Connect with us

ನೆಲದನಿ

ಕನ್ನಡ ಮತ್ತು ಸಂಸ್ಕೃತ ; ಮಿಸ್ ಮಾಡ್ದೆ ಈ ಲೇಖನ ಓದಿ..!

Published

on

ನ್ನಡ ಮತ್ತು ಸಂಸ್ಕೃತ ಭಾಷೆಯ ನಡುವಣ ಸಂಬಂಧಗಳ ಕುರಿತು ಈಚಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ತಪ್ಪಾಭಿಪ್ರಾಯ ಮೂಡಿಸುವ ಕೆಲಸಗಳು ನಡೆಯುತ್ತಿವೆ . ಆದುದರಿಂದ ಈ ಪುಟ್ಟ ಸರಳ ಟಿಪ್ಪಣಿ ನನ್ನ ತರುಣ ಗೆಳೆಯರಿಗಾಗಿಿ.

ಭಾರತದಲ್ಲಿ ಅನೇಕ ಭಾಷಾ ಗುಂಪುಗಳಿವೆ. ಅವುಗಳಲ್ಲಿ Indo Aryan Language family ( ಭಾರತದ 76.5% ಜನರು ಮಾತಾಡುವ ಹಿಂದಿ, ಉರ್ದು, ಗುಜರಾತೀ, ಬಾಂಗ್ಲಾ , ಕೊಂಕಣಿ ಇತ್ಯಾದಿ) , Dravidian Language family (ಭಾರತದ 20.5% ಜನರು ಮಾತಾಡುವ ತಮಿಳು, ಕನ್ನಡ, ತೆಲುಗು, ಮಲೆಯಾಳಂ, ತುಳು ಇತ್ಯಾದಿ) Austroasiatic language family ( ಭಾರತದ 3% ಜನ ಮಾತಾಡುವ ಖಾಸಿ, ಮುಂಡಾ, ಸಂತಾಲಿ ಇತ್ಯಾದಿ), Sino-Tibetan language family ( ಮೈತ್ಯಿ, ಬೋಡೋ, ಕರ್ಬಿ, ಲೆಪಚಾ ಇತ್ಯಾದಿ) ಮತ್ತು Great Andamanese language family ( ಜಂಗಿಲ್, ಜಾರ್ವಾ ಇತ್ಯಾದಿ) ಮುಖ್ಯವಾದುವು.

19ನೇ ಶತಮಾನದ ಮಧ್ಯಭಾಗದವರೆಗೂ ಈ ಎಲ್ಲಾ ಭಾಷೆಗಳಿಗೂ ಸಂಸ್ಕೃತವೇ ತಾಯಿ ಎಂದು ಹೇಳಲಾಗುತ್ತಿತ್ತು. ಆದರೆ ಇವೆಲ್ಲವೂ ಬೇರೆ ಬೇರೆ ಭಾಷಾ ಗುಂಪುಗಳಿಗೆ ಸೇರಿವೆ ಎಂಬುದನ್ನು ಭಾಷಾಶಾಸ್ತ್ರಜ್ಞರು ಈಗಾಗಲೇ ಸಾಬೀತು ಪಡಿಸಿದ್ದಾರೆ. ಕೆಳಗೆ ನೀಡಿದ ಪಟ್ಟಿಯಲ್ಲಿ ಕೆಲವು ಪದಗಳು ಹೇಗೆ ದ್ರಾವಿಡ ಭಾಷೆಗಳಿಗೆ ಸಮಾನವೂ ಇಂಡೋ ಆರ್ಯನ್ ಭಾಷೆಯಲ್ಲಿ ಭಿನ್ನವೂ ಆಗಿದೆ ಎಂಬುದನ್ನು ಸ್ಪಷ್ಟ ಪಡಿಸುತ್ತದೆ.

ಇದರ ಜೊತೆಗೆ, ಕನ್ನಡದಲ್ಲಿ ನಿರ್ಜೀವ ಮತ್ತು ಬುದ್ಧಿಹೀನ ವಿಷಯಗಳ ಪದಗಳು ನಪುಂಸಕವೇ ಆಗಿವೆ, ಸಂಸ್ಕೃತದಲ್ಲಿ ಹಾಗಿಲ್ಲ, ಕರ್ಮಣಿ ಪ್ರಯೋಗ ಕನ್ನಡದಲ್ಲಿಸಹಜವಾಗಿ ಇಲ್ಲ ( ಮಾಡಲ್ಪಟ್ಟಿತು ಎಂಬಂಥ ಪ್ರಯೋಗಗಳು). ಒಂದು, ಎರಡು, ಮೂರು , ಹತ್ತು , ನೂರು ಮೊದಲಾದ ಸಂಖ್ಯಾವಾಚಕ ಪದಗಳು ದ್ರಾವಿಡ ಭಾಷೆಗಳಲ್ಲಿದ್ದರೆ, ಏಕ, ದ್ವಯ, ತ್ರಯ, ದಶ, ಶತ ಮೊದಲಾದುವು ಇಂಡೋ ಆರ್ಯನ್ ಭಾಷೆಯಲ್ಲಿವೆ.

ದ್ರಾವಿಡ ಭಾಷೆಗಳಲ್ಲಿ ದ್ವಿ ವಚನವಿಲ್ಲ. ಸಂಸ್ಕೃತದಲ್ಲಿ ಎಕವಚನ ಮತ್ತು ಬಹುವಚನಕ್ಕೆ ಬೇರೆ ವಿಭಕ್ತಿ ಪ್ರತ್ಯಯಗಳಿದ್ದರೆ, ದ್ರಾವಿಡ ಭಾಷೆಗಳಲ್ಲಿ ಅದಿಲ್ಲ. ದ್ರಾವಿಡ ಭಾಷೆಗಳಲ್ಲಿ ಬಂಧುವಾಚಕಗಳು ಹೆಚ್ಚು ನಿಖರವಾಗಿವೆ ( ಅಣ್ಣ, ತಮ್ಮ, ಅಕ್ಕ , ತಂಗಿ ಇತ್ಯಾದಿ. ಸಂಸ್ಕೃತದಲ್ಲಿ ಅವುಗಳು ಅಷ್ಟು ನಿಖರವಾಗಿಲ್ಲ. ( ಭ್ರಾತೃ- brother, ಸಹೋದರ ಅಂದರೆ ಅಣ್ಣ ಅಥವಾ ತಮ್ಮ ಆಗಬಹುದು). ಕನ್ನಡ ಮತ್ತು ಸಂಸ್ಕೃತ ಬೇರೆ ಬೇರೆ ಭಾಷಾ ಗುಂಪಿಗೆ ಸೇರಿದುವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕೀಯ ಮಾಡುವವರು ಮಾಡುತ್ತಲೇ ಇರುತ್ತಾರೆ. ಅದಕ್ಕೆ ನಮ್ಮಂಥವರು ಸುಲಭವಾಗಿ ಬಲಿಬೀಳಬಾರದು ಅಷ್ಟೆ.

ಪುರುಶೋತ್ತಮ ಬಿಳಿಮಲೆ
(ಫೇಸ್ ಬುಕ್ ಪೋಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಆತ್ಮಕತೆ | ತುರ್ತು ಪರಿಸ್ಥಿತಿ ಮತ್ತು ನಮ್ಮೂರಿನ ಭೂ ಹೋರಾಟ

Published

on

  • ರುದ್ರಪ್ಪ ಹನಗವಾಡಿ

ದೇಶದಾದ್ಯಂತ ತುರ್ತುಪರಿಸ್ಥಿತಿ ಇತ್ತು. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳು ನಿಗದಿಯಂತೆ ನಡೆಯುತ್ತಿದ್ದವು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾಂಗ್ರೆಸ್ ವಿರೋಧಿ ರಾಜಕೀಯ ನಾಯಕರನ್ನು ಬಂಧಿಸಿ ಜೈಲಿನಲ್ಲಿರಿಸಿದ್ದರು. ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳು ವಿಶೇಷವಾಗಿ ದಲಿತ ಹಿಂದುಳಿದವರ ಪರವಾಗಿದ್ದುದನ್ನು ಮುಖ್ಯಮಂತ್ರಿ ದೇವರಾಜ ಅರಸು ಅವರು ಒತ್ತಿ ಹೇಳುತ್ತಿದ್ದರು ಮತ್ತು ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಂಡು ರಾಜ್ಯಾಡಳಿತವನ್ನು ನಡೆಸುತ್ತಿದ್ದರು.

ದೇವರಾಜ ಅರಸು ಅವರು ಕರ್ನಾಟಕದಲ್ಲಿ ಹಿಂದೆಂದೂ ನೀಡಿರದಿದ್ದ ವಿಶೇಷ ಸವಲತ್ತುಗಳನ್ನು ದಲಿತರು, ಹಿಂದುಳಿದವರಿಗೆ ಮತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿದ್ದರು. ಹಾಗೆ ಹೇಳುತ್ತಲೂ ಇದ್ದರು. ಅದು ನಿಜವೂ ಆಗಿತ್ತು. ಆದರೆ ನಾವೆಲ್ಲ ತುರ್ತುಪರಿಸ್ಥಿತಿಯ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೆವು.

ನಮ್ಮ ಊರಿನಲ್ಲಿ ವೀರಭದ್ರ ದೇವರ ಚಾಕರಿ (ಮ್ಯಾಳ) ಮಾಡುತ್ತಿದ್ದ ಕಾರಣ ಹದಿನೇಳು ಎಕರೆ ವೀರಭದ್ರ ದೇವರ ಹೆಸರಿನಲ್ಲಿದ್ದುದನ್ನು ನಮ್ಮ ಎಲ್ಲ ಆರು ಕುಟುಂಬಗಳಿಗೆ ಊರಿನ ಪ್ರಮುಖರು ನಾವಿನ್ನು ಹುಟ್ಟುವ ಮುಂಚೆಯೇ ಹಂಚಿ ಕೊಟ್ಟಿದ್ದರು. ಅದರಲ್ಲಿ ಅಪ್ಪನಿಗೆ ಸುಮಾರು ನಾಲ್ಕು ಎಕರೆಯಷ್ಟನ್ನು ನೀಡಿದ್ದು ಸಾಗುವಳಿ ಮಾಡಿಕೊಂಡು ಬರುತ್ತಿದ್ದೆವು. ಈ ನಡುವೆ ಭೂಸುಧಾರಣಾ ಕಾನೂನು ಜಾರಿ ಮಾಡುವ ಬಗ್ಗೆ ಅರಸು ಸರ್ಕಾರ ವಿಶೇಷವಾಗಿ ಭೂನ್ಯಾಯ ಮಂಡಳಿಯನ್ನು ರಚಿಸಿತ್ತು. ಇದನ್ನರಿತ ನಮ್ಮವರೆಲ್ಲ ಸೇರಿ ನಮ್ಮ ಅಣ್ಣ ತಿಪ್ಪಣ್ಣನ ಪ್ರಯತ್ನದಿಂದ ಸರ್ಕಾರ ರಚಿಸಿದ್ದ ಭೂನ್ಯಾಯ ಮಂಡಳಿಯ ಮುಂದೆ ಎಲ್ಲ ಆರು ಜನರೂ ತಮಗೆ ಭೂಮಿಯ ಹಕ್ಕು ನೀಡಲು ನಮೂನೆ 7ರ ಅರ್ಜಿ ಸಲ್ಲಿಸಿದ್ದರು.

ಭೂನ್ಯಾಯ ಮಂಡಳಿಯ ಮುಂದೆ ಅರ್ಜಿ ಹಾಕಿದ ವಿಷಯ ಊರಲ್ಲಿ ದೊಡ್ಡ ಅಸಮಾಧಾನದ ಕಿಚ್ಚನ್ನು ಮೂಡಿಸಿತ್ತು. ಈ ನಡುವೆ ನಮಗಾಗಿ ಕೊಟ್ಟಿದ್ದ 17 ಎಕರೆಯಲ್ಲಿ ಮಧ್ಯ ಭಾಗದಲ್ಲಿ 4 ಎಕರೆಯನ್ನು ಕಬಳಿಸುವಷ್ಟು ರಾಷ್ಟ್ರೀಯ ಹೆದ್ದಾರಿಯು ದಾವಣಗೆರೆಯಿಂದ ಹುಬ್ಬಳ್ಳಿವರೆಗೆ ಬೈಪಾಸ್ ರಸ್ತೆಗಾಗಿ ಸರ್ಕಾರ ವಶಪಡಿಸಿಕೊಂಡಿತ್ತು. ಸರ್ಕಾರದಿಂದ ನೀಡಿದ ನಾಲ್ಕು ಎಕರೆ ಪರಿಹಾರದ ಹಣವನ್ನು ಕೂಡ ದೇವಸ್ಥಾನದವರೇ ತೆಗೆದುಕೊಂಡಿದ್ದರು. ಉಳಿದಿದ್ದ 13 ಎಕರೆಯಲ್ಲಿ ಮತ್ತೆ ಪುನಃ ಮರು ಹಂಚಿಕೆ ಮಾಡಿಕೊಂಡು ಆರು ಜನರು ಸುಮಾರು ಎರಡೆರಡು ಎಕರೆಗಳಷ್ಟು ಸಾಗುವಳಿ ಮಾಡುತ್ತಿದ್ದರು.
ದೇವಸ್ಥಾನ ಧರ್ಮದರ್ಶಿ ಕಮಿಟಿಯಲ್ಲಿ ಊರಿನ ಹಿರಿಯರಿದ್ದರೂ ಉಳಿದಿರುವ ಭೂಮಿಯನ್ನು ನಮ್ಮವರಿಂದ ಬಿಡಿಸುವುದು ಮತ್ತು ಪ್ರತಿ ಮಂಗಳವಾರ ಗುಡಿಯಲ್ಲಿ ಮಾಡುತ್ತಿರುವ ಮ್ಯಾಳಗಳನ್ನು ನಿಲ್ಲಿಸಬೇಕೆಂದು ಚರ್ಚೆ ಆಗ ಊರಲ್ಲಿ ನಡೆಯುತ್ತಿತ್ತು. ಅವರೆಲ್ಲರ ಚರ್ಚೆಗಳ ಮಧ್ಯೆ ಮ್ಯಾಳದವರು ನಿಲ್ಲಿಸದೆ ಪ್ರತಿ ಮಂಗಳವಾರ ತಪ್ಪಿಸದೆ ಗುಡಿಗೆ ಹೋಗಿ ಎಂದಿನಂತೆ ಮ್ಯಾಳ ಮಾಡಿ ಬರುತ್ತಿದ್ದರು.

ನಮ್ಮೂರ ಚಲುವಾದಿಗಳಿಗೆ ಈ ರೀತಿಯ ಧೈರ್ಯವಿರಲಿಲ್ಲ. ಇವೆಲ್ಲದರ ಹಿಂದಿನ ಯೋಜಕ ಮೈಸೂರಲ್ಲಿ ಓದುತ್ತಿರುವ ಹುಡುಗ ನಾನೇ ಎಂದು ಊರವರು ಮಾತಾಡಿಕೊಂಡರು. ಅವನು ಊರಿಗೆ ಯಾವ ದಾರಿಯಲ್ಲಿ ಬರುತ್ತಾನೋ ಕಾದು ಕುಳಿತು ಕಾಲು ಮುರಿಯಬೇಕೆಂಬ ಯೋಜನೆ ಕೂಡ ಹಾಕಿಕೊಂಡಿದ್ದರಂತೆ. ಆದರೆ ಏಕಾಂಗಿಯಾಗಿ ಓಡಾಡುತ್ತಿದ್ದ ನನಗೆ ಒಳಗೊಳಗೆ ಅಳುಕು ಇದ್ದರೂ ನಾನೇನು ತಪ್ಪು ಮಾಡುತ್ತಿಲ್ಲ ಎಂಬ ತಿಳುವಳಿಕೆ ಧರ‍್ಯ ನೀಡುತ್ತಿತ್ತು. ಆದರೆ ಊರಿಗೆ ಬಂದು ಹೊರಗೆ ಓಡಾಡುತ್ತಿದ್ದರೆ ನಮ್ಮವರೆಲ್ಲ ದೂರದಲ್ಲಿದ್ದುಕೊಂಡೇ ನನ್ನನ್ನು ಊರಲ್ಲಿರುವ ತನಕ ವಿಶೇಷವಾಗಿ ಕವರ್ ಮಾಡುತ್ತಿದ್ದರು.

ಇದಕ್ಕೂ ಮುಂಚೆ ನಾನಿನ್ನು ಬಿ.ಎ.ನಲ್ಲಿ ಓದುತ್ತಿರುವಾಗ ಸರ್ಕಾರದ ವತಿಯಿಂದ ನಮ್ಮ ಮನೆಯ ಹತ್ತಿರದಲ್ಲೇ ಸಾರ್ವಜನಿಕರಿಗಾಗಿ ಕುಡಿಯಲು ಒಂದು ತೆರೆದ ಬಾವಿಯನ್ನು ತೆಗೆದಿದ್ದರು. ಊರಲ್ಲಿದ್ದ ಎರಡು ಬಾವಿಗಳಿಂದ ನೀರು ಸೇದುತ್ತಿದ್ದ ಮೇಲ್ಜಾತಿಗಳ ಜನರಿಂದ ನಮ್ಮವರೆಲ್ಲ ಹೊಯ್ ನೀರು ತರುತ್ತಿದ್ದರು. ಅಂದರೆ ಮೇಲ್ಜಾತಿಯವರಿಂದ ನೀರು ಸೇದಿ ಇವರ ಕೊಡಗಳಿಗೆ ನೀರು ಹಾಕಬೇಕು, ಆಗ ಇವರ ಮನೆಗಳಿಗೆ ತೆಗೆದುಕೊಳ್ಳಬೇಕು. 1936ರಲ್ಲಿ ಸರ್ಕಾರ ನಮಗೊಂದು ರಂಗಜ್ಜನ ಮಠದ ಹತ್ತಿರ ಬಾವಿ ತೆಗೆಸಿತ್ತು. ಅದು ನಮ್ಮ ಮನೆಗಳಿಗೆ ಅರ್ಧ ಕಿಲೋಮೀಟರ್ ದೂರದಲ್ಲಿತ್ತು. ಆದರೆ ಅಲ್ಲಿನ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ.

ಮನೆಯ ಹತ್ತಿರವಿರುವ ಬಾವಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸುವ ಮುನ್ನ ನಾನು ನಮ್ಮಲ್ಲಿದ್ದ ಹಸುವಿನ ಜೊತೆ ಆ ಹೊಸ ಬಾವಿಯಿಂದ ನೀರು ಸೇದಿ ಅದಕ್ಕೆ ಕುಡಿಸಿ ನಾನು ಅಲ್ಲೇ ಸ್ನಾನ ಮಾಡಿಕೊಂಡು ಬರುತ್ತಿದ್ದೆ. ನಾನಿರುವಾಗ ಯಾರೂ ಮಾತಾಡದೆ ಇದ್ದವರು, ನಾನು ಮೈಸೂರಿಗೆ ವಾಪಸ್ ಓದಲು ಹೋದಾಕ್ಷಣ ಮಾರನೆ ದಿನ ನಮ್ಮ ಮನೆಯ ಹೆಣ್ಣು ಮಕ್ಕಳು ನೀರಿಗೆ ಹೋದಾಗ ಹಗ್ಗ ಕೊಡಪಾನಗಳನ್ನು ಕಿತ್ತು ಬಿಸಾಕಿ ನೀರು ಸೇದಲು ಬಿಟ್ಟಿರಲಿಲ್ಲ. ಆಗಿನ್ನು ಅಪ್ಪ ಇದ್ದ. ‘ನೀನು ಊರ ಉಸಾಬರಿಗೆ ಬರಬೇಡ ನಿನ್ನ ಓದು ನೀನು ಮಾಡಿಕೊಂಡು ಸುಮ್ಮನಿರು’ ಎಂದು ಪತ್ರ ಬರೆಸಿ ಸಮಾಧಾನ ಹೇಳಿದ್ದ. ಆದರೂ ನಾನು ಆಗಿರುವ ಅವಮಾನದ ಬಗ್ಗೆ ಚಿಂತಿಸುತ್ತಿದ್ದಾಗ ಒಂದು ದಿನ ಮೈಸೂರಿಗೆ ಬಂದಿದ್ದ ಕಂದಾಯ ಮಂತ್ರಿಗಳಾಗಿದ್ದ ಬಸವಲಿಂಗಪ್ಪನವರ ಹತ್ತಿರ ಹೋಗಿ, ನಮ್ಮೂರಲ್ಲಿ ಸಾರ್ವಜನಿಕ ಬಾವಿಯಿಂದ ನೀರು ಸೇದಲು ಲಿಂಗಾಯತರು ತೊಂದರೆ ಕೊಡುತ್ತಿರುವ ಬಗ್ಗೆ ಹೇಳಿದೆ.

ಅವರು ಅದನ್ನು ಮನಸ್ಸಿನಲ್ಲಿಕೊಂಡು ಬೆಂಗಳೂರಿಗೆ ವಾಪಸಾಗಿದ್ದರು. ನಮ್ಮೂರ ಛರ‍್ಮನ್ ಬಸಪ್ಪನವರು ಮತ್ತು ನಮ್ಮ ಹರಿಹರದವರೇ ಬಿ. ಬಸವಲಿಂಗಪ್ಪನವರು ಮೊದಲಿಂದಲೂ ಬಳಕೆಯಲ್ಲಿದ್ದವರಾಗಿದ್ದರು. ಛರ‍್ಮನ್ ಬಸಪ್ಪನವರು ಇನ್ನು ನಮ್ಮ ಊರಿನವರೊಡನೆ ಬೆಂಗಳೂರಲ್ಲಿ ತಮ್ಮ ಯಾವುದೋ ಕೆಲಸಕ್ಕೆ ಭೇಟಿ ಮಾಡಿದಾಗ ನಾನು ಹೇಳಿದ ವಿಷಯವನ್ನು ಪ್ರಸ್ತಾಪಿಸಿ, ‘ನೀವೇನು ಹೆಂಡ ಕುಡಿಯೋದಿಲ್ಲವಾ? ಮಾಂಸ ತಿನ್ನೋದಿಲ್ವಾ’ ಎಂದೆಲ್ಲಾ ಕೇಳಿ ‘ಬಸವಣ್ಣ ಏನು ಹೇಳಿದ್ದಾನೆ ಗೊತ್ತಾ? ಅದನ್ನ ಪಾಲಿಸೋದು ಬಿಟ್ಟು, ಸರ್ಕಾರ ಕಟ್ಟಿಸಿದ ಬಾವಿಯ ನೀರು ಸೇದಲು ಅಡ್ಡಿಪಡಿಸಬಾರದೆಂದು ಗರ್ಜನೆ ಹಾಕಿ ತಾಕೀತು ಮಾಡಿ ಕಳಿಸಿದ್ದರು.

ನಮ್ಮೂರ ಛರ‍್ಮನ್ ಬಸಪ್ಪನವರು ಬಹಳ ದಿನಗಳ ಕಾಲ ನಮ್ಮೂರ ಛರ‍್ಮನ್‌ರಾಗಿ ಎಲ್ಲರ ಜೊತೆ ಒಳ್ಳೆಯ ಸಂಬಂಧವಿಟ್ಟುಕೊಂಡಿದ್ದರು. ಆದರೆ ಊರ ಸಮಷ್ಟಿಯ ಸಮಸ್ಯೆಗಳು ಬಂದಾಗ ಧೈರ್ಯವಾಗಿ ಒಬ್ಬರೇ ತೀರ್ಮಾನ ತೆಗೆದುಕೊಳ್ಳಲು ಆಗುತ್ತಿರಲಿಲ್ಲ. ಆದರೆ ಬೆಂಗಳೂರಿನಿಂದ ಬಂದವರೇ ಯಾರು ನಿಮಗೆ ನೀರು ತರಲು ಅಡ್ಡಿಪಡಿಸಿದವರು ಎಂದು ಹೇಳಿ ಅವರೇ ನಮ್ಮ ಕೇರಿಗೆ ಬಂದು ನಮ್ಮವರನ್ನೇ ನೀರು ಸೇದಿಕೊಳ್ಳಲು ಹೇಳಿದ್ದರು. ಊರಲ್ಲಿ ವಿರೋಧಿಸಿದವರಿಗೆ ಸರ್ಕಾರದಿಂದ ಆದೇಶವಾಗಿದೆ ಎಂದೆಲ್ಲ ಹೇಳಿ ಬಾಯಿ ಮುಚ್ಚಿಸಿದ್ದರು. ಛರ‍್ಮನ್ ಬಸಪ್ಪನವರು ಸುಮಾರು 20 ವರ್ಷಗಳ ಕಾಲ ಛರ‍್ಮನ್‌ರಾಗಿದ್ದರು. ಯಾರಿಗೂ ಕೇಡು ಬಯಸುವ ವ್ಯಕ್ತಿಯಾಗಿರಲಿಲ್ಲ. ಇದೇ ಸಮಸ್ಯೆ ಬೇರೆಯವರ ಕೈಗೆ ಬಿದ್ದಿದ್ದರೆ, ಏನೆಲ್ಲಾ ಅನಾಹುತ ಮಾಡುತ್ತಿದ್ದರೋ ಊಹಿಸಲೂ ಅಸಾಧ್ಯ.

ಈ ಹಿನ್ನೆಲೆಯಲ್ಲಿ ಈಗ ಊರ ಮಟ್ಟದಲ್ಲಿ ಮತ್ತೊಂದು ಮಹತ್ತರವಾದ ಸಮಸ್ಯೆಯಾಗಿ ಎದ್ದು ಕೂತಿತ್ತು. ಅದು ಭೂ ನ್ಯಾಯ ಮಂಡಳಿಗೆ ಅರ್ಜಿ ಫಾರಂ ಹಾಕಿದ್ದು. ಹರಿಹರದಲ್ಲಿ ನಡೆಸುತ್ತಿದ್ದ ಭೂನ್ಯಾಯ ಮಂಡಳಿಯ ಮುಂದೆ ಹಾಜರಾಗಬೇಕು. ನಮ್ಮವರೆಲ್ಲ ದೇವಸ್ಥಾನದ ಧರ್ಮದರ್ಶಿಗಳ ಜೊತೆಗೆ ಮಾತಾಡಿಕೊಂಡು ಅವರು ತರುತ್ತಿದ್ದ ಟ್ರಾಕ್ಟರ್‌ನಲ್ಲಿ ಕೂತು ಹೋಗುತ್ತಿದ್ದರು. ನಮ್ಮ ಅಣ್ಣ ತಿಪ್ಪಣ್ಣ ಮಾತ್ರ ಅವರ ಜೊತೆಗೆ ಹೋಗುತ್ತಿರಲಿಲ್ಲ. ಅವರ ಜೊತೆ ಇರುವಾಗ, ನೀವು ಹೇಳಿದ ಹಾಗೆ ಸಾಕ್ಷಿ ಹೇಳುತ್ತೇವೆಂದು ಅವರ ಹತ್ತಿರವೇ ಬೀಡಿ ಕೇಳಿ ಸೇದಿಕೊಳ್ಳುತ್ತಿದ್ದರು. `ಇದೆಲ್ಲ ನಮ್ಮ ಹುಡುಗನ ಕೆಲಸ, ನಮಗ್ಯಾಕಣ್ಣ ದೇವರ ಜಮೀನು’ ಎಂದೆಲ್ಲ ಅವರ ಜೊತೆಯೇ ತಾಳ ಹಾಕುತ್ತ ಇದ್ದರು. ನಾನು ಊರಿಗೆ ಹೋದಾಗ ಯಾವಾಗ ತೀರ್ಮಾನಿಸಲಾಗುತ್ತದೆ ಎಂದು ಬಂದು ಗುಟ್ಟಾಗಿ ನನ್ನ ಬಳಿ ಕೇಳುತ್ತಿದ್ದರು. ನಮ್ಮವರೆಲ್ಲರ ಅದೃಷ್ಟವೋ ಎನ್ನುವಂತೆ ನನಗೆ 1969-1972ರಲ್ಲಿ ಮಹಾರಾಜಾ ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಕೆ.ಎಂ. ಶಂಕರಲಿಂಗೇಗೌಡರನ್ನು ದಾವಣಗೆರೆ ಭೂನ್ಯಾಯ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿತ್ತು. ನಾನು ನಮ್ಮ ಊರಿನ ಸ್ಥಿತಿಯನ್ನೆಲ್ಲ್ಲ ಅವರಿಗೆ ವಿವರಿಸಿ, ನಮಗೆ ಆದಷ್ಟು ಬೇಗ ಇತ್ಯರ್ಥಗೊಳಿಸಿಕೊಡಬೇಕೆಂದು ಅವರಲ್ಲಿ ವಿನಂತಿಸಿದೆ. ನಾನು ಹೋಗಿ ವಿನಂತಿಸಿದ 3-4 ತಿಂಗಳಲ್ಲಿ ನಮ್ಮವರೆಲ್ಲರ ಹೆಸರಿಗೆ ಭೂನ್ಯಾಯ ಮಂಡಳಿಯಲ್ಲಿ 1976ರ ವರ್ಷದ ಮಧ್ಯ ಭಾಗದಲ್ಲಿ ಭೂನ್ಯಾಯ ಮಂಡಳಿಯಿಂದ ತೀರ್ಮಾನಿಸಲಾಗಿತ್ತು.

ಆ ಸಂದರ್ಭದಲ್ಲಿ ಹೆಚ್. ಶಿವಪ್ಪನವರು ಹರಿಹರ ತಾಲ್ಲೂಕು ಶಾಸಕರು ಮತ್ತು ಭೂನ್ಯಾಯ ಮಂಡಳಿಯ ಸದಸ್ಯರಾಗಿದ್ದರು. ಅವರು ನಮಗೆಲ್ಲ ಜಮೀನು ನೋಂದಾಯಿಸುವ ಪ್ರಕರಣದಲ್ಲಿ ವಿರೋಧಿಸದೆ ಸಹಕಾರ ನೀಡಿದ್ದನ್ನು ನಾನು ನೆನಪಿಸಿಕೊಳ್ಳಬೇಕು. ಆದೇಶ ನೀಡುವ ಸಮಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳು, ಭೂನ್ಯಾಯ ಮಂಡಳಿಯ ಅಧ್ಯಕ್ಷರ ಎದುರೇ ‘ಊರಿಗೆ ರ‍್ರಲೇ ನೋಡಿಕೊಳ್ಳುತ್ತೇವೆ’ ಎನ್ನೋ ಧಮ್ಕಿ ಹಾಕಿದಾಗ, ಅಧ್ಯಕ್ಷರು ‘ನಿಮ್ಮನ್ನೆಲ್ಲ ಪೊಲೀಸ್ ಕರೆಸಿ ಈಗಲೇ ಜೈಲಿಗೆ ಕಳಿಸುತ್ತೇನೆಂದು ಹೇಳಿ ಎಚ್ಚರಿಕೆ ನೀಡಿದರೆಂದು ನಮ್ಮವರೆಲ್ಲ ನನ್ನ ಬಳಿ ಸಂತೋಷದಿಂದ ಎಲ್ಲ ಮುಗಿದ ಮೇಲೆ ಹೇಳಿಕೊಂಡಿದ್ದರು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಕಮಲಾ ಹಂಪನ ನಿಧನ ; ಮೆಡಿಕಲ್ ಕಾಲೇಜಿಗೆ ದೇಹದಾನ : ಗಣ್ಯರ ಸಂತಾಪ

Published

on

ಸುದ್ದಿದಿನಡೆಸ್ಕ್:ಕನ್ನಡದ ಖ್ಯಾತ ಸಾಹಿತಿ ನಾಡೋಜೆ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಅಸುನೀಗಿದ್ದಾರೆ. ಅವರು ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ.

ಹಂಪನಾ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದ್ದು, ಬಳಿಕ ಮೃತರ ಆಸೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

ಸಿಎಂ ಸಂತಾಪ


ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.

ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ.

ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಮೃತರ ಆತ್ಮಕ್ಕೆ ಶಾಂತಿ ಕೋರುವೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ

ಸುದ್ದಿದಿನಡೆಸ್ಕ್:18ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ...

ದಿನದ ಸುದ್ದಿ4 hours ago

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

ರಾಜೇಂದ್ರ ಬುರಡಿಕಟ್ಟಿ ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ...

ದಿನದ ಸುದ್ದಿ5 hours ago

SC-ST ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಗದಗ ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ...

ದಿನದ ಸುದ್ದಿ7 hours ago

ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್

~ ಸಿದ್ದು ಸತ್ಯಣ್ಣನವರ್ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು?...

ಅಂತರಂಗ17 hours ago

ಆತ್ಮಕತೆ | ತುರ್ತು ಪರಿಸ್ಥಿತಿ ಮತ್ತು ನಮ್ಮೂರಿನ ಭೂ ಹೋರಾಟ

ರುದ್ರಪ್ಪ ಹನಗವಾಡಿ ದೇಶದಾದ್ಯಂತ ತುರ್ತುಪರಿಸ್ಥಿತಿ ಇತ್ತು. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳು ನಿಗದಿಯಂತೆ ನಡೆಯುತ್ತಿದ್ದವು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾಂಗ್ರೆಸ್ ವಿರೋಧಿ ರಾಜಕೀಯ ನಾಯಕರನ್ನು ಬಂಧಿಸಿ ಜೈಲಿನಲ್ಲಿರಿಸಿದ್ದರು....

ದಿನದ ಸುದ್ದಿ18 hours ago

ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ; ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಸುದ್ದಿದಿನ,ದಾವಣಗೆರೆ:ಜೂನ್ 24 ರಿಂದ ಜುಲೈ 5 ರವರೆಗೆ ನಗರದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ನಡೆಯಲಿದ್ದು ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು...

ದಿನದ ಸುದ್ದಿ1 day ago

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ...

ದಿನದ ಸುದ್ದಿ1 day ago

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು. ಕನ್ನಡ ಮತ್ತು...

ದಿನದ ಸುದ್ದಿ1 day ago

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ...

ದಿನದ ಸುದ್ದಿ1 day ago

ಇಸ್ಪೀಟ್ ಅಡ್ಡಾ‌ಮೇಲೆ ಪೊಲೀಸ್ ದಾಳಿ ; ಆರೋಪಿಗಳ ಬಂಧನ : ದಾಳಿಯಲ್ಲಿ ಸಿಕ್ಕ ಹಣ..!?

ಸುದ್ದಿದಿನ,ಚನ್ನಗಿರಿ : ಹೆಬ್ಬಳಗೆರೆ ಕ್ರಾಸ್ ನ ಸಾರ್ವಜನಿಕ ಸ್ಥಳದಲ್ಲಿ ಇಂದು ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಅಡ್ಡಾ‌ಮೇಲೆ ಪೋಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ...

Trending