Connect with us

ರಾಜಕೀಯ

ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳ ಅಬ್ಬರ..!

Published

on

ಬ್ಬ ಸಣ್ಣ ಹುಡುಗ. ಅವನ ಕೈಯಲ್ಲಿ ದೊಡ್ಡ ದೊಡ್ಡ ನಾಲ್ಕು ಕಲ್ಲುಗಳು. ಆ ಫೋಟೋದೊಂದಿಗೆ ರಾರಾಜಿಸುತ್ತಿರುವ ಸಾಲುಗಳು – ‘ನಾನು ರಾಹುಲ್ ಗಾಂಧಿಯನ್ನು ಭೇಟಿ ಮಾಡಬೇಕಿದೆ’. ಫೇಸ್‍ಬುಕ್‍ನಲ್ಲಿ ಈಚೆಗೆ ಕಾಣಿಸಿಕೊಂಡ ಈ ಚಿತ್ರದೊಂದಿಗಿನ ಸಾಲುಗಳು ಭವಿಷ್ಯದ ಪೀಳಿಗೆಯ ಹೆಜ್ಜೆಗಳು ಏನಾಗಬಹುದು ಎಂಬುದರ ಸ್ಪಷ್ಟ ಸುಳಿವನ್ನು ನೀಡುವಂತೆಯೇ ಇವೆ. ಅವುಗಳು ಹಿಂಸೆಯೊಂದಿಗೇ ಗುರುತಿಸಿಕೊಳ್ಳಬೇಕು ಎಂಬ ಕಾರ್ಯಸೂಚಿಯ ಯಶಸ್ಸಿನ ದ್ಯೋತಕವಾಗಿಯೇ ಕಾಣಿಸುತ್ತಿವೆ. ಅಂಬೆಗಾಲಿಟ್ಟು, ಆ ಹಂತವನ್ನು ದಾಟಿಕೊಂಡು ಇದೀಗ ತಾನೆ ನಡೆಯುವುದನ್ನು ಕಲಿತಿರುವ ಅತ್ಯಂತ ಕಿರಿಯ ವಯಸ್ಸಿನ ಸಣ್ಣ ಹುಡುಗನಿಗೆ ಹಿಂಸೆಯ ಭಾಷೆ, ಪರಿಭಾಷೆ ಮತ್ತು ಸ್ವರೂಪವನ್ನು ಪರಿಚಯಿಸುವ ವಿಚಿತ್ರವಾದ ನಡೆಯೊಂದನ್ನು ಸಂಕೇತಿಸುತ್ತಿವೆ.

Rajadharma a column by Dr.N k padmanabh

ಭ್ರಮಾತ್ಮಕ ಚೌಕಟ್ಟುಗಳು

ನಮ್ಮ ದೃಷ್ಟಿಕೋನಗಳು ಈ ಪರಿ ದುರವಸ್ಥೆ ತಲುಪಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾದದ್ದಾದರೂ ಏಕೆ? ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಯಿತೇ? ಆ ಉದ್ದೇಶದ ಹಿಂದೆ ಕಾರ್ಯೋನ್ಮುಖವಾಗಿರುವ ಶಕ್ತಿಗಳು ಯಾವುವು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಮೊದಲು ಈ ದೇಶದ ರಾಜಕಾರಣ ಮತ್ತು ಆಡಳಿತ ನೆಚ್ಚಿಕೊಂಡ ಹೊಸದನ್ನು ಬಹುಬೇಗ ಸ್ವೀಕರಿಸದ, ಸ್ವೀಕರಿಸಿದರೂ ನಿರಾಕರಣೆಯ ಭಾವವ ಸಾಂಪ್ರದಾಯಿಕತೆಯ ಚೌಕಟ್ಟುಗಳನ್ನು ಗೊತ್ತುಮಾಡಿಕೊಳ್ಳಬೇಕಾಗುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯಾನಂತರದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ ಭಾರತೀಯ ರಾಜಕಾರಣದ ವಿವಿಧ ಮಗ್ಗಲುಗಳು ಪರಿಚಯವಾಗುವುದರೊಂದಿಗೇ ಅಹಿಂಸೆಯ ಆಲೋಚನಾ ಕ್ರಮಗಳು ಹಿಂಸೆಯ ಸಂಕುಚಿತತೆಯೊಂದಿಗೆ ಮುಖಾಮುಖಿಯಾದ ವಿವಿಧ ಸಂದರ್ಭಗಳ ಚಾರಿತ್ರಿಕ ಹಿನ್ನೆಲೆ ಗಮನಕ್ಕೆ ಬರುತ್ತದೆ. ಅಹಿಂಸೆಯ ಮಾರ್ಗವು ಸ್ವಾತಂತ್ರ್ಯವನ್ನು ಕಂಡುಕೊಳ್ಳಲು ಸಹಾಯಕವಾದ ನಂತರ ಭಾರತೀಯ ಆಡಳಿತ ಅಳವಡಿಸಿಕೊಂಡ ನಿರ್ವಹಣೆಯ ಮಾದರಿಗೆ ಸಂಬಂಧಿಸಿದ ಸಂಗತಿಗಳು ತಿಳಿಯುತ್ತವೆ.

ಸಾರ್ಥಕತೆಯ ಹಾದಿಯ ನೆನಪು

ಬಾಲ್ಯದಲ್ಲಿ ನಮಗೆ ಹಲವು ಮಹನೀಯರ ತ್ಯಾಗದ ಕಾರಣಕ್ಕಾಗಿಯೇ ಸ್ವಾತಂತ್ರ್ಯ ಲಭಿಸಿರುವುದನ್ನು ಹಿರಿಯರ ಭಾಷಣಗಳು ಮನವರಿಕೆ ಮಾಡಿಕೊಡುತ್ತಿದ್ದವು. ಗಾಂಧಿ ಸೇರಿದಂತೆ ಹಲವರ ಹೋರಾಟದ ಪ್ರತಿಫಲವಾಗಿ ಸ್ವಾತಂತ್ರ್ಯ ನಮ್ಮೊಂದಿಗಿರುವುದನ್ನು ದೃಢೀಕರಿಸುತ್ತಿದ್ದವು. ಆಗ ನಮಗೆ ಹಿಂಸೆಯೇ ಶ್ರೇಷ್ಠ ಎಂಬಂಥ ದಾರಿತಪ್ಪಿಸುವ ದುರ್ಮಾರ್ಗದ ವೈಭವೀಕರಣ ಕಣ್ಣಮುಂದೆ ಬರುತ್ತಲೇ ಇರಲಿಲ್ಲ. ಬದಲಾಗಿ ಎಲ್ಲ ಭಾಷಣಗಳ ಚಿಂತನೆಗಳು ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವ ಹಾದಿ ಯಾವುದಾಗಿರಬೇಕು ಎಂಬುದನ್ನು ಹೊಳೆಸುವುದರ ಕಡೆಗೇ ಕೇಂದ್ರೀಕೃತವಾಗಿರುತ್ತಿದ್ದವು.ಬಾಲ್ಯದ ಅನುಭವವು ಹಲವು ಪಾಠಗಳನ್ನು ಕಲಿಸುತ್ತಿತ್ತು. ಮಕ್ಕಳು ಹೊಡೆದಾಡಿಕೊಂಡು ಬಂದರೆ ದೊಡ್ಡವರು ಬುದ್ಧಿವಾದ ಹೇಳುತ್ತಿದ್ದರು. ಹೊಡೆದಾಟ ಯಾಕೆ ಸರಿಯಲ್ಲ ಸ್ಪಷ್ಟಪಡಿಸುತ್ತಿದ್ದರು. ಹೊಡೆದವನು ಹೊಡೆತ ತಿಂದವನ ಮುಂದೆ ನಿಂತು ಕ್ಷಮೆ ಕೇಳಬೇಕಾಗುತ್ತಿತ್ತು. ಆ ಕ್ಷಮೆಯ ಪ್ರಸ್ತಾಪದೊಂದಿಗೇ ಇಬ್ಬರ ನಡುವೆ ಸ್ನೇಹ ಮತ್ತೆ ಚಿಗುರೊಡೆಯುತ್ತಿತ್ತು. ಸಣ್ಣ ಭಿನ್ನಾಭಿಪ್ರಾಯದ ಜಾಗವನ್ನು ಆಕ್ರಮಿಸಿಕೊಂಡು ಹೊಡೆದಾಡುವಷ್ಟರ ಮಟ್ಟಿಗೆ ಪ್ರಚೋದಿಸಿದ ದ್ವೇಷದ ದಟ್ಟ ಭಾವನೆಯನ್ನು ಆ ಕ್ಷಣವೇ ಅಳಿಸಿಹಾಕಿಬಿಡುತ್ತಿತ್ತು. ಆಮೇಲಾಮೇಲೆ ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳು, ಸಣ್ಣ ಸಣ್ಣ ಜಗಳಗಳು, ಮತ್ತೆ ಒಂದಾಗಿ ಮಾತನಾಡಿಕೊಳ್ಳುವ ಸೊಗಡಿನೊಂದಿಗೇ ಬಾಲ್ಯ ಕಳೆದುಬಿಡುತ್ತಿತ್ತು. ದೊಡ್ಡವರಾಗುತ್ತಿದ್ದಂತೆಯೇ ಸಣ್ಣವರಾಗಿದ್ದಾಗಿನ ಕೆಲವು ಸಣ್ಣತನಗಳ ಪೊರೆಗಳನ್ನು ಕಳಚಿಕೊಳ್ಳುತ್ತಾ ಸಾಗಬೇಕಾಗಿತ್ತು. ಮಕ್ಕಳಾಗಿದ್ದಾಗ ಸಾಧ್ಯವಾಗಿದ್ದ ಈ ವಿವೇಕ ದೊಡ್ಡವರ ಬದುಕಿನೊಳಗೆ ಇಲ್ಲವಾಗುತ್ತದೆ. ಅವಿವೇಕತನದ ಪರಮಾವಧಿಯನ್ನು ಮತ್ತೆ ಮತ್ತೆ ಸಾಬೀತುಪಡಿಸುವ ಹಾಗೆಯೇ ಅವರು ವಿಕೃತಿಗಳೊಂದಿಗೇ ಗುರುತಿಸಿಕೊಳ್ಳುತ್ತಾರೆ. ಈಗಿನ ರಾಜಕಾರಣ ಮತ್ತು ಅದು ಪೋಷಿಸುವ ಆಡಳಿತ ವ್ಯವಸ್ಥೆಯು ಆ ವಿಕೃತಿಗಳನ್ನು ದಟ್ಟವಾಗಿಸುವ ನಕಾರಾತ್ಮಕ ಪಾತ್ರವನ್ನು ಅತ್ಯಂತ ಚಾಣಾಕ್ಷಯುತವಾಗಿ ನಿಭಾಯಿಸುತ್ತಿದೆ.

ಧೀಮಂತಿಕೆಯ ಗೈರುಹಾಜರಿ

ರಾಜಕಾರಣ ಮತ್ತು ಆಡಳಿತ ಒಂದನ್ನೊಂದು ನೆಚ್ಚಿಕೊಂಡಿರುವ ಪರಸ್ಪರ ಪೂರಕವಾದ ಕ್ಷೇತ್ರಗಳು. ಒಂದು ಶಾಸಕಾಂಗಕ್ಕೆ ಬೇಕಾದ ನಾಯಕತ್ವದ ಸಂಪನ್ಮೂಲವನ್ನು ಒದಗಿಸಿಕೊಡುವ ವಲಯವಾದರೆ, ಮತ್ತೊಂದು ಆ ಸಂಪನ್ಮೂಲದ ಆಧಾರದಲ್ಲಿ ಬಹುಮುಖೀ ಪಾತ್ರವನ್ನು ನಿರ್ವಹಿಸುವ ಕ್ರಿಯಾತ್ಮಕ ವ್ಯವಸ್ಥೆ. ಇವೆರಡನ್ನೂ ಪ್ರತಿನಿಧಿಸುವವರು ದೊಡ್ಡವರಾಗಿರಬೇಕು. ಅವರ ದೊಡ್ಡತನವು ಕೇವಲ ವಯಸ್ಸಲ್ಲಷ್ಟೇ ಅಲ್ಲ, ಅವರ ಧೀಮಂತಿಕೆಯ ಮೂಲಕ ಸಾಬೀತಾಗುತ್ತಿರಬೇಕು.ರಾಜಕಾರಣದಲ್ಲಿ ಹಿರಿವಯಸ್ಕ ರಾಜಕಾರಣಿಗಳಿದ್ದಾರೆ. ಆಡಳಿತ ವಲಯದಲ್ಲಿ ಅನುಭವಿ ಅಧಿಕಾರಿಗಳಿದ್ದಾರೆ. ಆದರೆ ಈ ಹಿರಿತನ ಮತ್ತು ಅನುಭವ ಇಡೀ ಸಮಾಜವನ್ನು ಹೊಸ ಹಾದಿಯ ಕಡೆಗೆ ಕೊಂಡೊಯ್ಯುವ ಬದಲು ಹಿಂದಿನ ಅನಾಗರಿಕ ಜಗತ್ತಿನ ಕ್ರೌರ್ಯದ ಕಡೆಗೇ ಹಿಂತಿರುಗಿಸುತ್ತಿದೆಯೇನೋ ಎಂಬ ಆತಂಕ ಆವರಿಸಿಕೊಳ್ಳುತ್ತಿದೆ. ಒಬ್ಬ ರಾಜಕಾರಣಿ ಮತ್ತೊಬ್ಬ ರಾಜಕಾರಣಿಯ ಬಗ್ಗೆ ಕೆಟ್ಟದಾಗಿ ಮಾತನಾಡುವಿಕೆ, ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವ ಭರದಲ್ಲಿ ಹಿಂಸೆಯ ಮನಸ್ಥಿತಿಯನ್ನೇ ಕಾಡಿಸಿಕೊಂಡು ಪ್ರಚೋದಿಸುವ ಬಗೆ – ಇವೆಲ್ಲವೂ ಹಿರಿತನದ ಸಂಕೇತಗಳಾಗುವುದೂ ಇಲ್ಲ. ಅನುಭವ ಶ್ರೇಷ್ಠತೆಯನ್ನೂ ನಿರೂಪಿಸುವುದಿಲ್ಲ.

ನಂಬಿಕೆಯ ನಡಿಗೆ ಮತ್ತು ನಿಜದ ಅರಿವು

ನಂಬಿಕೆಯ ತಂತಿ ಮೇಲಿನ ನಡಿಗೆಯ ಹಾಗೆಯೇ ಸೂಕ್ಷ್ಮಾತಿಸೂಕ್ಷ್ಮ ಸ್ವರೂಪದೊಂದಿಗೆ ಈ ದೇಶದ ಜನರ ತಿಳುವಳಿಕೆಯು ನಿಕಟನಂಟು ಹೊಂದಿದೆ. ಇದು ಅರಿವಿನ ಎತ್ತರ ತಲುಪಿಕೊಳ್ಳುವ ಮುನ್ನವೇ ಇಲ್ಲಿಯ ರಾಜಕಾರಣ ಅವರ ಮನೋಲೋಕವನ್ನುಆವರಿಸಿಕೊಂಡುಬಿಡುತ್ತದೆ. ನಂಬಿಸಿ ಆ ಮೂಲಕ ಸೃಷ್ಟಿಯಾಗುವ ಪರವಾದ ಅಲೆಯ ಮೇಲೆ ಅದು ಯಾವತ್ತೂ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುತ್ತದೆ. ಇಲ್ಲಿಯ ವೈಚಾರಿಕತೆಯು ನಂಬಿಕೆಯೊಂದಿಗೆ ಆರೋಗ್ಯಕರ ಸಂವಾದವನ್ನು ಏರ್ಪಡಿಸಿಕೊಂಡು ಜನಸಮುದಾಯವನ್ನು ಒಂದು ಹೆಜ್ಜೆ ಮುಂದಕ್ಕೆ ಕರೆದೊಯ್ದರೆ, ಅದೇ ನಂಬಿಕೆಯ ಜಗತ್ತನ್ನು ಪ್ರತಿನಿಧಿಸುವ ಧಾರ್ಮಿಕ ಯಜಮಾನಿಕೆಯ ಪ್ರತಿನಿಧಿಗಳು ಮತ್ತು ಅವರೊಂದಿಗೆ ಗುರುತಿಸಿಕೊಂಡ ರಾಜಕೀಯ ಶಕ್ತಿಗಳು ಒಂದು ಹೆಜ್ಜೆ ಹಿಂದಕ್ಕೆ ಕರೆದೊಯ್ಯುತ್ತವೆ.

ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳು

ಈಗ ಏನಾಗಿದೆ ಎಂದರೆ ನಮ್ಮನ್ನು ಮುನ್ನಡೆಸುವ ಬೌದ್ಧಿಕ ಚಲನೆಯ ಜಂಗಮ ಶಕ್ತಿಗಳಿಗಿಂತ ನಮ್ಮನ್ನು ಹಿಂದೆಯೇ ಉಳಿಸಿ ತಟಸ್ಥವಾಗಿ ಉಳಿಸಿ ಸ್ಥಾವರಗೊಳಿಸುವ ಧ್ವನಿಗಳ ಅಬ್ಬರದ ಕಡೆಗಿನ ವ್ಯಾಮೋಹವೇ ಸಾಮೂಹಿಕ ಕಾಯಿಲೆಯಾಗಿ ಸಾರ್ವಜನಿಕ ವಲಯದಲ್ಲಿ ಬೇರೂರಿಬಿಟ್ಟಿದೆ. ಈ ಊನದ ಕಾರಣಕ್ಕಾಗಿಯೇ ಅರಿವಿನ ಆಂದೋಲನದ ಬದಲು ಇಲ್ಲೀಗ ಹಿಂಸೆಯ ದೃಷ್ಟಿಕೋನಗಳು ಹಿಂದೆಂದಿಗಿಂತಲೂ ಹೆಚ್ಚಾಗಿ ಪ್ರಾಮುಖ್ಯತೆ ಪಡೆಯುತ್ತಿವೆ. ಯಾರೊಳಗೂ ತಿಳಿದುಕೊಳ್ಳುವ ಸಂಯಮವಿಲ್ಲ. ಸಹನೆಯಿಂದ ಯೋಚಿಸುವ ತಾಳ್ಮೆಯಿಲ್ಲ. ತಕ್ಷಣವೇ ಪ್ರತಿಕ್ರಿಯಿಸುವ, ಹಾಗೆ ಪ್ರತಿಕ್ರಿಯಿಸುತ್ತಲೇ ಕ್ರೌರ್ಯ ಮೆರೆಯುವ ಪ್ರಚೋದಕ ಉತ್ಸಾಹ ಎಲ್ಲೆಲ್ಲೂ ಕಂಡುಬರುತ್ತಿದೆ. ಇದರ ಭಾಗವಾಗಿಯೇ ಸಣ್ಣ ಮಗುವಿನ ಕೈಯಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನಿಟ್ಟು ‘ನಾನು ರಾಹುಲ್ ಗಾಂಧಿಯನ್ನು ಭೇಟಿಯಾಗಲು ಇಚ್ಛಿಸುತ್ತಿದ್ದೇನೆ’ ಎಂಬ ಒಕ್ಕಣೆಯ ಫೋಟೋ ಫೇಸ್‍ಬುಕ್‍ನ ಆವರಣದಲ್ಲಿ ಕಾಣಿಸಿಕೊಳ್ಳುತ್ತದೆ. ದಿಢೀರನೆ ಅದು ಹಂಚಲ್ಪಡುತ್ತದೆ. ನಾಳಿನ ಪೀಳಿಗೆಯನ್ನು ಪ್ರತಿನಿಧಿಸುವ ಪೋರನ ಹಿಂಸಾಪರ ಫೋಟೋಕ್ಕೆ ಅಸಂಖ್ಯಾತ ಲೈಕ್‍ಗಳು ಹರಿದುಬರುತ್ತವೆ. ಇದು ಅರಿವನ್ನು ಎತ್ತರಿಸಿಕೊಳ್ಳುವ ಲಕ್ಷಣವಲ್ಲ. ಬದಲಾಗಿ ಜನರ ಸ್ವಯಂತಿಳುವಳಿಕೆಯ ಶಕ್ತಿಯ ಮೇಲೆ ತಣ್ಣಗೆ ಆಗುವ ಗದಾಪ್ರಹಾರ.

ರೂಢಿಗತ ಸಂಕುಚಿತ ವಿಧಾನ

ನಂಬಿಕೆಯ ಜಗತ್ತು ಆಧ್ಯಾತ್ಮಿಕ ತಾತ್ವಿಕತೆಯ ಪ್ರಖರತೆಯನ್ನು ತೀವ್ರಗೊಳಿಸುವುದು ಒಂದು ಸಾಧ್ಯತೆ. ಆದರೆ, ಇದೇ ಜಗತ್ತು ದೈವಿಕ ಮತ್ತು ಧಾರ್ಮಿಕ ಮೌಢ್ಯವನ್ನು ಪ್ರತಿಷ್ಠಾಪಿಸುವುದಕ್ಕೆ ಸಹಾಯಕವಾಗುತ್ತದೆ. ಅಷ್ಟೇ ಅಲ್ಲ, ರಾಜಕೀಯದ ಸ್ವರೂಪವನ್ನು ನಿರ್ಧರಿಸುವಷ್ಟರ ಮಟ್ಟಿಗೆ ತನ್ನ ಪ್ರಭಾವವನ್ನು ಪ್ರಬಲವಾಗಿ ಬೇರೂರಿಸಿಬಿಡುತ್ತದೆ. ಇದರ ಪರಿಣಾಮವು ಜನರ ಮನೋಧರ್ಮದ ಮೇಲಾಗುತ್ತದೆ. ಅಧಿಕಾರದಲ್ಲಿರುವ ಮತ್ತು ಅಧಿಕಾರದಲ್ಲಿ ಇಲ್ಲದೇ ಇರುವ ನಾಯಕರೆನ್ನಿಸಿಕೊಂಡವರನ್ನು ಗ್ರಹಿಸುವ ಸಂಕುಚಿತ ವಿಧಾನವನ್ನೂ ರೂಢಿಸಿಬಿಡುತ್ತದೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಬೇಕಿದೆ ಎನ್ನುವ ಪುಟ್ಟ ಪೋರನ ಕೈಯಲ್ಲಿನ ದೊಡ್ಡ ದೊಡ್ಡ ಕಲ್ಲುಗಳ ಫೋಟೋ ಈ ವಿಧಾನ ಎಂಥದ್ದು ಎಂಬುದನ್ನು ನಿರೂಪಿಸಿದೆ. ಲೋಕಸಭೆಯಲ್ಲಿ ನಿರರ್ಗಳವಾಗಿ ಮಾತನಾಡಿ ಭಾಷಿಕ ಪ್ರೌಢಿಮೆ ಮೆರೆದು ಅಧಿಕಾರದಲ್ಲಿರುವವರ ಊನಗಳ ಮೇಲೆ ಬೆಳಕು ಚೆಲ್ಲುವ ಪ್ರಬುದ್ಧ ನಡೆಯನ್ನು ಪ್ರದರ್ಶಿಸುವವರು ಉತ್ತಮ ಸಂಸದೀಯ ಪಟು ಎಂಬ ಹಿರಿಮೆ ಪಾತ್ರರಾಗುವ ಪರಂಪರೆ ಇದೆ. ಆದರೆ, ಇದಕ್ಕೆ ತದ್ವಿರುದ್ಧವಾದ ನಡೆಗಳೊಂದಿಗಿನ ಹೀನ ಸಂಪ್ರದಾಯವನ್ನು ರಾಜಕಾರಣಿಗಳು ಈಗಾಗಲೇ ಆರಂಭಿಸಿಬಿಟ್ಟಿದ್ದಾರೆ. ಅಷ್ಟಕ್ಕೇ ಅವರು ಸಮಾಧಾನಗೊಳ್ಳದೇ, ಸಾಮಾಜಿಕ ಜಾಲತಾಣಗಳ ವೇದಿಕೆಯ ತಾರ್ಕಿಕ ಸಾಧ್ಯತೆಗಳ ಆಯಾಮಕ್ಕೇ ಧಕ್ಕೆಯೊದಗಿಸುವ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸದ್ಯದ ಮತ್ತು ಭವಿಷ್ಯದ ಹಿಂಸಾಪ್ರವೃತ್ತಿಗಳ ವಾತಾವರಣ ಸೃಷ್ಟಿಗೆ ಹೊಸ ಪೀಳಿಗೆಯ ಎಳೆ ಜೀವಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಿಂಬಗಳು ನಕಾರಾತ್ಮಕ ಸಂದೇಶವನ್ನು ಸಾರುತ್ತಿವೆ.

ದ್ವೇಷದ ವಿಷ

ಒಬ್ಬರನ್ನೊಬ್ಬರು ಹಿಂಸಿಸಿಕೊಳ್ಳುವ, ದ್ವೇಷ ಸಾಧಿಸುವ, ಆ ಮೂಲಕ ನೆಮ್ಮದಿಯನ್ನು ತಂದುಕೊಳ್ಳುವ ಭ್ರಮಾತ್ಮಕತೆಯೇ ಶ್ರೇಷ್ಠ ಎಂದು ನಂಬಿಸುವ ಆಟ ಈಗೀಗ ಅಧಿಕೃತತೆಯನ್ನು ಪಡೆದುಕೊಂಡಿದೆ. ಈ ಆಟದ ಓಟವು ಹಲವು ಜೀವಗಳ ಬಲಿಬೇಡುತ್ತದೆ ಎಂಬ ಸತ್ಯದ ಕಡೆಗೆ ಯಾರ ಗಮನವೂ ಇಲ್ಲ. ಅದು ನಮ್ಮನ್ನು ಯಾವ ಕೂಪಕ್ಕೆ ತಳ್ಳುತ್ತದೆ ಎಂಬ ಪರಿಜ್ಞಾನವಿಲ್ಲದೇ ದ್ವೇಷಕ್ಕೆ ಮನಸ್ಸನ್ನು ತಿರುಗಿಸಿಕೊಳ್ಳುವ ರಣೋತ್ಸಾಹವು ಪೀಳಿಗೆಯನ್ನು ಸರ್ವನಾಶದ ಕಡೆಗೆ ಕೊಂಡೊಯ್ಯುತ್ತಿದೆ. ನಮ್ಮ ನಾಯಕರ ಕುರಿತು ಅಸಮಾಧಾನಗೊಳ್ಳುವ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ, ಆ ಮೂಲಕ ಅವರು ನಮ್ಮ ಅಗತ್ಯಗಳೇನೇನು ಎಂಬುದರ ಬಗ್ಗೆ ಆಲೋಚಿಸುವಂತೆ ಒತ್ತಡ ಹಾಕುವುದರ ಬದಲು ವಿರೋಧ ಪಕ್ಷಗಳವರ ಬಗ್ಗೆ ದ್ವೇಷ ಹುಟ್ಟುಹಾಕುವಂಥ ವಿಷದ ಬೀಜಗಳನ್ನು ಬಿತ್ತುವ ಪ್ರಯತ್ನಗಳು ಸಾಮಾಜಿಕ ಜಾಲತಾಣಗಳ ಮೂಲಕ ಮುನ್ನೆಲೆಗೆ ಬರುತ್ತಿರುವುದು ಭವಿಷ್ಯದ ಕರಾಳತೆಯ ಬಗ್ಗೆ ಮುನ್ಸೂಚನೆ ನೀಡುತ್ತಿವೆ.

ನಮಗೆ ಅಧಿಕಾರದಲ್ಲಿರುವವರೂ ಮುಖ್ಯ. ಅವರನ್ನು ಪ್ರಶ್ನಿಸುವ ವಿರೋಧ ಪಕ್ಷಗಳವರೂ ಮುಖ್ಯ. ಜೊತೆಗೆ ತಾರ್ಕಿಕವಾಗಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ವೈಚಾರಿಕ ಚಿಂತಕರೂ ಪ್ರಧಾನ ಪಾತ್ರ ನಿರ್ವಹಿಸುತ್ತಾರೆ. ಈ ಮೂರೂ ವಲಯಗಳವರನ್ನೂ ಪರಸ್ಪರ ದ್ವೇಷದ ನೆಲೆಗಳಲ್ಲಿ ನೋಡುವಂತೆ ಪ್ರಚೋದಿಸುವ ಸಣ್ಣತನದ ರಾಜಕಾರಣ ತನ್ನ ವ್ಯತಿರಿಕ್ತತೆಯನ್ನು ಈಗಾಗಲೇ ಪ್ರದರ್ಶಿಸುತ್ತಿದೆ. ಅಧಿಕಾರ, ಹಣ ಮತ್ತು ಅದಕ್ಕನುಗುಣವಾದ ಎಲ್ಲ ಸೌಲಭ್ಯಗಳನ್ನು ದಕ್ಕಿಸಿಕೊಳ್ಳುವುದರಲ್ಲಿ ಒಂದಾಗುವ ಅಧಿಕಾರರೂಢರು ಮತ್ತು ವಿರೋಧ ಪಕ್ಷಗಳವರಿಗೆ ನಾವು ಸ್ಪಷ್ಟ ಸಂದೇಶ ರವಾನಿಸಬೇಕಿದೆ. ನೀವಿಬ್ಬರೂ ಈ ದೇಶದ ನಿಜವಾದ ಬೆಳವಣಿಗೆಯ ಬಗ್ಗೆ ಆಲೋಚಿಸಿ ಎಂದು ದಿಟ್ಟವಾಗಿ ಕಿವಿಮಾತು ಹೇಳಬೇಕಿದೆ. ಒಬ್ಬರಿಗೊಬ್ಬರು ಹೇಳಿಕೆಗಳ ಮೂಲಕ ಕಚ್ಚಾಡುತ್ತಾ, ಆ ಮೂಲಕವೇ ಹಿಂಸೆಗೆ ಪ್ರಚೋದನೆ ನೀಡುತ್ತಾ, ಬೀದಿಬದಿಯಲ್ಲಿ ಅಮಾಯಕ ಜೀವಗಳ ಮಾರಣಹೋಮಕ್ಕೆ ಕಾರಣವಾಗುವ ರಾಜಕೀಯ ಪ್ರವೃತ್ತಿಗಳನ್ನು ಗಟ್ಟಿದನಿಯಲ್ಲಿ ಖಂಡಿಸಬೇಕಿದೆ. ಹಾಗಾಗದಿದ್ದರೆ ನಮ್ಮ ದೇಶ ಮಹಾನ್ ಆಗುವುದಿಲ್ಲ. ಸಮೃದ್ಧ ಭಾರತದ ಕನಸುಗಳೂ ಸಾಕಾರಗೊಳ್ಳುವುದಿಲ್ಲ.

-ಡಾ.ಎನ್.ಕೆ.ಪದ್ಮನಾಭ

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

Published

on

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ

Published

on

ಸುದ್ದಿದಿನಡೆಸ್ಕ್:ಅಕ್ವೈರ್ಡ್ ಇಮ್ಯುನೊ ಡೆಫಿಷಿಯನ್ಸಿ ಸಿಂಡ್ರೋಮ್-ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ.

ಎಚ್‌ಐವಿ ವಿರುದ್ಧದ ಹೋರಾಟದಲ್ಲಿ ಜನರು ಒಂದಾಗಲು ಮತ್ತು ಎಚ್‌ಐವಿ ಯೊಂದಿಗೆ ಬದುಕು ಸಾಗಿಸುತ್ತಿರುವವರಿಗೆ ಬೆಂಬಲ ಸೂಚಿಸಲು ಈ ದಿನವು ಅವಕಾಶವನ್ನು ಒದಗಿಸುತ್ತದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿಂದು ವಿಶ್ವ ಏಡ್ಸ್ ದಿನ 2024 ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ವರ್ಷದ ವಿಶ್ವ ಏಡ್ಸ್ ದಿನ, ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಚಿಕಿತ್ಸಾ ವಿಧಾನಗಳನ್ನು ಉತ್ತೇಜಿಸುವುದು ಮತ್ತು ಎಚ್‌ಐವಿ-ಏಡ್ಸ್ ನಿಂದ ಪೀಡಿತರ ವಿರುದ್ಧದ ತಾರತಮ್ಯವನ್ನು ತೊಡೆದುಹಾಕುವುದರ ಮೇಲೆ ಕೇಂದ್ರೀಕರಿಸುತ್ತದೆ. ’ಸರಿಯಾದ ಮಾರ್ಗವನ್ನು ತೆಗೆದುಕೊಳ್ಳಿ’ ಎಂಬುದು 2024 ರ ಘೋಷವಾಕ್ಯವಾಗಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಎನ್‌ಎಸಿಓ, 1992 ರಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸುತ್ತಿದೆ. ಈ ಆಚರಣೆಗಳು 2030 ರ ವೇಳೆಗೆ ಏಡ್ಸ್ಅನ್ನು ನಿರ್ಮೂಲನೆಗೊಳಿಸುವ ಜಾಗತಿಕ ಗುರಿಯನ್ನು ಅನುಸರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ

ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್...

ದಿನದ ಸುದ್ದಿ2 days ago

ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ...

ಕ್ರೀಡೆ4 days ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ...

ಕ್ರೀಡೆ4 days ago

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ...

ಕ್ರೀಡೆ5 days ago

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ...

ದಿನದ ಸುದ್ದಿ5 days ago

ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ....

ದಿನದ ಸುದ್ದಿ6 days ago

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100...

ದಿನದ ಸುದ್ದಿ6 days ago

ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ

ಸುದ್ದಿದಿನಡೆಸ್ಕ್:ಅಕ್ವೈರ್ಡ್ ಇಮ್ಯುನೊ ಡೆಫಿಷಿಯನ್ಸಿ ಸಿಂಡ್ರೋಮ್-ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಎಚ್‌ಐವಿ ವಿರುದ್ಧದ ಹೋರಾಟದಲ್ಲಿ ಜನರು ಒಂದಾಗಲು ಮತ್ತು ಎಚ್‌ಐವಿ...

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ; ರಾಷ್ಟ್ರೀಯ ಲೋಕ್ ಅದಾಲತ್

ಸುದ್ದಿದಿನ,ದಾವಣಗೆರೆ:ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...

ದಿನದ ಸುದ್ದಿ1 week ago

ದೊಡ್ಡಘಟ್ಟ | ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆ ದೊಡ್ಡಘಟ್ಟ ಗ್ರಾಮದಲ್ಲಿ ‘ಗುರುಗಳ ನಿಸ್ವಾರ್ಥ ಸೇವೆಗಾಗಿ -1999-2000’ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಕಳೆದ...

Trending