ದಿನದ ಸುದ್ದಿ
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ : ಸಚಿವ ಸುಧಾಕರ್ ಸ್ಪಷ್ಟನೆ
ಸುದ್ದಿದಿನ,ಕಲಬುರಗಿ: ಲಾಕ್ಡೌನ್ ಸುದ್ದಿ ಕೇವಲ ಊಹಾಪೋಹ, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗಲ್ಲ, ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಸಿಎಂ ಜೊತೆ ಮಾತಾಡಲಿದ್ದಾರೆ. ಇದೇ ಕಾರಣಕ್ಕೆ ಈ ಊಹಾಪೋಹ ಎದ್ದಿದೆ. ಆದರೆ ಮತ್ತೆ ಲಾಕ್ಡೌನ್ ಮಾಡೋದು ನನ್ನ ಪ್ರಕಾರ ಇಲ್ಲವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243