ದಿನದ ಸುದ್ದಿ

ರಾಜ್ಯದ ರೈತರಿಗೆ ಸಂತಸದ ಸುದ್ದಿ ನೀಡಿದ ಸರ್ಕಾರ !

Published

on

ಸುದ್ದಿದಿನ, ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದೆ.

ಸಾಲ ಮನ್ನಾದ ವಿಚಾರವಾಗಿ ಸಹಕಾರ ಬ್ಯಾಂಕುಗಳು ರೈತರಿಂದ ಕೇವಲ 3 ದಾಖಲಾತಿಗಳು ಕೇಳಿದರೆ ಸಾಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳು ರೈತರಿಂದ ಇಲ್ಲ ಸಲ್ಲದ ದಾಖಲೆ ಪತ್ರಗಳನ್ನು ನೀಡುವಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಹೀಗಾಗಿ ಸಾಲ ಪಡೆದ ರೈತರಿಂದ ಸ್ವಯಂ ದೃಢೀಕರಣ ಪತ್ರ, ಹಾಗೂ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಲಭ್ಯವಿದ್ದಲ್ಲಿ ಪ್ಯಾನ್ ಕಾರ್ಡ್ ಜೆರಾಕ್ಸ್ ಪ್ರತಿ ಇದ್ದರೆ ಸಾಕು ಎಂದು ಹೇಳಿದೆ. ಹೀಗಾಗಿ ರೈತರ ತಲೆನೋವು ಸೊಲ್ಪ ಕಡಿಮೆ ಆಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715410

Trending

Exit mobile version