ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದ ಕಿಡಿಗೇಡಿಗಳು
ಸುದ್ದಿದಿನ,ದಾವಣಗೆರೆ: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಭಾವಚಿತ್ರಕ್ಕೆ ಇಂದು ಕಿಡಿಗೇಡಿಗಳು ಕಪ್ಪು ಮಸಿ ಎರಚಿದ ಘಟನೆ ನಗರದ ಜಿಲ್ಲಾಸ್ಪತ್ರೆ ಬಳಿ ನಡೆದಿದೆ.
ಜಿಲ್ಲಾಸ್ಪತ್ರೆ ಆವರಣದ ಇಂದಿರಾ ಕ್ಯಾಂಟೀನ್ ಮುಂಭಾಗದಲ್ಲಿರುವ ಇಂದಿರಾಗಾಂಧಿ ಭಾವಚಿತ್ರ ಯಾರೋ ಕಿಡಿಗೇಡಿಗಳು ಕಪ್ಪುಮಸಿ ರೀತಿಯ ವೇಸ್ಟ್ ಆಯಿಲ್ ಸುರಿದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಪ್ಪು ಮಸಿ ಸ್ವಚ್ಛಗೊಳಿಸಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ಸಾಮಾಜಿಕ ನೆಮ್ಮದಿಗೆ ಭಂಗ ಉಂಟಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243