ರಾಜಕೀಯ
ಹರೀಶ್ ಗೌಡ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ
ಸುದ್ದಿದಿನ ಡೆಸ್ಕ್ : ಚಾಮರಾಜ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿದ್ದ ಹರೀಶ್ ಗೌಡ, ನಗರಪಾಲಿಕೆ ಸದಸ್ಯರಾದ ಶಿವಕುಮಾರ್, ಶ್ರೀನಿವಾಸ್ ಹಾಗೂ ಇನ್ನಿತರ ನಾಯಕರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಳ್ಳಲಾಯಿತು.
ಕಾಂಗ್ರೆಸ್ ಗೆ ಸೇರ್ಪಡೆಯಾದ ಹರೀಶ್ ಗೌಡ ಅವರು, “ನಾನು ಕಾಂಗ್ರೆಸ್ ಸೇರ್ಪಡೆಯಾಗಲು ಕಾರಣವಾದ ಎಲ್ಲರನ್ನೂ ಮನದುಂಬಿ ನೆನೆಯುತ್ತಾ ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಬದ್ಧವಾಗಿ ಕಾರ್ಯ ನಿರ್ವಹಿಸುತ್ತೇನೆ.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗಳನ್ನು ಕೊಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಜಾಗಿ ಹೆಚ್ಚಿನ ಕೆಲಸ ಮಾಡುತ್ತೇನೆ.” ಎಂದರು.
— Karnataka Congress (@INCKarnataka) April 6, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401