ದಿನದ ಸುದ್ದಿ
2024ರ ಮಾರ್ಚ್ ವೇಳೆಗೆ 10 ಸಾವಿರ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಪ್ರಾರಂಭ : ಕೇಂದ್ರ ನಿರ್ಧಾರ
ಸುದ್ದಿದಿನ ಡೆಸ್ಕ್ : 2024ರ ಮಾರ್ಚ್ ವೇಳೆಗೆ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10 ಸಾವಿರಕ್ಕೆ ಹೆಚ್ಚಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ.
26ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 406 ಜಿಲ್ಲೆಗಳ 3 ಸಾವಿರದ 579 ಬ್ಲಾಕ್‌ಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ತಿಳಿಸಿದೆ.
ಈ ಯೋಜನೆಯಡಿ ದೇಶದ 739ಜಿಲ್ಲೆಗಳನ್ನು ಈಗಾಗಲೇ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ತಿಂಗಳ ಅಂತ್ಯದವರೆಗೂ 8 ಸಾವಿರದ 610 ಮಳಿಗೆಗಳನ್ನು ತೆರೆಯಲಾಗಿದೆ. ಈ ಯೋಜನೆಯಡಿ ಸಾರ್ವಜನಿಕರ ಹಣ ಸುಮಾರು 15ಸಾವಿರ ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಯಾವುದೇ ವ್ಯಕ್ತಿಗಳು ನಿರುದ್ಯೋಗಿ ಫಾರ್ಮಾಸಿಸ್ಟ್ ಸರ್ಕಾರಿ ನಿರ್ದೇಶಿತ ಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು ಮತ್ತು ಇತರರು ಜನೌಷಧಿ ಕೇಂದ್ರಗಳನ್ನು ತೆರೆಯಲು ಅವಕಾಶವಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243