Connect with us

ಲೈಫ್ ಸ್ಟೈಲ್

ಇದು ಬೆಲ್ಲದ ತಾಕತ್ತು..!

Published

on

  • ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ

ಬೆಲ್ಲ ಬಹುತೇಕ ಜನರಿಗೆ ಗೊತ್ತು. ಇದನ್ನು ನಾವೆಲ್ಲರೂ ಸಿಹಿ ಖಾದ್ಯಗಳ ತಯಾರಿಕೆಯಲ್ಲಿ ಬಳಸುತ್ತೇವೆ ಅಂತಾ.ಹಾಗಾಗಿ ಸಕ್ಕರೆಯ ಬದಲಾಗಿ ಬೆಲ್ಲವನ್ನು ಅನೇಕ ಕಡೆಗಳಲ್ಲಿ ಬಳಸಲಾಗುತ್ತದೆ. ಹಬ್ಬದ ದಿನಗಳಂದು ವಿಶೇಷ ಸಿಹಿ ತಿಂಡಿ ತಯಾರಿಕೆಯಲ್ಲಿ ಬಹುತೇಕ ಬೆಲ್ಲವನ್ನೇ ಬಳಸುವುದು ಹಿಂದಿನಿಂದಲೂ ಬಂದಿರುವ ಸಂಪ್ರದಾಯವಾಗಿದೆ.

ಸಾಮಾನ್ಯವಾಗಿ ಜನರು ಊಟವಾದ ಮೇಲೆ ಬೆಲ್ಲ ತಿನ್ನುತ್ತಾರೆ. ಆದರೆ ಅದೇಕೆ ಎನ್ನುವುದು ಹಲವರಿಗೆ ಗೊತ್ತಿಲ್ಲ. ಚಳಿಗಾಲದಲ್ಲಿ ಬೆಲ್ಲ ತಿಂದರೆ ವಿಟಮಿನ್ ಗಳು ಮತ್ತು ಲವಣಗಳು ಹೊಟ್ಟೆ ಸೇರುತ್ತವೆ. ಜೊತೆಯಲ್ಲಿಯೇ ನಿರೋಧಕ ಶಕ್ತಿಯನ್ನು ಸೃಷ್ಟಿಸಿ ದೇಹವನ್ನು ಬೆಚ್ಚಗಿಡುತ್ತದೆ. ಶೀತ ಮತ್ತು ಕೆಮ್ಮು ಇದ್ದರೆ ನಿವಾರಿಸುವುದಲ್ಲದೆ, ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದೇ ಕಾರಣದಿಂದ ಈ ಸಹಜ ಸಿಹಿ ಭಾರತದಲ್ಲಿ ಅತೀ ಜನಪ್ರಿಯ ಹಾಗಾಗಿ ನಮ್ಮ ಹಿರಿಯರು ಊಟ ಮುಗಿಸಿ ಬೆಲ್ಲ ಬಾಯಿಗಿಡುವುದು ನಾವೆಲ್ಲರೂ ಕಂಡಿದ್ದೇವೆ.ವಿಶೇಷವೆಂದರೆ ಬೆಲ್ಲದಲ್ಲಿ ಸಕ್ಕರೆಗಿಂತ ಹೆಚ್ಚಿನ ಆರೋಗ್ಯಕಾರಿ ಉಪಯೋಗಳು ಇರುವುದರಿಂದ ಅದು ಸಕ್ಕರೆಗಿಂತ ವಿಶೇಷ ಎನಿಸಿದೆ. ಹಾಗಾದರೆ ಬೆಲ್ಲದ ತಾಕತ್ತಿನ ಪ್ರಾಮುಖ್ಯತೆ ಹಾಗೂ ಅದರಿಂದಾಗುವ ಪ್ರಯೋಜನ ಏನೆಂಬುದನ್ನು ನಾವೆಲ್ಲರೂ ತಿಳಿಯಲೇಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಬೆಲ್ಲವು ಯಾವ ರೀತಿಯಲ್ಲಿ ಮಾನವರಿಗೆ ಸಹಕಾರಿ ಮತ್ತು ಉಪಯೋಗವಾಗುತ್ತದೆ ಎಂಬುದು ಇಲ್ಲಿ ತಿಳಿಸಲು ಸಣ್ಣ ಪ್ರಯತ್ನ ಮಾಡಲಾಗಿದೆ.

ಜೀರ್ಣಕ್ರಿಯೆಗೆ ಸಹಕಾರಿ ಬೆಲ್ಲದ ತಾಕತ್ತು

ಮನುಷ್ಯನ ಜೀರ್ಣಕ್ರಿಯೆ ಚನ್ನಾಗಿಯಾಗಿ ಸಾಗಿದರೆ, ಆ ಮನುಷ್ಯನಿಗೆ ಖಂಡಿತಾವಾಗಿಯೊ ಯಾವುದೇ ರೋಗ ಬರುವುದಿಲ್ಲ ಎನ್ನುವ ಮಾತು ಸತ್ಯವಾದರೆ. ಇನ್ನೊಂದು ಕಡೆಯಲ್ಲಿ ಒಂದು ವೇಳೆ ಆ ಮಾನವನಿಗೆ ಪಚನ ಕ್ರೀಯೇ ಸರಿಯಾಗಿ ಆಗದೇ ಹೋದರೆ, ಆ ವ್ಯಕ್ತಿಗೆ ನೂರಾರು ಕಾಯಿಲೆಗಳು ಖಂಡಿತಾ ಆವರಿಸಿಕೊಳ್ಳುತ್ತವೆ – ಆವರಿಸಿಕೊಳ್ಳಬಹುದಾಗಿದೆ ಎಂಬ ಮಾತು ನಿಜ. ಆದರಿಂದ ಈ ದಿಸೆಯಲ್ಲಿ ಬೆಲ್ಲದ ತಾಕತ್ತಿನ ಅಂಶಗಳನ್ನು ನಾವು ಇಲ್ಲಿ ಗಮನಿಸಿದಾಗ ಇದರ ಶಕ್ತಿ ಸಾಮರ್ಥ್ಯ ಎಂತಹದು ಎನ್ನುವುದು ನಮಗೆ ಅರಿವಾಗುತ್ತದೆ.

ಬೆಲ್ಲದ ಬಳಕೆ ಇಂದು, ನಿನ್ನೆಯದಲ್ಲ ಪ್ರಾಚೀನ ಕಾಲದಿಂದಲೂ ಸಹಾ ಬೆಲ್ಲವನ್ನು ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.ಬೆಲ್ಲ ರುಚಿಯಲ್ಲಿ ಎಷ್ಟು ಸಿಹಿ ಇದಿಯೋ ಅಷ್ಟೇ ಇದರ ಸರಿಯಾದ ಬಳಕೆಯು ಪ್ರಾಮುಖ್ಯತೆ ಪಡೆದಿದೆ.ನಮ್ಮ ದೇಹದ ಆರೋಗ್ಯ ದೃಷ್ಟಿಯಿಂದ ಸುಮಧುರವೆಂದರೆ ತಪ್ಪಿಲ್ಲ. ಏಕೆಂದರೆ ಬೆಲ್ಲ ದೇಹದಲ್ಲಿನ ರಕ್ತವನ್ನು ಶುದ್ಧೀಕರಣ ಮಾಡಲು ನೆರವು ನೀಡುತ್ತದೆ. ಬೆಲ್ಲ ಸೇವನೆಯು ಜೀರ್ಣ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದ್ದು, ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ನೆರವು ನೀಡುತ್ತದೆ.

ಅಜೀರ್ಣ ಎನಿಸಿದಾಗ ಸ್ವತ ಬೆಲ್ಲವನ್ನು ಈರುಳ್ಳಿ ಜೊತೆ ಸೇರಿಸಿ ತಿನ್ನುವುದರಿಂದ, ಉಪಶಮನ ದೊರೆಯುತ್ತದೆ. ಬೆಲ್ಲ ನಮ್ಮ ಹೊಟ್ಟೆಯನ್ನು ಕೂಡಾ ತಂಪಾಗಿಡಲು ನೆರವಾಗಿತ್ತದೆ. ಬೆಲ್ಲದಲ್ಲಿ ಕಬ್ಬಿಣದ ಅಂಶ ಇರುವುದರಿಂದ, ರಕ್ತ ಹೀನತೆಯ ಸಮಸ್ಯೆ ಎದುರಿಸುತ್ತಿರುವ ಬಹು ಜನರಿಗೆ ಇದು ಖಂಡಿತಾ ಉಪಯೋಗಕ್ಕೆ ಬರುತ್ತದೆ.ಕೆಮ್ಮು ಅಥವಾ ಗಂಟಲಿನಲ್ಲಿ ನವೆ ಅಥವಾ ಕೆರೆತ ಉಂಟಾದಲ್ಲಿ ಆಗ ಸ್ವಲ್ಪ ಈರುಳ್ಳಿಯನ್ನು ಸುಟ್ಟು ಅದರೊಂದಿಗೆ ಬೆಲ್ಲವನ್ನು ಸೇರಿಸಿ ತಿನ್ನುವುದರಿಂದ ಕೆಮ್ಮಿನಿಂದ ಉಪಶಮನ ನೀಡುತ್ತದೆ. ಬೆಲ್ಲದ ಚೂರನ್ನು ಬಾಯಿಯಲ್ಲಿ ಹಾಕಿಕೊಳ್ಳುವುದರಿಂದ ಉಸಿರಾಟದ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಹದಿಹರೆಯದ ಹೆಣ್ಣು – ಗಂಡು ಮಕ್ಕಳಲ್ಲಿ ಉಂಟಾಗುವ ರಕ್ತ ಹೀನತೆ ಸಮಸ್ಯೆಯನ್ನು ಶಮನಗೊಳಿಸಲು ಬೆಲ್ಲವು ಸಹಾಯಕವಾಗುತ್ತದೆ ಮತ್ತೆ ಬೆಲ್ಲದ ಸೇವನೆಯು ಮುಖದ ಛಾಯೆಯನ್ನು ಹೆಚ್ಚಿಸುತ್ತದೆ ಎನ್ನುವುದು ಸತ್ಯ ಹಾಗೂ ರಾತ್ರಿ ಮಲಗುವ ಮುನ್ನ ಹಾಲಿಗೆ ಬೆಲ್ಲ ಸೇರಿಸಿ ಕುಡಿಯುವುದರಿಂದ ಸುಗಮವಾಗಿ ಜೀರ್ಣಕ್ರಿಯೆಯು ಸರಿಯಾಗಿ ನಡೆಯುತ್ತದೆ ಹೀಗೆ ಜೀರ್ಣಕ್ರಿಯೆ ಸಮಸ್ಯೆಯ ಪರಿಹಾರದ ಜೊತೆಗೆ ಇನ್ನೂ ನಮ್ಮ ನೂರಾರು ಆರೋಗ್ಯ ಸಮಸ್ಯೆಗಳಿಗೆ ಬೆಲ್ಲ ತಿನ್ನುವುದರಿಂದ ಪರಿಹಾರ ದೊರೆಯುತ್ತದೆ.

ಹಲವು ಉಪಯೋಗಗಳ ಆಗರ ಬೆಲ್ಲದ ತಾಕತ್ತು

ಅತಿಯಾದ ರಕ್ತಹೀನತೆಯಿಂದ ನಿತ್ರಾಣವಾಗುವವರಿಗೆ ಬೆಲ್ಲ ಸೇವನೆ ಅತ್ಯುತ್ತಮ ಪರಿಹಾರ ಮಾರ್ಗ, ಇದರಲ್ಲಿ ಕಬ್ಬಿಣದಂಶ ಅತ್ಯಧಿಕವಾಗಿದೆ. ಬೆಲ್ಲದಲ್ಲಿ ಪೊಟಾಶಿಯಂ ಮತ್ತು ಸೋಡಿಯಂ ಇರುವ ಕಾರಣ ದೇಹದಲ್ಲಿ ಆಮ್ಲೀಯ ತತ್ವಗಳನ್ನು ನಿಭಾಯಿಸುತ್ತದೆ. ಹೀಗಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.ಹಾಲು ಮತ್ತು ಬೆಲ್ಲ ಸೇರಿದರೆ, ಎರಡರಲ್ಲಿನ ಉತ್ತಮ ಗುಣಗಳು ದೇಹಕ್ಕೆ ಸೇರ್ಪಡೆಯಾಗುತ್ತವೆ ಇದರಿಂದ ನಮ್ಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಜೊತೆಗೆ ಪ್ರತಿದಿನ ಒಂದು ತುಂಡು ಬೆಲ್ಲವನ್ನು ಕುಟ್ಟಿ ಪುಡಿಮಾಡಿ ಹಾಲಿನ ಜತೆ ಬೆರೆಸಿ ಕುಡಿದರೆ ಆರೋಗ್ಯ ಸುಧಾರಣೆಯುತ್ತ ಸಾಗುತ್ತದೆ ಹಾಗೆ ಅತ್ಯುತ್ತಮ ಪರಿಣಾಮ ಸಹ ಬೀರಲಿದೆ.

ಬೆಲ್ಲ ಸೇರಿಸಿದ ಹಾಲನ್ನು ಕುಡಿಯುವುದರಿಂದ ರಕ್ತ ಶುದ್ಧೀಕರಣಕ್ಕೆ ನೆರವಾಗಲಿದೆ ಇದರಿಂದ ರಕ್ತದಲ್ಲಿ ಇರುವ ವಿಷ ಅಂಶವನ್ನು ನಾಶ ಮಾಡಲು ಸಾಧ್ಯವಾಗುತ್ತದೆ.( ಬೆಲ್ಲದ ಅತೀ ಲಾಭವೆಂದರೆ ರಕ್ತ ಶುದ್ಧೀಕರಣ,ನಿತ್ಯವೂ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತ ಶುದ್ಧವಾಗಿ ದೇಹವನ್ನು ಆರೋಗ್ಯವಾಗಿಡುತ್ತದೆ.)
ಇದಲ್ಲದೆ ಬೆಲ್ಲ ಬೆರೆಸಿದ ಹಾಲು ಸೇವನೆಯಿಂದ ಜೀರ್ಣಕ್ರಿಯೆಯೂ ಉತ್ತಮಗೊಳ್ಳಲಿದೆ.ಬೆಲ್ಲವನ್ನು ನೀರಿನೊಂದಿಗೆ ಸೇವಿಸುವ ಬದಲಿಗೆ ಹಾಲಿನೊಂದಿಗೆ ಸೇವಿಸಿದರೆ ಉತ್ತಮ ಎಂಬ ಅಂಶವನ್ನು ಆಯುರ್ವೇದ ವಿಜ್ಞಾನ ಪ್ರತಿಪಾದಿಸುತ್ತದೆ. ಸಕ್ಕರೆ ಸೇವನೆಯಿಂದ ದೇಹದ ತೂಕ ಹೆಚ್ಚುವುದು ಖಚಿತ.

ಆದರೆ, ಬೆಲ್ಲ ಸೇವನೆಯಿಂದ ಈ ರೀತಿಯ ಪ್ರಮಾದ ಆಗುವುದಿಲ್ಲ.ಇದಲ್ಲದೆ ಬೆಲ್ಲ ಮಿಶ್ರಿತ ಹಾಲಿನ ಜತೆಗೆ ಚಿಕ್ಕದೊಂದು ಶುಂಠಿ ತುಂಡನ್ನು ಸೇರಿಸಿ ಕುಡಿದರೆ, ಮೂಳೆಗಳ ಸಂದುಗಳಲ್ಲಿ ಆಗುವ ನೋವನ್ನು ಕ್ರಮೇಣ ನಿವಾರಿಸಲಿದೆ. ಪ್ರತಿನಿತ್ಯ ಈ ಅಭ್ಯಾಸವನ್ನು ರೂಢಿಸಿಕೊಂಡರೆ ಒಳ್ಳೆಯದು ಜೊತೆಗೆ ಬೆಲ್ಲ ಸೇರಿಸಿದ ಹಾಲು ಕುಡಿದರೆ ಚರ್ಮದ ಕಾಂತಿ ವೃದ್ಧಿಯಾಗಲಿದೆ. ತುಂಡು ಬೆಲ್ಲವನ್ನು ಪ್ರತಿದಿನ ನಾವು ತೆಗೆದುಕೊಳ್ಳುವ ಆಹಾರದೊಂದಿಗೆ ಸೇವಿಸಿದರೆ ಮುಖದಲ್ಲಿ ಮೊಡವೆಗಳಾಗುವ ಸಾಧ್ಯತೆಗಳು ಕಡಿಮೆಯಿರುತ್ತವೆ. ಜೊತೆಗೆ ಬೆಲ್ಲ ಸೇವನೆಯಿಂದ ಚಳಿಗಾಲದಲ್ಲಿ ಬ್ಯಾಕ್ಟೀರಿಯಾದ ಜೊತೆ ಹೋರಾಡಲು ವಿನಾಯಿತಿ ನೀಡುವಂತಹ ಶಕ್ತಿಯನ್ನು ನೀಡುತ್ತದೆ. ಹೆಚ್ಚಿನ ವ್ಯಕ್ತಿಗಳಿಗೆ ಜೀರ್ಣಕ್ರಿಯೆ ಸಾಮಾನ್ಯ ಸಮಸ್ಯೆಯಾಗಿದೆ.

ಜಂಕ್ ಫುಡ್ ಅನಿಯಮಿತ ಜೀವನಶೈಲಿ ಅಥವಾ ಕಡುಬಯಕೆಯ ಕಾರಣದಿಂದಾಗಿ ಅಜೀರ್ಣ ಉಂಟಾಗುವುದು. ಅಜೀರ್ಣ ಸಮಸ್ಯೆ ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವ್ಯಕ್ತಿಯ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ನಾವೆಲ್ಲರೂ ಅಜೀರ್ಣ, ಮಲಬದ್ಧತೆ, ಅನಿಯಮಿತ ಕರುಳಿನ ಚಲನೆ, ಇತ್ಯಾದಿಗಳಿಂದ ಬಳಲುತ್ತಿದ್ದರೆ ಅಂತಹ ಸಮಯದಲ್ಲಿ ಬೆಲ್ಲ ಸೇವಿಸುವುದು ನಮ್ಮ ಆರೋಗ್ಯಕ್ಕೆ ಅನುಕೂಲಕರವಾಗುತ್ತದೆ ಎನ್ನುವುದು ದಯವಿಟ್ಟು ಮರಿಯಬೇಡಿ. ಹಾಗೂ ನಮ್ಮ ಮೂಳೆ ಗಟ್ಟಿಮುಟ್ಟಾಗಿರಲು ಹಾಲಿನ ಜೊತೆ ಬೆಲ್ಲ ಸೇವನೆಯನ್ನು ದಿನ ನಿತ್ಯ ಮಾಡುವುದು ಒಳ್ಳೆಯದು ಇದರಿಂದ ನಮ್ಮ ಆರೋಗ್ಯ – ಮೂಳೆಗಳು ಸುಸ್ಥಿತಿಯಲ್ಲಿ ಇರುತ್ತದೆ. ಹಾಗೆ ಸುಸ್ತು ನಿವಾರಿಸುತ್ತದೆ ಎನ್ನುವುದು ಸುಳ್ಳಲ್ಲ.

ಬೆಲ್ಲದಲ್ಲಿ ಹಲವು ಆಂಟಿ ಆಕ್ಸಿಡಂಟ್‌ಗಳು ಮತ್ತು ಲವಣಗಳಾದ ಸತು ಮತ್ತು ಸೆಲೆನಿಯಂ ಇವೆ. ಇವು ಸ್ವತಂತ್ರ ಕಣಗಳಿಗೆ ಹಾನಿಯಾಗದಂತೆ ನೆರವಾಗುತ್ತದೆ. ಸೋಂಕುಗಳ ವಿರುದ್ಧವೂ ನೆರವಾಗುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಏರಿಸಲೂ ಬೆಲ್ಲ ಸಹಕಾರಿಯಾಗಿದೆ.

ಇಂತಹ ಅನೇಕ ರೋಗಗಳ ಆಗಾರಕ್ಕೆ ಬೆಲ್ಲಾ ಮಾಹಾ ಮದ್ದಾಗಿ,ನಮ್ಮಲ್ಲರ ಆರೋಗ್ಯವನ್ನು ಕಾಪಾಡುತ್ತದೆ. ಆದರಿಂದ ಬೆಲ್ಲದ ಬಗ್ಗೆ ಉದಾಸೀನ ಮಾಡದೇ, ದಿನನಿತ್ಯದ ನಮ್ಮ ಅಡಿಯಲ್ಲಿ ಬಳಕೆ ಮಾಡುವ ಮೂಲಕ ಅದರ ಸದುಪಯೋಗ ಪಡೆದುಕೊಳ್ಳೋಣ.

ವಯಸ್ಕರ/ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳಿಗೆ – ಪರಿಹಾರ ಬೆಲ್ಲ

ಹದಿಹರೆಯದ ಹೆಣ್ಣು ಮಕ್ಕಳು ಮತ್ತು ಗರ್ಭಿಣಿಯರು ಬೆಲ್ಲವನ್ನು ತಿನ್ನುವುದರಿಂದ ರಕ್ತಹೀನತೆ ಸಮಸ್ಯೆಯನ್ನು
ಪರಿಣಾಮಕಾರಿಯಾಗಿ(ಅನೀಮಿಯದಿಂದ ರಕ್ಷಣೆ ಪಡೆಯಲು ಸಾಧ್ಯ.- ಗರ್ಭಿಣಿಯರು ರಕ್ತಹೀನತೆಯಿಂದ ಬಳಲುವುದು ಸಾಮಾನ್ಯ ಸಂಗತಿ. ಇದರ ಪರಿಹಾರಕ್ಕೆ ನಿತ್ಯವೂ ಬೆಲ್ಲ ಸೇರಿಸಿದ ಹಾಲು ಕುಡಿದರೆ, ಈ ಕೊರತೆ ನಿವಾರಣೆಯಾಗಲಿದೆ.) ತಡೆಗಟ್ಟಬಹುದು.ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಮೂಲಕ ದೇಹದ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಇಡುತ್ತದೆ.

ಹಾಗೂ ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ{ಮಹಿಳೆಯರು ಮಾಸಿಕ ದಿನಗಳಲ್ಲಿ ಅನುಭವಿಸುವ ನೋವನ್ನು ತಡೆಯಲು ಬೆಲ್ಲದಷ್ಟು ಸಮರ್ಥವಾಗಿ ಕಡಿಮೆಗೊಳಿಸುವ ಔಷಧಿ ಇನ್ನೊಂದಿಲ್ಲ ಎಂಬ ಮಾತಿದೆ ಆದ್ದರಿಂದ ಬೆಲ್ಲವನ್ನು ತಿನ್ನುವುದು ಸೊಕ್ತ -ಮಾಸಿಕ ದಿನಗಳ ಹಿಂದಿನ ಮತ್ತು ನಂತರದ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ನೋವಿನಿಂದ ಪಾರಾಗಲು ಚಿಕ್ಕಚಮಚದಷ್ಟು ಬೆಲ್ಲದ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ, ದಿನಕ್ಕೆರೆಡು ಬಾರಿ ಕುಡಿದರೆ, ನೋವು ಕ್ರಮೇಣ ಕಡಿಮೆಯಾಗಲಿದೆ.} ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‌ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‌ಗಳು ದೇಹಕ್ಕೆ ಆರಾಮ ಕೊಡುತ್ತದೆ.

ಬೆಲ್ಲದಲ್ಲಿ ಕಬ್ಬಿಣ ಮತ್ತು ಫೊಲೇಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿ ಇಡುತ್ತದೆ. ಇವುಗಳಲ್ಲದೆ
ಸಂಧಿವಾತ, ಅಸ್ತಮಾಗಳಿಗೂ ಬೆಲ್ಲ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ.ಜೊತೆಗೆ
ಮೊಡವೆ ಇದ್ದರೆ ಬೆಲ್ಲವನ್ನು ತಿನ್ನಿ. ಇದು ಮೊಡವೆಯನ್ನು ಕಡಿಮೆಗೊಳಿಸುತ್ತದೆ. ತ್ವಚೆಯ ಹೊಳಪನ್ನೂ ಹೆಚ್ಚಿಸುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಮತ್ತು ಬೆಲ್ಲ ಒಂದು ಅತೀ ಸಹಜವಾದ ದೇಹ ಸ್ವಚ್ಛಗೊಳಿಸುವ ಸಾಧನ. ಹೀಗಾಗಿ ಬೆಲ್ಲ ಸೇವಿಸುವುದು ದೇಹದಿಂದ ಅನಗತ್ಯ ಕಣಗಳನ್ನು ನಿವಾರಿಸುತ್ತದೆ.

ಶ್ವಾಸಕೋಶ, ಶ್ವಾಸನಾಳ, ಕರುಳು, ಹೊಟ್ಟೆ ಮತ್ತು ಅನ್ನನಾಳವನ್ನು ಸ್ವಚ್ಛಗೊಳಿಸುತ್ತದೆ. ಅತೀ ಮಾಲಿನ್ಯವಿರುವ ಜಾಗದಲ್ಲಿ ಕೆಲಸ ಮಾಡುವವರು ಬೆಲ್ಲ ತಿನ್ನುವುದು ಉತ್ತಮ.ಬೆಲ್ಲ ಸಾಮಾನ್ಯ ದೇಹದ ಉಷ್ಣತೆ ಕಾಪಿಡಲು ನೆರವಾಗುತ್ತದೆ. ಬೆಲ್ಲದ ತಂಪು ನೀರು ಕುಡಿಯುವುದರಿಂದ ಬೇಸಿಗೆಗೆ ಯಲ್ಲಿ ಪ್ರಯೋಜನಕಾರಿ ಯಾಗಲಿದೆ ಜೊತೆಗೆ ಹೊಟ್ಟೆಗೆ ತಂಪು ನೀಡುತ್ತದೆ.ಹೀಗೆ ಹತ್ತು ಹಲವು ರೀತಿಯ ಆರೋಗ್ಯ ಸಮಸ್ಯಗಳಿಗೆ ಪರಿಹಾರ ಖಂಡಿತಾ ನೀಡುತ್ತದೆ ಹಾಗೂ ವಿಶೇಷವಾಗಿ ಮಹಿಳೆಯರಿಗೆ/ವಯಸ್ಕರರಿಗೆ ಮತ್ತು ಮಕ್ಕಳ ಆರೋಗ್ಯಕ್ಕೆ ಬೆಲ್ಲವು ಅತ್ಯುತ್ತಮ ಮನೆಯ ಸಂಪ್ರದಾಯಿಕ ಮದ್ದಾಗಿದೆ.

ವಿವಿಧ ಕಾಯಿಲೆಗಳ ಸಂಹಾರಕ್ಕೆ ಬೇಕೇ ಬೇಕು ಬೆಲ್ಲ

ಬೆಲ್ಲದಲ್ಲಿ ಮೆಗ್ನೇಶಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಿದೆ 10 ಗ್ರಾಂ ಬೆಲ್ಲದಲ್ಲಿ 16 ಮಿಲಿಗ್ರಾಂ ಮೆಗ್ನೇಶಿಯಂ ಇರುತ್ತದೆ ಇದರಿಂದ ಕರುಳಿನ ಕೆಲಸಕ್ಕೆ ಪ್ರಯೋಜನವಾಗುತ್ತದೆ ಮತ್ತು ಶ್ವಾಸಕೋಶದ ಸಮಸ್ಯೆಗೆ ಬೆಲ್ಲವನ್ನು ನಿತ್ಯವೂ ಸೇವಿಸುವುದರಿಂದ ಆಸ್ತಮಾ, ಬ್ರೋನ್ಷಿಟಿಸ್ ಸಮಸ್ಯೆ ನಿವಾರಣೆಯಾಗಲಿದೆ. ಎಳ್ಳು – ಬೆಲ್ಲ ಬೆರೆಸಿ ಸೇವಿಸಿದರೆ ಶ್ವಾಸಕೋಶ ಸಮಸ್ಯೆಗೆ ಉತ್ತಮ ಪರಿಹಾರವಾಗುತ್ತದೆ ಹಾಗೆ ಸಂಧಿ ನೋವಿದ್ದರೆ ಬೆಲ್ಲ ಉತ್ತಮ ನೋವು ನಿವಾರಕ ಔಷಧಿ ಶುಂಠಿ ಜೊತೆ ಬೆಲ್ಲ ಸೇವಿಸಿ
ತಿನ್ನಬಹುದು ತಿನ್ನುವುದರಿಂದ ಸಂಧಿ ನೋವು ಖಂಡಿತಾ ವಾಸಿಯಾಗುತ್ತದೆ.

ಮಂಡಿ ನೋವು, ಕೈಕಾಲು ನೋವು ಇವುಗಳನ್ನು ಕಮ್ಮಿ ಮಾಡುವಲ್ಲಿ ಬೆಲ್ಲ ಪ್ರಯೋಜನಕಾರಿಯಾಗಿದೆ ಜೊತೆಗೆ
ತಲೆನೋವು ಕಾಣಿಸಿಕೊಂಡಾಗ ಒಂದು ಚೂರು ಬೆಲ್ಲ ತಿಂದು ಆರಾಮವಾಗಿರಿ ಹಾಗೂ ತೂಕ ಇಳಿಸಲು ಬೆಲ್ಲ ಅತ್ಯುತ್ತಮ ಅಂಶ, ಪೊಟಾಶಿಯಂ ಹೆಚ್ಚಾಗಿರುವ ಕಾರಣ ಎಲೆಕ್ಟ್ರೊಲೈಟ್ ಗಳನ್ನು ಸಮತೋಲನ ಮಾಡಿ ಚಯಾಪಚಯ ಚೆನ್ನಾಗಿರಲು ಬೆಲ್ಲ ನೆರವಾಗುತ್ತದೆ.

ಹೀಗಾಗಿ ತೂಕ ಇಳಿಸುವಲ್ಲಿ ಉತ್ತಮ ಜೊತೆಗೆ
ಕಾರ್ಬೋಹೈಡ್ರೇಟ್ ದೇಹಕ್ಕೆ ಕೊಟ್ಟರೆ, ಬೆಲ್ಲ ದೇಹಕ್ಕೆ ಧೀರ್ಘ ಕಾಲದ ಶಕ್ತಿ ಕೊಡುತ್ತದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಸುವುದಿಲ್ಲ. ಸುಸ್ತು ಮತ್ತು ನಿಶ್ಶಕ್ತಿ ಇರುವವರಿಗೂ ಉತ್ತಮ – ಸಹಕಾರಿ ಎನ್ನುವುದು ನಾವ್ಯಾರು ಅಲ್ಲಗಳೆಯುವಂತಿಲ್ಲ ಹಾಗೂ ಶೀತ ಮತ್ತು ಕಫ, ಜ್ವರ ಇದ್ದಾಗ ಬೆಲ್ಲ ತಿನ್ನಬೇಕು. ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯುವ ಮೂಲಕ ಈ ರೋಗಗಳಿಗೆ
ಕಡಿವಾಣ ಹಾಕಬಹುದಾಗಿದೆ. ಕೆಮ್ಮು ಕಾಣಿಸಿದರೆ ಮತ್ತು ಕೋಲೆಸ್ಟ್ರಾಲ್ ಅತಿಯಾದಾಗ ಈರುಳ್ಳಿ ಅಥವಾ ಬೆಳ್ಳುಳ್ಳಿಯನ್ನು ಸುಟ್ಟು ಅದನ್ನು ಬೆಲ್ಲದ ಜೊತೆ ತಿನ್ನುವುದು ಒಳ್ಳೆಯದು ಇದರಿಂದ ಕೆಮ್ಮು,‌ಕೋಲೆಸ್ಟ್ರಾಲ್ ತಡೆಗಟ್ಟಲು ಸಹಕಾರವಾಗುತ್ತದೆ.

ಖಂಡಿತ ಗುಣವಾಗುವುದರಲ್ಲಿ ಅನುಮಾನವೇ ಬೇಡ ಹಾಗೂ ಉಸಿರಾಟ ತೊಂದರೆ ಇದ್ದರೆ ಬೆಲ್ಲದ ಚೂರನ್ನು ಬಾಯಿಗೆ ಹಾಕಿಕೊಂಡರೆ ಉಸಿರಾಟದ ತೊಂದರೆ ಕಡಿಮೆಯಾಗುತ್ತದೆ ಮತ್ತೆ ಅಸ್ತಮಾ ಕಾಯಿಲೆ ಇರುವವರು ದಿನಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲವನ್ನು ತಿನ್ನುವುದರಿಂದ ಈ ರೋಗ ಹತೋಟಿಯಲ್ಲಿ ಇಡಬಹುದು. ಇದಲ್ಲದೆ ಬೆಲ್ಲ ದೇಹದಲ್ಲಿ ಜೀರ್ಣಕ್ರಿಯೆಗೆ ನೆರವಾಗುವ ಎನ್‌ಜೈಮ್‌ಗಳನ್ನು ಸಕ್ರಿಯಗೊಳಿಸುತ್ತದೆ. ಜಠರದ ಚಲನೆಗೆ ನೆರವಾಗಿ ಮಲಬದ್ಧತೆಯಿಂದ ರಕ್ಷಿಸುತ್ತದೆ ಹಾಗೂ ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕಗಳನ್ನು ಹೊರ ಹಾಕಲು ನೆರವಾಗುತ್ತದೆ. ದೇಹದಿಂದ ಪರಿಣಾಮಕಾರಿಯಾಗಿ ವಿಷನಿವಾರಿಸಬೇಕೆಂದಲ್ಲಿ ಖಂಡಿತಾ ಬೆಲ್ಲ ತಿನ್ನಿ.ತಿನ್ನುವ ಮೂಲಕ ವಿವಿಧ ಕಾಯಿಲೆಗಳಿಗೆ ಖಂಡಿತಾ ಬೆಲ್ಲವು ಪರಿಹಾರ ನೀಡುತ್ತದೆ. ಎನ್ನುವುದರಲ್ಲಿ ಎರಡು ಮಾತಿಲ್ಲ.

ಆಶಯ ಮಾತು

ಆಧುನಿಕ ಜೀವನ ಶೈಲಿಗೆ ಮಾರುಹೋಗಿರುವ ನಾವುಗಳು ಇದಾದರೂ ನಮ್ಮ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚು ಒಲವು – ಸಮಯ ನೀಡುವುದು ಅವಶ್ಯವಾಗಿದೆ. ಯಾಕೆಂದರೆ ನಾವೆಲ್ಲರೂ ದಿನನಿತ್ಯ ಬಳಕೆ ಮಾಡಿಕೊಳ್ಳುತ್ತಿರುವ ರಾಸಾಯನಿಕ ಪದಾರ್ಥಗಳು,ತಿಂಡಿ ತಿನಿಸುಗಳನ್ನು ನಮ್ಮ ಆರೋಗ್ಯವನ್ನು ಸಂಪೂರ್ಣವಾಗಿ ಹಾಳುಮಾಡುತ್ತಿವೆ ಹಾಗೆ ವಯಸ್ಸು ಕ್ಷೀಣಿಸುತ್ತಿದೆ ಎನ್ನುವುದು ನಮ್ಮಗೆಲ್ಲರಿಗೂ ಗೊತ್ತಿರುವ ಸಂಗತಿ ಅಲ್ಲವೇ ?

ಆದಕಾರಣ ಇಂತಹ ಭಯಂಕರ ಜೀವ ಹಾನಿ ಅಂಶಗಳ ಪದಾರ್ಥಗಳನ್ನು ಕೊಡಲೇ ನಿಲ್ಲಿಸುವ ಮೂಲಕ ನಮ್ಮ ಪೂರ್ವಜರು ಹಾಕಿ ಕೊಟ್ಟ ಸಂಪ್ರದಾಯದ ಸಾವಯವದ ಪದ್ಧತಿಯನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವ ದಿಸೆಯಲ್ಲಿ ಹೆಜ್ಜೆ ಹಾಕೋಣ.ಬೆಲ್ಲವನ್ನು ದಿನನಿತ್ಯ ತಿನ್ನಲು ಪ್ರಮಾಣಿಕವಾಗಿ ಪ್ರಯತ್ನ ಮಾಡೋಣ, ನಮ್ಮ ಆರೋಗ್ಯದ ಜೊತೆಗೆ ಇತರರ ಆರೋಗ್ಯವನ್ನು ಕಾಪಾಡಿಕೊಂಡು, ನೆಮ್ಮದಿಯಾಗಿ ಬಾಳೋಣ.

ಕೊನೆಯ ಮಾತು

ಇಂದು ಸಧ್ಯ ಬೆಲ್ಲ ತಿನ್ನುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಏಕೆಂದರೆ ಬಹುತೇಕ ಮಂದಿ ಸಕ್ಕರೆಯತ್ತ ವಾಲುತ್ತಿರುವುದೇ ಇದಕ್ಕೆ ಕಾರಣ. ಆದರೆ, ಬೆಲ್ಲದಿಂದಾಗುವ ಉಪಯೋಗಗಳ ಬಗ್ಗೆ ಬಲ್ಲವರಿಗೆ ಮಾತ್ರವೇ ತಿಳಿದಿರುತ್ತದೆ. ಉಳಿದವರೂ ಇದರ ಸದುಪಯೋಗ ಪಡೆಲೇಬೇಕು ಜೊತೆಗೆ ಬೆಲ್ಲ ದಿನಾಲೂ ತಿನ್ನಲು ಹಾಗೂ ಊಟದಲ್ಲಿ ಸೇರಿಸಿ ಊಟ ಮಾಡಲು ಯತ್ನಿಸುವುದು ನಮ್ಮ ಆರೋಗ್ಯ ಹಿತದೃಷ್ಟಿಯಿಂದ ಒಳ್ಳೆಯದು ಶರಣ ಬಂಧುಗಳೆ.ಬೆಲ್ಲ ಕೇವಲ ಸಿಹಿ ಪದಾರ್ಥವಾಗಿರದೆ, ಔಷಧಿಯುಕ್ತ ಸಿಹಿಯಾಗಿದೆ.

ನೋಡಲಿಕೆ ಕಂದು ಅಥವಾ ಕಪ್ಪಗಿರುವ ಕಾರಣ ಯುವಪೀಳಿಗೆಯವರು ಬೆಲ್ಲ ತಿನ್ನಲು ಹಿಂದೇಟು ಹಾಕುತ್ತಿರಬಹುದು. ಆದರೆ, ಬೆಳ್ಳಗೆ ಕಾಣುವ ಸಕ್ಕರೆಗಿಂತಲೂ ಬೆಲ್ಲ ಅತ್ಯುತ್ತಮ ಎಂಬುದನ್ನು ಮರೆಯಬಾರದು. ಪ್ರತಿಯೊಬ್ಬರ ಮನೆಗಳಲ್ಲೂ ಲಭ್ಯವಾಗುವ ಬೆಲ್ಲವನ್ನು ಮನೆಮದ್ದಿನ ರೂಪದಲ್ಲಿ ಉಪಯೋಗಿಸುವ ಮೂಲಕ, ಹಲವು ಬಗೆಯ ಸಮಸ್ಯೆಗಳನ್ನು ದೂರವಿಡಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

Trending