Connect with us

ದಿನದ ಸುದ್ದಿ

ಕನ್ನಡವನ್ನು ವರ್ತಮಾನದೊಂದಿಗೆ ಬೆಸೆಯಬೇಕಿದೆ : ಡಾ. ಮೆಹಮೂದ್ ಖಾನ್

Published

on

ಸುದ್ದಿದಿನ, ಚನ್ನಗಿರಿ : ಆಲೂರು ವೆಂಕಟರಾಯರು ಮೊದಲಾದ ಕನ್ನಡದ ಪ್ರಾತಃಸ್ಮರಣೀಯರ ಅವಿರತ ಪ್ರಯತ್ನದಿಂದ,ಬೇರೆ ಬೇರೆ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಮೈಸೂರು ರಾಜ್ಯವು ಏಕೀಕರಣಗೊಂಡಿತು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೆಹಮೂದ್ ಖಾನ್ ಅವರು ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಶ್ರೀ ಶಿವಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವದ 50ನೇ ವರ್ಷಾಚರಣೆಯ ‘ಕರ್ನಾಟಕ ಸಂಭ್ರಮ-50’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1973ರಲ್ಲಿ ಮೈಸೂರು ರಾಜ್ಯವು ಕರ್ನಾಟಕ ರಾಜ್ಯ ಎಂದು ಹೆಸರು ಪಡೆದು, ಅದರ 50ನೇ ವರ್ಷದ ಸಂಭ್ರಮವನ್ನು ನಾವು ಇಂದು ಆಚರಿಸುತ್ತಿದ್ದೇವೆ. ಈ ಸಂಭ್ರಮದ ಜೊತೆಗೆ ಕನ್ನಡವನ್ನು ವರ್ತಮಾನದ ಸವಾಲುಗಳೊಡನೆ ಬೆಸೆಯಬೇಕಾದ ಸಂಕ್ರಮಣ ಕಾಲದಲ್ಲಿ ನಾವಿದ್ದೇವೆ. ಅದನ್ನು ಮನಗಂಡು ನಾವು ಮುನ್ನಡೆಯಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರವಿಯವರು, ಕನ್ನಡದ ವಿವೇಕವು, ಕ್ರಿ.ಶ.850ರ ಕವಿರಾಜಮಾರ್ಗ ಕಾಲದಿಂದಲೂ, ವಿಭಿನ್ನ ಅಭಿಮತಗಳು, ವಿಚಾರಗಳನ್ನು ಇಟ್ಟುಕೊಂಡೇ, ಏಕತೆ ಹಾಗೂ ಅಖಂಡತೆಯನ್ನು, ಸಹಿಷ್ಣುತೆಯನ್ನು ಪ್ರತಿಪಾದಿಸುತ್ತಾ ಸಹಕಾರ, ಸಹಬಾಳ್ವೆಯೊಂದಿಗೆ ಸಾಗುವುದೇ ನಮ್ಮ ನಿಜವಾದ ಸಂಪತ್ತು ಎಂದು ಪ್ರತಿಪಾದಿಸಿದೆ ಎಂದರು.

ಬಹುತನ, ಒಳಗೊಳ್ಳುವಿಕೆ, ಕೈ ಹಿಡಿದು ನಡೆಸಿಕೊಂಡು ಹೋಗುವ ಗುಣವನ್ನು ಕನ್ನಡತ್ವವು ಸದಾ ಜಾಗೃತವಾಗಿರಿಸಿಕೊಂಡೇ ಇದೆ. ಇದೇ ವಿವೇಕ, ಅಸ್ಮಿತೆ, ಸರ್ವ ಜನಾಂಗದ ತೋಟದ ರೂಪಕವಾಗಿ, ಕನ್ನಡದ ಸಾಂಸ್ಕೃತಿಕ ಪ್ರಜ್ಞೆಯಾದ, ರಾಷ್ಟ್ರಕವಿ ಕುವೆಂಪು ಅವರ ಬರೆವಣಿಗೆಯಲ್ಲಿ ಮುಂದುವರೆದಿದೆ ಎಂದು ಹೇಳಿ, ಈ ವಿವೇಕವನ್ನು ಜತನದಿಂದ ಕಾಪಿಟ್ಟುಕೊಂಡು ವರ್ತಮಾನದ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಮೃತೇಶ್ವರ ಬಿ. ಜಿ. ಇವರು ಕ್ರಿ.ಶ. 320ರ ತಾಳಗುಂದದ ವಜಿನಾಗನ ಕಾಲದಿಂದಲೂ ಕನ್ನಡ ದಾಖಲೆ ದೊರೆತಿದ್ದು, ಭಾರತದ ಪುರಾತನ ಭಾಷೆಗಳಲ್ಲಿ ಇದು ಒಂದು ಎಂಬುದಕ್ಕೆ ನಿದರ್ಶನವಾಗಿದೆ ಎಂದರು.

ಶಾಸ್ತ್ರೀಯ ಭಾಷೆಯ ಸ್ಥಾನವನ್ನು ಪಡೆದಿರುವ ಕನ್ನಡ ಭಾಷೆಯು ಹಲವು ಸವಾಲುಗಳನ್ನು ಎದುರಿಸಿ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡು ನಿಂತಿದೆ. ಇದಕ್ಕೆ ಕಾರಣ, ಕನ್ನಡದ ಸಾಮಾನ್ಯ ಜನತೆ, ಕಾಯಕ ಜೀವಿಗಳು ತಮ್ಮ ದಿನನಿತ್ಯದ ಬದುಕಿನಲ್ಲಿ ಕನ್ನಡ ಭಾಷೆಯನ್ನು ಬಳಸುತ್ತಿರುವುದೇ ಹೊರತು ಅನ್ಯಥಾ ಅಲ್ಲ ಎಂದು ನುಡಿದರು.

ನಮ್ಮ ದಿನನಿತ್ಯದ ಎಲ್ಲ ಕ್ಷೇತ್ರಗಳಲ್ಲಿ ಕನ್ನಡವನ್ನು ಬಳಸಿ, ಬೆಳೆಸಿದರೆ ಮಾತ್ರ ಕನ್ನಡ ಭಾಷೆ, ಸಂಸ್ಕ್ರತಿ ಉಳಿಯುತ್ತದೆ
ಮತ್ತು ಇದನ್ನು ನಮ್ಮ ಮುಂದಿನ ಪೀಳಿಗೆಗೆ ರವಾನಿಸಲು ಸಾಧ್ಯ. ಹಾಗಾಗಿ ನಮ್ಮ ದಿನನಿತ್ಯದ ಎಲ್ಲಾ ಚಟುವಟಿಕೆಗಳಲ್ಲೂ ಕನ್ನಡವನ್ನು ಬಳಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ವಿಜಯ್ ಕುಮಾರ್ ಕೆ. ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕರಾದ ಡಾ. ಪಾರ್ವತಮ್ಮ, ಹಾಗೂ ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಷಣ್ಮುಖಪ್ಪ ಕೆ.ಹೆಚ್. ಅವರು ಹಾಗೂ ಕಾಲೇಜಿನ ಅಧ್ಯಾಪಕರು, ಕಛೇರಿ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಪಾರ್ವತಮ್ಮ ಅವರು ಪ್ರಾರ್ಥಿಸಿದರು. ರವಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ರಾಷ್ಟ್ರಗೀತೆ, ನಾಡಗೀತೆ, ಹಾಗೂ ಕನ್ನಡ ಗೀತ ಗಾಯನವನ್ನು ಸಮಾರಂಭದಲ್ಲಿ ಆಯೋಜಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ8 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ8 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ9 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ9 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ10 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ13 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ1 day ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ1 day ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending