ದಿನದ ಸುದ್ದಿ

ಬಾಲ ಭವನ ಮಹಿಳಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯ ಉಪ ನಿರ್ದೆಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಬಾಲ ಭವನ ಸಮಿತಿಯಲ್ಲಿ ಖಾಲಿಯಿರುವ ಮಹಿಳಾ ಜಿಲ್ಲಾ ಕಛೇರಿ ಸಹಾಯಕರ ಹುದ್ದೆಗೆ ತಾತ್ಕಾಲಿಕವಾಗಿ ಕರಾರಿನ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಯನ್ನು ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 10 ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೆಶಕರ ಕಛೇರಿ ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಇಲಾಖೆ ಆಲ್ಕೋಳ, ದೂ.ಸಂ.: 08182-250041/250014 ಗಳನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version