ರಾಜಕೀಯ
ಮಂಡ್ಯ | ಯಡಿಯೂರಪ್ಪ ಹಗಲುಗನಸು ಕಾಣ್ತಿದ್ದಾರೆ, ನಾವು 9ಲಕ್ಷ ಮತಗಳ ಅಂತರದಲ್ಲಿ ಗೆಲ್ತೇವೆ : ಜಮೀರ್ ಅಹಮದ್
ಸುದ್ದಿದಿನ,ಮಂಡ್ಯ : ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ ಜೊತೆ ಪ್ರಚಾರಕ್ಕೆ ಆಗಮಿಸಿದ್ದೀವಿ. ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ನಾವು ಭಾಗವಹಿಸುತ್ತಿದ್ದೇವೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಿಗೆ ಪ್ರಚಾರ ಮಾಡುವುದಿಲ್ಲ ಎಂಬ ಬಗೆಗೆ ಮಾಧ್ಯಮಗಳಲ್ಲಿ ಸುದ್ದಿ ಹರಡಿತ್ತು. ಅದೇಲ್ಲ ಬರೀ ಮಾದ್ಯಮಗಳ ಊಹಾಪೋಹಾ ಅಷ್ಟೇ ಎಂದು ಮಂಡ್ಯದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ 1 ಲಕ್ಷ ಮತ ಪಡೆದುಕೊಳ್ಳ ಬಹುದು.ಜೆಡಿಎಸ್ ಕಾಂಗ್ರೆಸ್ ಮತಗಳು 10 ಲಕ್ಷಕ್ಕೂ ಹೆಚ್ಚಿವೆ. ಹೀಗಾಗಿ ನಾವು 9 ಲಕ್ಷಗಳ ಅಂತರದಲ್ಲಿ ಗೆಲ್ಲುತ್ತೇವೆ. ನಮ್ಮ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವು ಇಂದಿನಿಂದ ಚುನಾವಣಾ ಪ್ರಚಾರಕ್ಕೆ ಇಳಿಯುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಪಕ್ಷವನ್ನ ತಾಯಿಯ ಹಾಗೆ ನೋಡ್ತಾರೆ ಹಾಗಾಗಿ ಯಾವುದೇ ಮುನಿಸಿಲ್ಲ ಎಂದು ಅಭಿಪ್ರಾಯ ಪಟ್ಟರು.
ಯಡಿಯೂರಪ್ಪ ಹಗಲುಗನಸು ಕಾಣ್ತಿದ್ದಾರೆ
ಎಲ್ಲರೂ ರಾತ್ರಿ ಕನಸು ಕಂಡರೆ ಯಡಿಯೂರಪ್ಪ ಸರ್ಕಾರ ಈಗ ಬೀಳುತ್ತೆ ಆಗ ಬೀಳುತ್ತೆ ಎಂದು ಹಗಲು ಕನಸು ಕಾಣ್ತಿದ್ದಾರೆ. ಶಿವರಾಮೇಗೌಡರ ಪ್ರಚಾರಕ್ಕೆ ರಮ್ಯಾ, ಅಂಬರೀಶ್ ಬರ್ತಾರೆ.ರಮೇಶ್ ಜಾರಕಿ ಹೋಳಿ ಅವರು ಡಿ ಕೆ ಶಿವಕುಮಾರ್ ಅವರ ಕುರಿತು ಹೇಳಿಕೆ ನೀಡಿಲ್ಲ.ಶೋ ಅಪ್ ಮಾಡ್ಬೇಡಿ ಅಂತ ಎಲ್ರೂನು ಕುರಿತು ಹೇಳಿದ್ದಾರೆ ಡಿ ಕೆ ಶಿವಕುಮಾರ್ ಅವರ ಕುರಿತು ಹೇಳಿದ್ದಾರೆ ಅನ್ನೊದು ಮಾಧ್ಯಮದ ಸೃಷ್ಟಿ. ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲು ನಾವು ಬಿಡುವುದಿಲ್ಲ. ಒಂದು ವೇಳೆ ಅವರು ನಿವೃತ್ತಿಯಾದರೂ ನಾವು ಮನೆಯಿಂದ ಎತ್ತಾಕೊಂಡು ಬರ್ತಿವಿ. ಕಾರ್ಯಕರ್ತರಲ್ಲಿ ಗೊಂದಲ ಅಸಮಾಧಾನ ಇರುವುದು ನಿಜಾ.ಇದು ಉಪ ಚುನಾವಣೆ ಇರೋದ್ರಿಂದ ಒಪ್ಪಂದವಾಗಿದೆ ಹಾಗಾಗಿ ಕ್ಷೇತ್ರ ಬಿಟ್ಟು ಕೊಡಲಾಗಿದೆ. ಮುಂದಿನ ಚುನಾವಣೆಗೆ ಏನಾಗುತ್ತೊ ಗೊತ್ತಿಲ್ಲ ಎಂದರು.
ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರು 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ತಾರೆ.
ಕಾಂಗ್ರೆಸ್ ನಲ್ಲಿದ್ದು ಬಿಜೆಪಿಗೆ ಹೋದ ಮಾತ್ರಕ್ಕೆ ಜನ ಬಿಜೆಪಿಗೆ ಮತ ಹಾಕ್ತಾರಾ..? ಜೆಡಿಎಸ್ ರೆಬಲ್ ಶಾಸಕರಾದ ನಾವು 7 ಜನರಿಗೆ ರಾಜಕೀಯವಾಗಿ ಯಾವುದೇ ರೀತಿಯ ತೊಂದರೆಯಾದರೂ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ. ನಾನು ಚುನಾವಣೆ ಟೈಂ ಲಿ ಕುಮಾರಸ್ವಾಮಿ ಅವರನ್ನ ಕುರಿತು ಕೆಟ್ಟದಾಗಿ ಮಾತನಾಡಿದ್ದು ನಿಜಾ. ಆದ್ರೆ ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿ ತಾವು ಜಾತ್ಯಾತೀತರು ಅನ್ನೋದು ಸಾಬೀತು ಪಡಿಸಿದ್ದಾರೆ ಎಂದು ನುಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಅಲ್ಲಂ ಪ್ರಶಾಂತ ಅಂಗಲಾಚಿ ಬೇಡಿದ್ರೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರಾಕರಿಸಿದ ಭದ್ರತಾ ಸಿಬ್ಬಂದಿ
ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಹತ್ತಿರದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಅವರ ಉಪಚುನಾವಣೆ ಅಂಗವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದ ಮುಂಚೆಯೇ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತಗೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರಾಕರಣೆ ಮಾಡಿದ ಕೈಗಾರಿಕಾ ಭದ್ರತಾ ಸಿಬ್ಬಂದಿಗಳು ಇಲ್ಲ, ಈ ಸಮಯದಲ್ಲಿ ಅಲ್ಲಂ ಪ್ರಶಾಂತ ಇಲ್ಲ ನಾನು ಕಾಂಗ್ರೆಸ್ ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷ, ಭದ್ರತಾ ಸಿಬ್ಬಂದಿಗಳಿಗೆ ವಿಮಾನ ನಿಲ್ದಾಣದಲ್ಲಿ ಅಂಗಲಾಚಿ ಬೇಡಿದರೂ ನಿರಾಕರಿಸಿದರು.
ಅಲ್ಲಂ ಪ್ರಶಾಂತ ಇಲ್ಲ ಸರ್ ನಾನು ಎಸ್.ಪಿ ಗೆ ಹೇಳುತ್ತೇವೆ, ಸಿಬ್ಬಂದಿ ಕೇಳಿ ಎಂದರು. ನಂತರ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಲ್ಲಂ ಪ್ರಶಾಂತ ಸರ್ ಹೇಳಿ ನಿಮ್ಮ ಸಿಬ್ಬಂದಿ ಕೇಳ್ತಾ ಇಲ್ಲ ಎಂದ ಕೂಡಲೇ, ಕೈ ಮಾಡಿದ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ನಂದರೆಡ್ಡಿ ಅವರು ಹೇಳಿದ ಕೂಡಲೇ ವಿಮಾನ ನಿಲ್ದಾಣ ಪ್ರವೇಶ ಮಾಡಿದರು.
ಆದರೆ ಪ್ರಶಾಂತ ಪ್ರವೇಶ ದ್ವಾರದ ಮುಂದೆ ಕೇಳಿಕೊಂಡಾಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ನಂದರೆಡ್ಡಿ, ಸೈಬರ್ ಕ್ರೈಮ್ ಸಿಪಿಐ ಠಾಧೋಡ್ ಜಿಲ್ಲಾ ಅದ್ಯಕ್ಷ ಅಲ್ಲಂ ಪ್ರಶಾಂತ ಮುಂದೆ ನೋಡಿಕೊಂಡು ಹಾದು ಹೋದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಬಲ ಬೆಲೆ | 185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಹಿಸುವ ಯೋಜನೆ : ಸಚಿವ ಪ್ರಲ್ಹಾದ್ ಜೋಶಿ
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಲೆ – ಎಂಎಸ್ಪಿ ಹೆಚ್ಚಿಸುವ ಮೂಲಕ ಭತ್ತ ಬೆಳೆಯುವ ರೈತರ ಬೆಂಬಲಕ್ಕೆ ನಿಂತಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ನಿನ್ನೆ ದೆಹಲಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ್ದಾರೆ.
2013-14ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ 1 ಸಾವಿರದ 310 ಇದ್ದ ಬೆಂಬಲ ಬೆಲೆಯನ್ನು ಈಗ 2 ಸಾವಿರದ 300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಸಹ ಹಾಕಿಕೊಂಡಿದೆ ಎಂದರು. ಭತ್ತದ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 ಎಲ್ ಎಂಟಿ ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದರು.
ಅಕ್ಟೋಬರ್ 1 ರಿಂದ 2 ಸಾವಿರದ 700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 ಎಲ್ಎಂಟಿ ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು. ನಾಮನಿರ್ದೇಶನದ ಆಧಾರದ ಮೇಲೆ ಸಿಡಬ್ಲ್ಯೂಸಿ/ಎಸ್ಡಬ್ಲ್ಯೂಸಿ ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ ಪಿಇಜಿ ಯೋಜನೆಯಡಿ 31 ಎಲ್ಎಂಟಿ ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಅಕ್ಟೋಬರ್ 24ಕ್ಕೆ 34.75 ಎಲ್ಎಂಟಿನ ಅಖಿಲ ಭಾರತ ಚಾಲನಾ ಯೋಜನೆಯಿಂದ ಪಂಜಾಬ್ಗೆ ಸುಮಾರು ಶೇಕಡ 40 ಪಾಲನ್ನು ಹಂಚಲಾಗಿದೆ. ಚಾಲನಾ ಯೋಜನೆ ಮತ್ತು ಶೇಖರಣಾ ಸಾಮರ್ಥ್ಯ ರಚನೆ ವಾರಕ್ಕೊಮ್ಮೆ ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗಿದೆ. 15 ದಿನಗಳ ಕಾಯುವ ಅವಧಿಯನ್ನು ಮೀರಿ ಗೊತ್ತುಪಡಿಸಿದ ಡಿಪೋಗಳಲ್ಲಿ ಖಾಲಿ ಜಾಗದ ಲಭ್ಯತೆಯಿಲ್ಲದ ಸಂದರ್ಭದಲ್ಲಿ ಹೆಚ್ಚುವರಿ ಸಾರಿಗೆ ಶುಲ್ಕಗಳನ್ನು ಅನುಮತಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಯಕೊಂಡ | ಮಳೆಗೆ ಕುಸಿದ ಬಿದ್ದ ಮನೆಗಳು : ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ
ಸುದ್ದಿದಿನ,ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಕುಸಿದು ಬಿದ್ದಿರುವ ಮನೆಗಳನ್ನು ಪರಿಶೀಲನೆ ನಡೆಸಿದರು. ಈಚೆಗೆ ಸುರಿದ ಮಳೆಗೆ ಕ್ಷೇತ್ರದ ಸಾಕಷ್ಟು ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾನಿಯಾಗಿವೆ. ಅಲ್ಲದೇ ಮೆಕ್ಕೆಜೋಳ ಸೇರಿದಂತೆ ಇನ್ನಿತರೆ ಬೆಳೆಗಳು ಕೂಡ ನಿರಂತರ ಮಳೆಗೆ ಕೊಳೆತು ಹೋಗಿವೆ. ಕೃಷಿ ಮತ್ತು ಕಂದಾಯ ಅಧಿಕಾರಿಗಳ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಕಳೆದುಕೊಂಡ ರೈತರಿಗೆ ಮತ್ತು ಮನೆ ಕಳೆದುಕೊಂಡ ನಿರಾಶ್ರಿತರಿಗೆ ಪರಿಹಾರ ನೀಡುವ ಜೊತೆಗೆ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿನ ಪೈಪ್ಲೈನ್ ಕಳಪೆ ಗುಣಮಟ್ಟದಿಂದ ಕೂಡಿದೆ. ನೀರು ಬರುವುದಿಲ್ಲ ಎಂದು ಗ್ರಾಮಸ್ಥರು ಶಾಸಕರ ಬಳಿ ಸಮಸ್ಯೆ ಬಿಚ್ಚಿಟ್ಟರು. ಕಾಮಗಾರಿ ಪರಿಶೀಲಿಸಿದ ಶಾಸಕರು, ಕಳಪೆ ಕಾಮಗಾರಿ ಕಂಡು ಗುತ್ತಿಗೆದಾರರ ವಿರುದ್ಧ ಕೆಂಡಾಮAಡಲರಾದರು. ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸಿ ಗ್ರಾಮಸ್ಥರಿಗೆ ಸಮಪರ್ಕ ಕುಡಿಯುವ ನೀರು ಪೂರೈಸುವಂತೆ ಸೂಚನೆ ನೀಡಿದರು.
ನಿರಾಶ್ರಿತರಲ್ಲಿ ಆತಂಕ ಬೇಡ
ನಿರಂತರ ಮಳೆ ಸುರಿದು ಕುಸಿದು ಬಿದ್ದಿರುವ ಮನೆಗಳಿಗೆ ಪರಿಹಾರ ಕೊಟ್ಟರೆ, ಮನೆ ಮಂಜೂರು ಆಗುವುದಿಲ್ಲ. ಮನೆ ಬೇಕೋ ಅಥವಾ ಪರಿಹಾರ ಬೇಕೋ ಎಂದು ಅಧಿಕಾರಿಗಳು ಹೇಳುತ್ತಾರೆ ನಿರಾಶ್ರಿತರು ಶಾಸಕರ ಬಳಿ ಪರಿಹಾರ ಮತ್ತು ಮನೆ ಮಂಜೂರು ಮಾಡಿಸುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ, ಮಳೆಯಿಂದ ಮನೆಗಳು ಹಾನಿಗೊಳಗಾದ ನಿರಾಶ್ರಿತರಿಗೆ ಸರ್ಕಾರ ಪರಿಹಾರನೂ ಕೊಡುತ್ತದೆ. ಮನೆನೂ ಮಂಜೂರು ಮಾಡುತ್ತದೆ. ಯಾವುದೇ ಕಾರಣಕ್ಕೆ ನಿರಾಶ್ರಿತರು ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಪರಶುರಾಮ್, ಗಣೇಶಪ್ಪ, ಹೊನ್ನೂರಪ್ಪ, ಬಸಣ್ಣ, ಶ್ರೀಕಾಂತ್, ಕೆಂಚಪ್ಪ ಹಾಗೂ ಗ್ರಾಮಸ್ಥರು ಇದ್ದರು.
ವಾಲ್ಮೀಕಿ ಜಯಂತಿ: ದಿಂಡದಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಕೆ.ಎಸ್.ಬಸವಂತಪ್ಪ, ಮಹರ್ಷ ವಾಲ್ಮೀಕಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿ ಉತ್ತಮ ಸತ್ಪçಜೆಗಳನ್ನಾಗಿ ಮಾಡಬೇಕೆಂದು ಕಿವಿಮಾತು ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್, ನಾಗರಾಜ್, ಗಣೇಶ್, ಪರಶುರಾಮ್, ಬಸಣ್ಣ ಹಾಗೂ ಸಮಾಜ ಬಾಂಧವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
-
ದಿನದ ಸುದ್ದಿ5 days ago
ಚನ್ನಗಿರಿ | ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ; ಬಹುಮಾನ ವಿತರಣೆ
-
ದಿನದ ಸುದ್ದಿ4 days ago
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
-
ದಿನದ ಸುದ್ದಿ3 days ago
SC-ST | ರೈತರಿಗೆ ಪಶುಸಂಗೋಪನಾ ಚಟಿವಟಿಕೆಗಳ ತರಬೇತಿ
-
ದಿನದ ಸುದ್ದಿ3 days ago
ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಕರ್ನಾಟಕ ಜಾನಪದ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರಕಟ
-
ದಿನದ ಸುದ್ದಿ2 days ago
ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು
-
ದಿನದ ಸುದ್ದಿ2 days ago
ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಜಗಳೂರು ಕಾಟಮ್ಮ ; ಸಾಧನೆಯ ಹೆಗ್ಗುರುತುಗಳು