ದಿನದ ಸುದ್ದಿ
‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/05/kannappa_suddidina_cinema.jpg&description=‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/05/kannappa_suddidina_cinema.jpg&description=‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್ : ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.
ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್‌ಕುಮಾರ್ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ.
ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ‍್ ಕುಮಾರ್ ಸಿಂಗ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್‌ನ ಶೆಲ್ಡೋನ್ ಚಾವ್ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ2 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ21 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ20 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
-
ದಿನದ ಸುದ್ದಿ54 minutes agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

