ದಿನದ ಸುದ್ದಿ
ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ
ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು ಅಂತಿಮನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದೆ.
ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ.
ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48… pic.twitter.com/bCsMRaY2r6— Siddaramaiah (@siddaramaiah) June 22, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243