ದಿನದ ಸುದ್ದಿ
ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ
ಸುದ್ದಿದಿನ ಡೆಸ್ಕ್ : ನಿನ್ನೆ ಮಧ್ಯಾಹ್ನ ಸಂಭವಿಸಿದ ಹೆಲಿಕಾಫ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿಮಾಡಿದೆ. ಅವರ ಹೆಲಿಕಾಪ್ಟರ್ ಪತನಗೊಂಡ ಗುಡ್ಡಗಾಡು ಪ್ರದೇಶದ ಸ್ಥಳವನ್ನು ಟರ್ಕಿಯ ಡ್ರೋನ್ ಅಕಿನ್ಸಿ ಪತ್ತೆ ಮಾಡಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಮೃತಪಟ್ಟ ಅಘಾತಕಾರಿ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅವರು, ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ರೈಸಿ ಅವರ ಕೊಡುಗೆ ಎಂದಿಗೂ ಸ್ಮರಣೀಯ. ಈ ದುಃಖದ ಸಮಯದಲ್ಲಿ ಭಾರತ, ಇರಾನ್‌ನೊಂದಿಗೆ ನಿಂತಿದೆ ಎಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243