ಕ್ರೀಡೆ
ಐಪಿಎಲ್ ಟಿ-20 ಕ್ರಿಕೆಟ್ : ಮುಖ್ಯಾಂಶಗಳು
ಸುದ್ದಿದಿನ ಡೆಸ್ಕ್ : ಮುಂಬೈನಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡ 3 ರನ್‌ಗಳಿಂದ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಜಯ ಸಾಧಿಸಿತು.
ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ತಾನ್ ರಾಯಲ್ಸ್ 20 ಓವರ್‌ಗಳಲ್ಲಿ 4ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿತು. ಉತ್ತರವಾಗಿ 166ರನ್‌ಗಳ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ 8 ವಿಕೆಟ್ ನಷ್ಟಕ್ಕೆ 162ರನ್ ಗಳಿಸಲಷ್ಟೇ ಸಾಧ್ಯವಾಯಿತು. ದಿನದ ಮತ್ತೊಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 44 ರನ್‌ಗಳಿಂದ ಕೊಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ಜಯ ಗಳಿಸಿತು.
ಮುಂಬೈನ ಬ್ರೇಬೌರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 215ರನ್ ಗಳಿಸಿತು. ಉತ್ತರವಾಗಿ 216 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಕೊಲ್ಕತಾ ನೈಟ್ ರೈಡರ್ಸ್,19.4 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್ ಆಯಿತು.
ಇಂದು ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ನಡೆಯಲಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243