊಂಡು ಮುನ್ನಡೆಯುವ ಅವರ ನಿಲುವುಗಳ ತಾತ್ವಿಕತೆಯು ಸರಿಯಾದ ಮಾರ್ಗದಲ್ಲಿಯೇ ಅವರು ಹೆಜ್ಜೆಯಿರಿಸುವಂತೆ ಪ್ರೇರಣೆ ನೀಡುತ್ತದೆ. ಈ ರೀತಿಯ ಅವಲೋಕನ ಮತ್ತು ವಿಮರ್ಶಾತ್ಮಕ ಮಾದರಿಯ ನೋಟಗಳು ಚುನಾವಣಾಪೂರ್ವ, ಚುನಾವಣಾ ನಂತರ ಮತ್ತು ಸರ್ಕಾರದ ಅಧಿಕಾರಾವಧಿಯ ಅಷ್ಟೂ ದಿನಗಳ ಕಾಲ ವ್ಯಕ್ತವಾಗುತ್ತಲೇ ಇರಬೇಕಾಗುತ್ತದೆ. ಇವುಗಳನ್ನು ನಿರಂತರವಾಗಿರಿಸುವಂಥ ಬದ್ಧತೆಯನ್ನು ಸರ್ಕಾರವನ್ನು ಪ್ರತಿನಿಧಿಸುವವರು ಮತ್ತು ಪ್ರತಿಪಕ್ಷಗಳಲ್ಲಿರುವವರು ತೋರಬೇಕಾಗುತ್ತದೆ.

ಬದ್ಧತೆಗೆ ತದ್ವಿರುದ್ಧದ ವಾತಾವರಣ

ಭಾರತದಲ್ಲಿ ಚುನಾವಣಾ ರಾಜಕಾರಣವು ಅಂಥ ಬದ್ಧತೆಗೆ ತದ್ವಿರುದ್ಧವಾದ ವಾತಾವರಣವನ್ನು ಸೃಷ್ಟಿಸಿದೆ. ಸಂವಾದವನ್ನು ಕಟ್ಟುವುದರ ಬದಲು ಅತಾರ್ಕಿಕ ವಾಗ್ವಾದಗಳನ್ನು ಹುಟ್ಟುಹಾಕುವುದರ ಕಡೆಗೇ ಅದರ ಗಮನವಿದೆ. ಅಧಿಕಾರ ಪಡೆಯಲೇಬೇಕು ಎಂಬ ಹಂಬಲ ಮತ್ತು ಹಠಗಳು ಸಂವಾದದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತವೆ. ಜನಪರ ನೀತಿ ನಿರೂಪಣೆಯ ಜವಾಬ್ದಾರಿಯುತ ಐಡೆಂಟಿಟಿಗಿಂತಲೂ ಕೀಳು ಅಭಿಪ್ರಾಯಗಳೊಂದಿಗಿನ ಮನಸ್ಥಿತಿಯನ್ನು ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತವೆ. ಹಾಗಾಗಿ ಸದ್ಯದ ಅಗತ್ಯಗಳಿಗೆ ಸ್ಪಂದಿಸುವಂಥ ಮತ್ತು ಆ ಮೂಲಕ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ನೆರವಾಗುವ ನೀತಿಗಳು ರೂಪುಗೊಳ್ಳುವುದೇ ಇಲ್ಲ. ಅಂಥ ನೀತಿಗಳು ರೂಪುಗೊಳ್ಳುವುದಕ್ಕೆ ಬೇಕಾದ ಒತ್ತಡವನ್ನು ಹಾಕಬೇಕಾದ ಜನಸಮೂಹವೂ ಅದೇ ನಿರೀಕ್ಷೆಗಳೊಂದಿಗೆ ಯೋಚಿಸುವುದೇ ಇಲ್ಲ. ಒಂದು ವೇಳೆ ಜನಸಮೂಹ ಯೋಚನೆಯ ಹಾದಿ ತುಳಿದರೂ ರಾಜಕಾರಣ ಎಚ್ಚೆತ್ತುಕೊಂಡು ಅದರ ದಿಕ್ಕನ್ನೇ ಬದಲಿಸಿ ನಿರ್ದಿಷ್ಟ ವಿದ್ಯಮಾನಕೇಂದ್ರಿತ ಅಂಶವನ್ನು ಮುನ್ನೆಲೆಗೆ ತಂದು ತನ್ನ ಸಂಕುಚಿತ ಉದ್ದೇಶವನ್ನು ಈಡೇರಿಸಿಕೊಂಡುಬಿಡುತ್ತದೆ.

ನೀತಿಯ ನಿಖರ ವ್ಯಾಖ್ಯಾನ

ಅಧಿಕಾರರೂಢ ರಾಜಕಾರಣ ಮತ್ತು ಪ್ರತಿಪಕ್ಷಗಳ ರಾಜಕಾರಣ ಇಂಥ ಸಂಕುಚಿತ ಉದ್ದೇಶಗಳನ್ನೇಮುಖ್ಯವಾಗಿಸಿಕೊಳ್ಳುವುದರಿಂದ ದೇಶದ ಅಗತ್ಯಗಳನ್ನು ದೃಷ್ಟಿಯಲ್ಲಿರಿಸಿಕೊಂಡ ನೀತಿಯ ಕುರಿತಾದ ಸ್ಪಷ್ಟತೆಯನ್ನು ಹೊಂದಿರುವುದಿಲ್ಲ. ನೀತಿಯ ನಿಖರ ವ್ಯಾಖ್ಯಾನವನ್ನು ನೆಚ್ಚಿಕೊಳ್ಳುವುದಿಲ್ಲ. ಯಾವುದೇ ಆಡಳಿತವು ವರ್ತಮಾನಕ್ಕೆ ಸ್ಪಂದಿಸಿ ಭವಿಷ್ಯವನ್ನೂ ಉಜ್ವಲಗೊಳಿಸುವುದಕ್ಕೆ ತನ್ನದೇ ಆದ ನೀತಿ ಮಾದರಿಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. ನೀತಿ ರೂಪಿಸುವ ಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸುವ ಆಡಳಿತ ಮತ್ತು ಮೌಲಿಕ ರಾಜಕಾರಣ ಅಸ್ತಿತ್ವದಲ್ಲಿರುವ ಸಮಾಜವು ಸ್ಥಗಿತಗೊಳ್ಳುವುದಿಲ್ಲ. ಅದು ಬದಲಾಗುತ್ತಲೇ ಸಕಾಲಿಕ ನೀತಿಗಳಿಗೆ ಅವಕಾಶಯವೀಯುತ್ತದೆ. ಹೊಸ ಪೀಳಿಗೆಯೂ ನೀತಿನಿರೂಪಣೆಯ ಹೆಜ್ಜೆಗಳು ಹೇಗಿರಬೇಕು ಎಂಬುದನ್ನು ಚಿಂತನೆಯ ಒರೆಗಲ್ಲಿಗೆ ಹಚ್ಚಿ ಯೋಚಿಸುತ್ತದೆ. ಅದೇ ಚಿಂತನೆಯು ಆಡಳಿತದ್ದೂ ಆಗಬೇಕು ಎಂಬ ನಿರೀಕ್ಷೆಯಲ್ಲಿ ದೇಶದ ಉಜ್ವಲ ಭವಿಷ್ಯಕ್ಕೆ ಬೇಕಾಗುವ ಸಂವಾದದ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತದೆ. ಹಾಗಾದಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳವರು ಭಿನ್ನವಾಗಿ ಯೋಚಿಸಲಾರಂಭಿಸುತ್ತಾರೆ. ಬದಲಾವಣೆಯ ಕಡೆಗಿನ ಪ್ರಯಾಣ ಅಧಿಕೃತತೆಯನ್ನು ಪಡೆಯುತ್ತದೆ.

ಹೊಸ ಹಾದಿಯ ನೀತಿಯ ಅಗತ್ಯತೆ

ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣೆ ವೇಳೆ ನಡೆಯುವ ವಿದ್ಯಮಾನಗಳು ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡು ಏರ್ಪಡುವ ಜಗಳ, ಸಂಘರ್ಷಗಳು ಪ್ರಜಾಸತ್ತಾತ್ಮಕವಾದ ನೀತಿ ರೂಪುಗೊಳ್ಳಬಹುದಾದ ಸಂಭಾವ್ಯತೆಯನ್ನೇ ಇಲ್ಲವಾಗಿಸಿಬಿಡುತ್ತವೆ. ದೇಶದ ವಿವಿಧ ವಲಯಗಳಲ್ಲಿ ಆಗಬೇಕಾದ ಬದಲಾವಣೆಗಳೇನೇನು? ಆ ಬದಲಾವಣೆಯು ಯಾವ ಸ್ವರೂಪದ್ದಾಗಿರಬೇಕು? ಮುಂದಿನ ಐವತ್ತು ವರ್ಷಗಳಲ್ಲಿ ಸಮಾಜದ ಗತಿಶೀಲತೆಯ ಸಾಧ್ಯತೆಗಳಿಗೆ ತಕ್ಕಂತೆ ಹೊಸ ಕಾಯ್ದೆಗಳು ರೂಪುಗೊಳ್ಳಬೇಕೇ? ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಕಾರ್ಯವ್ಯಾಪ್ತಿ ಮತ್ತು ಅವುಗಳ ಕಾರ್ಯವೈಖರಿ ಯಾವ ರೀತಿಯಲ್ಲಿ ವಿಮರ್ಶೆಗೊಳಪಡಬೇಕು? ಹೇಗೆ ಅವುಗಳನ್ನು ಬದಲಾವಣೆಯ ಪರಸ್ಪರ ಪೂರಕ ಸಾಂಸ್ಥಿಕ ಶಕ್ತಿಗಳನ್ನಾಗಿ ಮಾರ್ಪಡಿಸಬೇಕು ಎಂಬ ಪ್ರಶ್ನೆಗಳು ಆದ್ಯತಾನುಸಾರ ಚರ್ಚಿಸಲ್ಪಡಬೇಕು. ಹಾಗಾಗುವುದಿಲ್ಲ. ಅದರ ಬದಲು ತಾತ್ಪೂರ್ತಿಕವಾದ, ಸವಕಲು ಎನ್ನಿಸಿರುವ, ಅಪ್ರಸ್ತುತ ಅಭಿಪ್ರಾಯಗಳನ್ನು ರೂಪಿಸುವುದಕ್ಕೇ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ದೇಶದ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕ ವಾಸ್ತವಿಕತೆ, ಮಾನವ ಸಂಪನ್ಮೂಲದ ಆರೋಗ್ಯಕರ ಅಸ್ಮಿತೆ, ಭೌಗೋಳಿಕ ನೈಸರ್ಗಿಕ ವೈಶಿಷ್ಟ್ಯತೆ – ಇವೆಲ್ಲವುಗಳನ್ನು ಸಂವಿಧಾನಿಕ ಆಡಳಿತಾತ್ಮಕ ಅಂಗಗಳು ಗಣನೆಗೆ ತೆಗೆದುಕೊಂಡು ಹೊಸ ಹೆಜ್ಜೆಗಳನ್ನು ಕ್ರಮಿಸುವುದಕ್ಕೆ ಪೂರಕವಾಗುವ ನೀತಿಗಳನ್ನು ರೂಪಿಸಿಕೊಳ್ಳಬೇಕು. ಅಂಥ ವಾತಾವರಣದ ನಿರ್ಮಾಣಕ್ಕೆ ಚುನಾವಣಾಪೂರ್ವ, ಚುನಾವಣಾ ನಂತರದ ಆಡಳಿತಾತ್ಮಕ ಅಧಿಕಾರಾವಧಿಯು ವಿನಿಯೋಗಿಸಲ್ಪಡಬೇಕು.

ರಾಜಕಾರಣದ ನಿರ್ದಯಿ ದಾಹ

ನಿರ್ದಿಷ್ಟ ಆಡಳಿತ ನೀತಿಯು ಅಧಿಕಾರ ರಾಜಕಾರಣದ ನಿರ್ದಯಿ ದಾಹಗಳ ಸೋಂಕನ್ನು ಅಂಟಿಸಿಕೊಳ್ಳಬಾರದು. ಸದ್ಯದಲ್ಲಷ್ಟೇ ಅಲ್ಲದೇ ಯಾವತ್ತೂ ತಾವೇ ಅಧಿಕಾರದಲ್ಲಿರಬೇಕು ಎಂಬ ಹಸಿವು ಸಕಾರಾತ್ಮಕ ಆಲೋಚನಾಕ್ರಮಗಳೊಂದಿಗಿದ್ದರೆ ಸರಿ. ಇಲ್ಲದಿದ್ದರೆ ಆ ಹಸಿವಿಗೆ ಪ್ರಜಾಸತ್ತಾತ್ಮಕ ಅಧಿಕೃತತೆ ದೊರಕುವುದಿಲ್ಲ. ಬದಲಾಗಿ ಆ ಹಸಿವು ಕಂಡವರ ಬದುಕನ್ನು ನಲುಗಿಸುವ, ಎದುರಾಳಿಗಳನ್ನು ಸೃಷ್ಟಿಸಿಕೊಳ್ಳುವ, ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ವಿಕಾರದದ ಆಯಾಮವನ್ನು ಪಡೆದುಕೊಂಡುಬಿಡುತ್ತದೆ. ಈ ಹಂತದಲ್ಲಿಯೇ ಆಡಳಿತಾತ್ಮಕವಾದ ಸಕಾರತಾತ್ಮಕ ನೀತಿಯೊಂದು ಹುಟ್ಟಿಕೊಳ್ಳುವುದೇ ಇಲ್ಲ. ಇಂಥ ಸಂದರ್ಭದಲ್ಲಿ ಪ್ರಭುತ್ವವು ಯಾವುದನ್ನು ಆಡಳಿತ ನೀತಿ ಎಂದುಕೊಳ್ಳುತ್ತದೋ ಅದು ವಾಸ್ತವದಲ್ಲಿ ಕವಲು ಹಾದಿಯನ್ನು ಸಂಕೇತಿಸಿರುತ್ತದೆ. ಇದನ್ನು ಪ್ರಭುತ್ವಕ್ಕೆ ಅರ್ಥಮಾಡಿಸುವ ಪ್ರಯತ್ನಗಳು ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪ್ರತಿಪಕ್ಷ ನಾಯಕರು, ತಜ್ಞರು ಮತ್ತು ಮಾಧ್ಯಮ ಪರಿಣಿತರಿಂದ ಆಗಬೇಕು. ಸಕಾರಾತ್ಮಕವಾದ ನೀತಿಯ ವಿಶಾಲ ಆವರಣವನ್ನು ತೋರ್ಪಡಿಸಬೇಕು.

ಉದ್ದೇಶಪೂರ್ವಕ ತಾಟಸ್ಥ್ಯ

ಆಡಳಿತಾತ್ಮಕ ನೀತಿಯನ್ನು ನಿರ್ದೇಶಿಸುವ ಸ್ಪಷ್ಟ ಮಾನದಂಡಗಳನ್ನು ವಿನ್ಯಾಸಗೊಳಿಸಿಕೊಳ್ಳುವುದರ ಕಡೆಗೆ ಬಹುಮತ ಪಡೆದ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುವುದಿಲ್ಲ. ಹಾಗೆ ಆದ್ಯತೆ ನೀಡುವಂಥ ರಚನಾತ್ಮಕ ಸಂವಾದಿ ಆಂದೋಲನವನ್ನು ಪ್ರತಿಪಕ್ಷಗಳೂ ರೂಪಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಅವು ಈ ವಿಷಯದಲ್ಲಿ ತಟಸ್ಥಗೊಳ್ಳುತ್ತವೆ. ಈ ಕಾರಣಕ್ಕಾಗಿಯೇ ದೇಶದ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿನ ಸ್ವರೂಪವನ್ನು ಪಡೆದುಕೊಂಡು ಬಿಡಿಸಲಾರದಷ್ಟು ಸಂಕೀರ್ಣಗೊಳ್ಳುತ್ತವೆ. ಒಂದು ಪಕ್ಷ ಅಥವಾ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದ ತಕ್ಷಣ ಸಮಸ್ಯೆಯೊಂದು ಚಿಗುರೊಡೆಯುವ ಕಾಲಕ್ಕೆ ಅದರ ಮುಂದಿನ ಸ್ವರೂಪವನ್ನು ಊಹಿಸಿ ಪರಿಹಾರೋಪಾಯವನ್ನು ನೆಚ್ಚಿಕೊಂಡ ಸಾಂದರ್ಭಿಕವಾದ ಪರ್ಯಾಯ ಚಿಂತನೆ ರೂಪುಗೊಳ್ಳಬೇಕು. ಅದರ ಆಧಾರದಲ್ಲಿಯೇ ಪರಿಹಾರಸೂತ್ರಗಳನ್ನು ಕಂಡುಕೊಳ್ಳಬೇಕು. ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ಅವು ಸದ್ಯಕ್ಕಷ್ಟೇ ಅಲ್ಲದೇ ಭವಿಷ್ಯದ ದಿನಗಳಲ್ಲಿಯೂ ಅನುಕೂಲಕರ ಎನ್ನಿಸುವ ಹಾಗೆ ಫ್ಲೆಕ್ಸಿಬಲ್ ಆಗಿರಬೇಕು. ಈ ಸಾಧ್ಯತೆಗಳ ದೂರಗಾಮಿ ಪರಿಣಾಮ ಲೆಕ್ಕಿಸಿಯೇ ಆಡಳಿತ ಕೇಂದ್ರಗಳು ಸಾರ್ವಜನಿಕ ನೀತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಈಗ ಇದರ ಗೈರು ಹಾಜರಿ ಎದ್ದುಕಾಣುತ್ತಿದೆ. ಇದರಿಂದಾಗಿ ಭಾರತೀಯ ಸಾಮಾಜಿಕತೆಯು ವಿವಿಧ ಸವಾಲುಗಳನ್ನು ಎದುರಿಸುವುದಕ್ಕಾಗಿಯೇ ತನ್ನ ಶಕ್ತಿಯನ್ನು ವ್ಯಯ ಮಾಡಿಕೊಳ್ಳುತ್ತಿದೆ. ಪ್ರಜೆಗಳ ಸಾಮಾಜಿಕತೆ ಮತ್ತು ಮಾನವ ಸಂಪನ್ಮೂಲದ ಸಶಕ್ತತೆಯು ಸಾರ್ವಜನಿಕ ನೀತಿಯ ವ್ಯಾಪ್ತಿಯ ಒಳಗೆ ಅಧಿಕೃತ ಸ್ಥಾನವನ್ನು ಪಡೆಯುತ್ತಲೇ ಇಲ್ಲ. ಈ ದೃಷ್ಟಿಯಿಂದ ಭಾರತದ ಆಡಳಿತಾತ್ಮಕತೆಯು ರಚನಾತ್ಮಕ ಕಾರ್ಯಸೂಚಿಯ ಕಾಯಕಲ್ಪದಿಂದ ವಂಚಿತವಾಗಿದೆ.

ದಿವ್ಯನಿರ್ಲಕ್ಷ್ಯ ಸೃಷ್ಟಿಸುವ ಬಿಕ್ಕಟ್ಟು

ಈ ಕಾರಣಕ್ಕಾಗಿಯೇ ಕೃಷಿ, ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ, ಕಾಣಿಸಿಕೊಳ್ಳುತ್ತಲೇ ಇರುವ ಸಮಸ್ಯೆಗಳಿಗೆ ಪರಿಹಾರವೇ ಸಾಧ್ಯ ಇಲ್ಲ ಎಂಬ ತಪ್ಪು ಅಭಿಪ್ರಾಯಗಳ ವರ್ತುಲ ಸೃಷ್ಟಿಯಾಗಿದೆ. ಸಮಸ್ಯೆಯೊಂದು ಸೃಷ್ಟಿಯಾದ ತಕ್ಷಣವೇ ಆಡಳಿತವು ಅದರೆಡೆಗಿನ ದಿವ್ಯನಿರ್ಲಕ್ಷ್ಯವನ್ನೇ ತನ್ನ ಅಸ್ತಿತ್ವದ ಮಹತ್ವದ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ತತ್ಪರಿಣಾಮ ನಿರ್ಲಕ್ಷ್ಯಕ್ಕೀಡಾಗುವ ಸಮಸ್ಯೆಯು ಹಲವು ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತದೆ. ಕ್ರಮೇಣ ಜನಸಮುದಾಯವನ್ನು, ತನ್ಮೂಲಕ ಆಡಳಿತದ ವಿವಿಧ ಹಂತಗಳ ಸಹಜ ಕ್ರಿಯೆಯನ್ನು ಮತ್ತಷ್ಟು ಜಡಗೊಳಿಸಿಬಿಡುತ್ತದೆ. ಆಗ ರೈತರ ಆತ್ಮಹತ್ಯೆಯ ಪ್ರಮಾಣ ಹೆಚ್ಚಾದಾಗಲೂ ಆಡಳಿತ ನಿರ್ಲಿಪ್ತತೆಯನ್ನೇ ತನ್ನ ಬಹುದೊಡ್ಡ ಗುಣವಾಗಿಸಿಕೊಳ್ಳುತ್ತದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನ್ಯಾಯಯುತ ಬೆಲೆ ನಿಗದಿಗೊಳಿಸದೇ ಇದ್ದಾಗ ರೈತ ಸಮುದಾಯ ನಲುಗಿದರೂ ಅದು ನಿರ್ಲಕ್ಷ್ಯ ಧೋರಣೆಯೊಂದಿಗಿನ ಮೌನವನ್ನೇ ಅನುಸರಿಸುತ್ತದೆ. ಜಾತಿ-ಧರ್ಮಗಳ ಸಾಂಪ್ರದಾಯಿಕತೆಯ ಜೊತೆಗೆ ಇಡೀ ಸಮಾಜ ತಳಮಳಕ್ಕೀಡಾದಾಗ ಅದರ ಪ್ರಯೋಜನ ಪಡೆಯುವ ಹುನ್ನಾರದ ಪ್ರಬಲರಿಗೆ ದಾರಿ ಮಾಡಿಕೊಡುತ್ತದೆ. ಹೊಸದೇನನ್ನೂ ಕಲಿಸದೇ ಹಳೆಯದ್ದರ ಆಶ್ರಯದಲ್ಲಿಯೇ ಅಸ್ತಿತ್ವ ಕಂಡುಕೊಳ್ಳಲು ಶಿಕ್ಷಣ ರಂಗವು ಹೆಣಗಾಡುತ್ತಿರುವಾಗಲೂ ಅದನ್ನು ಮತ್ತಷ್ಟು ದುರ್ಬಲಗೊಳಿಸುವುದರ ಕಡೆಗೆ ಅತ್ಯುತ್ಸಾಹ ತೋರುತ್ತದೆ. ಆರೋಗ್ಯ ಕಾಯ್ದುಕೊಳ್ಳಲು ಜನಸಮೂಹಕ್ಕೆ ನೆರವಾಗುವ ಜಾಗೃತಿ ಹೆಜ್ಜೆಗಳ ಬದಲು ದೇಹಗಳನ್ನು ಮತ್ತಷ್ಟು ಜಡಗೊಳಿಸಿ ಮೆಡಿಸಿನ್‍ಗಳಿಗೆ ಒಗ್ಗಿಕೊಳ್ಳುವಂಥ ಮನಸ್ಥಿತಿ ರೂಪಿಸುವ ಔದ್ಯಮಿಕ ಒತ್ತಡಗಳಿಗೆ ಈಡಾಗುತ್ತದೆ. ಈ ಹಂತದಲ್ಲಿಯೇ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ತಮ್ಮ ಸಾಂಸ್ಥಿಕ ಶಕ್ತಿಯನ್ನು ವಿಸ್ತರಿಸಿಕೊಳ್ಳುವ ಬದಲು ಯಥಾಸ್ಥಿತಿಗಳನ್ನು ಖಾಯಂ ಆಗಿರಿಸುವ ದೌರ್ಬಲ್ಯದ ಮಿತಿಗಳನ್ನು ತಮ್ಮ ಗುಣಗಳನ್ನಾಗಿಸಿಕೊಳ್ಳುತ್ತವೆ.

ಸಮಗ್ರ ನೀತಿಯ ಅಲೆಯ ಪ್ರಾಧಾನ್ಯತೆ

ಆ ದೌರ್ಬಲ್ಯವು ದೇಶದ ಉಜ್ವಲ ಭವಿಷ್ಯದ ಸಂಭಾವ್ಯತೆಯನ್ನು ತಡೆದುಬಿಡುತ್ತದೆ. ಅಲ್ಲದೇ ಪೀಳಿಗೆಗಳನ್ನು ಶತಮಾನಗಳಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ. ಮುಂದಿನ ಹೆಜ್ಜೆಗಳ ಬದಲು ಹಿಂದಿನ ಜಡತೆಗೇ ಜೋತುಬೀಳುವ ಅವಲಂಬನೆಯ ಸ್ವಭಾವವನ್ನು ಸಾಮಾಜಿಕವಾಗಿ ನೆಲೆಗೊಳಿಸಿಬಿಡುತ್ತದೆ. ಇಂಥ ಅಪಾಯದಿಂದ ಪಾರಾಗಬೇಕಾದರೆ ರಾಜಕೀಯ ಪಕ್ಷಗಳು, ಸಾರ್ವಜನಿಕ ಸಂಸ್ಥೆಗಳು, ವಿವಿಧ ಜನವರ್ಗಗಳು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಪ್ರತಿಸ್ಪಂದಿಸುವ ಆಡಳಿತಾತ್ಮಕ ಸಮಗ್ರ ನೀತಿಗಳ ಅವಶ್ಯಕತೆಯನ್ನು ಮನಗಂಡು ಅವುಗಳ ಪರವಾದ ವ್ಯಾಪಕ ಅಲೆಯನ್ನು ನಿರ್ಮಿಸಬೇಕು. ಹಾಗಾದಾಗ ಮಾತ್ರ ಚುನಾವಣೆ ಇರಲಿ, ಇಲ್ಲದಿರಲಿ ಎಲ್ಲರೂ ರಚನಾತ್ಮಕ ನೀತಿಗಳನ್ನು ಗಮನದಲ್ಲಿರಿಸಿಕೊಂಡು ಮೌಲಿಕ ಸಂವಾದ ಏರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅನಗತ್ಯ ವಿವಾದಗಳ ವೈಭವೀಕರಣ ತಾನಾಗಿಯೇ ನಿಂತು ಸಾರ್ವಜನಿಕ ಆಡಳಿತವು ಸಂವಿಧಾನಾತ್ಮಕ ಮೌಲ್ಯವನ್ನು ತಂದುಕೊಳ್ಳುತ್ತದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ2 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ2 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ2 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ2 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ4 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ4 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ5 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ6 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ7 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending